Homeಮುಖಪುಟ’ಬ್ಯಾಡ್‌ ಬಾಯ್‌ ಬಿಲಿಯನೇರ್ಸ್’ ಸಾಕ್ಷ್ಯಚಿತ್ರದ ವಿರುದ್ದ ಕೋರ್ಟ್ ಮೆಟ್ಟಿಲೇರಿದ ಮೆಹುಲ್ ಚೋಕ್ಸಿ

’ಬ್ಯಾಡ್‌ ಬಾಯ್‌ ಬಿಲಿಯನೇರ್ಸ್’ ಸಾಕ್ಷ್ಯಚಿತ್ರದ ವಿರುದ್ದ ಕೋರ್ಟ್ ಮೆಟ್ಟಿಲೇರಿದ ಮೆಹುಲ್ ಚೋಕ್ಸಿ

ಸಾಕ್ಷ್ಯಚಿತ್ರವು ಸೆಪ್ಟೆಂಬರ್ 2 ರಂದು ಬಿಡುಗಡೆಯಾಗಲಿದ್ದು, ಇದು ಭಾರತದ ಅತ್ಯಂತ ಕುಖ್ಯಾತ ಉದ್ಯಮಿಗಳ ದುರಾಸೆ, ವಂಚನೆ ಮತ್ತು ಭ್ರಷ್ಟಾಚಾರವನ್ನು ಪರಿಶೋಧಿಸುತ್ತದೆ ಎಂದು ನೆಟ್‌ಫ್ಲಿಕ್ಸ್‌‌ ಹೇಳಿತ್ತು.

- Advertisement -
- Advertisement -

ನೆಟ್‌ಫ್ಲಿಕ್ಸ್ ಫ್ಲಾಟ್‌‌ಫಾರ್ಮ್‌‌ನಲ್ಲಿ ಬಿಡುಗಡೆಯಾಗಲಿರುವ ‘ಬ್ಯಾಡ್ ಬಾಯ್ ಬಿಲಿಯನೇರ್ಸ್’ ಸಾಕ್ಷ್ಯಚಿತ್ರದ ವಿರುದ್ಧ ಪಿಎನ್‌ಬಿ ಹಗರಣದ ಆರೋಪಿ ಮೆಹುಲ್ ಚೋಕ್ಸಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಬ್ಯಾಡ್ ಬಾಯ್ ಬಿಲಿಯನೇರ್ಸ್ ಎಂಬ ಈ ಸಾಕ್ಷ್ಯಚಿತ್ರವು ಸೆಪ್ಟೆಂಬರ್ 2 ರಂದು ಬಿಡುಗಡೆಯಾಗಲಿದ್ದು, ಚಿತ್ರವು ಭಾರತದ ಅತ್ಯಂತ ಕುಖ್ಯಾತ ಉದ್ಯಮಿಗಳ ದುರಾಸೆ, ವಂಚನೆ ಮತ್ತು ಭ್ರಷ್ಟಾಚಾರವನ್ನು ಪರಿಶೋಧಿಸುತ್ತದೆ ಎಂದು ನೆಟ್‌ಫ್ಲಿಕ್ಸ್‌‌ ಹೇಳಿತ್ತು.

ಮೆಹುಲ್ ಚೋಕ್ಸಿ ಪರವಾಗಿ ಹಾಜರಾದ ವಕೀಲರು “ಸಾಕ್ಷ್ಯಚಿತ್ರವು ಪ್ರಕರಣದಲ್ಲಿ ನಡೆಯುತ್ತಿರುವ ತನಿಖೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ, ಅದರ ಬಿಡುಗಡೆಯ ಮೊದಲು ನಾವು ಅದರ ಪೂರ್ವವೀಕ್ಷಣೆಯನ್ನು ವೀಕ್ಷಿಸಲು ಬಯಸುತ್ತೇವೆ” ಎಂದು ನ್ಯಾಯಲಯದಲ್ಲಿ ಮನವಿ ಸಲ್ಲಿಸಿದ್ದರು.

’ಬ್ಯಾಡ್‌ ಬಾಯ್,‌ ಬಿಲಿಯನೇರ್ಸ್, ಸಾಕ್ಷ್ಯಚಿತ್ರದ ವಿರುದ್ದ ಕೋರ್ಟ್ ಮೆಟ್ಟಿಲೇರಿದ ಮೆಹುಲ್ ಚೋಕ್ಸಿ
PC: Times Of Republic

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಲಯ, ಸಾಕ್ಷ್ಯ ಚಿತ್ರದ ಪೂರ್ವ ಸ್ಕ್ರೀನಿಂಗ್ ಅನ್ನು ಒದಗಿಸಬಹುದೇ ಎಂದು ನೆಟ್‌ಫ್ಲಿಕ್ಸ್ ಅನ್ನು ಕೇಳಿದೆ. ವಿಚಾರಣೆ ವೇಳೆಯಲ್ಲಿ ಪ್ರತಿಕ್ರಿಯಿಸಿದ ನೆಟ್‌‌ಫ್ಲಿಕ್ಸ್ ಸಾಕ್ಷ್ಯ ಚಿತ್ರವು ನೀರವ್ ಮೋದಿ ಹಾಗೂ ಇತರ ಜನರ ಬಗ್ಗೆಯಿದೆ, ಅದರಲ್ಲಿ ಮೆಹುಲ್‌ ಚೋಕ್ಸಿ ಬಗೆಗೆ ಕೇವಲ ಎರಡು ನಿಮಿಷವನ್ನು ಮೀಸಲಿಟ್ಟಿದ್ದೇವೆ ಎಂದು ಹೇಳಿದೆ.

ಸಾಕ್ಷ್ಯಚಿತ್ರ ಬಿಡುಗಡೆಯನ್ನು ಮುಂದೂಡಲು ಮೆಹುಲ್ ಚೋಕ್ಸಿ ವಕೀಲರು ಕೋರಿದ್ದಾರೆ. ದೆಹಲಿ ಹೈಕೋರ್ಟ್ ವಿಚಾರಣೆಯನ್ನು ಆಗಸ್ಟ್ 28 ರಂದು ನಿಗದಿಪಡಿಸಿದೆ.

13,500 ಕೋಟಿ ರೂ.ಗಳ ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಗೀತಾಂಜಲಿ ಜೆಮ್ಸ್‌ನ ಪ್ರವರ್ತಕ ಮೆಹುಲ್ ಚೋಕ್ಸಿ ಮತ್ತು ಅವರ ಸೋದರಳಿಯ ನೀರವ್ ಮೋದಿ ಆರೋಪಿಯಾಗಿದ್ದಾರೆ. ಮೆಹುಲ್ ಚೋಕ್ಸಿ ಕಳೆದ ವರ್ಷ ಭಾರತದಿಂದ ಪಲಾಯನವಾಗಿದ್ದು, ಆಂಟಿಗುವಾ ಮತ್ತು ಬಾರ್ಬುಡಾದ ಪೌರತ್ವವನ್ನು ಪಡೆದಿದ್ದಾರೆ.


ಇದನ್ನೂ ಓದಿ: ಇದುವರೆಗೂ ಯಾವುದೇ ಲವ್‌ ಜಿಹಾದ್‌ ನಡೆದಿಲ್ಲವೆಂದ ಮೋದಿ ಸರ್ಕಾರ : ಇದು ಬಿಜೆಪಿ V/S ಬಿಜೆಪಿಯ ಕದನ.. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...