Homeಮುಖಪುಟಮೆಂಟರ್‌ ಹೆಚ್ಚಿನದ್ದೇನೂ ಮಾಡಲಾರರು; ಗವಾಸ್ಕರ್‌ ಉವಾಚ

ಮೆಂಟರ್‌ ಹೆಚ್ಚಿನದ್ದೇನೂ ಮಾಡಲಾರರು; ಗವಾಸ್ಕರ್‌ ಉವಾಚ

- Advertisement -
- Advertisement -

“ಒಬ್ಬ ಮೆಂಟರ್‌ ಹೆಚ್ಚೆಂದರೆ ಸಹಾಯ ಮಾಡಬಹುದು, ಆದರೆ ಉತ್ತಮ ಪ್ರದರ್ಶನ ನೀಡಿ ಆಟಗಾರರೇ ನಿಜವಾದ ಟಾಸ್ಕ್‌ ಎದುರಿಸಬೇಕಾಗುತ್ತದೆ” ಎಂದು ಖ್ಯಾತ ಕ್ರಿಕೆಟಿಗ ಸುನಿಲ್ ಗವಾಸ್ಕರ್‌‌ ಹೇಳಿದ್ದಾರೆ.

ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ ಅವರನ್ನು ಟಿ-20 ವಿಶ್ವಕಪ್‌ ತಂಡದ ಮೆಂಟರ್‌ ಆಗಿ ನೇಮಕ ಮಾಡಿರುವ ಕುರಿತು ಆಜ್‌ತಕ್‌ ಮಾಧ್ಯಮದೊಂದಿಗೆ ಗವಾಸ್ಕರ್ ಹಂಚಿಕೊಂಡಿರುವ ಸಂಗತಿಗಳನ್ನು ಎನ್‌ಡಿಟಿವಿ ವರದಿ ಮಾಡಿದೆ.

ಭಾನುವಾರ ಟಿ-20 ವಿಶ್ವಕಪ್‌‌ ಸೂಪರ್‌ 12ರ ಹಂತದ ಪಂದ್ಯಾಟದಲ್ಲಿ ಪಾಕಿಸ್ತಾನದ ವಿರುದ್ಧ ಕೊಹ್ಲಿ ಪಡೆ ಸೆಣೆಸಾಡಲಿದೆ. “ಈ ರೂಪದ ಪಂದ್ಯಾವಳಿಯಲ್ಲಿ ಕೊಹ್ಲಿ ಪಡೆ ಸಂಪೂರ್ಣ ಮೆಚ್ಚಿನದ್ದು ಎಂದು ಹೇಳಲು ಸಾಧ್ಯವಿಲ್ಲ. ಮೆಂಟರ್‌ ಹೆಚ್ಚಿನದ್ದೇನೂ ಮಾಡಲೂ ಆಗದು” ಎಂದು ಗವಾಸ್ಕರ್‌‌ ಎಚ್ಚರಿಸಿದ್ದಾರೆ.

“ಹೌದು, ಡ್ರೆಸ್ಸಿಂಗ್‌ ರೂಮಿನಲ್ಲಿ ಈ ವೇಗದ ಆಟಕ್ಕೆ ತಯಾರಾಗಲು ಮೆಂಟರ್‌‌ ನಿಮಗೆ ಸಹಾಯ ಮಾಡಬಹುದು, ಅಗತ್ಯವಿದ್ದರೆ ತಂತ್ರಗಾರಿಕೆಯನ್ನು ಎಣೆಯಲು ಸಹಾಯ ಮಾಡಬಹುದು” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

“ಟೈಮ್‌ಔಟ್‌ ಸಮಯದಲ್ಲಿ ಬ್ಯಾಟ್‌ಮನ್‌ಗಳು ಮತ್ತು ಬೌಲರ್‌ಗಳೊಂದಿಗೆ ಅವರು (ಮೆಂಟರ್‌) ಮಾತನಾಡಬಹುದು, ಹೀಗಾಗಿ ಧೋನಿಯವರ ನೇಮಕ ಒಳ್ಳೆಯದ್ದಾಗಿದೆ. ಆದರೆ ಧೋನಿ ಡ್ರೆಸ್ಸಿಂಗ್‌ ರೂಮಿನಲ್ಲಿ ಇರುತ್ತಾರೆ. ಆಟಗಾರರು ಮೈದಾನದಲ್ಲಿ ನಿಜವಾದ ಕೆಲಸವನ್ನು ನಿರ್ವಹಿಸಬೇಕು. ಆಟಗಾರರು ಒತ್ತಡವನ್ನು ಹೇಗೆ ನಿಭಾಯಿಸುತ್ತಾರೆ ಎಂಬುದರ ಮೇಲೆ ಫಲಿತಾಂಶ ನಿರ್ಧಾರವಾಗಲಿದೆ” ಎಂದು ಗವಾಸ್ಕರ್ ತಿಳಿಸಿದ್ದಾರೆ.

ಟಿ-20 ಮಾದರಿಯ ಕ್ರಿಕೆಟ್‌ ನಾಯಕತ್ವವನ್ನು ಬಿಡುವುದಾಗಿ ವಿರಾಟ್‌ ಕೊಹ್ಲಿ ಘೋಷಿಸಿರುವುದರಿಂದ ಅವರ ಮೇಲಿನ ಒತ್ತಡ ಕಡಿಮೆಯಾಗಲಿದೆ ಎಂದಿರುವ ಸುನಿಲ್‌ ಗವಾಸ್ಕರ್‌‌, “ನೀವು ನಾಯಕನಾಗಿದ್ದಾಗ ನಿಮ್ಮ ಬಗ್ಗೆ ಮಾತ್ರ ಯೋಚಿಸಲು ಸಾಧ್ಯವಿಲ್ಲ, ದಿಕ್ಕು ತಪ್ಪುತ್ತಿರುವ ಬ್ಯಾಟ್‌ಮನ್‌ಗಳೊಂದಿಗೆ ಅಥವಾ ಬೌಲರ್‌ರೊಂದಿಗೆ ತಂತ್ರಗಾರಿಕೆ ಎಣೆಯಬೇಕಾಗುತ್ತದೆ” ಎಂದಿದ್ದಾರೆ.

“ಇದೆಲ್ಲದರ ನಡುವೆ ತನ್ನ (ನಾಯಕ) ಫಾರ್ಮ್‌ ಬಗ್ಗೆ ನಿರ್ಲಕ್ಷ್ಯ ತಾಳಬೇಕಾಗುತ್ತದೆ. ನಿಮಗೆ ಈ ಒತ್ತಡ ಇಲ್ಲವಾದರೆ ನಿಮ್ಮ ಆಟದ ಬಗ್ಗೆ ನೀನು ಗಮನ ಹರಿಸಬಹುದು. ಟಿ-20 ವಿಶ್ವಕಪ್‌‌ ನಾಯಕತ್ವ ತೊರೆಯುತ್ತಿರುವ ವಿರಾಟ್‌ಗೆ ಇದು ವರದಾನವಾಗಲಿದೆ. ಕೊಹ್ಲಿ ಜವಾಬ್ದಾರಿಗಳ ಕುರಿತು ಹೆಚ್ಚು ಯೋಚಿಸುವ ಅಗತ್ಯವಿರುವುದಿಲ್ಲ. ಆದ್ದರಿಂದ ಕೊಹ್ಲಿಯವರು ತಮ್ಮದೇ ಆದ ಆಟದ ಮೇಲೆ ಗಮನಹರಿಸಬಹುದು ಮತ್ತು ಸಾಧ್ಯವಾದಷ್ಟು ರನ್ ಗಳಿಸಬಹುದು” ಎಂದು ಹೇಳಿದ್ದಾರೆ.

ವಿಶ್ವ ಕ್ರಿಕೆಟ್‌ನ ಅತ್ಯಂತ ಗೌರವಾನ್ವಿತರಲ್ಲಿ ಒಬ್ಬರಾದ ಗವಾಸ್ಕರ್, “ಪ್ರಾಥಮಿಕವಾಗಿ ತಂಡದ ಆಯ್ಕೆಯಲ್ಲಿ ಎಡವಿದ್ದೇ ಜಾಗತಿಕ ಟೂರ್ನಿಗಳಲ್ಲಿ ಭಾರತವು ನಾಕೌಟ್ ಪಂದ್ಯಗಳನ್ನು ಗೆಲ್ಲಲು ವಿಫಲವಾಗಲು ಕಾರಣ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಮಹತ್ವದ ಪಂದ್ಯಗಳಲ್ಲಿ ತಂಡದ ಸಂಯೋಜನೆಯೇ ಭಾರತದ ಸಮಸ್ಯೆಯಾಗಿದೆ. ನಾಕ್ ಔಟ್ ಪಂದ್ಯಗಳಲ್ಲಿ ಸರಿಯಾಗಿ ತಂಡವನ್ನು ಆಯ್ಕೆ ಮಾಡಿದ್ದರೆ, ಭಾರತವು ಕಡಿಮೆ ಸಮಸ್ಯೆಗಳನ್ನು ಎದುರಿಸುತ್ತಿತ್ತು. ಕೆಲವೊಮ್ಮೆ, ನಿಮ್ಮ ಚಿಂತನೆಯ ಪ್ರಕ್ರಿಯೆಯು ವಿಭಿನ್ನವಾಗಿರುತ್ತದೆ” ಎಂದು ಹೇಳಿದ್ದಾರೆ.

“ನಾಕ್‌ಔಟ್‌ ಮತ್ತು ಫೈನಲ್‌ ಪಂದ್ಯಗಳಲ್ಲಿ ಯಾವಾಗಲೂ ಮೊದಲು ಬ್ಯಾಟ್ ಮಾಡಬೇಕು. ರನ್‌ ಹೆಚ್ಚಿಸಬೇಕು. ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಒಂದು ಓವರ್‌ಗೆ 7 ರನ್‌ ಗಳಿಸುವುದೂ ಕಷ್ಟವಾಗಿರುತ್ತದೆ. ನಾವು ಮೊದಲು ಬ್ಯಾಟ್‌ ಮಾಡದೆ ಚೇಸಿಂಗ್‌ ಮಾಡಿದಾಗ ಒಂದೆರಡು ವಿಕೆಟ್‌ ಕಳೆದುಕೊಂಡಾಗ ಗುರಿಮುಟ್ಟುವುದು ಕಷ್ಟವಾಗುತ್ತದೆ” ಎಂದು ಅವರು ಮಾರ್ಗದರ್ಶನ ನೀಡಿದ್ದಾರೆ.

ಇದನ್ನೂ ಓದಿರಿ: ಟಿ-20 ವಿಶ್ವಕಪ್ ನಂತರ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಲಿರುವ ರಾಹುಲ್ ದ್ರಾವಿಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...