Homeಮುಖಪುಟಲೋಕಸಭೆ ಚುನಾವಣೆ: ಹಿಂಸೆಗೆ ಪ್ರಚೋದಿಸುವ, ಮುಸ್ಲಿಮರ ವಿರುದ್ಧದ ಜಾಹೀರಾತುಗಳನ್ನು ಅನುಮೋದಿಸಿದ್ದ ಮೆಟಾ: ವರದಿ

ಲೋಕಸಭೆ ಚುನಾವಣೆ: ಹಿಂಸೆಗೆ ಪ್ರಚೋದಿಸುವ, ಮುಸ್ಲಿಮರ ವಿರುದ್ಧದ ಜಾಹೀರಾತುಗಳನ್ನು ಅನುಮೋದಿಸಿದ್ದ ಮೆಟಾ: ವರದಿ

- Advertisement -
- Advertisement -

ಭಾರತದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತಿದೆ, ಈ ಮಧ್ಯೆ ತಪ್ಪು ಮಾಹಿತಿಯನ್ನು ಹರಡುವ ಸುದ್ದಿಗಳು,  ವೀಡಿಯೊಗಳು ದೇಶದ ಸಾಮರಸ್ಯಕ್ಕೆ ಪ್ರಮುಖ ಬೆದರಿಕೆಯಾಗಿ ಹೊರಹೊಮ್ಮಿವೆ. 2024ರ ಲೋಕಸಭಾ ಚುನಾವಣೆಯ ಸಮಯದಲ್ಲಿ ತಪ್ಪು ಮಾಹಿತಿಯನ್ನು ಹರಡುವ ಹಲವಾರು ರಾಜಕೀಯ ಜಾಹೀರಾತುಗಳನ್ನು ಮೆಟಾ ಅನುಮೋದಿಸಿದೆ ಎನ್ನುವುದನ್ನು ವರದಿಯೊಂದು ಬಹಿರಂಗಪಡಿಸಿದೆ.

ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂ ಮಾಲೀಕತ್ವ ಹೊಂದಿರುವ ಮೆಟಾ ಭಾರತದ ಚುನಾವಣೆಯ ಸಮಯದಲ್ಲಿ AI(ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌)(ಕೃತಕ ಬುದ್ಧಿಮತ್ತೆ)ಯ ರಾಜಕೀಯ ಜಾಹೀರಾತುಗಳನ್ನು ಅನುಮೋದಿಸಿದೆ. ಆ ಜಾಹೀರಾತುಗಳು ತಪ್ಪು ಮಾಹಿತಿಯನ್ನು ಹರಡಿದೆ ಮತ್ತು ಧಾರ್ಮಿಕ ಹಿಂಸಾಚಾರವನ್ನು ಪ್ರಚೋದಿಸಿದೆ ಎಂದು ವರದಿಯೊಂದು ಉಲ್ಲೇಖಿಸಿದೆ.

“ಈ ಕ್ರಿಮಿಕೀಟಗಳನ್ನು ಸುಡೋಣ”, “ಹಿಂದೂ ರಕ್ತ ಚೆಲ್ಲುತ್ತಿದೆ, ಈ ದಾಳಿಕೋರರನ್ನು ಸುಡಬೇಕು” ಎಂಬಂತಹ ಭಾರತದಲ್ಲಿನ ಮುಸ್ಲಿಮರ ವಿರುದ್ಧ ನಿಂದನೆಗಳನ್ನು ಒಳಗೊಂಡಿರುವ ಜಾಹೀರಾತುಗಳನ್ನು ಫೇಸ್‌ಬುಕ್ ಅನುಮೋದಿಸಿದೆ ಮತ್ತು ಕೆಲ ರಾಜಕೀಯ ನಾಯಕರ ಬಗ್ಗೆ ತಪ್ಪು ಮಾಹಿತಿ ಇರುವ ಜಾಹೀರಾತುಗಳನ್ನು ಕೂಡ ಫೇಸ್‌ಬುಕ್ ಅನುಮೋದಿಸಿದೆ. ಇದಲ್ಲದೆ ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂ ಅನುಮೋದಿಸಿದ ಮತ್ತೊಂದು ಜಾಹೀರಾತಿನಲ್ಲಿ ಪ್ರತಿಪಕ್ಷ ನಾಯಕನ ಮರಣದಂಡನೆಗೆ ಕರೆ ನೀಡಲಾಗಿತ್ತು. ಅದರಲ್ಲಿ ಭಾರತದಿಂದ ಹಿಂದೂಗಳನ್ನು ಅಳಿಸಿಹಾಕುಲು ಅವರು ಬಯಸಿದ್ದಾರೆ ಎಂದು ಸುಳ್ಳಾಗಿ ಬಿಂಬಿಸಲಾಗಿತ್ತು. ಈ ಜಾಹೀರಾತಿನಲ್ಲಿ ಸಂದೇಶದ ಜೊತೆಗೆ ಪಾಕಿಸ್ತಾನ ಧ್ವಜದ ಚಿತ್ರವು ಒಳಗೊಂಡಿತ್ತು.

ಚುನಾವಣಾ ಆಯೋಗದ ನಿರ್ದೇಶನದ ನಂತರ ಬಿಜೆಪಿ ಕರ್ನಾಟಕ ಘಟಕವು ಮುಸ್ಲಿಮರು ಮತ್ತು ಕಾಂಗ್ರೆಸ್‌ ಬಗ್ಗೆ ಹಂಚಿಕೊಂಡಿರುವ ದ್ವೇಷದ ಅನಿಮೇಟೆಡ್ ವೀಡಿಯೊವನ್ನು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್ ಇತ್ತೀಚೆಗೆ ತೆಗೆದುಹಾಕಿದೆ. ಇದರ ಬೆನ್ನಲ್ಲಿ ಈ ವರದಿ ಬಹಿರಂಗಗೊಂಡಿದೆ.

ಇಂಡಿಯಾ ಸಿವಿಲ್ ವಾಚ್ ಇಂಟರ್‌ನ್ಯಾಶನಲ್ (ICWI) ಮತ್ತು ಕಾರ್ಪೋರೇಟ್‌ ಸಂಸ್ಥೆ ‘Ekō’ ಹಾನಿಕಾರಕ ರಾಜಕೀಯ ವಿಷಯವನ್ನು ಪತ್ತೆಹಚ್ಚಲು ಮತ್ತು ನಿರ್ಬಂಧಿಸಲು ಮೆಟಾದ ಜಾಹೀರಾತು ಗ್ರಂಥಾಲಯಕ್ಕೆ ಈ ಜಾಹೀರಾತುಗಳನ್ನು ಸಲ್ಲಿಸಿದೆ. ಎಲ್ಲಾ ಜಾಹೀರಾತುಗಳು ನಿಜವಾದ ದ್ವೇಷದ ಮಾತು ಮತ್ತು ಭಾರತದಲ್ಲಿ ಪ್ರಚಲಿತದಲ್ಲಿರುವ ತಪ್ಪು ಮಾಹಿತಿಯನ್ನು ಆಧರಿಸಿ ರಚಿಸಲಾಗಿದೆ, ಇಂತಹ ತಪ್ಪು ನಿರೂಪಣೆಗಳನ್ನು ವೃದ್ಧಿಸುವಲ್ಲಿ ಸಾಮಾಜಿಕ ಮಾಧ್ಯಮ ವೇದಿಕೆಗಳ ಸಾಮರ್ಥ್ಯವನ್ನು ವರದಿಯಲ್ಲಿ ಒತ್ತಿ ಹೇಳಲಾಗಿದೆ.

ಸಂಶೋಧಕರು ಇಂಗ್ಲಿಷ್, ಹಿಂದಿ, ಬೆಂಗಾಲಿ, ಗುಜರಾತಿ ಮತ್ತು ಕನ್ನಡದಲ್ಲಿ 22 ಜಾಹೀರಾತುಗಳನ್ನು ಮೆಟಾಗೆ ಸಲ್ಲಿಸಿದ್ದಾರೆ, ಅದರಲ್ಲಿ 14 ಜಾಹೀರಾತನ್ನು ಅನುಮೋದಿಸಲಾಗಿದೆ. ಇನ್ನೂ ಮೂರು ಜಾಹೀರಾತುಗಳನ್ನು ಸಣ್ಣ ಮಟ್ಟದಲ್ಲಿ ಅನುಮೋದಿಸಲಾಗಿದೆ. ಅನುಮೋದಿತ ಎಲ್ಲಾ ಜಾಹೀರಾತುಗಳಲ್ಲಿ ತಿರುಚಿದ ಚಿತ್ರಗಳನ್ನು ಪತ್ತೆ ಹಚ್ಚಲು ಮೆಟಾ ವಿಫಲವಾಗಿದೆ ಎಂದು ಸಂಶೋಧನೆಯು ಪತ್ತೆ ಹಚ್ಚಿದೆ.

ದ್ವೇಷ ಭಾಷಣದ ಕುರಿತು ಮೆಟಾದ ನೀತಿಯನ್ನು ಉಲ್ಲಂಘಿಸಿದ ಮೋದಿಯ ಬಗೆಗಿನ ಒಂದು ಜಾಹೀರಾತು ಸೇರಿ  ಐದು ಜಾಹೀರಾತುಗಳನ್ನು ತಿರಸ್ಕರಿಸಲಾಗಿದೆ. ಮುಸ್ಲಿಮರನ್ನು ಗುರಿಯಾಗಿಸಿಕೊಂಡ ಇತರ 14 ಜಾಹೀರಾತುಗಳನ್ನು ಅನುಮೋದಿಸಲಾಗಿದೆ ಎಂದು ವರದಿಯು ತಿಳಿಸಿದೆ.

ಜನಾಂಗೀಯವಾದಿಗಳು ಮತ್ತು ನಿರಂಕುಶವಾದಿಗಳು ಕೆಟ್ಟ ದ್ವೇಷದ ಭಾಷಣವನ್ನು ಹರಡಲು ಸಾಮಾಜಿಕ ಮಾದ್ಯಮ ವೇದಿಕೆಯನ್ನು ಬಳಸಬಹುದೆಂದು ತಿಳಿದಿದ್ದಾರೆ, ಮಸೀದಿಗಳ ಸುಡುವ ಚಿತ್ರಗಳನ್ನು ಹಂಚಿಕೊಳ್ಳುತ್ತಾರೆ ಮತ್ತು ಹಿಂಸಾತ್ಮಕ ಪಿತೂರಿ ಸಿದ್ಧಾಂತಗಳನ್ನು ಹರಡುತ್ತಾರೆ ಮತ್ತು ಮೆಟಾ ಸಂತೋಷದಿಂದ ಅವರ ಹಣವನ್ನು ತೆಗೆದುಕೊಳ್ಳುತ್ತದೆ, ಯಾವುದೇ ಪ್ರಶ್ನೆಗಳನ್ನು ಕೇಳುವುದಿಲ್ಲ ಸಂಶೋಧನಾ ವರದಿಯು ತಿಳಿಸಿದೆ.

ಮಾನದಂಡಗಳು ಅಥವಾ ಮಾರ್ಗಸೂಚಿಗಳನ್ನು ಉಲ್ಲಂಘಿಸುವ ಜಾಹೀರಾತುಗಳು ಸೇರಿದಂತೆ ವಿಷಯವನ್ನು ನಾವು ಕಂಡುಕೊಂಡಾಗ, ಅದರ ರಚನೆಯ ಕಾರ್ಯವಿಧಾನವನ್ನು ಲೆಕ್ಕಿಸದೆ ನಾವು ಅದನ್ನು ತೆಗೆದುಹಾಕುತ್ತೇವೆ ಎಂದು ಮೆಟಾ ಹೇಳಿಕೊಂಡಿದೆ. ಆದರೆ ಮೆಟಾ ತನ್ನ ವೇದಿಕೆಗಳಲ್ಲಿ ಇಸ್ಲಾಮೋಫೋಬಿಯಾವನ್ನು ಹರಡುವುದನ್ನು ತಡೆಯಲು ವಿಫಲವಾಗಿದೆ ಎಂದು ಹಿಂದೆ ಆರೋಪ ಕೇಳಿ ಬಂದಿತ್ತು.

ಈ ನಿರ್ಣಾಯಕ ಚುನಾವಣೆಗಳಲ್ಲಿ ಮೆಟಾ ತನ್ನ ವೇದಿಕೆಯಲ್ಲಿ ದ್ವೇಷದ ಭಾಷಣ ಮತ್ತು ತಪ್ಪು ಮಾಹಿತಿಯನ್ನು ಹರಡುವುದನ್ನು ತಡೆಯಲು ಯೋಜನೆಯನ್ನು ರೂಪಿಸಿಕೊಂಡಿಲ್ಲ, AI ರಚಿತ ಚಿತ್ರಗಳನ್ನು ಪತ್ತೆಹಚ್ಚಲು ವಿಫಲವಾದರೆ ಮೆಟಾವನ್ನು ಹೇಗೆ ನಂಬುವುದು ಎಂದು  Ekō ಸಂಸ್ಥೆಯ ಹಮ್ಮದ್ ಪ್ರಶ್ನಿಸಿದ್ದಾರೆ.

ಇದನ್ನು ಓದಿ: ಟಿಕೆಟ್‌ ಕೈತಪ್ಪಿದಕ್ಕೆ ‘ಮತದಾನ’ ಮಾಡದ ಬಿಜೆಪಿ ಸಂಸದ: ಶೋಕಾಸ್ ನೋಟಿಸ್ ಜಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...