Homeಮುಖಪುಟಅವಹೇಳನಕಾರಿ ಸುದ್ದಿ ಪ್ರಕಟ: ಅಜಿತ್ ಹನುಮಕ್ಕನವರ್ ವಿರುದ್ಧ ಜಾಮೀನು ರಹಿತ ವಾರೆಂಟ್‌ಗೆ ಮನವಿ

ಅವಹೇಳನಕಾರಿ ಸುದ್ದಿ ಪ್ರಕಟ: ಅಜಿತ್ ಹನುಮಕ್ಕನವರ್ ವಿರುದ್ಧ ಜಾಮೀನು ರಹಿತ ವಾರೆಂಟ್‌ಗೆ ಮನವಿ

- Advertisement -
- Advertisement -

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪಕ್ಷದ ವಿರುದ್ಧ ಅವಹೇಳನಕಾರಿ ಸುದ್ದಿ ಪ್ರಕಟಿಸಿದ ಪ್ರಕರಣದಲ್ಲಿ ಸುವರ್ಣ ನ್ಯೂಸ್‌ ಸಂಪಾದಕ ಅಜಿತ್ ಹನುಮಕ್ಕನವರ್‌ರವರಿಗೆ ಜಾಮೀನು ರಹಿತ ವಾರೆಂಟ್ ಹೊರಡಿಸುವಂತೆ ಮೈಸೂರಿನ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಲಾಗಿದೆ.

ಪ್ರಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯ ಮೇಲೆ ಎನ್‌ಐಎ ದಾಳಿ ನಡೆಸುತ್ತಿದ್ದ ಸಂದರ್ಭದಲ್ಲಿ ಎಸ್‌ಡಿಪಿಐ ಪಕ್ಷದ ಮೇಲೆಯೂ ಸುವರ್ಣ ನ್ಯೂಸ್ ಆಧಾರ ರಹಿತ ಸುದ್ದಿ ಪ್ರಸಾರ ಮಾಡಿದೆ ಎಂದು ಆರೋಪಿಸಿ ಮೈಸೂರಿನಲ್ಲಿ ಚಾನೆಲ್ ಸಂಪಾದಕರಾದ ರವಿ ಹೆಗ್ಡೆ ಮತ್ತು ಅಜಿತ್ ಹನುಮಕ್ಕನವರ್‌ ವಿರುದ್ಧ ದೂರು ದಾಖಲಾಗಿತ್ತು.

ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಅವರ ಪರ ವಕೀಲರು ವಿನಾಯಿತಿ ಕೋರಿ ಸಿಆರ್‌ಪಿಸಿ ಸೆಕ್ಷನ್ 205ರ ಅಡಿ ಸಲ್ಲಿಸಿದ್ದ ಅರ್ಜಿಯನ್ನು ಮೈಸೂರಿನ ಜೆಎಂಎಫ್‌ಸಿ ನ್ಯಾಯಾಲಯ ತಿರಸ್ಕರಿಸಿದೆ. ಈ ಹಿನ್ನೆಲೆಯಲ್ಲಿ ದೂರುದಾರರ ಪರ ವಕೀಲರು ಆರೋಪಿಗಳ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸುವಂತೆ ಕೋರಿ ಮೆಮೊ ಸಲ್ಲಿಸಿದ್ದಾರೆ. ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಡಿಸೆಂಬರ್ 8ಕ್ಕೆ ಮುಂದೂಡಿದೆ.

ಈ ಹಿಂದೆಯೂ ಪ್ರೊ.ಭಗವಾನ್‌ರವರ ಕುರಿತು ಮಾತನಾಡುವಾಗ ಪ್ರವಾದಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಅಜಿತ್ ಹನುಮಕ್ಕರ್ ವಿರುದ್ಧ ರಾಜ್ಯಾದ್ಯಂತ ಹಲವಾರು ಕಡೆ ನೂರಾರು ದೂರು ದಾಖಲಾಗಿದ್ದವು. ಆನಂತರ ಅವರು ಕ್ಷಮೆ ಸಹ ಕೇಳಿದ್ದರು.

ಇದನ್ನೂ ಓದಿ; ನಿರೂಪಕ ‘ಅಜಿತ್ ಹನುಮಕ್ಕನವರ್‌’ಗೆ ನಟಿ ಸಂಜನಾ ಸಭ್ಯತೆಯ ಪಾಠ; ವಿಡಿಯೊ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...