Homeಕರೋನಾ ತಲ್ಲಣಸತತ ಅಂತ್ಯಕ್ರಿಯೆ ನಡೆಸುತ್ತಿರುವ ಸೂರತ್‌ನ‌ ವಿದ್ಯುತ್‌ ಚಿತಾಗಾರದಲ್ಲಿ ಕರಗಿ ಹೋಗುತ್ತಿವೆ ಲೋಹದ ಯಂತ್ರಗಳು!

ಸತತ ಅಂತ್ಯಕ್ರಿಯೆ ನಡೆಸುತ್ತಿರುವ ಸೂರತ್‌ನ‌ ವಿದ್ಯುತ್‌ ಚಿತಾಗಾರದಲ್ಲಿ ಕರಗಿ ಹೋಗುತ್ತಿವೆ ಲೋಹದ ಯಂತ್ರಗಳು!

ಸ್ಮಶಾನಗಳ ಮೇಲಿನ ಹೊರೆಯನ್ನು ಇಳಿಸುವ ಸಲುವಾಗಿ, ಸೂರತ್ ಆಡಳಿತವು 15 ವರ್ಷಗಳ ಹಿಂದೆ ಮುಚ್ಚಿದ ಪಾಲ್-ಭಟ್ಟ ಪ್ರದೇಶದಲ್ಲಿನ ಸ್ಮಶಾನವನ್ನು ಮತ್ತೆ ತೆರೆದಿದೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗದ ಎರಡನೇ ಅಲೆ ಕೇವಲ ರೋಗ ತರುವುದಕ್ಕೆ ಸೀಮಿತವಾಗಿಲ್ಲ. ಕಳೆದ ಬಾರಿಗಿಂತ ಈ ಬಾರಿ ಕೊರೊನಾ ಸಾವುಗಳು ಕೂಡ ಅಧಿಕವಾಗುತ್ತಿದೆ. ಹಲವು ರಾಜ್ಯಗಳು ಕೊರೊನಾ ಪ್ರಕರಣಗಳು, ಸಾವುಗಳ ಸಂಖ್ಯೆಯನ್ನು ಮರೆ ಮಾಚುತ್ತಿವೆ. ಉತ್ತರ ಪ್ರದೇಶ ಮತ್ತು ಗುಜರಾತ್ ಇದಕ್ಕೆ ಜೀವಂತ ಸಾಕ್ಷಿಯಾಗಿವೆ. ಇನ್ನು ಸತತ ಅಂತ್ಯಕ್ರಿಯೆ ನಡೆಸುತ್ತಿರುವ ಸ್ಮಶಾನಗಳ ಸಮಸ್ಯೆ ಕೂಡ ಮತ್ತೊಂದು ತರಹದ್ದು.

ಗುಜರಾತ್‌ನ ಸೂರತ್‌ನಲ್ಲಿ ಕೊರೊನಾ ಪ್ರಕರಣಗಳು, ಕೊರೊನಾ ಸಾವುಗಳು ಹೆಚ್ಚಾಗಿ ಪರಿಸ್ಥಿತಿ ಮೀತಿ ಮೀರಿದೆ. ಕೊರೊನಾದಿಂದ ಮೃತಪಟ್ಟವರ ಅಂತ್ಯಕ್ರಿಯೆ ನಡೆಸುತ್ತಿರುವ ವಿದ್ಯುತ್‌ ಚಿತಾಗಾರದಲ್ಲಿ ಲೋಹದ ಯಂತ್ರಗಳು ಕೂಡ ಕರಗಿ ಹೋಗುತ್ತಿವೆ.

ಸೂರತ್‌ನಲ್ಲಿ ಕೊರೊನಾ ರೋಗಿಗಳಿಗೆ ಗೊತ್ತುಪಡಿಸಿದ ಆಸ್ಪತ್ರೆಗಳಲ್ಲಿ ಮಾತ್ರವಲ್ಲದೆ ಶ್ಮಶಾನದಲ್ಲಿಯೂ ಸಹ ಸಾಲುಗಳಲ್ಲಿ ನಿಲ್ಲಬೇಕಾಗಿದೆ. ಅಲ್ಲಿಯೂ ವಿಪರೀತ ಜನಸಂದಣಿ ಇರುವ ಕಾರಣ ಕಾಯುವ ಟೋಕನ್‌ಗಳನ್ನು ನೀಡಲಾಗುತ್ತಿದೆ.

ಸೂತರ್‌ ನಗರದ ಮೂರು ಮುಖ್ಯ ಸ್ಮಶಾನಗಳಲ್ಲಿ ಪ್ರತಿದಿನ ಸರಾಸರಿ 300 ಶವಗಳ ಅಂತ್ಯಕ್ರಿಯೆ ಮಾಡಲಾಗುತ್ತಿದೆ. ಆದರರೂ ಕೂಡ ಸ್ಮಶಾನಕ್ಕೆ ಅಂತ್ಯಕ್ರಿಯೆಗಾಗಿ ಬರುವ ಸಂಬಂಧಿಕರು, ಮನೆಯವರು ಕನಿಷ್ಠ 6 ಗಂಟೆಯಿಂದ 10 ಗಂಟೆಗಳವರೆಗೆ ಕಾಯಬೇಕಾಗಿರುವ ಪರಿಸ್ಥಿತಿ ಇದೆ.

ಇದನ್ನೂ ಓದಿ: ಕೊರೊನಾ ರೋಗಿಗಳ ಅಂತ್ಯಸಂಸ್ಕಾರ ಕಾಣಿಸದಂತೆ ಸ್ಮಶಾನಕ್ಕೆ ಶೀಟ್ ಗೋಡೆ ಹಾಕಿಸಿದ ಉತ್ತರ ಪ್ರದೇಶ ಸರ್ಕಾರ!

ಈ 300 ಮೃತದೇಹಗಳಲ್ಲಿ, ಕೊರೊನಾ ಮಾರ್ಗಸೂಚಿಗಳ ಪ್ರಕಾರ ಅಂದಾಜು 100 ರಿಂದ 120 ಶವಗಳನ್ನು ಅಂತ್ಯಕ್ರಿಯೆ ಮಾಡಲಾಗುತ್ತಿದೆ. ಅಶ್ವಿನಿ ಕುಮಾರ್ ಸ್ಮಶಾನದಲ್ಲಿ ದಿನಕ್ಕೆ 125 ಕ್ಕೂ ಹೆಚ್ಚು ಶವಗಳು, ಜಹಾಂಗೀರ್‌ಪುರದ ಕುರುಕ್ಷೇತ್ರ ಶ್ಮಶಾನದಲ್ಲಿ ಸುಮಾರು 100 ಶವಗಳು ಮತ್ತು ಉಮ್ರಾದಲ್ಲಿರುವ ರಾಮನಾಥ ಘೇಲಾ ಸ್ಮಶಾನದಲ್ಲಿ ಸರಾಸರಿ 90 ಮೃತದೇಹಗಳನ್ನು ಅಂತ್ಯಕ್ರಿಯೆ ಮಾಡಲಾಗುತ್ತಿದೆ. ಜೊತೆಗೆ ಸೂರತ್‌ನಿಂದ ಮೃತದೇಹಗಳನ್ನು ಶವಸಂಸ್ಕಾರಕ್ಕಾಗಿ ಹತ್ತಿರದ ಪಟ್ಟಣಗಳಾದ ಬಾರ್ಡೋಲಿ ಮತ್ತು ನವಸಾರಿಗಳಿಗೆ ಕೊಂಡೊಯ್ಯಲಾಗುತ್ತಿದೆ ಎಂದು ಮೂರು ಶ್ಮಶಾನಗಳ ಟ್ರಸ್ಟಿಯೊಬ್ಬರು ಮಾಹಿತಿ ನೀಡಿದ್ದಾರೆ.

ಎಲ್ಲಾ ಮೂರು ಪ್ರಮುಖ ಸ್ಮಶಾನಗಳ ವ್ಯವಸ್ಥಾಪಕರ ಪ್ರಕಾರ, ’ವಿದ್ಯುತ್‌ ಚಿತಾಗಾರದಲ್ಲಿ ಅತಿಯಾದ ಬಳಕೆಯಿಂದಾಗಿ, ಅನಿಲ ಕುಲುಮೆಗಳ ಚೌಕಟ್ಟುಗಳು ಕರಗಿ ಹೋಗಿವೆ ಮತ್ತು ಬರ್ನರ್‌ಗಳು ಮುಚ್ಚಿಹೋಗಿವೆ. ಅಶ್ವಿನಿ ಕುಮಾರ್ ಚಿತಾಗಾರದಲ್ಲಿ ಎರಡು ಅನಿಲ ಕುಲುಮೆಗಳು ಕೆಲಸ ಮಾಡುವುದನ್ನು ನಿಲ್ಲಿಸಿದ್ದವು. ತಕ್ಷಣ ಅವುಗಳನ್ನು ದುರಸ್ತಿ ಮಾಡಬೇಕಾಯಿತು’ ಎಂದಿದ್ದಾರೆ.

ಇದನ್ನೂ ಓದಿ: ದೆಹಲಿಯಲ್ಲಿ ವಾರಾಂತ್ಯ ಕರ್ಫ್ಯೂ ಹೇರಿಕೆ: ಶವಸಂಸ್ಕಾರವೂ ಸಾಧ್ಯವಾಗದ ಒತ್ತಡ

ಈ ಸ್ಮಶಾನಗಳ ಮೇಲಿನ ಹೊರೆಯನ್ನು ಇಳಿಸುವ ಸಲುವಾಗಿ, ಸೂರತ್ ಆಡಳಿತವು 15 ವರ್ಷಗಳ ಹಿಂದೆ ಮುಚ್ಚಿದ ಪಾಲ್-ಭಟ್ಟ ಪ್ರದೇಶದಲ್ಲಿನ ಸ್ಮಶಾನವನ್ನು ಮತ್ತೆ ತೆರೆದಿದೆ. ಇಲ್ಲಿ ಪ್ರತಿದಿನ ಸರಾಸರಿ 30 ರಿಂದ 40 ಮೃತದೇಹಗಳ ಅಂತ್ಯಕ್ರಿಯೆ ನಡೆಸಬಹುದಾಗಿದೆ. ಮತ್ತೊಂದು ತಾತ್ಕಾಲಿಕ ಸ್ಮಶಾನವನ್ನು ವರಾಚಾ ಪ್ರದೇಶದಲ್ಲಿ ಸ್ಥಾಪಿಸಲಾಗಿದೆ.

ಕೊರೊನಾ ಸೋಂಕು ದೃಢಪಟ್ಟು ಅಸ್ವಸ್ಥರಾಗಿ ಮರಣ ಹೊಂದಿರುವ ರೋಗಿಗಳನ್ನು ಕೊರೊನಾ ಸಾವುಗಳಿಗೆ ಸೇರಿಸದಂತೆ ಸರ್ಕಾರದಿಂದ ಆದೇಶಗಳಿವೆ ಎಂದು ಅಧಿಕೃತ ಮೂಲಗಳು ದೃಢಪಡಿಸಿವೆ. ಸೂರತ್ ಮೂಲದ ಡಾ. ಚಂದ್ರೇಶ್ ಜರ್ದೋಶ್, “ಇದು ಹೊಸ ವಿಷಯವೇನಲ್ಲ. ಲಾಕ್‌ಡೌನ್ ಯಶಸ್ವಿಯಾಗಿದೆ ಎಂದು ಸಾಬೀತುಪಡಿಸಲು ಕಳೆದ ವರ್ಷದಿಂದ ಕೊರೊನಾ ಸಾವುಗಳ ಸಂಖ್ಯೆಗಳನ್ನು ಕಡಿಮೆ ಮಾಡುವುದು ನಡೆಯುತ್ತಿದೆ” ಎಂದು ಹೇಳಿದ್ದಾರೆ.

ಸೂರತ್‌ನ ಚಿತಾಗಾರಗಳಲ್ಲಿ ಸ್ಥಳಾವಕಾಶವಿಲ್ಲದೇ ಜನ ಸಾಲುಗಟ್ಟಿ ನಿಲ್ಲುತ್ತಿದ್ದಾರೆ, ವಿದ್ಯುತ್ ಚಿತಾಗಾರದ ಲೋಹದ ಯಂತ್ರಗಳು ಸತತ ಅಂತ್ಯಕ್ರಿಯೆಯಿಂದ ಕರಗಿ ಹೋಗುತ್ತಿವೆ. ಆದರೆ, ಸರ್ಕಾರ ಮಾತ್ರ ಕೊರೊನಾ ಪ್ರಕರಣಗಳು ಮತ್ತು ಸಾವುಗಳ ಸಂಖ್ಯೆಯಲ್ಲಿ ವ್ಯತ್ಯಾಸ ತೋರಿಸುವ ಅಂಕಿ ಅಂಶಗಳನ್ನು ನೀಡುತ್ತಿದೆ.


ಇದನ್ನೂ ಓದಿ: ಬಂಗಾಳ: ಸೀತಾಲ್ಕುಚ್ಚಿ ಗೋಲಿಬಾರ್‌ ವಿಡಿಯೋ ವೈರಲ್, ಕೇಂದ್ರ ಪಡೆಗಳ ಮೇಲೆ ಸಂಶಯದ ಹುತ್ತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...