Homeಮುಖಪುಟಮೆಟ್ರೋ ದರ ಏರಿಕೆ: ವಾಸ್ತವಾಂಶ ತೆರೆದಿಟ್ಟ ಸಿದ್ದರಾಮಯ್ಯ

ಮೆಟ್ರೋ ದರ ಏರಿಕೆ: ವಾಸ್ತವಾಂಶ ತೆರೆದಿಟ್ಟ ಸಿದ್ದರಾಮಯ್ಯ

- Advertisement -
- Advertisement -

ಬೆಂಗಳೂರು: ಬೆಂಗಳೂರು ಮೆಟ್ರೊ ರೈಲಿನ ಪ್ರಯಾಣ ದರ ಹೆಚ್ಚಳಕ್ಕೆ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಕೆಲವು ವಾಸ್ತವಾಂಶಗಳನ್ನು ಬೆಂಗಳೂರು ಜನತೆಯ ಮುಂದಿಡಲು ಬಯಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪತ್ರಿಕಾ ಪ್ರಕಟಣೆಯೊಂದನ್ನು ಹೊರಡಿಸಿದ್ದಾರೆ.

ಮೆಟ್ರೋ ಪ್ರಯಾಣ ದರ ಹೆಚ್ಚಳವನ್ನು ವಿರೋಧಿಸುತ್ತಿರುವ ವಿರೋಧ ಪಕ್ಷವಾದ ಬಿಜೆಪಿಯ ನಾಯಕರು ಯಥಾಪ್ರಕಾರ ಸುಳ್ಳು ಮತ್ತು ತಿರುಚಿದ ಮಾಹಿತಿಯನ್ನು ಬಳಸಿಕೊಂಡು ರಾಜ್ಯ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡಿ ಸಾರ್ವಜನಿಕರ ಹಾದಿ ತಪ್ಪಿಸುತ್ತಿದ್ದಾರೆ. ಸರ್ಕಾರದ ಯಾವುದೇ ನೀತಿ-ನಿರ್ಧಾರಗಳನ್ನು ವಿರೋಧಿಸುವ ಅಧಿಕಾರ ಸಾರ್ವಜನಿಕರಿಗೆ ಇದೆ, ಸಂವಿಧಾನಬದ್ಧವಾದ ಅವರ ಹಕ್ಕನ್ನು ನಾನು ಗೌರವಿಸುತ್ತೇನೆ ಎಂದಿದ್ದಾರೆ.

ಆದರೆ ವಿರೋಧ ಪಕ್ಷದ ಸ‍್ಥಾನದಲ್ಲಿ ಜನ ಕೂರಿಸಿರುವ ರಾಜ್ಯದ ಬಿಜೆಪಿ ರಾಜಕೀಯ ದುರುದ್ದೇಶದಿಂದ ಸುಳ್ಳು ಮಾಹಿತಿಗಳನ್ನು ನೀಡಿ ಸಾರ್ವಜನಿಕರ ಪ್ರತಿಭಟನೆಗೆ ಕುಮ್ಮಕ್ಕು ನೀಡುತ್ತಿರುವುದು ಅಕ್ಷಮ್ಯ. ಒಂದೆಡೆ ಮೆಟ್ರೋ ರೈಲು ನಿರ್ಮಾಣದ ಸಾಧನೆ ಕೇಂದ್ರದ ಬಿಜೆಪಿ ಸರ್ಕಾರದ್ದು ಎಂದು ಡಂಗುರ ಬಾರಿಸುತ್ತಿರುವ ಬಿಜೆಪಿ ನಾಯಕರು ದರ ಪರಿಷ್ಕರಣೆ ವಿರುದ್ದ ಜನಾಕ್ರೋಶ ವ್ಯಕ್ತವಾಗುತ್ತಿರುವುದನ್ನು ಕಂಡು ಅದರ ಜವಾಬ್ದಾರಿಯನ್ನು ರಾಜ್ಯ ಸರ್ಕಾರದ ಮೇಲೆ ಹೊರಿಸುತ್ತಿರುವುದು ಆತ್ಮವಂಚಕ ನಡವಳಿಕೆಯಾಗಿದೆ ಎಂದು ಸಿಎಂ ಹೇಳಿದ್ದಾರೆ.

ಕೇಂದ್ರ ಮತ್ತು ಕರ್ನಾಟಕ ಸರ್ಕಾರ ಜೊತೆಗೂಡಿ ಬೆಂಗಳೂರು ಮೆಟ್ರೊ ರೈಲು ನಿಗಮವನ್ನು ಸ್ಥಾಪಿಸಿದ್ದು, ಇದರಲ್ಲಿ ಎರಡೂ ಸರ್ಕಾರಗಳ ಸಮ (50:50) ಪಾಲುದಾರಿಕೆ ಇದೆ. ಕೇಂದ್ರ ನಗರ ಮತ್ತು ವಸತಿ ವ್ಯವಹಾರ ಇಲಾಖೆಯ ಕಾರ್ಯದರ್ಶಿಯಾಗಿರುವ ಶ್ರೀನಿವಾಸ ಕಟಿಕಿಥಲ ಅವರು ನಿಗಮದ ಈಗಿನ ಅಧ್ಯಕ್ಷರು. ವ್ಯವಸ್ಥಾಪಕ ನಿರ್ದೇಶಕ ಮತ್ತು ನಿರ್ದೇಶಕರ ಸ‍್ಥಾನದಲ್ಲಿ ಕೇಂದ್ರ ಮತ್ತು ರಾಜ್ಯದ ಅಧಿಕಾರಿಗಳಿದ್ದಾರೆ. ಇದೊಂದು ಸ್ವಾಯತ್ತ ಸಂಸ್ಥೆಯಾಗಿದ್ದು ಇದರ ಮೇಲೆ ರಾಜ್ಯ ಸರ್ಕಾರಕ್ಕೆ ಪೂರ್ಣ ನಿಯಂತ್ರಣಾಧಿಕಾರ ಇಲ್ಲ. ಉಳಿದೆಲ್ಲ ನಗರಗಳ ಮೆಟ್ರೋ ರೈಲು ನಿಗಮಗಳಂತೆ ಬೆಂಗಳೂರು ಮೆಟ್ರೊ ರೈಲು ನಿಗಮ ಕೂಡಾ ಕೇಂದ್ರ ಸರ್ಕಾರದ ಮೆಟ್ರೋ ರೈಲು (ಕಾರ್ಯಾಚರಣೆ ಮತ್ತು ನಿರ್ವಹಣೆ) ಕಾಯ್ದೆ 2002ರ ಅಡಿಯಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ ಎಂದಿದ್ದಾರೆ.

2017ರ ನಂತರ ಮೆಟ್ರೊ ರೈಲಿನ ಪ್ರಯಾಣ ದರ ಪರಿಷ್ಕರಣೆ ಮಾಡದೆ ಇರುವ ಕಾರಣ ದರ ಪರಿಷ್ಕರಣೆ ನಡೆಸುವಂತೆ ಬಿಎಂಆರ್‌ಸಿಎಲ್ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿತ್ತು. ಪ್ರಯಾಣ ದರ ಹೆಚ್ಚಳದ ಅಧಿಕಾರ ರಾಜ್ಯ ಸರ್ಕಾರದ ಕೈಯಲ್ಲೇ ಇದ್ದಿದ್ದರೆ ಬಿಎಂಆರ್‌ಸಿಎಲ್ ನಮಗೆ ಪತ್ರ ಬರೆಯದೆ, ಕೇಂದ್ರ ಸರ್ಕಾರಕ್ಕೆ ಯಾಕೆ ಪತ್ರ ಬರೆಯುತ್ತಿತ್ತು? ಎಂದು ಮುಖ್ಯಮಂತ್ರಿಯವರು ಪ್ರಶ್ನಿಸಿದ್ದಾರೆ.

ಬಿಎಂಆರ್‌ಸಿಎಲ್ ಪತ್ರಕ್ಕೆ ಪ್ರತಿಕ್ರಿಯಿಸಿದ್ದ ಕೇಂದ್ರ ಸರ್ಕಾರ ಮದ್ರಾಸ್ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಆರ್ ಥರಾನಿ ಅವರ ಅಧ್ಯಕ್ಷತೆಯಲ್ಲಿ ದರ ಪರಿಷ್ಕರಣಾ ಸಮಿತಿ ರಚಿಸಿತ್ತು, ಈ ಸಮಿತಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಪ್ರತಿನಿಧಿಗಳು ಸದಸ್ಯರಾಗಿದ್ದರು. 2024ರ ಸೆಪ್ಟೆಂಬರ್ 16ರಂದು ಅಧಿಕಾರ ಸ್ವೀಕರಿಸಿದ ಈ ಸಮಿತಿ ಮೂರು ತಿಂಗಳೊಳಗೆ ತನ್ನ ಶಿಫಾರಸನ್ನು ಸಲ್ಲಿಸಬೇಕೆಂದು ಕೇಂದ್ರ ಸರ್ಕಾರ ತನ್ನ ಪತ್ರದಲ್ಲಿ ತಿಳಿಸಿತ್ತು.

ಮೂರು ತಿಂಗಳ ಅವಧಿಯಲ್ಲಿ ಸಮಿತಿ ಬಿಎಂಆರ್‌ಸಿಎಲ್ ಅಧಿಕಾರಿಗಳ ಜೊತೆ ಮಾತ್ರವಲ್ಲ ದೆಹಲಿ ಮತ್ತು ಚೆನೈಗಳಿಗೆ ತೆರಳಿ ಅಲ್ಲಿನ ಮೆಟ್ರೋ ಸಂಸ್ಥೆಗಳ ಅಧಿಕಾರಿಗಳ ಜೊತೆಯಲ್ಲಿ ಕೂಡಾ ಕಾರ್ಯಾಚರಣೆ ಮತ್ತು ಪ್ರಯಾಣ ದರದ ಬಗ್ಗೆ ಸಮಾಲೋಚನೆ ನಡೆಸಿತ್ತು.

2017ರ ಜೂನ್ ನಲ್ಲಿ ಬೆಂಗಳೂರು ಮೆಟ್ರೋ ರೈಲಿಗೆ ನಿಗದಿಗೊಳಿಸಿದ್ದ ಪ್ರಯಾಣದರ, ಮೆಟ್ರೋದಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರ ಅನುಭವಗಳನ್ನು ದರಪರಿಷ್ಕರಣ ಸಮಿತಿ ಕಲೆ ಹಾಕಿತ್ತು. ಇದರ ಜೊತೆಯಲ್ಲಿ ಬಿಎಂಆರ್‌ಸಿಎಲ್ ನ ಹಣಕಾಸು ಸಾಮರ್ಥ್ಯವನ್ನು ಕೂಡಾ ಸಮಿತಿ ಅಧ್ಯಯನ ಮಾಡಿ 2024ರ ಡಿಸೆಬರ್ 16ರಂದು ಸಮಿತಿ ತನ್ನ ವರದಿನ್ನು ಸಲ್ಲಿಸಿತ್ತು.

2017ರ ಜೂನ್ ತಿಂಗಳಲ್ಲಿ ಬಿಎಂಆರ್‌ಸಿಎಲ್ ಪ್ರಯಾಣ ದರ ನಿಗದಿಪಡಿಸಿದಾಗ ಮೆಟ್ರೋ ಪ್ರಥಮ ಹಂತದ 42.30 ಕಿ.ಮೀ ಮಾರ್ಗ ಮಾತ್ರ ಪೂರ್ಣಗೊಂಡಿತ್ತು. ಮೆಟ್ರೋ ಎರಡನೇ ಹಂತ ಭಾಗಶ: ಪೂರ್ಣಗೊಂಡ ನಂತರ ಈಗ ಮೆಟ್ರೋ ಮಾರ್ಗ 42.30 ಕಿ.ಮೀಟರ್ ಗೆ ವಿಸ್ತರಣೆ ಗೊಂಡಿದೆ. ಮೆಟ್ರೋ 2, 2ಎ, ಮತ್ತು 2ಬಿ ಮಾರ್ಗಗಳು (96.60 ಕಿ.ಮೀ.) 2026ರ ಡಿಸೆಂಬರ್ ತಿಂಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆ ಇದ್ದು ಆಗ ಬೆಂಗಳೂರು ಮೆಟ್ರೋ ಮಾರ್ಗ 175,55 ಕಿ.ಮೀ.ಗೆ ವಿಸ್ತರಣೆಯಾಗಲಿದೆ.

ಬೆಂಗಳೂರು ಮೆಟ್ರೋ ರೈಲಿಗೆ ಸಂಬಂಧಿಸಿದ ಈ ಎಲ್ಲ ಅಂಶಗಳನ್ನು ಗಮನಕ್ಕೆ ತೆಗೆದುಕೊಂಡು ಚರ್ಚೆ ನಡೆಸಿದ ನಂತರ ಹತ್ತು ಅಧ್ಯಾಯಗಳಲ್ಲಿ ತನ್ನ ವರದಿ ನೀಡಿದೆ. ಸಮಿತಿ ದೇಶದ ಉಳಿದ ಮೆಟ್ರೋ ರೈಲಿನ ಪ್ರಯಾಣದರವನ್ನು ಅಧ್ಯಯನ ಮಾಡಿದೆ. ಸದ್ಯ ಬೆಂಗಳೂರು ಮೆಟ್ರೋ ಪ್ರಯಾಣ ದರ ಕನಿಷ್ಠ ರೂ.10 ಮತ್ತು ಗರಿಷ್ಠ ರೂ.60 ಆಗಿದೆ. ಮುಂಬೈ ಮೆಟ್ರೋ ರೈಲಿನ ಕನಿಷ್ಠ ಪ್ರಯಾಣದರ ರೂ.10 ಮತ್ತು ಗರಿಷ್ಠ ಪ್ರಯಾಣ ದರ ರೂ.80 ಆಗಿದೆ.

ದೆಹಲಿ ಮೆಟ್ರೋವನ್ನು ಹೊರತುಪಡಿಸಿ ಉಳಿದೆಲ್ಲ ರಾಜ್ಯಗಳಲ್ಲಿ ಮೊದಲ ಹಂತದ ಪ್ರಯಾಣದರವನ್ನು ಆಯಾ ರಾಜ್ಯಗಳ ಮೆಟ್ರೊ ನಿಗಮಗಳೇ ನಿಗದಿ ಪಡಿಸಿತ್ತು. ಈಗ ಪ್ರಯಾಣ ದರವನ್ನು ಕೇಂದ್ರ ಸರ್ಕಾರ ನೇಮಿಸುವ ಸಮಿತಿ ನಿಗದಿಪಡಿಸುತ್ತದೆ. ಮೆಟ್ರೋ ರೈಲ್ವೆ (ಕಾರ್ಯಾಚರಣೆ ಮತ್ತು ನಿರ್ವಹಣೆ) ಕಾಯಿದೆಯ ಸೆಕ್ಷನ್ 37ರ ಪ್ರಕಾರ ಪ್ರಯಾಣ ದರ ನಿಗದಿ ಸಮಿತಿ ನೀಡಿದ ವರದಿಯನ್ನು ಮೆಟ್ರೋ ರೈಲು ನಿಗಮಗಳು ( ಈ ಪ್ರಕರಣದಲ್ಲಿ ಬಿಎಂಆರ್ ಸಿಎಲ್ ) ಕಡ್ಡಾಯವಾಗಿ ಅನುಷ್ಠಾನಗೊಳಿಸಬೇಕಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಇಸ್ರೇಲಿನಿಂದ ಪಶ್ಚಿಮ ದಂಡೆಯಲ್ಲಿ 40,000 ಫೆಲೆಸ್ತೀನಿಯನ್ನರ ಬಲವಂತದ ಸ್ಥಳಾಂತರ: ವಿಶ್ವಸಂಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...