Homeಕರ್ನಾಟಕಮೇಕೆದಾಟು ಪಾದಯಾತ್ರೆ: ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ತರಾಟೆ

ಮೇಕೆದಾಟು ಪಾದಯಾತ್ರೆ: ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ತರಾಟೆ

- Advertisement -

ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಾಗಿದ್ದರೂ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆಯನ್ನು ಮುಂದುವರಿಸಲು ಹೇಗೆ ಮತ್ತು ಏಕೆ ಅನುಮತಿ ನೀಡಲಾಗುತ್ತಿದೆ ಎಂದು ಹೈಕೋರ್ಟ್ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ಕೊರೊನಾ ಪ್ರಕರಣಗಳು ಉಲ್ಬಣವಾಗುತ್ತಿರುವಾಗ ಪಾದಯಾತ್ರೆಯಂತಹ ಚಟುವಟಿಕೆಗೆ ಹೇಗೆ ಅವಕಾಶ ನೀಡಿದ್ದಿರಿ..? ಪಾದಯಾತ್ರೆಗೆ ಅನುಮತಿ ನೀಡಿಲ್ಲ ಎಂದ ಮೇಲೆ ಏಕೆ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ತಿಳಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.

ಜೊತೆಗೆ ಈ ಪಾದಯಾತ್ರೆ ನಡೆಸಲು ಅನುಮತಿ ತೆಗೆದುಕೊಂಡಿದ್ದೀರಾ..? ರಾಜ್ಯ ಸರ್ಕಾರ ಹೊರಡಿಸಿರುವ ಕೊರೊನಾ ಮಾರ್ಗಸೂಚಿಗಳನ್ನು ಅನುಸರಿಸಲಾಗುತ್ತಿದೆಯೇ..? ಈ ಮಾರ್ಗಸೂಚಿಗೆ ಬದ್ಧವಾಗಿರಲು ಯಾವ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ..? ನಿಯಮಗಳನ್ನು ಉಲ್ಲಂಘಿಸಿದ ಸಮಯದಲ್ಲಿ ಯಾವ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿಸುವಂತೆ ಕೆಪಿಸಿಸಿಗೆ ಹೈಕೋರ್ಟ್ ಪ್ರಶ್ನಿಸಿದೆ.

ಇದನ್ನೂ ಓದಿ :ಮೇಕೆದಾಟು ಪಾದಯಾತ್ರೆ: ಡಿಕೆಶಿ, ಸಿದ್ದರಾಮಯ್ಯ ಸೇರಿ 30 ನಾಯಕರ ವಿರುದ್ಧ ಎಫ್‌ಐಆರ್‌

ರಾಜ್ಯದಲ್ಲಿ “ನಮ್ಮ ನೀರು ನಮ್ಮ ಹಕ್ಕು” ಎಂಬ ಘೋಷಣೆಯೊಂದಿಗೆ ಕೆಪಿಸಿಸಿ ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆಯನ್ನು ಮುಂದುವರೆಸದಂತೆ ತಡೆಯಲು ರಾಜ್ಯ ಸರ್ಕಾರ ಮತ್ತು ರಾಮನಗರದ ಉಪ ಆಯುಕ್ತರಿಗೆ ನಿರ್ದೇಶನ ನೀಡುವಂತೆ ನಾಗೇಂದ್ರ ಪ್ರಸಾದ್ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ರಾಜ್ಯ ಸರ್ಕಾರವು ನಿರ್ಬಂಧಗಳನ್ನು ವಿಧಿಸಿದ್ದರೂ ಸಹ ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಕೆಪಿಸಿಸಿ 10 ದಿನಗಳ ಪಾದಯಾತ್ರೆಯನ್ನು ಪ್ರಾರಂಭಿಸಿದೆ ಎಂದು ಅರ್ಜಿದಾರರ ಪರ ವಕೀಲರು ತಿಳಿಸಿದ್ದಾರೆ.

ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ಮತ್ತು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ವಿಭಾಗೀಯ ಪೀಠವು ಅರ್ಜಿ ವಿಚಾರಣೆ ನಡೆಸುತ್ತಿದೆ. ಮುಂದಿನ ವಿಚಾರಣೆಯನ್ನು ಶುಕ್ರವಾರ (ಜ.14)ಕ್ಕೆ ಮುಂದೂಡಲಾಗಿದೆ.

ಇನ್ನು, ಕೊರೊನಾ ನಿಯಮ ಉಲ್ಲಂಘನೆ ಆರೋಪದಲ್ಲಿ ಪಾದಯಾತ್ರೆ ಆಯೋಜಕರಾದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಧ್ರುವನಾರಾಯಣ, ರವಿ, ಪ್ರಿಯಾಂಕ್ ಖರ್ಗೆ ಸೇರಿದಂತೆ 64 ಮಂದಿ ವಿರುದ್ಧ ಕನಕಪುರ ಠಾಣೆಯಲ್ಲಿ ಮೂರನೇ ದೂರು ದಾಖಲಾಗಿದೆ.


ಇದನ್ನೂ ಓದಿ: ನಮ್ಮ ನೀರು ನಮ್ಮ ಹಕ್ಕು ಘೋಷಣೆಯೊಂದಿಗೆ ಮೇಕೆದಾಟು ಪಾದಯಾತ್ರೆ ಆರಂಭಿಸಿದ ಕಾಂಗ್ರೆಸ್

+ posts

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಭಾರತದ ಮಾತೃ ಭಾಷೆ ಸಂಸ್ಕೃತವೇ? ದ್ರಾವಿಡವೇ?

ಯಾವುದೇ ಭಾಷೆಯ ಮೂಲ ಉದ್ದೇಶ ಸಂವಹನ. ಸಂವಹನದ ಉದ್ದೇಶದಿಂದ ಬಳಸಲಾಗುವ ಯಾವುದೇ ಭಾಷೆಗಳಲ್ಲಿ ಮೇಲು ಕೀಳು ಎಂಬ ಭಾವವೇ ನಿಕೃಷ್ಟವಾದದ್ದು. ಜಗತ್ತಿನ ಮೂಲೆ ಮೂಲೆಗಳಲ್ಲಿ ಮನುಷ್ಯರು ಬಳಸುವ ಎಲ್ಲಾ ಭಾಷೆಗಳಿಗೂ ತನ್ನದೇ ಆದ...
Wordpress Social Share Plugin powered by Ultimatelysocial