Homeಕರ್ನಾಟಕಮೇಕೆದಾಟು ಯೋಜನೆ: ವಾರಾಂತ್ಯದಲ್ಲಿ ಪರಿಣಿತರ ಜೊತೆ ಸಿಎಂ ಸಭೆ- ಬಸವರಾಜ ಬೊಮ್ಮಾಯಿ

ಮೇಕೆದಾಟು ಯೋಜನೆ: ವಾರಾಂತ್ಯದಲ್ಲಿ ಪರಿಣಿತರ ಜೊತೆ ಸಿಎಂ ಸಭೆ- ಬಸವರಾಜ ಬೊಮ್ಮಾಯಿ

- Advertisement -
- Advertisement -

ಮೇಕೆದಾಟು ಅಣೆಕಟ್ಟು ಯೋಜನೆಯನ್ನು ಅತಿ ಶೀಘ್ರದಲ್ಲಿ ಕಾರ್ಯಾರಂಭ ಮಾಡಲು ಕ್ರಿಯಾಯೋಜನೆ ಸಿದ್ಧಪಡಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ತಿಳಿಸಿದರು.

ಬುಧವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಈ ವಾರಾಂತ್ಯದಲ್ಲಿ ಮುಖ್ಯಮಂತ್ರಿಗಳು ಕ್ರಿಯಾ ಯೋಜನೆಗೆ ಸಂಬಂಧಪಟ್ಟಂತೆ ಕಾನೂನು ತಜ್ಞರು ಹಾಗೂ ತಾಂತ್ರಿಕ ಪರಿಣಿತರ ಜೊತೆ ಚರ್ಚೆ ಮಾಡಲಿದ್ದಾರೆ ಎಂದರು.

ಮೇಕೆದಾಟು ಯೋಜನೆಗೆ ಸಂಬಂಧಪಟ್ಟಂತೆ ಸುಪ್ರೀಂಕೋರ್ಟಿನಲ್ಲಿ ಮಿಸಲೇನಿಯಸ್ ಅರ್ಜಿ ಮಾತ್ರ ಬಾಕಿ ಇದೆ.  ಈ ಕುರಿತು ಸಿಎಂ ಈ ವಾರ ಸಭೆ ಕೈಗೊಳ್ಳಲಿದ್ದಾರೆ. ಯೋಜನೆಯ ಅನುಷ್ಠಾನಕ್ಕೆ ಯಾವ ಯಾವ ಒಪ್ಪಿಗೆ ಪಡೆಯಬೇಕು ? ಮುಂದೆ ಯಾವ ರೀತಿ ಹೋಗಬೇಕು ಎಂಬುದರ ಕುರಿತು ಕಾನೂನು ಪರಿಣಿತರ ಜೊತೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತಾರೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: ರಾಜಕೀಯದಲ್ಲೇ ಮುಳುಗಿ ಹೋದವರಿಗೆ ರಾಜ್ಯದ ಹಿತ ನೆನಪಿರುತ್ತದೆಯೇ?- ಕುಮಾರಸ್ವಾಮಿ ಆಕ್ರೋಶ

ಮೇಕೆದಾಟು ಯೋಜನೆ ರಾಜ್ಯಕ್ಕೆ ಮಹತ್ವದ್ದಾಗಿದ್ದು, ಕಾವೇರಿ ನೀರು ನಿರ್ವಹಣೆಯಲ್ಲಿ ಮುಖ್ಯ ಪಾತ್ರವಹಿಸುವ ಭವಿಷ್ಯದ ಯೋಜನೆಯಾಗಿದೆ ಎಂದರು.

ಸಂಕಷ್ಟದ ಸಂದರ್ಭದಲ್ಲಿ ನೀರು ಹಂಚಿಕೆಯಲ್ಲಿ ಮಹತ್ವದ ಪಾತ್ರವಹಿಸುವ ಸಮಾನಾಂತರ ಅಣೆಕಟ್ಟು ಇದಾಗಲಿದೆ. ಆದ್ದರಿಂದ ಈ ಯೋಜನೆಯನ್ನು ಜಾರಿ ಮಾಡಲು ಕ್ರಿಯಾ ಯೋಜನೆ ಸಿದ್ಧಪಡಿಸಲು ಮುಖ್ಯಮಂತ್ರಿಗಳು ಈ ವಾರಾಂತ್ಯದೊಳಗೆ ಕಾನೂನು ಪಂಡಿತರ ಮತ್ತು ತಾಂತ್ರಿಕ ಪರಿಣಿತರ ಸಭೆ ಕರೆಯಲಿದ್ದಾರೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.

ಯೋಜನೆಯ ಅನುಷ್ಠಾನಕ್ಕೆ ಯಾವ ಯಾವ ಒಪ್ಪಿಗೆ ಪಡೆಯಬೇಕು, ಮುಂದೆ ಯಾವ ರೀತಿ ಹೋಗಬೇಕು ಎಂಬ ಬಗ್ಗೆ ಕಾನೂನು ಪರಿಣಿತರ ಜೊತೆ ಚರ್ಚಿಸಿ, ಮುಖ್ಯಮಂತ್ರಿ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಇನ್ನು ಮುಂಗಾರು ಅಧಿವೇಶನ ಕುರಿತು ಇದುವರೆಗೂ ಯಾವುದೇ ರೀತಿಯ ನಿರ್ಧಾರವಾಗಿಲ್ಲ. ಮುಖ್ಯಮಂತ್ರಿಗಳ ಜತೆ ಈ ಬಗ್ಗೆ ಚರ್ಚೆ ಮಾಡುತ್ತೇನೆ ಎಂದು ಎಂದರು.


ಇದನ್ನೂ ಓದಿ: ಮುಖ್ಯಮಂತ್ರಿ ಕೊರಳಿಗೆ ಉರುಳಾದ ಅಕ್ರಮ ಡಿನೋಟಿಫಿಕೇಷನ್ ಹಗರಣ : ಪ್ರಕರಣದ ಮರು ತನಿಖೆಗೆ ನ್ಯಾಯಾಲಯ ಆದೇಶ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಪೆನ್‌ಡ್ರೈವ್ ಪ್ರಕರಣ: ಎಸ್‌ಐಟಿ ರಚಿಸಲು ಕೋರಿ ಮಹಿಳಾ ಆಯೋಗದಿಂದ ಸಿಎಂಗೆ ಪತ್ರ

0
ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ವಿಶೇಷ ತಂಡ ರಚನೆ ಮಾಡುವಂತೆ ಕೋರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಅವರು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ...