Homeಕರ್ನಾಟಕಪ್ರಯಾಣಿಕರ ಗಮನಕ್ಕೆ: ಮೆಟ್ರೋ ಪುನರಾರಂಭದ ನಿಯಮಾವಳಿಗಳನ್ನು ತಿಳಿಯಿರಿ

ಪ್ರಯಾಣಿಕರ ಗಮನಕ್ಕೆ: ಮೆಟ್ರೋ ಪುನರಾರಂಭದ ನಿಯಮಾವಳಿಗಳನ್ನು ತಿಳಿಯಿರಿ

ಪ್ರಯಾಣಿಕರಿಗೆ ಕೇವಲ ಒಂದು ಬ್ಯಾಗ್ ತರಲು ಮಾತ್ರ ಅನುಮತಿ ನೀಡಲಾಗಿದೆ.

- Advertisement -
- Advertisement -

ಕೊರೊನಾ ಹಿನ್ನೆಲೆಯಲ್ಲಿ ನಿಂತು ಹೋಗಿದ್ದ ಮೆಟ್ರೋ ಸಂಚಾರ ಸೋಮವಾರದಿಂದ (ಸೆ. 7) ಮತ್ತೆ ಸಂಚಾರ ಆರಂಭಿಸಲಿದ್ದು, ಬಿಎಂಆರ್‌ಸಿಎಲ್ ತನ್ನ ಕಾರ್ಯಾಚರಣೆಯ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಸೆ.7ರಿಂದ ನೇರಳೆ ಮಾರ್ಗದಲ್ಲಿ ಮತ್ತು ಸೆ.9ರಿಂದ ಹಸಿರು ಮಾರ್ಗದಲ್ಲಿ ಮೆಟ್ರೋ ಸಂಚರಿಸಲಿದೆ.

ಸೆಪ್ಟೆಂಬರ್ 11ರಿಂದ ಎಲ್ಲಾ ರೈಲುಗಳು ಬೆಳಗ್ಗೆ 7 ರಿಂದ ರಾತ್ರಿ 9 ರವರೆಗೆ ಎರಡು ಮಾರ್ಗದಲ್ಲಿ ಸಂಚರಿಸಲಿದೆ. ಜನದಟ್ಟಣೆಯ ಅವಧಿಯಲ್ಲಿ ಪ್ರತಿ 5 ನಿಮಿಷಕ್ಕೊಮ್ಮೆ ಹಾಗೂ ಬೇರೆ ಸಮಯದಲ್ಲಿ 10 ನಿಮಿಷಗಳ ಅಂತರದಲ್ಲಿ ಮೆಟ್ರೋ ಸಂಚರಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL) ನಿರ್ಧರಿಸಿದೆ.

ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಪ್ರಯಾಣಿಕರು ಹತ್ತಲು ಮತ್ತು ಇಳಿಯಲು 60 ಸೆಕೆಂಡುಗಳ ಕಾಲ ರೈಲು ನಿಲ್ಲಿಸಲಾಗುತ್ತದೆ. ಮೆಜೆಸ್ಟಿಕ್ ನಿಲ್ದಾಣದಲ್ಲಿ ಮಾತ್ರ 75 ಸೆಕೆಂಡುಗಳು ರೈಲು ನಿಲುಗಡೆ ಮಾಡುವುದಾಗಿ ನಿಗಮ ತಿಳಿಸಿದೆ.

ಇದನ್ನೂ ಓದಿ: ಮೆಟ್ರೋದಲ್ಲಿ ಹಿಂದಿ ತೆಗೆಯಿರಿ, ಇಲ್ಲ ಎಲ್ಲಾ ಅಧಿಕೃತ 22 ಭಾಷೆಗಳನ್ನು ಬಳಸಿ: ಟಿ.ಎಸ್.ನಾಗಾಭರಣ

ಕಂಟೈನ್‌ ‌ಮೆಂಟ್‌ ವಲಯಗಳಲ್ಲಿ ಬರುವ ಮೆಟ್ರೋ ನಿಲ್ದಾಣಗಳಲ್ಲಿ ಮೆಟ್ರೋ ನಿಲುಗಡೆಯನ್ನು ನಿರ್ಬಂಧಿಸಲಾಗಿದ್ದು, ಆ ನಿಲ್ದಾಣಗಳಲ್ಲಿ ಪ್ರವೇಶ ಮತ್ತು ನಿರ್ಗಮನ ಬಾಗಿಲುಗಳನ್ನು ತೆರೆಯುವುದಿಲ್ಲ. ಆಗ ಪ್ರಯಾಣಿಕರು ತಮಗೆ ಹತ್ತಿರದ ನಿಲ್ದಾಣವನ್ನು ಅವಲಂಬಿಸಲಬೇಕಾಗುತ್ತದೆ.

ಪ್ರತಿ ರೈಲಿನಲ್ಲಿ 400 ಪ್ರಯಾಣೀಕರಿಗೆ ಮಾತ್ರ ಅವಕಾಶವಿದೆ. ನಿಲ್ದಾಣಗಳಲ್ಲಿ ಜನದಟ್ಟಣೆ ಹೆಚ್ಚಿದ್ದರೆ, ಜನದಟ್ಟಣೆ ನಿರ್ವಹಿಸಲು ಸಾಧ್ಯವಾಗದಿದ್ದರೇ ಅಂತಹ ನಿಲ್ದಾಣಗಳನ್ನು ರೈಲು ನಿಲ್ಲದೆ ಮುಂದಿನ ನಿಲ್ದಾಣದಲ್ಲಿ ರೈಲು ನಿಲುಗಡೆ ನೀಡುತ್ತದೆ. ಈ ಬಗ್ಗೆ ಪ್ರಯಾಣಿಕರಿಗೆ ಮಾಹಿತಿ ನೀಡಲಾಗುತ್ತದೆ.

ದಟ್ಟಣೆ ತಪ್ಪಿಸಲು ಟೋಕನ್‌ ಮಾರಾಟವನ್ನು ನಿಷೇಧಿಸಲಾಗಿದ್ದು, ಮೆಟ್ರೋದಲ್ಲಿ ಓಡಾಟ ನಡೆಸುವವರು  ಸ್ಮಾರ್ಟ್ ಕಾರ್ಡ್ ಬಳಸಿ ಪ್ರಯಾಣ ಮಾಡಬೇಕು. ಕಾರ್ಡ್ ರಿಚಾರ್ಜ್‌ ಮಾಡಿಸಿದ ಏಳು ದಿನದೊಳಗೆ ಆ ಕಾರ್ಡ್‌ ಮೂಲಕ ಪ್ರಯಾಣ ಮಾಡಬೇಕು. ಈ ಮೊದಲು ರಿಚಾರ್ಜ್ ಮಾಡಿದ ಸ್ಮಾರ್ಟ್ ಕಾರ್ಡ್ ಬಳಸಲು 60 ದಿನಗಳ ಸಮಯವಿತ್ತು. ಈಗ ಕೇವಲ 7 ದಿನಕ್ಕೆ ಇಳಿಸಲಾಗಿದೆ. ನಿಲ್ದಾಣಗಳಲ್ಲಿ ಒದಗಿಸಲಾದ ಯುಪಿಐ, ಕ್ಯೂಆರ್‌ಕೋಡ್ ಅಥವಾ ಪೇಟಿಎಂ ಮೂಲಕ ರಿಚಾರ್ಜ್ ಮಾಡಿಕೊಲ್ಳಬಹುದು. ಸೆ.7ರಿಂದ ಮೊಬೈಲ್‌ ಆ್ಯಪ್‌ ಬಳಸುತ್ತಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ. ಸ್ಮಾರ್ಟ್ ಕಾರ್ಡ್‌‌ಗಳನ್ನು ಪ್ರವೇಶ ಮತ್ತು ನಿರ್ಗಮನ ದ್ವಾರಗಳಲ್ಲಿ ಗೇಟ್ ರೀಡರ್‌ನಿಂದ 3 ಸೆಂ.ಮೀ ದೂರದಿಂದಲೇ ಪ್ರಸ್ತುತಪಡಿಸಬೇಕು.

ಮೆಟ್ರೋ ಪ್ರಯಾಣಿಕರಿಗೆ ಸ್ಯಾನಿಟೈಸರ್, ಮಾಸ್ಕ್ ಕಡ್ಡಾಯವಾಗಿದೆ.  ಪ್ರವೇಶ ದ್ವಾರ, ನಿರ್ಗಮನ ದ್ವಾರ ಹಾಗೂ ಪ್ಲಾಟ್ ಫಾರ್ಮ್‌ನಲ್ಲಿ ಹಳದಿ ಗುರುತಿನ ಜಾಗದಲ್ಲಿ ನಿಲ್ಲಬೇಕು ಜೊತೆಗೆ ಎಲ್ಲಾ ಪ್ರಯಾಣಿಕರು ಕಡ್ಡಾಯವಾಗಿ 2 ಮೀಟರ್ ಅಂತರ ಕಾಯ್ದುಕೊಳ್ಳಬೇಕು. ಪ್ರಯಾಣಿಕರಿಗೆ ಕೇವಲ ಒಂದು ಬ್ಯಾಗ್ ತರಲು ಮಾತ್ರ ಅನುಮತಿ ನೀಡಲಾಗಿದೆ. ರೈಲಿನಲ್ಲಿ ಗುರುತಿಸಿರುವ ಆಸನಗಳಲ್ಲಿ ಮಾತ್ರ ಕೂರಲು ಅವಕಾಶವಿದೆ. ಸೀನುವಿಕೆ, ಕೆಮ್ಮು ಮತ್ತು ಉಸಿರಾಟದ ಲಕ್ಷಣಗಳು, 37 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿನ ತಾಪಮಾನ ಇರುವವರ ಪ್ರವೇಶ ನಿರ್ಬಂಧಿಸಲಾಗುತ್ತದೆ.

ಬಿಎಂಆರ್‌ಸಿಎಲ್ ತನ್ನ ಪ್ರಯಾಣಿಕರ ಆರೋಗ್ಯ ದೃಷ್ಠಿಯಿಂದ ಹಲವು ಕ್ರಮಗಳನ್ನು ತೆಗೆದುಕೊಂಡಿದ್ದು, ಸ್ವಚ್ಛತೆಗೆ ಆದ್ಯತೆ ನೀಡಿದೆ. ಈಗಾಗಲೇ ಮೆಟ್ರೋ ನಿಲ್ದಾಣಗಳಲ್ಲಿ ಬಾಕ್ಸ್‌ಗಳನ್ನು ಹಾಕಲಾಗಿದ್ದು, ರೈಲುಗಳಲ್ಲಿ ಅಂತರ ಕಾಯ್ದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ.


ಇದನ್ನೂ ಓದಿ: ಅನ್ಲಾಕ್ – 04: ಸೆಪ್ಟೆಂಬರ್ 07 ರಿಂದ ಮೆಟ್ರೋ ಸಂಚಾರ ಆರಂಭಕ್ಕೆ ಹಸಿರು ನಿಶಾನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...