- Advertisement -
- Advertisement -
ಬಾಕ್ಸಿಂಗ್ ತಾರೆ ಮೇರಿ ಕೋಮ್ ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನ ಸೆಮಿ ಫೈನಲ್ ಹಂತಕ್ಕೆ ಲಗ್ಗೆ ಇಟ್ಟಿದ್ದಾರೆ.
ರಷ್ಯಾದ ಉಲಾನ್- ಉಡೆಯಲ್ಲಿ ನಡೆಯುತ್ತಿರುವ ಚಾಂಪಿಯನ್‌ಷಿಪ್‌ನಲ್ಲಿ ಬುಧವಾರ ನಡೆದ ಕ್ವಾರ್ಟರ್ ಫೈನಲ್‌ನ 51 ಕೆ.ಜಿ ವಿಭಾಗದಲ್ಲಿ ಮೇರಿ ಕೋಮ್ 5-0 ಅಂತರದಿಂದ ಕೊಲಂಬಿಯಾದ ಇಂಗ್ರಿಟ್ ವಲೆನ್ಸಿಯಾ ಎದುರು ಗೆದ್ದು ಬೀಗಿದರು.
ಇದನ್ನು ಓದಿ: ಪದ್ಮವಿಭೂಷಣಕ್ಕೆ ಶಿಫಾರಸು ಮಾಡಿದ ಮೊದಲ ಭಾರತೀಯ ಮಹಿಳಾ ಕ್ರೀಡಾಪಟು ಮೇರಿ ಕೋಮ್..
ಆರು ಬಾರಿ ವಿಶ್ವಚಾಂಪಿಯನ್ ಆಗಿರುವ ಸೂಪರ್ ಮಾಮ್ ಮೇರಿ ಕೋಮ್ ಕಳೆದ 2018ರಲ್ಲಿ ದೆಹಲಿಯಲ್ಲಿ ನಡೆದ ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದರು. ಇದಷ್ಟೇ ಅಲ್ಲದೇ ಕಾಮನ್‌ವೆಲ್ತ್ ಕ್ರೀಡಾಕೂಡ, ಏಷ್ಯನ್ ಚಾಂಪಿಯನ್‌ಷಿಪ್‌ನಲ್ಲಿಯೂ ಮೇರಿ ಕೋಮ್ ತಲಾ ಒಂದೊಂದು ಚಿನ್ನದ ಪದಕ ಗೆದ್ದಿದ್ದಾರೆ.


