Homeಮುಖಪುಟಮೆಹಬೂಬಾ ಮುಫ್ತಿ ಬಂಧನದಿಂದ ಭಾರತದ ಪ್ರಜಾಪ್ರಭುತ್ವಕ್ಕೆ ಹಾನಿ: ರಾಹುಲ್ ಗಾಂಧಿ

ಮೆಹಬೂಬಾ ಮುಫ್ತಿ ಬಂಧನದಿಂದ ಭಾರತದ ಪ್ರಜಾಪ್ರಭುತ್ವಕ್ಕೆ ಹಾನಿ: ರಾಹುಲ್ ಗಾಂಧಿ

ನಿನ್ನೆ ಮುಫ್ತಿ ಪರವಾಗಿ ಮತ್ತೊಬ್ಬ ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ ದನಿಯೆತ್ತಿದ್ದರು. ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರನ್ನು ಬಂಧಿಸಿರುವುದು ಕಾನೂನಿನ ದುರುಪಯೋಗ, ಸಂವಿಧಾನಕ್ಕೆ ವಿರುದ್ಧ ಎಂದು ಅವರು ಹೇಳಿದ್ದರು.

- Advertisement -
- Advertisement -

ರಾಜಕೀಯ ನಾಯಕರನ್ನು ಸರ್ಕಾರ ಅಕ್ರಮವಾಗಿ ಬಂಧಿಸಿಟ್ಟಿರುವುದರಿಂದ ಭಾರತದ ಪ್ರಜಾಪ್ರಭುತ್ವಕ್ಕೆ ಹಾನಿಯಾಗಿದೆ ಎಂದಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ರಾಜ್ಯವನ್ನು ಜಮ್ಮು ಕಾಶ್ಮೀರ ಮತ್ತು ಲಡಾಖ್ ಎಂಬ ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದಾಗಿನಿಂದ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ನಾಯಕಿ ಮುಫ್ತಿ ಸಾರ್ವಜನಿಕ ಸುರಕ್ಷತಾ ಕಾಯ್ದೆ (ಪಿಎಸ್ಎ) ಅಡಿಯಲ್ಲಿ ಬಂಧನದಲ್ಲಿದ್ದಾರೆ.

ರಾಜಕೀಯ ನಾಯಕರನ್ನು ಭಾರತ ಸರ್ಕಾರವು ಕಾನೂನುಬಾಹಿರವಾಗಿ ಬಂಧಿಸಿದ್ದರಿಂದ ಭಾರತದ ಪ್ರಜಾಪ್ರಭುತ್ವವು ಹಾನಿಗೊಳಗಾಗಿದೆ. ಮೆಹಬೂಬಾ ಮುಫ್ತಿ ಬಿಡುಗಡೆಯಾಗುವ ಸಮಯವಿದು ಎಂದು ರಾಹುಲ್ ಗಾಂಧಿ ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.

ನಿನ್ನೆ ಮುಫ್ತಿ ಪರವಾಗಿ ಮತ್ತೊಬ್ಬ ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ ದನಿಯೆತ್ತಿದ್ದರು. ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರನ್ನು ಬಂಧಿಸಿರುವುದು ಕಾನೂನಿನ ದುರುಪಯೋಗ, ಸಂವಿಧಾನಕ್ಕೆ ವಿರುದ್ಧ ಎಂದು ಅವರು ಹೇಳಿದ್ದರು.

ಜಮ್ಮು ಮತ್ತು ಕಾಶ್ಮೀರ ಆಡಳಿತವು ಕಳೆದ ವಾರ ಪಿಎಸ್‌ಎ ಅಡಿಯಲ್ಲಿ ಮೆಹಬೂಬಾ ಬಂಧನವನ್ನು ಇನ್ನೂ ಮೂರು ತಿಂಗಳ ಕಾಲ ವಿಸ್ತರಿಸಿದೆ.


ಇದನ್ನೂ ಓದಿ: ಕೋವಿಡ್ ಸೋಂಕಿತ ಬಹುತೇಕ ರಾಜಕಾರಣಿಗಳು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ! ಏಕೆ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಬಿಜೆಪಿ ಟಿಕೆಟ್ ಆಮಿಷ ನೀಡಿ ರಾಜೀನಾಮೆ ಕೊಡಿಸಿ ವಂಚಿಸಿದ್ರು’: ಮಣಿಪುರ ಹಿಂಸಾಚಾರದ ತನಿಖೆ ನಡೆಸುತ್ತಿದ್ದ...

0
ಮಣಿಪುರ ಜನಾಂಗೀಯ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದ (ಎಸ್‌ಐಟಿ) ನೇತೃತ್ವ ವಹಿಸಲು ಸುಪ್ರೀಂ ನಿರ್ದೇಶನದ ಕೆಲವೇ ದಿನಗಳಲ್ಲಿ ಅಸ್ಸಾಂ-ಮೇಘಾಲಯ ಕೇಡರ್‌ನ ಐಪಿಎಸ್ ಅಧಿಕಾರಿ ಆನಂದ್ ಮಿಶ್ರಾ ತಮ್ಮ ಹುದ್ದೆಗೆ ರಾಜೀನಾಮೆ...