Homeಮುಖಪುಟಮೇಕೆದಾಟು ಯೋಜನೆ: ಸರ್ವ ಪಕ್ಷ ಸಭೆ ನಡೆಸಿದ ತಮಿಳುನಾಡು ಸಿಎಂ ಸ್ಟಾಲಿನ್

ಮೇಕೆದಾಟು ಯೋಜನೆ: ಸರ್ವ ಪಕ್ಷ ಸಭೆ ನಡೆಸಿದ ತಮಿಳುನಾಡು ಸಿಎಂ ಸ್ಟಾಲಿನ್

’ಯಡಿಯೂರಪ್ಪ ಅವರು ತಮಿಳುನಾಡು ಸಿಎಂಗೆ ಪತ್ರ ಬರೆದಿದ್ದೇ ತಪ್ಪು. ನಮಗೆ ಯೋಜನೆ ಮಾಡಲು ಯಾರ ಒಪ್ಪಿಗೆ ಬೇಕಿಲ್ಲ’- ಡಿ.ಕೆ.ಶಿವಕುಮಾರ್‌

- Advertisement -
- Advertisement -

ಕುಡಿಯುವ ನೀರಿನ ಸಮಸ್ಯೆಯನ್ನು ತಪ್ಪಿಸಲು, ರಾಜಧಾನಿಗೆ ಕುಡಿಯುವ ನೀರು ಸರಬರಾಜು ಮಾಡುವ ಸಲುವಾಗಿ ಕರ್ನಾಟಕ ಸರ್ಕಾರ ಮೇಕೆದಾಟು ಯೋಜನೆಯನ್ನು ಆರಂಭಿಸಿತ್ತು. ಯೋಜನೆಯ ಬಗ್ಗೆ ತಮಿಳುನಾಡಿನಿಂದ ವಿರೋಧ ದಶಕಗಳಿಂದಲೇ ಇದೆ. ಭಾನುವಾರ ಇದೇ ವಿಚಾರಕ್ಕೆ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ನೇತೃತ್ವದಲ್ಲಿ ಸರ್ವ ಪಕ್ಷಗಳ ಸಭೆ ನಡೆದಿದೆ.

ಮೇಕೆದಾಟು ಯೋಜನೆಯಿಂದ ತಮಿಳುನಾಡಿನ ನೀರಿನ ಪಾಲಿಗೆ ಕುತ್ತಾಗಲಿದೆ. ಅಲ್ಲಿನ ರೈತರಿಗೆ ಅನ್ಯಾಯವಾಗಲಿದೆ ಎಂಬುದು ತಮಿಳುನಾಡಿನ ಆರೋಪ. ಸರ್ವಪಕ್ಷಗಳ ಸಭೆಯಲ್ಲಿ ಮೇಕೆದಾಟು ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಲಾಗಿದ್ದು, ಸಭೆಯಲ್ಲಿ 3 ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.

ಡಿಎಂಕೆ, ಎಐಎಡಿಎಂಕೆ, ಕಾಂಗ್ರೆಸ್, ಬಿಜೆಪಿ, ಎಡಪಕ್ಷಗಳು ಸೇರಿ ಒಟ್ಟು 13 ಪಕ್ಷಗಳಿಂದ ವಿರೋಧ ವ್ಯಕ್ತವಾಗಿದ್ದು, ಕಾನೂನು ಹೋರಾಟದ ಬಗ್ಗೆಯೂ ಸಮಾಲೋಚನೆ ನಡೆದಿದೆ. ಅಲ್ಲದೆ, ಸುಪ್ರೀಂಕೋರ್ಟ್ ಮೆಟ್ಟಿಲೇರಲು ತಮಿಳುನಾಡು ಸರ್ಕಾರದ ಚಿಂತನೆ ನಡೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ತಮಿಳುನಾಡಿನಲ್ಲಿ ಪ್ರತ್ಯೇಕತೆಯ ಕಿಡಿ ಹಚ್ಚಿದ ಬಿಜೆಪಿ: ಮುನ್ನೆಲೆಗೆ ಬಂದ ಪ್ರತ್ಯೇಕ ರಾಜ್ಯದ ಕೂಗು

1.ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸುವುದು. 2. ಸರ್ವ ಪಕ್ಷ ಸದಸ್ಯರು ಕೇಂದ್ರ ಜಲ ಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭೇಟಿಯಾಗಿ ಅವರ ಮೂಲಕ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವುದು. 3. ಇದೇ ಸಂಧರ್ಭದಲ್ಲಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸುವುದು ಎಂದು ತಮೂರು ನಿರ್ಣಯಗಳನನ್ನು ತೆಗೆದುಕೊಳ್ಳಲಾಗಿದೆ.

ಇನ್ನು ಜುಲೈ 7ರಂದು ತಮಿಳುನಾಡಿನ ಜಲ ಸಂಪನ್ಮೂಲ ಸಚಿವ ದೊರೈ ಮುರುಗನ್ ಅವರು ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ ಮೇಕೆದಾಟು ಯೋಜನೆಯನ್ನು ತಡೆಯುವಂತೆ ಮನವಿ ಸಲ್ಲಿಸಿದ್ದರು.

“ಯೋಜನೆ ಬಗೆಗಿನ ವ್ಯಾಜ್ಯ ಸುಪ್ರೀಂ ಕೋರ್ಟಿನಲ್ಲಿದ್ದು, ತೀರ್ಪು ಬರುವವರೆಗೆ ಯೋಜನೆಗೆ ಅನುಮತಿ ನೀಡಬೇಡಿ. ಯೋಜನೆ ಆರಂಭವಾದರೆ ಎರಡೂ ರಾಜ್ಯಗಳ ಗಡಿಯಲ್ಲಿ ಮತ್ತೆ ಸಮಸ್ಯೆ ಉಲ್ಬಣವಾಗುತ್ತದೆ. ತಮಿಳುನಾಡಿನ ರೈತರಿಗೆ ಅನ್ಯಾಯವಾಗಲಿದೆ” ಎಂದು ದೂರು ನೀಡಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ’ನೂರು ವರ್ಷ ಆದರೂ, ಅವರದ್ದು ಇದೇ ಅಜೆಂಡಾ ಇದೆ. ಡಬಲ್ ಇಂಜಿನ್ ಸರ್ಕಾರ ಇದೆಲ್ಲ ಕ್ಲಿಯರ್ ಮಾಡುತ್ತೇವೆ ಎಂದಿದ್ದರು. ಆದರೆ, ಈಗ ಏನು ಮಾಡ್ತಿದ್ದಾರೆ..? ತಮಿಳುನಾಡಿಗೆ ಒಪ್ಪಂದದ ಪ್ರಕಾರ ನೀರು ಹರಿಯುತ್ತಿದೆ. ಇದರಲ್ಲಿ ನಮ್ಮದು ಯಾವ ತಕರಾರಿಲ್ಲ. ಯೋಜನೆಯಿಂದ ಯಾವ ಸಮಸ್ಯೆಯಿಲ್ಲ, ಕಂದಾಯ ಭೂಮಿ‌ ಹೆಚ್ಚು ಹೋಗಲ್ಲ. ಅರಣ್ಯದ ಸ್ವಲ್ಪ ಭಾಗ ಯೋಜನೆಗೆ ಹೋಗುತ್ತೆ. ಈ ಯೋಜನೆ ಕನಕಪುರಕ್ಕಾಗಿ ನಾವು ತಂದಿಲ್ಲ’ ಎಂದಿದ್ದಾರೆ.

’ತಮಿಳುನಾಡು ಬೇಕಾದರೆ ಒತ್ತಡ ಹಾಕಲಿ. ನಾಳೆಯೇ ಯೋಜನೆಗೆ ಅಡಿಗಲ್ಲು ಹಾಕಲಿ, ಕೆಲಸ ಆರಂಭಿಸಲಿ, ಭೂಮಿ ಪೂಜೆ ಮಾಡಿಬಿಡಲಿ. ಯಡಿಯೂರಪ್ಪ ತಮಿಳುನಾಡು ಸಿಎಂಗೆ ಪತ್ರ ಬರೆದಿದ್ದೇ ತಪ್ಪು. ನಮಗೆ ಯೋಜನೆ ಮಾಡಲು ಯಾರ ಒಪ್ಪಿಗೆ ಬೇಕಿಲ್ಲ’ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಕಿಡಿ ಕಾರಿದ್ದಾರೆ.


ಇದನ್ನೂ ಓದಿ: ಮೇಕೆದಾಟು ಯೋಜನೆ: ವಾರಾಂತ್ಯದಲ್ಲಿ ಪರಿಣಿತರ ಜೊತೆ ಸಿಎಂ ಸಭೆ- ಬಸವರಾಜ ಬೊಮ್ಮಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...