Homeಮುಖಪುಟಪ್ರಧಾನಿ ಮೋದಿ ಪ್ರಚಾರಕ್ಕೆ ಸಿಂಗಾಪುರದ ರೈಲ್ವೆ ನಿಲ್ದಾಣದ ಫೋಟೋ ಬಳಸಿದ ಬಿಜೆಪಿ

ಪ್ರಧಾನಿ ಮೋದಿ ಪ್ರಚಾರಕ್ಕೆ ಸಿಂಗಾಪುರದ ರೈಲ್ವೆ ನಿಲ್ದಾಣದ ಫೋಟೋ ಬಳಸಿದ ಬಿಜೆಪಿ

- Advertisement -
- Advertisement -

ಬಿಜೆಪಿಯ ವಿವಿಧ ರಾಜ್ಯ ಮತ್ತು ಜಿಲ್ಲಾ ಘಟಕಗಳ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಇತ್ತೀಚೆಗೆ ಪೋಸ್ಟರ್ ಒಂದನ್ನು ಹಂಚಿಕೊಳ್ಳಲಾಗಿತ್ತು.

ಪ್ರಧಾನಿ ನರೇಂದ್ರ ಮೋದಿಯವರ ಫೋಟೋ ಮತ್ತು ಹಿಂಭಾಗದಲ್ಲಿ ಮೆಟ್ರೋ ರೈಲು ಸಾಗುತ್ತಿರು ಚಿತ್ರವಿರುವ ಈ ಪೋಸ್ಟರ್‌ ಜೊತೆಗೆ “ಉದ್ಯೋಗ ಸೃಷ್ಟಿಯಾಗುತ್ತಿಲ್ಲವಾದರೆ, ಮೆಟ್ರೋ ಸೇವೆಗಳು ಭಾರತದ ವಿವಿಧ ನಗರಗಳನ್ನು ತಲುಪಿದ್ದು ಹೇಗೆ? 2014 ರಲ್ಲಿ 5 ನಗರಗಳಲ್ಲಿ ಇದ್ದ ಮೆಟ್ರೋ ಸೇವೆಗಳು ಈಗ 20 ನಗರಗಳಿಗೆ ವಿಸ್ತರಿಸಿವೆ” ಎಂದು ಬರೆದುಕೊಳ್ಳಲಾಗಿತ್ತು.

ಈ ಪೋಸ್ಟರ್‌ ಕುರಿತು ‘ಆಲ್ಟ್‌ ನ್ಯೂಸ್’ ಫ್ಯಾಕ್ಟ್‌ ಚೆಕ್ ನಡೆಸಿದ್ದು, ಪೋಸ್ಟರ್‌ನಲ್ಲಿ ಪ್ರಧಾನಿ ಮೋದಿಯವರ ಹಿಂಭಾಗದಲ್ಲಿರುವ ಮೆಟ್ರೋದ ಫೋಟೋವನ್ನು ಗೂಗಲ್‌ ರಿವರ್ಸ್‌ ಇಮೇಜ್‌ನಲ್ಲಿ ಹುಡುಕಿದೆ. ಈ ವೇಳೆ ಆ ಫೋಟೋ ಶಾನ್ ಎಂಬ ಛಾಯಾಗ್ರಾಹಕ ‘ಅನ್‌ಸ್ಪ್ಲಾಶ್’ ಫೋಟೋ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿದ ಚಿತ್ರಕ್ಕೆ ಹೋಲಿಕೆ ಕಂಡು ಬಂದಿದೆ.

ಆಲ್ಟ್‌ ನ್ಯೂಸ್‌ ತಂಡ ಇನ್‌ಸ್ಟಾಗ್ರಾಮ್‌ ಮುಖಾಂತರ ಶಾನ್ ಅವರನ್ನು ಸಂಪರ್ಕಿಸಿದ್ದು, ಈ ಫೋಟೋ ಸಿಂಗಾಪುರದ ಜುರಾಂಗ್ ಈಸ್ಟ್ ನಿಲ್ದಾಣದ್ದು, ಎಂದು ಸ್ವತಃ ಅವರೇ ಖಚಿತಪಡಿಸಿದ್ದಾರೆ ಎಂದಿದೆ. ಹಾಗಾಗಿ, ಬಿಜೆಪಿಯ ಪೋಸ್ಟರ್‌ನಲ್ಲಿ ಬಳಸಲಾದ ಮೆಟ್ರೋ ರೈಲಿನ ಚಿತ್ರ ಸಿಂಗಾಪುರದ ರೈಲ್ವೆ ನಿಲ್ದಾಣದ್ದೇ ಹೊರತು, ಭಾರತದಲ್ಲ ಎಂಬುವುದನ್ನು ಇದು ಖಚಿತಪಡಿಸುತ್ತದೆ.

(Photo Credit : altnews.in)

ಶಾನ್ ಅವರು ಸೆರೆ ಹಿಡಿದ ಸಿಂಗಾಪುರದ ಮೆಟ್ರೋ ನಿಲ್ದಾಣದ ಫೋಟೋವನ್ನು ಕ್ರಾಪ್ ಮಾಡಿ ಬಿಜೆಪಿ ತನ್ನ ಪೋಸ್ಟರ್‌ಗೆ ಬಳಸಿಕೊಂಡಿದೆ ಎಂಬುವುದನ್ನು ಆಲ್ಟ್‌ ನ್ಯೂಸ್ ಸ್ಪಷ್ಟವಾಗಿ ಹೋಲಿಕೆ ಮಾಡಿ ತೋರಿಸಿದೆ.

ಇದನ್ನೂ ಓದಿ : ಮೋದಿ ಸ್ಪರ್ಧಿಸುವ ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ನಡೆದಿದ್ಯಾ ಅಕ್ರಮ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...