Homeಮುಖಪುಟ2024ರ ಭಾರತದ ಸಾರ್ವತ್ರಿಕ ಚುನಾವಣೆ ಕುರಿತ ಝುಕರ್ ಬರ್ಗ್ ಹೇಳಿಕೆ : ಕ್ಷಮೆಯಾಚಿಸಿದ ಮೆಟಾ

2024ರ ಭಾರತದ ಸಾರ್ವತ್ರಿಕ ಚುನಾವಣೆ ಕುರಿತ ಝುಕರ್ ಬರ್ಗ್ ಹೇಳಿಕೆ : ಕ್ಷಮೆಯಾಚಿಸಿದ ಮೆಟಾ

- Advertisement -
- Advertisement -

ಭಾರತದ ಸಾರ್ವತ್ರಿಕ ಚುನಾವಣೆಯ ಕುರಿತು ಸಿಇಒ ಮಾರ್ಕ್ ಝುಕರ್‌ಬರ್ಗ್ ನೀಡಿರುವ ಹೇಳಿಕೆ ಸಂಬಂಧ ಮೆಟಾ ಇಂಡಿಯಾ ಕಂಪನಿ ಕ್ಷಮೆಯಾಚಿಸಿದೆ.

ಕೋವಿಡ್ ನಿಭಾಯಿಸುವಲ್ಲಿ ವಿಫಲವಾದ ಕಾರಣ 2024ರ ಚುನಾವಣೆಯಲ್ಲಿ ಭಾರತದ ಈಗಿನ ಆಡಳಿತ ಪಕ್ಷ ಸೋತಿತು ಎಂದು ಝುಕರ್ ಬರ್ಗ್ ಹೇಳಿದ್ದರು.

ಕೇಂದ್ರ ಸಚಿವೆ ಅಶ್ವಿನಿ ವೈಷ್ಣವ್ ಅವರ ಎಕ್ಸ್ ಪೋಸ್ಟ್‌ಗೆ ಪ್ರತಿಕ್ರಿಯೆಯಾಗಿ ಮೆಟಾ ಇಂಡಿಯಾದ ಉಪಾಧ್ಯಕ್ಷ ಶಿವನಾಥ್ ತುಕ್ರಾಲ್ ಮಂಗಳವಾರ (ಜ.14) ಕ್ಷಮೆಯಾಚಿಸಿದ್ದು, ಝುಕರ್‌ಬರ್ಗ್ ಅವರ ಹೇಳಿಕೆಯನ್ನು ‘ವಾಸ್ತವಿಕವಾಗಿ ತಪ್ಪು’ ಎಂದು ಕರೆದಿದ್ದಾರೆ.

“2024ರ ಚುನಾವಣೆಗಳಲ್ಲಿ ಅಧಿಕಾರದಲ್ಲಿದ್ದ ಪಕ್ಷಗಳು ಮರು ಆಯ್ಕೆಯಾಗಿಲ್ಲ ಎಂಬ ಮಾರ್ಕ್ ಅವರ ಅಭಿಪ್ರಾಯವು ಹಲವಾರು ದೇಶಗಳಲ್ಲಿ ನಿಜವಾಗಿದೆ. ಆದರೆ, ಆದರೆ ಭಾರತದಲ್ಲಿ ಅಲ್ಲ”

“ಈ ಅಜಾಗರೂಕ ತಪ್ಪಿಗೆ ನಾವು ಕ್ಷಮೆಯಾಚಿಸುತ್ತೇವೆ” ಎಂದು ತುಕ್ರಾಲ್ ಸಚಿವ ವೈಷ್ಣವ್ ಅವರ ಪೋಸ್ಟ್‌ಗೆ ಕಾಮೆಂಟ್ ಆಗಿ ಬರೆದಿದ್ದಾರೆ.

ಜೋ ರೋಗನ್ ಅವರೊಂದಿಗಿನ ಪಾಡ್‌ಕಾಸ್ಟ್‌ನಲ್ಲಿ ಝುಕರ್‌ಬರ್ಗ್ ಅವರು ”
ಕೋವಿಡ್-19 ಸಾಂಕ್ರಾಮಿಕ ರೋಗವನ್ನು ಸರ್ಕಾರ ನಿರ್ವಹಿಸಿದ ರೀತಿಗೆ ಜಾಗತಿಕವಾಗಿ ಇರುವ ಅಸಮಾಧಾನಕ್ಕೆ ಭಾರತ ಒಂದು ಉದಾಹರಣೆ ಎಂದು ಹೇಳಿದ್ದರು. ಕೋವಿಡ್ ನಂತರ ನಡೆದ ಚುನಾವಣೆಗಳಲ್ಲಿ ಭಾರತದಲ್ಲಿ ಸೇರಿದಂತೆ ಹೆಚ್ಚಿನ ದೇಶಗಳಲ್ಲಿ ಅಧಿಕಾರದಲ್ಲಿದ್ದ ಪಕ್ಷಗಳು ಸೋತವು” ಎಂದಿದ್ದರು.

ಸಂವಹನ ಮತ್ತು ಮಾಹಿತಿ ತಂತ್ರಜ್ಞಾನದ ಸಂಸದೀಯ ಸಮಿತಿಯ ನೇತೃತ್ವ ವಹಿಸಿರುವ ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ ನಿಶಿಕಾಂತ್ ದುಬೆ ಅವರು ಝುಕರ್‌ಬರ್ಗ್ ಅವರ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ತಮ್ಮ ತಂಡ ಮೆಟಾಗೆ ಸಮನ್ಸ್ ಜಾರಿ ಮಾಡಲಿದೆ ಎಂದು ಮಂಗಳವಾರ ಹೇಳಿದ್ದರು.

“ಈ ತಪ್ಪಿಗಾಗಿ ಮೆಟಾ ಭಾರತೀಯ ಸಂಸತ್ತು ಮತ್ತು ಈ ದೇಶದ ಜನರಲ್ಲಿ ಕ್ಷಮೆಯಾಚಿಸಬೇಕು” ಎಂದು ದುಬೆ ಆಗ್ರಹಿಸಿದ್ದರು.

ಸಚಿವ ಅಶ್ವಿನಿ ವೈಷ್ಣವ್ ಪ್ರತಿಕ್ರಿಯಿಸಿ “ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ, ಭಾರತವು 2024 ರ ಚುನಾವಣೆಯನ್ನು 640 ಮಿಲಿಯನ್‌ಗಿಂತಲೂ ಹೆಚ್ಚು ಮತದಾರರೊಂದಿಗೆ ನಡೆಸಿತು. ಭಾರತದ ಜನರು ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದ ಎನ್‌ಡಿಎ ಮೇಲೆ ತಮ್ಮ ನಂಬಿಕೆಯನ್ನು ಪುನರುಚ್ಚರಿಸಿದ್ದಾರೆ”

“2024ರ ಚುನಾವಣೆಗಳಲ್ಲಿ ಭಾರತ ಸೇರಿದಂತೆ ಹೆಚ್ಚಿನ ದೇಶಗಳಲ್ಲಿ ಅಧಿಕಾರದಲ್ಲಿರುವ ಸರ್ಕಾರಗಳು ಕೋವಿಡ್ ನಂತರ ಸೋತವು ಎಂಬ ಝುಕರ್‌ಬರ್ಗ್ ಅವರ ಹೇಳಿಕೆ ವಾಸ್ತವಿಕವಾಗಿ ತಪ್ಪಾಗಿದೆ” ಎಂದಿದ್ದರು.

“800 ಮಿಲಿಯನ್ ಜನರಿಗೆ ಉಚಿತ ಆಹಾರ, 2.2 ಬಿಲಿಯನ್ ಉಚಿತ ಲಸಿಕೆಗಳು ಮತ್ತು ಕೋವಿಡ್ ಸಮಯದಲ್ಲಿ ವಿಶ್ವದಾದ್ಯಂತ ರಾಷ್ಟ್ರಗಳಿಗೆ ಸಹಾಯದಿಂದ ಹಿಡಿದು, ಭಾರತವನ್ನು ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿ ಮುನ್ನಡೆಸುವವರೆಗೆ, ಪ್ರಧಾನಿ ಮೋದಿಯವರ ನಿರ್ಣಾಯಕ 3ನೇ ಅವಧಿಯ ಗೆಲುವು ಉತ್ತಮ ಆಡಳಿತ ಮತ್ತು ಸಾರ್ವಜನಿಕ ನಂಬಿಕೆಗೆ ಸಾಕ್ಷಿಯಾಗಿದೆ” ಎಂದು ಬರೆದುಕೊಂಡಿದ್ದರು.

“ಝುಕರ್‌ಬರ್ಗ್ ಅವರಿಂದಲೇ ತಪ್ಪು ಮಾಹಿತಿಯನ್ನು ನೋಡುವುದು ನಿರಾಶಾದಾಯಕವಾಗಿದೆ. ಸತ್ಯ ಮತ್ತು ವಿಶ್ವಾಸಾರ್ಹತೆಯನ್ನು ಎತ್ತಿಹಿಡಿಯೋಣ” ಎಂದಿದ್ದರು.

ಲೋಕಸಭೆ 2024ರ ಚುನಾವಣೆ ಸೋಲಿನ ಬಗ್ಗೆ ಜುಕರ್‌ಬರ್ಗ್ ಹೇಳಿಕೆ – ಭಾರತದ ವರ್ಚಸ್ಸಿಗೆ ಧಕ್ಕೆ ಎಂದ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...