Homeಮುಖಪುಟಹಿಂದುತ್ವ ಒಂದು ರೋಗ ಎಂದ  ಮೆಹಬೂಬ್ ಮುಪ್ತಿಯ ಪುತ್ರಿ: ಬಿಜೆಪಿಯಿಂದ ಕ್ಷಮೆಗೆ ಒತ್ತಾಯ

ಹಿಂದುತ್ವ ಒಂದು ರೋಗ ಎಂದ  ಮೆಹಬೂಬ್ ಮುಪ್ತಿಯ ಪುತ್ರಿ: ಬಿಜೆಪಿಯಿಂದ ಕ್ಷಮೆಗೆ ಒತ್ತಾಯ

- Advertisement -
- Advertisement -

ಜಮ್ಮು: ಹಿಂದುತ್ವ ಒಂದು ಕಾಯಿಲೆ.  ಇದು ಹಿಂದುತ್ವವನ್ನು ಅವಮಾನಿಸುತ್ತದೆ.  ಇದು ಅಲ್ಪಸಂಖ್ಯಾತರಿಗೆ ಅದರಲ್ಲೂ ಮುಸ್ಲಿಂರಿಗೆ ಕಿರುಕುಳ ಮತ್ತು ಅವರನ್ನು ಥಳಿಸಿ ಹತ್ಯೆ ಮಾಡುವುದಕ್ಕೆ ಕಾರಣವಾಗುತ್ತಿದೆ. ಬಿಜೆಪಿಯು ತನ್ನ ಮತಬ್ಯಾಂಕ್‌ ಅನ್ನು ಗಟ್ಟಿ ಮಾಡುವುದಕ್ಕೊಸ್ಕರ ಇದನ್ನು ಉಪಯೋಗಿಸುತ್ತಿದೆ ಎಂದು ಪಿಡಿಪಿ ಮುಖ್ಯಸ್ಥ  ಮೆಹಬೂಬ್ ಮುಪ್ತಿಯ ಪುತ್ರಿ ಇಲ್ತಿಜಾ ಆರೋಪಿಸಿದ್ದಾರೆ.

ಇತ್ತೀಚೆಗೆ  ಮಧ್ಯಪ್ರದೇಶದ ರತ್ನಂ ಜಿಲ್ಲೆಯಲ್ಲಿ  ‘ಜೈ ಶ್ರೀರಾಮ್’ ಘೋಷಣೆ ಕೂಗುವಂತೆ ಒತ್ತಾಯಿಸಿ ಮೂವರು ಮುಸ್ಲಿಂ ಮಕ್ಕಳಿಗೆ ಚಪ್ಪಲಿಯಲ್ಲಿ ಥಳಿಸಿದ ಪ್ರಕರಣಕ್ಕೆ ಲಿಂಕ್ ಮಾಡಿ ಈ “ಕಾಯಿಲೆ’ ಹೇಳಿಕೆಯನ್ನು ತನ್ನ ಎಕ್ಸ್ ಪೋಸ್ಟಿನಲ್ಲಿ ಬರೆದುಕೊಂಡಿದ್ದಾರೆ..

ನಂತರ ವರದಿಗಾರರೊಂದಿಗೆ ಮಾತನಾಡಿ, ತಮ್ಮ’ಹಿಂದುತ್ವ ಕಾಯಿಲೆ’ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಹಿಂದುತ್ವ ಮತ್ತು ಹಿಂದೂ ಧರ್ಮದ ನಡುವೆ ಸಾಕಷ್ಟು ವ್ಯತ್ಯಾಸವಿದೆ. ಹಿಂದುತ್ವವು ದ್ವೇಷದ ತತ್ವವಾಗಿದೆ. 1940 ರ ದಶಕದಲ್ಲಿ ವೀರ್ ಸಾವರ್ಕರ್ ಅವರು ಹಿಂದೂಗಳ ಪ್ರಾಬಲ್ಯವನ್ನು ಸ್ಥಾಪಿಸಲು ಭಾರತದಲ್ಲಿ ಈ ಹಿಂದುತ್ವ ಸಿದ್ಧಾಂತವನ್ನು ಹರಡಿದರು ಮತ್ತು ಭಾರತವು ಹಿಂದೂಗಳಿಗೆ ಸೇರಿದ್ದು ಮತ್ತು ಹಿಂದೂಗಳಿಗೆ ಎಂಬುದನ್ನು ಈ  ತತ್ವ ಒಳಗೊಂಡಿದೆ. ಇಸ್ಲಾಂನಂತೆ, ಹಿಂದೂ ಧರ್ಮವು ಜಾತ್ಯತೀತತೆ, ಪ್ರೀತಿ ಮತ್ತು ಸಹಾನುಭೂತಿಯನ್ನು ಉತ್ತೇಜಿಸುವ ಒಂದು ಧರ್ಮವಾಗಿದೆ.  ಹಿಂದೂ ಧರ್ಮವನ್ನು ವಿರೂಪಗೊಳಿಸುತ್ತಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿಯಾಗಿದೆ. ನಾನು ಹಿಂದುತ್ವವನ್ನು ಒಂದು ಕಾಯಿಲೆ ಎಂದು ಟೀಕಿಸಿದ್ದೇನೆ ಎಂದು ಇಲ್ತಿಜಾ ಮುಫ್ತಿ ಹೇಳಿದ್ದಾರೆ.

ಇಲ್ತಿಜಾ ಮುಫ್ತಿ ಬಳಸಿರುವ ಭಾಷೆ ತುಂಬಾ ಅವಹೇಳನಕಾರಿ ಎಂದು ಬಿಜೆಪಿ ನಾಯಕ ರವೀಂದ್ರ ರೈನಾ ಹೇಳಿದ್ದಾರೆ. ಪಿಡಿಪಿ ನಾಯಕಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

ಪಿಡಿಪಿ ನಾಯಕಿ ಅತ್ಯಂತ ಅವಹೇಳನಕಾರಿ ಭಾಷೆಯನ್ನು ಬಳಸಿದ್ದಾರೆ. ಈ ರೀತಿಯ ಭಾಷೆಯನ್ನು ಬಳಸಬಾರದು. ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳಿರಬಹುದು. ಆದರೆ ಅವಹೇಳನಕಾರಿ ಭಾಷೆಯನ್ನು ಬಳಸಬಾರದು. ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಅವರ ಹೇಳಿಕೆಗೆ ಕ್ಷಮೆಯಾಚಿಸಬೇಕು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ….‘ಜೈ ಶ್ರೀರಾಮ್’ ಕೂಗುವಂತೆ ಒತ್ತಾಯಿಸಿ ಮೂವರು ಮುಸ್ಲಿಂ ಮಕ್ಕಳಿಗೆ ಚಪ್ಪಲಿಯಿಂದ ಥಳಿತ : ಓರ್ವನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...