Homeಮುಖಪುಟ‘ಮುಟ್ಟು ಅಂಗವೈಕಲ್ಯವಲ್ಲ…’; ವೇತನ ಸಹಿತ ರಜೆಗೆ ವಿರೋಧ ವ್ಯಕ್ತಪಡಿಸಿದ ಸಚಿವೆ ಸ್ಮೃತಿ ಇರಾನಿ

‘ಮುಟ್ಟು ಅಂಗವೈಕಲ್ಯವಲ್ಲ…’; ವೇತನ ಸಹಿತ ರಜೆಗೆ ವಿರೋಧ ವ್ಯಕ್ತಪಡಿಸಿದ ಸಚಿವೆ ಸ್ಮೃತಿ ಇರಾನಿ

- Advertisement -
- Advertisement -

‘ಮುಟ್ಟು ಮತ್ತು ಋತುಚಕ್ರವು ಅಂಗವೈಕಲ್ಯವಲ್ಲ; ಇದು ಮಹಿಳೆಯರ ಜೀವನ ಪಯಣದಲ್ಲಿ ಸಹಜ…’ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅಸೂಕ್ಷ್ಮ ಹೇಳಿಕೆ ನೀಡಿ ವಿವಾದಕ್ಕೆ ಕಾರಣರಾಗಿದ್ದಾರೆ.

ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಸದಸ್ಯ ಮನೋಜ್ ಕುಮಾರ್ ಝಾ ಅವರ ಪ್ರಶ್ನೆಗೆ ಬುಧವಾರ ರಾಜ್ಯಸಭೆಯಲ್ಲಿ ಉತ್ತರಿಸಿ ಇರಾನಿ, ಮಹಿಳೆಯರಿಗೆ ವೇತನ ಸಹಿತ ಮುಟ್ಟಿನ ರಜೆ ಕಲ್ಪನೆಗೆ ವಿರೋಧ ವ್ಯಕ್ತಪಡಿಸಿದರು.

ಮಹಿಳೆಯರಿಗೆ ನಿರ್ದಿಷ್ಟ ಸಂಖ್ಯೆಯ ರಜೆ ನೀಡಲು ಕಂಪನಿಗಳಿಗೆ ಕಡ್ಡಾಯ ನಿಬಂಧನೆಗಳನ್ನು ವಿಧಿಸಲು ಸರ್ಕಾರ ತೆಗೆದುಕೊಳ್ಳುತ್ತಿರುವ ಕ್ರಮಗಳ ಬಗ್ಗೆ ಝಾ ಪ್ರಶ್ನೆ ಕೇಳಿದರು. ಇದಕ್ಕೆ ಉತ್ತರಿಸಿದ ಸ್ಮೃತಿ ಇರಾನಿ, ‘ಮುಟ್ಟಾಗದವರು ಮುಟ್ಟಿನ ಬಗ್ಗೆ ನಿರ್ದಿಷ್ಟ ದೃಷ್ಟಿಕೋನವನ್ನು ಹೊಂದಿದ್ದಾರೆ ಎಂಬ ಕಾರಣಕ್ಕಾಗಿ ಮಹಿಳೆಯರಿಗೆ ಸಮಾನ ಅವಕಾಶವನ್ನು ನಿರಾಕರಿಸುವ ವಿಚಾರಗಳನ್ನು ನಾವು ಪ್ರಸ್ತಾಪಿಸಬಾರದು’ ಎಂದು ಹೇಳಿದರು.

‘ಆರೋಗ್ಯ ಮತ್ತು ಕುಟುಂಬ ಕಲ್ಯಾಣವು ಸಂಬಂಧಪಟ್ಟವರೊಂದಿಗೆ ಸಮಾಲೋಚಿಸಿ ಮುಟ್ಟಿನ ನೈರ್ಮಲ್ಯ ನೀತಿ ಕರಡನ್ನು ರೂಪಿಸಿದೆ. ಕೇಂದ್ರವು ಈಗಾಗಲೇ 10-19 ವಯಸ್ಸಿನ ಹುಡುಗಿಯರಲ್ಲಿ ಮುಟ್ಟಿನ ನೈರ್ಮಲ್ಯವನ್ನು ಉತ್ತೇಜಿಸುವ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯು ಕೇಂದ್ರ ಸರ್ಕಾರದ ಬೆಂಬಲಿತವಾಗಿದ್ದು, ರಾಜ್ಯಗಳು ಅಥವಾ ಕೇಂದ್ರಾಡಳಿತ ಪ್ರದೇಶಗಳಿಂದ ಸ್ವೀಕರಿಸಿದ ಪ್ರಸ್ತಾವನೆಗಳನ್ನು ಸ್ವೀಕರಿಸಿ, ಆರೋಗ್ಯ ಮಿಷನ್ ಮೂಲಕ ಕಾರ್ಯಕ್ರಮ ಅನುಷ್ಠಾನ ಮಾಡಲಾಗುತ್ತಿದೆ. ಮುಟ್ಟಿನ ನೈರ್ಮಲ್ಯದ ಬಗ್ಗೆ ಜಾಗೃತಿ ಮೂಡಿಸುವುದು ಯೋಜನೆಯ ಪ್ರಮುಖ ಉದ್ದೇಶಗಳಲ್ಲಿ ಒಂದಾಗಿದೆ’ ಎಂದು ಇರಾನಿ ಹೇಳಿದರು.

‘ತಜ್ಞರೊಂದಿಗೆ ಸಮಾಲೋಚಿಸಿ ಆರೋಗ್ಯ ಸಚಿವಾಲಯವು ಮುಟ್ಟಿನ ನೈರ್ಮಲ್ಯ ನೀತಿ ಕರಡನ್ನು ರೂಪಿಸಿದೆ’ ಎಂದು ಹೇಳಿದ ಅವರು, ಋತುಚಕ್ರದ ನೈರ್ಮಲ್ಯವನ್ನು ಉತ್ತೇಜಿಸಲು ವಿವಿಧ ಸಚಿವಾಲಯಗಳು ಕೈಗೊಂಡ ಇತರ ಉಪಕ್ರಮಗಳನ್ನು ಸದನಕ್ಕೆ ವಿವರಿಸಿದರು.

ಸರ್ಕಾರಿ ಮಹಿಳಾ ನೌಕರರಿಗೆ ವಿಶೇಷ ಮುಟ್ಟಿನ ರಜೆಯ ವಿಷಯವು ಆರೋಗ್ಯಕ್ಕೆ ಸಂಬಂಧಿಸಿದ ವಿಷಯವಾಗಿದೆ. ಆದ್ದರಿಂದ ವೇತನ ಸಹಿತ ರಜೆ ನೀಡುವ ಬಗ್ಗೆ ಪರಿಶೀಲಿಸಬಹುದು ಎಂದು ಆಡಳಿತ ಸುಧಾರಣೆ ಮತ್ತು ಸಿಬ್ಬಂದಿ ಸಚಿವಾಲಯ ಹೇಳಿದ ಈ ವಿಚಾರ ಚರ್ಚೆಗೆ ಇದು ಬಂದಿದೆ.

ಆರೋಗ್ಯ ಸಚಿವಾಲಯವು ಸೋಮವಾರ ಸಂಸತ್ತಿನಲ್ಲಿ ಮಂಡಿಸಿದ ವರದಿಯ ಪ್ರಕಾರ, ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು, ಕಾನೂನು ಮತ್ತು ನ್ಯಾಯದ ಇಲಾಖೆಗೆ ಸಂಬಂಧಿಸಿದ ಸಂಸದೀಯ ಸ್ಥಾಯಿ ಸಮಿತಿಯು ತನ್ನ ವರದಿಯಲ್ಲಿ ‘ಋತುಸ್ರಾವವು ಹೆಚ್ಚಿನ ಮಹಿಳೆಯರನ್ನು ದುರ್ಬಲಗೊಳಿಸುತ್ತದೆ. ಕೆಲಸದ ಸ್ಥಳದಲ್ಲಿ ಅವರ ಕಾರ್ಯಕ್ಷಮತೆಯ ಮೇಲೆ ಪರಿಣಾಮ ಬೀರುತ್ತದೆ’ ಎಂದು ಉಲ್ಲೇಖಿಸಿದೆ. ಯಾವುದೇ ವೈದ್ಯಕೀಯ ಪ್ರಮಾಣಪತ್ರ ಅಥವಾ ಸಮರ್ಥನೆಯನ್ನು ಪಡೆಯದೆ ಮಹಿಳೆಯರಿಗೆ ಮಾಸಿಕ ಅಥವಾ ವರ್ಷಕ್ಕೆ ಮಾಸಿಕ ರಜೆಗಳು, ಅನಾರೋಗ್ಯದ ರಜೆಗಳು ಹಾಗೂ ಅರ್ಧ ವೇತನದ ರಜೆಗಳನ್ನು ಶಿಫಾರಸು ಮಾಡಲಾಗಿದೆ.

ಇದನ್ನೂ ಓದಿ; ಭದ್ರತಾ ಲೋಪದ ಬಳಿಕ ಸಂಸತ್‌ಗೆ ಸಂದರ್ಶಕರ ಭೇಟಿ ಸ್ಥಗಿತ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮತದಾನ ನಡೆದ 48 ಗಂಟೆಗಳಲ್ಲಿ ಅಂಕಿಅಂಶಗಳ ಬಿಡುಗಡೆ: ಚು.ಆಯೋಗದಿಂದ ಪ್ರತಿಕ್ರಿಯೆ ಕೇಳಿದ ಸುಪ್ರೀಂಕೋರ್ಟ್‌

0
ಮತದಾನ ಮುಗಿದ 48 ಗಂಟೆಗಳ ಒಳಗೆ ಮತದಾನ ಕೇಂದ್ರವಾರು ಮತದಾರರ ಅಂಕಿಅಂಶಗಳನ್ನು ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲು ನಿರ್ದೇಶನ ನೀಡುವಂತೆ ಕೋರಿ ಎನ್‌ಜಿಒ ಎಡಿಆರ್ ಸಲ್ಲಿಸಿದ ಮನವಿಗೆ ಸುಪ್ರೀಂಕೋರ್ಟ್ ಶುಕ್ರವಾರ ಒಂದು ವಾರದೊಳಗೆ ಭಾರತೀಯ...