Homeಮುಖಪುಟಮೆಹಬೂಬಾ ಮುಫ್ತಿ ಬಂಧನ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಮಗಳು ಇಲ್ತಿಜಾ

ಮೆಹಬೂಬಾ ಮುಫ್ತಿ ಬಂಧನ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಮಗಳು ಇಲ್ತಿಜಾ

ಪ್ರಜಾಪ್ರಭುತ್ವದ ದೇಶದಲ್ಲಿ ಅವರ ಬಂಧನ ಕಾನೂನುಬಾಹಿರವಾಗಿದೆ. ಪ್ರತಿಪಕ್ಷದ ಪ್ರಮುಖ ನಾಯಕಿನನ್ನು ಒಂದು ವರ್ಷದಿಂದ ವಿಚಾರಣೆಗೆ ಒಳಪಡಿಸದೆ ಜೈಲಿಗೆ ಹಾಕಲಾಗಿದೆ - ಇಲ್ತಿಜಾ

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರ ಪುತ್ರಿ ಇಲ್ತಿಜಾ ಮುಫ್ತಿ ಅವರು ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ತಮ್ಮ ತಾಯಿಯನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದಾರೆ.

ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ನಾಯಕಿ ಮೆಹಬೂಬಾ ಅವರನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ 2019ರ ಆಗಸ್ಟ್ 5 ಆರ್ಟಿಕಲ್ 370 ರದ್ದತಿಗೆ ಮೊದಲಿನಿಂದಲೇ ಬಂಧನದಲ್ಲಿಡಲಾಗಿದೆ.

ವಕೀಲ ಆಕಾಶ್ ಕಮ್ರಾ ಮೂಲಕ ಸಲ್ಲಿಸಿದ ಅರ್ಜಿಯಲ್ಲಿ, ತನ್ನ ತಾಯಿಯ ಬಂಧನ ಮತ್ತು ನಂತರದ ಬಂಧನ ವಿಸ್ತರಣೆಗಳು ಕಾನೂನುಬಾಹಿರ ಎಂದು ವಾದಿಸಿದ್ದಾರೆ.

ಇದನ್ನೂ ಓದಿ: ನನ್ನ ತಾಯಿಗೆ ಏನಾದರೂ ಆದರೆ ಕೇಂದ್ರವೇ ಹೊಣೆ: ಮೆಹಬೂಬಾ ಮುಫ್ತಿ ಮಗಳ ಆತಂಕ

ಆರ್ಟಿಕಲ್ 370 ರದ್ದು ಮಾಡುವ ಕೆಲವೇ ಗಂಟೆಗಳ ಮೊದಲು, ರಾಜಕೀಯವಾಗಿ ಸಕ್ರಿಯವಾಗಿರುವ ನೂರಾರು ಜನರನ್ನು ಬಂಧಿಸಲಾಗಿತ್ತು. ಕಳೆದ ವರ್ಷದ ಆಗಸ್ಟ್ ನಿಂದಲೇ ಪಿಡಿಪಿ ಮುಖ್ಯಸ್ಥೆ ಹಾಗೂ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಅವರನ್ನೂ ಬಂಧಿಸಿಡಲಾಗಿದೆ. ಆರು ತಿಂಗಳ ಕಸ್ಟಡಿ ಅವಧಿ ಮುಗಿಯುವ ಮುನ್ನವೇ ಕಠಿಣ ಪಿಎಸ್‌ಎ ಅಡಿಯಲ್ಲಿ ಅವರ ಮೇಲೆ ಪ್ರಕರಣ ದಾಖಲಾಗಿತ್ತು. ಜುಲೈ 31 ರಂದು, ಜಮ್ಮು ಮತ್ತು ಕಾಶ್ಮೀರ ಆಡಳಿತವು ಪಿಎಸ್ಎ ಅಡಿಯಲ್ಲಿ ಅವರ ಬಂಧನವನ್ನು ಮತ್ತೆ ಮೂರು ತಿಂಗಳು ವಿಸ್ತರಿಸಿದೆ.

“ಪ್ರಜಾಪ್ರಭುತ್ವದ ದೇಶದಲ್ಲಿ ಅವರ ಬಂಧನ ಕಾನೂನುಬಾಹಿರವಾಗಿದೆ. ಪ್ರತಿಪಕ್ಷದ ಪ್ರಮುಖ ನಾಯಕಿನನ್ನು ಒಂದು ವರ್ಷದಿಂದ ವಿಚಾರಣೆಗೆ ಒಳಪಡಿಸದೆ ಜೈಲಿಗೆ ಹಾಕಲಾಗಿದೆ ”ಎಂದು ಇಲ್ತಿಜಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಮೆಹಬೂಬಾ ಬಂಧನವನ್ನು ಪ್ರಶ್ನಿಸಿ ಇಲ್ತಿಜಾ ಸಲ್ಲಿಸಿದ್ದ ಮೊದಲ ಅರ್ಜಿ ಫೆಬ್ರವರಿ 26 ರಿಂದ ಸುಪ್ರೀಂ ಕೋರ್ಟ್‌ನಲ್ಲಿ ಇನ್ನು ಬಾಕಿ ಇದೆ. ಇತ್ತೀಚಿನ ಅರ್ಜಿಯಲ್ಲಿ ಇಲ್ತಿಜಾ ಇಲ್ಲಿಯವರೆಗೆ ಪ್ರತಿವಾದಿಗಳು [ಜೆ & ಕೆ ಆಡಳಿತ] ಶೀರ್ಷಿಕೆಯ ರಿಟ್ ಅರ್ಜಿಗೆ ಯಾವುದೇ ಉತ್ತರ ಅಥವಾ ಪ್ರತಿ-ಅಫಿಡವಿಟ್ ಸಲ್ಲಿಸಿಲ್ಲ ಎಂದು ಆರೋಪಿಸಿದ್ದಾರೆ. ಹೀಗಾಗಿ ಸುಪ್ರೀಂಕೋರ್ಟ್ ಉತ್ತರ ಸಲ್ಲಿಸಲು ಜಮ್ಮು ಮತ್ತು ಕಾಶ್ಮೀರ ಆಡಳಿತಕ್ಕೆ ಆದೇಶಿಸಿದೆ.

ಇದನ್ನೂ ಓದಿ: ನಮ್ಮನ್ನು ಪ್ರಾಣಿಗಳಂತೆ ಪಂಜರದಲ್ಲಿ ಕೂಡಿ ಹಾಕಾಲಾಗಿದೆ- ಮೆಹಬೂಬಾ ಮುಫ್ತಿ ಅವರ ಮಗಳಾದ ಇಲ್ತೀಜಾ ಜಾವೇದ್ ಆರೋಪ

ದಿ ವೈರ್‌ಗೆ, ಪ್ರತಿಕ್ರಿಯೆ ನೀಡಿರುವ ಇಲ್ತಿಜಾ ’ಇದು… ನ್ಯಾಯಾಲಯಗಳು ಮತ್ತು ಸುಪ್ರೀಂಕೋರ್ಟ್ ಬಗ್ಗೆ ಅವರು ಹೊಂದಿರುವ ಗೌರವವನ್ನು ನಿಮಗೆ ತೋರಿಸುತ್ತದೆ” ಎಂದಿದ್ದಾರೆ.

ಅರ್ಜಿಯಲ್ಲಿ ಮೆಹಬೂಬಾರನ್ನು ತಕ್ಷಣ ಬಿಡುಗಡೆ ಮಾಡುವಂತೆ ಮತ್ತು ಅವರ ವಿರುದ್ಧದ ಎಲ್ಲಾ ಬಂಧನ ಆದೇಶಗಳನ್ನು ರದ್ದುಪಡಿಸುವಂತೆ ಜೊತೆಗೆ ಆಕೆಯ ದೀರ್ಘಕಾಲದ ಜೈಲುವಾಸಕ್ಕೆ ಸೂಕ್ತ ಪರಿಹಾರವನ್ನು ನೀಡುವಂತೆ ಕೋರಲಾಗಿದೆ. ಮಾಜಿ ಸಿಎಂ ಪ್ರಸ್ತುತ ಫೇರ್‌ವ್ಯೂ ಬಂಗಲೆಯ ಅಧಿಕೃತ ನಿವಾಸದಲ್ಲಿದ್ದಾರೆ. ಇದನ್ನು ಜೈಲಿನ ಅಂಗಸಂಸ್ಥೆ ಎಂದು ಘೋಷಿಸಲಾಗಿದೆ. ಅವರು ಸದ್ಯ ಬಂಧನದಲ್ಲಿರುವ ಏಕೈಕ ಜಮ್ಮು ಮತ್ತು ಕಾಶ್ಮೀರದ ಪ್ರಮುಖ ರಾಜಕಾರಣಿಯಾಗಿದ್ದಾರೆ.


ಇದನ್ನೂ ಓದಿ: ಮೆಹಬೂಬಾ ಮುಫ್ತಿ ಬಂಧನದಿಂದ ಭಾರತದ ಪ್ರಜಾಪ್ರಭುತ್ವಕ್ಕೆ ಹಾನಿ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...