Homeಕರ್ನಾಟಕಚಿರಂಜೀವಿ ಸರ್ಜಾ ಹುಟ್ಟುಹಬ್ಬಕ್ಕೆ ಮೇಘನಾ ರಾಜ್ ಉಡುಗೊರೆ: ಹೊಸ ಚಿತ್ರ ಘೋಷಣೆ

ಚಿರಂಜೀವಿ ಸರ್ಜಾ ಹುಟ್ಟುಹಬ್ಬಕ್ಕೆ ಮೇಘನಾ ರಾಜ್ ಉಡುಗೊರೆ: ಹೊಸ ಚಿತ್ರ ಘೋಷಣೆ

- Advertisement -
- Advertisement -

ದಿವಂಗತ ನಟ ಚಿರಂಜೀವಿ ಸರ್ಜಾ ಅವರ ಜನ್ಮದಿನದಂದು ಅವರ ಪತ್ನಿ ಮೇಘನಾ ರಾಜ್ ಉಡುಗೊರೆ ನೀಡಿದ್ದಾರೆ. ಚಿರಜೀವಿ ಅವರ ಕನಸಿನ ಚಿತ್ರದಲ್ಲಿ ಮುಖ್ಯ ಪಾತ್ರ ನಿರ್ವಹಿಸುವ ಮೂಲಕ ಮತ್ತೆ ನಟನೆಗೆ ಮರಳಿದ್ದಾರೆ.

ಹೊಸ ನಿರ್ದೇಶಕ ವಿಶಾಲ್ ಅವರ ಮುಂಬರುವ ಥ್ರಿಲ್ಲರ್ ಚಿತ್ರದಲ್ಲಿ ಅವರು ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಹೆಸರಿಡದ ಈ ಚಿತ್ರವನ್ನು ಮೇಘನಾ ಮತ್ತು ಚಿರಂಜೀವಿ ಅವರ ಆತ್ಮೀಯ ಗೆಳೆಯ ಹಾಗೂ ನಿರ್ದೇಶಕ ಪನ್ನಗ ಭರಣ ನಿರ್ಮಿಸಲಿದ್ದಾರೆ.

ಮೇಘನಾ ರಾಜ್ ಚಿತ್ರಗಳಲ್ಲಿ ನಟಿಸಿ ಎರಡು ವರ್ಷಗಳು ಕಳೆದಿವೆ. ಚಿರಂಜೀವಿ ಅವರ ನಿಧನದ ನಂತರ, ಮಗ ರಾಯನ್ ರಾಜ್ ಸರ್ಜಾ ಆರೈಕೆಯಲ್ಲಿ ನಟನೆಯಿಮದ ದೂರ ಉಳಿದಿದ್ದರು. ಈಗ ಸ್ನೇಹಿತ ಪನ್ನಗ ಭರಣ ನಿರ್ಮಾಣದಲ್ಲಿ ಚಿತ್ರದಲ್ಲಿ ನಟಿಸಲು ಆಸಕ್ತಿ ತೋರಿದ್ದು, ಇದು ಹುಟ್ಟುಹಬ್ಬದ ಉಡುಗೊರೆ ಎಂದಿದ್ದಾರೆ.

ಈ ವಿಷಯ ಹಂಚಿಕೊಳ್ಳಲು ಚಿರಂಜೀವಿ ಸರ್ಜಾ ಅವರ ಜನ್ಮ ದಿನಕ್ಕಿಂತ ಒಳ್ಳೆಯ ದಿನ ಮತ್ತೊಂದಿಲ್ಲ ಎಂದಿರುವ ಮೇಘನಾ ರಾಜ್, ಇದು ನಮ್ಮ ಕನಸು, ಇದು ನಿನಗಾಗಿ ಚಿರು ಎಂದಿದ್ದಾರೆ.  ಪನ್ನಗ ಭರಣ ಮತ್ತು ಹೊಸ ನಿರ್ದೇಶಕ ವಿಶಾಲ್ ಜೊತೆಗಿನ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಟೀಸರ್ ಬಿಡುಗಡೆ: ನವೆಂಬರ್ 02 ಕ್ಕೆ ಅಮೆಜಾನ್‌ ಪ್ರೈಮ್‌ನಲ್ಲಿ ಜೈಭೀಮ್

 

View this post on Instagram

 

A post shared by Meghana Raj Sarja (@megsraj)

ಕನ್ನಡ ಮತ್ತು ಮಲಯಾಳಂ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿರುವ ನಟಿ ಮೇಘನಾ ರಾಜ್​ ಆದಷ್ಟು ಬೇಗ ನಟನೆಗೆ ಮರಳಿಲಿ ಎಂಬುದು ಚಿರಂಜೀವಿ ಸರ್ಜಾ ಮತ್ತು ಮೇಘನಾ ರಾಜ್ ಅಭಿಮಾನಿಗಳ ಆಸೆಯಾಗಿತ್ತು.

ನಿರ್ದೇಶಕ ಪನ್ನಗ ಭರಣ ಮತ್ತು ನಟ ಚಿರಂಜೀವಿ ಸರ್ಜಾ ಈ ಸಿನಿಮಾವನ್ನು ನಿರ್ಮಾಣ ಮಾಡಬೇಕು ಎನ್ನುವ ಯೋಜನೆ ಮಾಡಲಾಗಿತ್ತು. ಆದರೆ, ನಟನ ಅಗಲುವಿಕೆಯಿಂದ ಕನಸು ಹಾಗೆಯೇ ಉಳಿದಿತ್ತು ಎನ್ನಲಾಗಿದೆ. ಸದ್ಯ ಮೇಘನಾ ರಾಜ್ ಈ ಚಿತ್ರವನ್ನು ’ನಮ್ಮ ಕನಸು’ ಎಂದು ಕರೆದಿದ್ದಾರೆ.

ಚಿರಂಜೀವಿ ಸರ್ಜಾ ತೀವ್ರ ಹೃದಯಾಘಾತದಿಂದ ಜೂನ್ 7, 2020 ರಂದು ನಿಧನರಾದರು. ಮೇಘನಾ ಅಕ್ಟೋಬರ್ 2020 ರಲ್ಲಿ ರಾಯನ್ ರಾಜ್ ಸರ್ಜಾ ಎಂಬ ಗಂಡು ಮಗುವಿನ ತಾಯಿಯಾದರು.


ಇದನ್ನೂ ಓದಿ: ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ‘ಗ್ರೇಟ್‌ ಇಂಡಿಯನ್ ಕಿಚನ್‌’ ಅತ್ಯುತ್ತಮ ಸಿನಿಮಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...