Homeಮುಖಪುಟನರ್ಸಿಂಗ್ ವಿದ್ಯಾರ್ಥಿಗಳಿಗೆ 'ವರದಕ್ಷಿಣೆಯ ಉಪಯೋಗಗಳು' ಎಂಬ ಪಠ್ಯ ಮುದ್ರಣ: ಕ್ರಮಕ್ಕೆ ಮಹಿಳಾ ಆಯೋಗ ಆಗ್ರಹ

ನರ್ಸಿಂಗ್ ವಿದ್ಯಾರ್ಥಿಗಳಿಗೆ ‘ವರದಕ್ಷಿಣೆಯ ಉಪಯೋಗಗಳು’ ಎಂಬ ಪಠ್ಯ ಮುದ್ರಣ: ಕ್ರಮಕ್ಕೆ ಮಹಿಳಾ ಆಯೋಗ ಆಗ್ರಹ

- Advertisement -
- Advertisement -

ಸಾಮಾಜಿಕ ಪಿಡುಗೆಂದು ನಿರೂಪಿತವಾಗಿರುವ, ಪ್ರತಿಗಾಮಿ ಚಿಂತನೆ ಮತ್ತು ಕ್ರೂರ ಆಚರಣೆಯಾಗಿರುವ ವರದಕ್ಷಿಣೆ ಪದ್ದತಿಯನ್ನು ಪ್ರೋತ್ಸಾಹಿಸುವಂತಹ ಪಠ್ಯ ಪ್ರಕಟವಾಗಿರುವುದು ವಿವಾದಕ್ಕೆ ಕಾರಣವಾಗಿದೆ. ಈ ಪಠ್ಯ ಮುದ್ರಿಸಿದ ಪಠ್ಯ ಪುಸ್ತಕ ಸಮಿತಿ ವಿರುದ್ದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ರಾಷ್ಟ್ರೀಯ ಮಹಿಳಾ ಆಯೋಗವು ಮಾನವ ಸಂಪನ್ಮೂಲ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆದಿದೆ.

ಆ ಪುಸ್ತಕದ ಮುಖಪುಟದ ಪ್ರಕಾರ ಟಿ.ಕೆ ಇಂದ್ರಾಣಿಯವರು ಭಾರತೀಯ ನರ್ಸಿಂಗ್ ಕೌನ್ಸಿಲ್ ಪಠ್ಯಕ್ರಮದ ಪ್ರಕಾರ ಬರೆದಿರುವ ‘ನರ್ಸ್‌ಗಳಿಗಾಗಿ ಸಮಾಜಶಾಸ್ತ್ರದ ಪಠ್ಯಪುಸ್ತಕ’ದಲ್ಲಿ ವರದಕ್ಷಿಣೆಯ ಉಪಯೋಗಗಳು ಎಂಬ ಪಠ್ಯ ಪ್ರಕಟವಾಗಿದೆ. ಅಪರ್ಣ ಎಂಬ ಟ್ವಿಟರ್ ಬಳಕೆದಾರರು ಇದನ್ನು ಪೋಸ್ಟ್ ಮಾಡಿದ ನಂತರ ವಿವಾದದ ಕಿಡಿ ಹೊತ್ತಿದೆ.

‘ವರದಕ್ಷಿಣೆಯ ಉಪಯೋಗಗಳು’ ಎಂಬ ಶೀರ್ಷಿಕೆಯಲ್ಲಿ ಹೆಣ್ಣು ಮಗಳೊಬ್ಬಳು ತಮ್ಮ ಪೋಷಕರಿಂದ ಆಸ್ತಿಯಲ್ಲಿ ಪಡೆಯುವ ಪಾಲನ್ನು ವರದಕ್ಷಿಣೆ ಎಂದು ಕರೆಯಲಾಗುತ್ತದೆ ಎಂದು ವಿವರಿಸಲಾಗಿದೆ. ಮುಂದುವರೆದು “ಹೊಸ ಸಂಸಾರ ಸ್ಥಾಪನೆಗೆ ವರದಕ್ಷಿಣೆ ಸಹಕಾರಿ. ಮನೆಯ ಸಾಮಾನುಗಳಾದ ಮಂಚ, ಹಾಸಿಗೆ, ಟಿವಿ, ಫ್ಯಾನ್, ರೆಫ್ರಿಜರೇಟರ್, ಪಾತ್ರೆಗಳು, ಬಟ್ಟೆಗಳು ಮತ್ತು ವಾಹನವನ್ನು ಸಹ ವರದಕ್ಷಿಣೆಯಾಗಿ ನೀಡುವ ಪದ್ಧತಿ ನಮ್ಮ ಭಾರತದ ಅನೇಕ ಭಾಗಗಳಲ್ಲಿ ಕಂಡುಬರುತ್ತದೆ” ಎಂದು ಬರೆಯಲಾಗಿದೆ.

ಪ್ರಚಲಿತದಲ್ಲಿರುವ ವರದಕ್ಷಿಣೆ ಪಿಡುಗಿನ ಬಗ್ಗೆ ಈ ಪಠ್ಯವು ವಿದ್ಯಾರ್ಥಿಗಳಿಗೆ ತಪ್ಪು ಸಂದೇಶವನ್ನು ರವಾನಿಸುತ್ತದೆ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಕಿಡಿಕಾರಿದ್ದಾರೆ. ಮಾನವ ಸಂಪನ್ಮೂಲ ಸಚಿವರು ಕೂಡಲೇ ಮಧ್ಯಪ್ರವೇಶಿಸಿ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಅಲ್ಲದೆ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್‌ರವರಿಗೆ ಸಹ ಪತ್ರ ಬರೆದಿದ್ದು, ಭಾರತೀಯ ನರ್ಸಿಂಗ್ ಕೌನ್ಸಿಲ್ ಈ ಪಠ್ಯಕ್ಕೆ ಹೇಗೆ ಅನುಮತಿ ನೀಡಿದೆ ಎಂಬುದರ ಕುರಿತು ತನಿಖೆ ನಡೆಸಿ ವರದಿ ನೀಡುವಂತೆ ಆಗ್ರಹಿಸಿದ್ದಾರೆ.

ಈ ಹಿಂದೆ ಬೆಂಗಳೂರಿನ ಇಂಜಿನಿಯರಿಂಗ್ ಓದುತ್ತಿದ್ದ ಯುವತಿಯೊಬ್ಬಳು ಡೌರಿಯ ಅನುಕೂಲಗಳು ಎಂಬ ಬರಹವನ್ನು ಹಂಚಿಕೊಂಡು ವಿವಾದ ಎಬ್ಬಿಸಿದ್ದರು. ಈಗ ಅಂತಹ ಅನಾಹುತವನ್ನು ಶಿಕ್ಷಣ ಸಂಸ್ಥೆಗಳೆ ಎಸಗಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

ವರದಕ್ಷಿಣೆ ಎಂಬ ಅನಿಷ್ಟ ಪದ್ದತಿ

ಇಂದಿಗೂ ಭಾರತ ದೇಶದಲ್ಲಿ ಒಂದು ವರ್ಷಕ್ಕೆ ಸುಮಾರು 8,000 ಮಂದಿ ವರದಕ್ಷಿಣೆ ಪದ್ದತಿಗೆ ಬಲಿಯಾಗುತ್ತಿದ್ದಾರೆ. ಇದು ಕೇವಲ ಅಧಿಕೃತವಾಗಿ ವರದಿಯಾಗಿರುವುದು. ಆದರೆ ದಾಖಲಾಗದ ಸಾವಿರಾರು ಪ್ರಕರಣಗಳ ಅಂಕಿ-ಅಂಶಗಳು ಲಭ್ಯವಾಗುವುದಿಲ್ಲ. ಆತಂಕಕಾರಿ ವಿಷಯವೆಂದರೆ, 1930 ರಲ್ಲಿ 40% ಮದುವೆಗಳಲ್ಲಿ ವರದಕ್ಷಿಣಿ ನೀಡಲಾಗುತ್ತಿತ್ತು. ಆದರೆ 2000 ರಲ್ಲಿ ದೇಶದಲ್ಲಿ ನಡೆಯುವ ಶೇ.90 ರಷ್ಟು ಮದುವೆಗಳಲ್ಲಿ ವಧುವಿನ ಕಡೆಯವರು ವರನಿಗೆ ವರದಕ್ಷಿಣೆ ನೀಡುತ್ತಿದ್ದಾರೆ. ಈ ವರದಕ್ಷಿಣಿಯಿಂದ ಉಂಟಾಗುವ ಅನಾಹುತಗಳು ಬರಿ ಸಾವು, ದೌರ್ಜನ್ಯವಲ್ಲ. ಹೆಣ್ಣು ಭ್ರೂಣ ಹತ್ಯೆ, ಹೆಣ್ಣು ಶಿಶುಗಳ ಹತ್ಯೆಗೆ ಕಾರಣವಾಗುತ್ತದೆ. ಒಟ್ಟಾರೆಯಾಗಿ ಹೇಳುವುದಾದರೆ ಅದು ಭ್ರಷ್ಟತೆಯನ್ನು ಬೆಂಬಲಿಸಿದಂತೆ..

ಕೇರಳದಲ್ಲಿ ಇತ್ತಿಚೆಗೆ ಮೂವರು ಯುವತಿಯರು ವರದಕ್ಷಿಣಿಗೆ ಬಲಿಯಾದ ಬಳಿಕ ಪ್ರಕರಣಗಳ ವಿಚಾರಣೆಗೆ, ತನಿಖೆಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿಶೇಷ ತನಿಖಾ ದಳ ರಚಿಸಿದ್ದಾರೆ. ’ಲಿಂಗಸಮಾನತೆಯನ್ನು ಮಕ್ಕಳ ಮನಸ್ಸಿನಲ್ಲಿ ಇಳಿಸುವ ಸಲುವಾಗಿ ಕೇರಳದ ಪಠ್ಯಪುಸ್ತಕಗಳನ್ನು ಪರಿಷ್ಕರಿಸಲಾಗುತ್ತದೆ. ಮಹಿಳೆಯರಿಗೆ ಅಗೌರವ ತೋರುವ ಪದಗಳು ಮತ್ತು ನುಡಿಗಟ್ಟುಗಳನ್ನು ತೆಗೆದುಹಾಕಲಾಗುತ್ತದೆ. ಶಾಲಾ-ಕಾಲೇಜುಗಳನ್ನು ಲಿಂಗಸಮಾನತೆಯ ಮತ್ತು ಸಮಾನ ಹಕ್ಕುಗಳ ತಾಣಗಳಾಗಿ ಪರಿವರ್ತಿಸಲು ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಹೇಳಿದ್ದಾರೆ.

’ಒಂದು ಸಮಾಜವಾಗಿ, ನಾವು ಚಾಲ್ತಿಯಲ್ಲಿರುವ ವಿವಾಹ ವ್ಯವಸ್ಥೆಯನ್ನು ಸುಧಾರಿಸಬೇಕಾಗಿದೆ. ಮದುವೆಯು ಕುಟುಂಬದ ಸಾಮಾಜಿಕ ಸ್ಥಾನಮಾನ ಮತ್ತು ಸಂಪತ್ತಿನ ಆಡಂಬರದ ಪ್ರದರ್ಶನವಾಗಿರಬಾರದು. ಅನಾಗರಿಕ ವರದಕ್ಷಿಣೆ ಪದ್ಧತಿಯು ನಮ್ಮ ಹೆಣ್ಣುಮಕ್ಕಳನ್ನು ಸರಕುಗಳಂತೆ ಪರಿಗಣಿಸುತ್ತದೆ ಎಂಬುದನ್ನು ಪೋಷಕರು ಅರಿತುಕೊಳ್ಳಬೇಕು. ನಾವು ಅವರನ್ನು ಮಾನವರಂತೆ ಉತ್ತಮವಾಗಿ ಪರಿಗಣಿಸಬೇಕು” ಎಂದಿದ್ದಾರೆ.


ಇದನ್ನೂ ಓದಿ; 1930 ಕ್ಕೆ ಹೋಲಿಸಿದರೆ ಈಗ ವರದಕ್ಷಿಣೆ 90% ಹೆಚ್ಚಳವಾಗಿದೆ: ಕಾರಣವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮನುವಾದಿಗಳು, ಮಹಿಳಾ ವಿರೋಧಿಗಳು ಎಂಬುದು ಮತ್ತೊಮ್ಮೆ ಸಾಕ್ಷ್ಯಾಧಾರಗಳ ಸಮೇತ ಸಾಬೀತಾಗಿದೆ.

LEAVE A REPLY

Please enter your comment!
Please enter your name here

- Advertisment -

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...