Homeಮುಖಪುಟನನ್ನ ತಾಯಿಗೆ ಏನಾದರೂ ಆದರೆ ಕೇಂದ್ರವೇ ಹೊಣೆ: ಮೆಹಬೂಬಾ ಮುಫ್ತಿ ಮಗಳ ಆತಂಕ

ನನ್ನ ತಾಯಿಗೆ ಏನಾದರೂ ಆದರೆ ಕೇಂದ್ರವೇ ಹೊಣೆ: ಮೆಹಬೂಬಾ ಮುಫ್ತಿ ಮಗಳ ಆತಂಕ

- Advertisement -
- Advertisement -

ಜಮ್ಮುಕಾಶ್ಮೀರದಲ್ಲಿ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ನಂತರ ಅನೇಕ ರಾಜಕೀಯ ನಾಯಕರನ್ನು ಬಂಧನದಲ್ಲಿ ಇರಿಸಲಾಗಿದೆ. ಆಗಸ್ಟ್ ನಿಂದಲೇ ಪಿಡಿಪಿ ಮುಖ್ಯಸ್ಥೆ ಹಾಗೂ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಅವರನ್ನೂ ಬಂಧಿಸಿಡಲಾಗಿದೆ. ಈಗ ಮುಫ್ತಿ ಮಗಳು ಸನಾ ಇಲ್ತಿಜಾ ಟ್ವೀಟ್ ಮಾಡಿ ಆತಂಕ ವ್ಯಕ್ತಪಡಿಸಿದ್ದಾರೆ.

ಆಗಸ್ಟ್ ನಿಂದಲೇ ನಮ್ಮ ತಾಯಿ ಮೆಹಬೂಬಾ ಮುಫ್ತಿಯನ್ನು ಬಂಧನದಲ್ಲಿ ಇರಿಸಲಾಗಿದೆ. ಅಲ್ಲಿ ಅವರನ್ನು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ. ಅವರನ್ನು ಬೇರೆಡೆ ಸ್ಥಳಾಂತರ ಮಾಡಬೇಕು. ಮೆಹಬೂಬಾ ಅವರ ಆರೋಗ್ಯ ಸರಿಯಿಲ್ಲ. ಆರೋಗ್ಯದಲ್ಲಿ ಏರು-ಪೇರಾಗುತ್ತಿದೆ. ಅವರಿಗೆ ಏನಾದರೂ ಹೆಚ್ಚು-ಕಡಿಮೆ ಆದರೆ ಅದಕ್ಕೆ ಕೇಂದ್ರ ಸರ್ಕಾರವೇ ಹೊಣೆ ಎಂದು ಎಚ್ಚರಿಸಿದ್ದಾರೆ.

ಈ ಹಿಂದೆ ಶ್ರೀನಗರ ಜಿಲ್ಲಾಧಿಕಾರಿಯವರಿಗೆ ಪತ್ರ ಬರೆದು ಮನವಿ ಮಾಡಿದ್ದೆ. ಆದರೆ ತಿಂಗಳು ಕಳೆದರೂ ಯಾವುದೇ ಸ್ಪಂದನೆ ಸಿಕ್ಕಿಲ್ಲ ಎಂದು ಡಿಸಿ ಅವರಿಗೆ ಬರೆದ ಪತ್ರವನ್ನೂ ಟ್ವಿಟ್ಟರ್ ನಲ್ಲಿ ಶೇರ್ ಮಾಡಿದ್ದಾರೆ. 60 ವರ್ಷದ ಮೆಹಬೂಬಾ ಮುಫ್ತಿ ಅವರಿಗೆ ಚಿಕಿತ್ಸೆ ಮುಂದುವರಿಸಿರುವ ವೈದ್ಯರು ಹಲವು ರೀತಿಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಅವರ ದೇಹದಲ್ಲಿ ವಿಟಾಮಿನ್ ಡಿ, ಹಿಮೋಗ್ಲೋಬಿನ್, ಕ್ಯಾಲ್ಸಿಯಂ ಅಂಶ ಅತ್ಯಂತ ಕಡಿಮೆಯಾಗಿದೆ ಎಂದು ಹೇಳಿದ್ದಾರೆ.

ನನ್ನ ತಾಯಿಯ ಆರೋಗ್ಯದ ಕುರಿತು ಈ ಹಿಂದೆಯೂ ಹೇಳಿದ್ದೆ. ಈಗ ಮತ್ತೊಮ್ಮೆ ಎಚ್ಚರಿಸುತ್ತಿದ್ದೇನೆ. ಕಾಶ್ಮೀರದ ಈಗಿರುವ ವಾತಾವರಣಕ್ಕೆ ಅವರ ಆರೋಗ್ಯ ಮತ್ತಷ್ಟು ಹದಗೆಡಲಿದೆ. ಹೀಗಾಗಿ ಅವರನ್ನು ಬೇರೆಡೆ ಸೂಕ್ತ ಜಾಗಕ್ಕೆ ಸ್ಥಳಾಂತರ ಮಾಡಬೇಕೆಂದು ಕೇಂದ್ರಕ್ಕೆ ಮನವಿ ಮಾಡಿದ್ದಾರೆ. ಮೆಹಬೂಬಾ ಮುಫ್ತಿ ಅವರ ಟ್ವಿಟ್ಟರ್ ಖಾತೆಯನ್ನು ಸನಾ ನಿರ್ವಹಿಸುತ್ತಿದ್ದು, ಅವರದೇ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ವಿಷಯ ಶೇರ್ ಮಾಡಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...