Homeಮುಖಪುಟತನ್ನ ಮೇಲಿನ METOO ಆರೋಪ ಸುಳ್ಳು ಮತ್ತು ದುರುದ್ದೇಶಪೂರಿತ ಎಂದ ಅನುರಾಗ್ ಕಶ್ಯಪ್

ತನ್ನ ಮೇಲಿನ METOO ಆರೋಪ ಸುಳ್ಳು ಮತ್ತು ದುರುದ್ದೇಶಪೂರಿತ ಎಂದ ಅನುರಾಗ್ ಕಶ್ಯಪ್

ನಟಿ ಪಾಯಲ್ ಘೋಷ್ ಇತ್ತಿಚೆಗೆ ಎಬಿಎನ್ ತೆಲುಗು ಚಾನೆಲ್‌ಗೆ ನೀಡಿದ್ದ ಸಂದರ್ಶನದಲ್ಲಿ ಅನುರಾಗ್ ಕಶ್ಯಪ್ ಮೇಲೆ ಲೈಂಗಿಕ ಕಿರುಕುಳ ಆರೋಪ ಮಾಡಿದ್ದರು. ಜೊತೆಗೆ ಈ ವಿಷಯದಲ್ಲಿ ಹಸ್ತಕ್ಷೇಪ ಕೋರಿ ಅವರು ರಾಷ್ಟ್ರೀಯ ಮಹಿಳಾ ಆಯೋಗ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದರು.

- Advertisement -
- Advertisement -

ಎರಡು ವರ್ಷಗಳ ಹಿಂದೆ ಬಾಲಿವುಡ್, ಟಾಲಿವುಡ್, ಸ್ಯಾಂಡಲ್‌ವುಡ್ ಚಿತ್ರರಂಗಗಳಲ್ಲಿ ಕಾಣಿಸಿಕೊಂಡಿದ್ದ #METOO ಪ್ರಕರಣ ಈಗ ಮತ್ತೆ ಬಾಲಿವುಡ್ ಅಂಗಳದಲ್ಲಿ ಕಾಣಿಸಿಕೊಂಡಿದೆ. ನಟಿ ಪಾಯಲ್ ಘೋಷ್ ಖ್ಯಾತ ನಿರ್ದೇಶಕ ಅನುರಾಗ್ ಕಶ್ಯಪ್ ತಮ್ಮ ಜೊತೆ ಅಸಭ್ಯವಾಗಿ ನಡೆದುಕೊಂಡರು ಎಂದು ಆರೋಪಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಅನುರಾಗ್ ಕಶ್ಯಪ್  ನಟಿ ಪಾಯಲ್ ಘೋಷ್ ತಮ್ಮ ಮೇಲೆ ಮಾಡಿರುವ ಲೈಂಗಿಕ ಕಿರುಕುಳ ಆರೋಪವು ಸುಳ್ಳು, ದುರುದ್ದೇಶಪೂರಿತ ಮತ್ತು ಅಪ್ರಾಮಾಣಿಕ ಎಂದಿದ್ದಾರೆ. ಈ ಕುರಿತು ತಮ್ಮ ವಕೀಲೆ ಪ್ರಿಯಾಂಕಾ ಖಿಮಾನಿ ಮೂಲಕ ತನ್ನ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ವಕೀಲೆ ಪ್ರಿಯಾಂಕಾ ಖಿಮಾನಿ ತಮ್ಮ ಪತ್ರಿಕಾ ಹೇಳಿಕೆಯಲ್ಲಿ “ನನ್ನ ಕಕ್ಷಿದಾರ ಅನುರಾಗ್ ಕಶ್ಯಪ್ ವಿರುದ್ಧ ಇತ್ತಿಚೆಗೆ ಮಾಡಲಾಗಿರುವ ಸುಳ್ಳು ಲೈಂಗಿಕ ಕಿರುಕುಳ ಆರೋಪದಿಂದ ತೀವ್ರವಾಗಿ ನೋವು ಅನುಭವಿಸಿದ್ದಾರೆ. ಈ ಆರೋಪಗಳು ಸಂಪೂರ್ಣವಾಗಿ ಸುಳ್ಳು, ದುರುದ್ದೇಶಪೂರಿತ ಮತ್ತು ಅಪ್ರಾಮಾಣಿಕ” ಎಂದಿದ್ದಾರೆ.

ಇದನ್ನೂ ಓದಿ: ’ಸಾಫ್ಟ್‌ ಪೋರ್ನ್ ಸ್ಟಾರ್’ ಹೇಳಿಕೆ; ಕಂಗನಾರನ್ನು ಖಂಡಿಸಿ ಊರ್ಮಿಳಾ ಬೆಂಬಲಕ್ಕೆ ನಿಂತ ಬಾಲಿವುಡ್

ಆರೋಪದ ಕುರಿತು ಭಾನುವಾರ ಸರಣಿ ಟ್ವೀಟ್‌ಗಳ ಮೂಲಕ ಅನುರಾಗ್ ಕಶ್ಯಪ್ ತಮ್ಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದರು. ನನ್ನನ್ನು ಮೌನವಾಗಿಸುವ ಕೆಲಸ ನಡೆಯುತ್ತಿದೆ. ನನ್ನ ವಿರುದ್ಧದ ಆರೋಪಗಳು ಆಧಾರರಹಿತ ಎಂದಿದ್ದರು.

ನಟಿ ಪಾಯಲ್ ಘೋಷ್ ಇತ್ತಿಚೆಗೆ ಎಬಿಎನ್ ತೆಲುಗು ಚಾನೆಲ್‌ಗೆ ನೀಡಿದ್ದ ಸಂದರ್ಶನದಲ್ಲಿ ಅನುರಾಗ್ ಕಶ್ಯಪ್ ಮೇಲೆ ಲೈಂಗಿಕ ಕಿರುಕುಳ ಆರೋಪ ಮಾಡಿದ್ದರು. ಜೊತೆಗೆ ಈ ವಿಷಯದಲ್ಲಿ ಹಸ್ತಕ್ಷೇಪ ಕೋರಿ ಅವರು ರಾಷ್ಟ್ರೀಯ ಮಹಿಳಾ ಆಯೋಗ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ಕಂಗನಾ v/s ಶಿವಸೇನೆ: ಸೋನಿಯಾ ಗಾಂಧಿ ಹೆಸರನ್ನೇಕೆ ಎಳೆದು ತರಲಾಯಿತು?

ನಟಿ ಪಾಯಲ್ ಘೋಷ್‌ಗೆ ಬೆಂಬಲ ನೀಡಿ ನಟಿ ಕಂಗನಾ ರಾಣಾವತ್ ಸೇರಿದಂತೆ ಹಲವರು ಟ್ವೀಟ್‌ ಮಾಡಿದ್ದರು. ಕಶ್ಯಪ್ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿದ್ದರು. ಕಂಗನಾ ರಾಣಾವತ್ ಸರಣಿ ಟ್ವೀಟ್‌ಗಳನ್ನು ಮಾಡಿ ಕಶ್ಯಪ್ ವಿರುದ್ಧ ಕಿಡಿಕಾರಿದ್ದಾರೆ.

ಬಾಲಿವುಡ್‌ನಲ್ಲಿ ದೊಡ್ಡ ದೊಡ್ಡ ನಾಯಕರು ನನ್ನ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ. ಜೊತೆಗೆ ಹೊರಗಿನಿಂದ ಬಂದವರನ್ನು ಸೆಕ್ಸ್ ವರ್ಕರ್‌ಗಳಂತೆ ನೋಡುತ್ತಾರೆ ಎಂದು ಕಂಗನಾ ಆರೋಪಿಸಿದ್ದರು.

ಕಳೆದ ಕೆಲವು ವರ್ಷಗಳಲ್ಲಿ #MeToo ಚಳವಳಿಯಲ್ಲಿ ಚಲನಚಿತ್ರೋದ್ಯಮದ ಹಲವಾರು ಖ್ಯಾತನಾಮರ ಹೆಸರು ಗಳು ಬಂದಿದ್ದವು. ನಾನಾ ಪಟೇಕರ್, ಅಲೋಕ್ ನಾಥ್, ಸುಭಾಷ್ ಘೈ, ಸಾಜಿದ್ ಖಾನ್, ಅನು ಮಲಿಕ್ ಮತ್ತು ಅರ್ಜುನ್ ಸರ್ಜಾ ಪ್ರಮುಖರಾಗಿದ್ದರು.


ಇದನ್ನೂ ಓದಿ: ಬಿಹಾರ ಚುನಾವಣೆವರೆಗೂ ಮುಂದುವರೆಯಲಿದೆ ಸುಶಾಂತ್ ಸಿಂಗ್- ಕಂಗನಾ ವಿವಾದಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...