Homeಮುಖಪುಟಮೆಕ್ಸಿಕೋದ ಮೊಟ್ಟ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಕ್ಲೌಡಿಯಾ ಶೀನ್‌ಬಾಮ್ ಆಯ್ಕೆ

ಮೆಕ್ಸಿಕೋದ ಮೊಟ್ಟ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಕ್ಲೌಡಿಯಾ ಶೀನ್‌ಬಾಮ್ ಆಯ್ಕೆ

- Advertisement -
- Advertisement -

ಮೆಕ್ಸಿಕೋದ ಆಡಳಿತಾರೂಢ ಎಡಪಂಥೀಯ ‘ಮೊರೆನಾ’ ಪಕ್ಷದ ಕ್ಲೌಡಿಯಾ ಶೀನ್‌ಬಾಮ್ ಅವರು ದೇಶದ ಮೊದಲ ಮಹಿಳಾ ಅಧ್ಯಕ್ಷೆಯಾಗುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.

ಚುನಾವಣಾ ಫಲಿತಾಂಶ ಘೋಷಣೆಯಾಗುತ್ತಿದ್ದಂತೆ ಮೆಕ್ಸಿಕೋ ನಗರದ ಡೌನ್‌ಟೌನ್‌ ಹೋಟೆಲ್‌ನಲ್ಲಿ ಪ್ರತಿಕ್ರಿಯೆ ನೀಡಿದ ಶೀನ್‌ಬಾಮ್, “ನಾನು ಮೆಕ್ಸಿಕೋದ ಮೊದಲ ಮಹಿಳಾ ಅಧ್ಯಕ್ಷೆಯಾಗಲಿದ್ದೇನೆ. ನಾನು ಈ ಸಾಧನೆಯನ್ನು ಏಕಾಂಕಿಯಾಗಿ ಮಾಡಿಲ್ಲ. ನನ್ನ ತಾಯಂದಿರು, ನಮ್ಮ ಹೆಣ್ಣು ಮಕ್ಕಳು ಮತ್ತು ಮೊಮ್ಮಕ್ಕಳು ತಾಯ್ನಾಡನ್ನು ನನಗೆ ನೀಡಿದ್ದಾರೆ” ಎಂದು ಹೇಳಿದ್ದಾರೆ.

ಅಧ್ಯಕ್ಷೀಯ ಸ್ಥಾನಕ್ಕೆ ನಡೆದ ಚುನಾವಣೆಯ ಕ್ಷಿಪ್ರ ಮಾದರಿ ಮತ ಎಣಿಕೆಯಲ್ಲಿ 60.7 ಶೇಖಡ ಮತಗಳನ್ನು ಪಡೆಯುವ ಮೂಲಕ ಕ್ಲೌಡಿಯಾ ಶೀನ್‌ಬಾಮ್ ಗೆಲುವು ಸಾಧಿಸಿದ್ದಾರೆ. ಅವರ ಪ್ರತಿಸ್ಪರ್ಧಿ ಪಿಎನ್‌ ಪಕ್ಷದ ಕ್ಸೊಕಿಟಿ ಗಲ್ವೇಝ್ ಅವರು ಶೇ.58.3ರಷ್ಟು ಮತಗಳನ್ನು ಪಡೆದಿದ್ದಾರೆ. ಇದು ದೇಶದ ಪ್ರಜಾಸತ್ತಾತ್ಮಕ ಇತಿಹಾಸದಲ್ಲಿಯೇ ಅತ್ಯಧಿಕ ಮತದಾನವಾಗಿದೆ.

ಕ್ಲೌಡಿಯಾ ಶೀನ್‌ಬಾಮ್ ಅವರು ವಿರೋಧ ಪಕ್ಷಗಳ ಒಕ್ಕೂಟವನ್ನು ಪ್ರತಿನಿಧಿಸುವ ಸಂಪ್ರದಾಯವಾದಿ ಪಿಎನ್‌ ಪಕ್ಷದ ಕ್ಸೊಕಿಟಿ ಗಲ್ವೇಝ್ ಅವರನ್ನು ಸೋಲಿಸಿದ್ದಾರೆ. ಕಣದಲ್ಲಿದ್ದ ಮೂರನೇ ಅಭ್ಯರ್ಥಿ ಜಾರ್ಜ್ ಅಲ್ವಾರೆಝ್ ಮೇನೆಜ್ ಅವರು ಮಧ್ಯ-ಎಡ ನಾಗರಿಕರ ಚಳವಳಿಯನ್ನು ಪ್ರತಿನಿಧಿಸಿದ್ದರು.

ಮೆಕ್ಸಿಕೋದ ಇತಿಹಾಸದಲ್ಲೇ ಅತಿ ದೊಡ್ಡ ಚುನಾವಣೆಯು ಹಿಂಸಾಚಾರದಿಂದ ರಕ್ತಸಿಕ್ತವಾಗಿತ್ತು. ಅಧಿಕಾರದಲ್ಲಿರುವವರ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುತ್ತಿರುವ ಕ್ರಿಮಿನಲ್ ಸಂಘಟನೆಗಳಿಂದ ಹಲವಾರು ರಾಜಕೀಯ ಮುಖಂಡರು ಕೊಲ್ಲಲ್ಪಟ್ಟಿದ್ದಾರೆ. ಕನಿಷ್ಠ 38 ಅಭ್ಯರ್ಥಿಗಳು ಸಾವನಪ್ಪಿದ್ದಾರೆ. ಪ್ರಜಾಪ್ರಭುತ್ವದ ಹಬ್ಬದಲ್ಲಿ ಡ್ರಗ್ ಕಾರ್ಟೆಲ್‌ಗಳ ಬೆದರಿಕೆ ಕಳವಳ ಉಂಟು ಮಾಡಿತ್ತು ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.

ರಾಷ್ಟ್ರೀಯ ಚುನಾವಣಾ ಸಂಸ್ಥೆಯ ಪ್ರಕಾರ, ಮೈಕೋಕಾನ್ ಮತ್ತು ಚಿಯಾಪಾಸ್‌ ಪ್ರಾಂತ್ಯದಲ್ಲಿ ಭದ್ರತೆಯ ಕಾರಣದಿಂದ ಅದು ಸುಮಾರು 170 ಮತಗಟ್ಟೆಗಳನ್ನು ರದ್ದುಗೊಳಿಸಲಾಗಿದೆ.

ಪ್ಯೂಬ್ಲಾದಲ್ಲಿ ನಾಲ್ವರು ಶಸ್ತ್ರಸಜ್ಜಿತ ದಾಳಿಕೋರರು ಮತಯಂತ್ರಗಳನ್ನು ಕದಿಯಲು ಮತಗಟ್ಟೆಗಳನ್ನು ಸ್ಥಾಪಿಸಿದ ಶಾಲೆಗೆ ನುಗ್ಗಲು ಪ್ರಯತ್ನಿಸಿದ್ದರು. ಪಶ್ಚಿಮ ಮೆಕ್ಸಿಕೋದಲ್ಲಿ ಮತದಾನ ನಡೆಯುವ ಗಂಟೆಗಳ ಮೊದಲು ಜೂನ್ 1ರಂದು ಸ್ಥಳೀಯ ಅಭ್ಯರ್ಥಿಯನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು.

ಭಾನುವಾರ ನಡೆದ ಚುನಾವಣೆಯಲ್ಲಿ ಸುಮಾರು 100 ಮಿಲಿಯನ್ ಮೆಕ್ಸಿಕನ್ನರು ತಮ್ಮ ಹಕ್ಕು ಚಲಾಯಿಸಲು ಅರ್ಹರಾಗಿದ್ದರು. ಅಧ್ಯಕ್ಷೀಯ ಸ್ಪರ್ಧೆಯನ್ನು ಹೊರತುಪಡಿಸಿ, ಮೆಕ್ಸಿಕೋ ನಗರದ ಮೇಯರ್, ಎಂಟು ಗವರ್ನರ್‌ ಸ್ಥಾನಗಳು ಮತ್ತು ಎರಡು ಸಂಸತ್‌ ಸ್ಥಾನಗಳಿಗೆ ಚುನಾವಣೆ ನಡೆದಿದೆ. ಸುಮಾರು 1.4 ಮಿಲಿಯನ್ ಮೆಕ್ಸಿಕನ್ನರು ವಿದೇಶದಲ್ಲಿ ಮತ ಚಲಾಯಿಸಲು ಅರ್ಹರಾಗಿದ್ದರು ಎಂದು ಸಿಎನ್‌ಎನ್‌ ವರದಿ ಮಾಡಿದೆ. ಸುಮಾರು 20,000 ಸ್ಪರ್ಧಿಗಳು ಕಣದಲ್ಲಿದ್ದರು. ಇದು ಮೆಕ್ಸಿಕೋದ ಇತಿಹಾಸದಲ್ಲಿಯೇ ಅತಿ ಹೆಚ್ಚು ಎಂದು ರಾಯಿಟರ್ಸ್ ವರದಿ ಮಾಡಿದೆ.

ಕ್ಲೌಡಿಯಾ ಶೀನ್‌ಬಾಮ್ ಅಧ್ಯಕ್ಷೆಯಾದ ಬಳಿಕ ದೇಶದಲ್ಲಿ ಸಂಘಟಿತ ಹಿಂಸಾಚಾರವನ್ನು ತಡೆಗಟ್ಟುವ ಸವಾಲು ಹೊಂದಿದ್ದಾರೆ. ಏಕೆಂದರೆ, ಅವರ ಪಕ್ಷದ ಲೋಪೆಝ್ ಒಬ್ರಡಾರ್ ಅವರ ಆಡಳಿತಾವಧಿಯಲ್ಲಿ ದೇಶದಲ್ಲಿ ಹೆಚ್ಚಿನ ಜನರು ಹಿಂಸಾಚಾರದಲ್ಲಿ ಕೊಲ್ಲಲ್ಪಟ್ಟಿದ್ದಾರೆ.

ಕ್ಲೌಡಿಯಾ ಶೀನ್‌ಬಾಮ್ ಹಿನ್ನೆಲೆ

ಜೂನ್ 24,1962ರಲ್ಲಿ ಜನಿಸಿದ ಕ್ಲೌಡಿಯಾ ಶೀನ್‌ಬಾಮ್ ಪರ್ಡೊ ಮೆಕ್ಸಿಕನ್ ರಾಜಕಾರಣಿ, ವಿಜ್ಞಾನಿ ಮತ್ತು ಶೈಕ್ಷಣಿಕ ತಜ್ಞೆಯಾಗಿದ್ದಾರೆ. ಎಡಪಂಥೀಯ ರಾಜಕೀಯ ಪಕ್ಷ ಮೊರೆನಾದ ಸದಸ್ಯರಾಗಿರುವ ಶೀನ್‌ಬಾಮ್, 2018 ರಿಂದ 2023ರವರೆಗೆ ರಾಜ್ಯ ಗವರ್ನರ್ ಹುದ್ದೆಗೆ ಸಮಾನವಾದ ಮೆಕ್ಸಿಕೋ ಸಿಟಿಯ ಸರ್ಕಾರದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು. ಇದೀಗ 2024ರ ಮೆಕ್ಸಿಕನ್ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಿ ಜಯಗಳಿಸುವ ಮೂಲಕ ದೇಶದ ಮೊಟ್ಟ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಆಯ್ಕೆಯಾಗಿ ಇತಿಹಾಸ ಸೃಷ್ಟಿಸಿದ್ದಾರೆ.

ಇದನ್ನೂ ಓದಿ : ಪ್ಯಾಲೆಸ್ತೀನ್ ಪರ ಜಾಗೃತಿ ಕಾರ್ಯಕ್ರಮದಲ್ಲಿದ್ದವರ ಮೇಲೆ ಹಲ್ಲೆ: ಬೆಂಗಳೂರು ಪೊಲೀಸರ ವಿರುದ್ಧ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...