Homeಕರ್ನಾಟಕಮೈಕ್ರೋ ಫೈನಾನ್ಸ್‌ ಕಿರುಕುಳ ವಿರೋಧಿ ಕಾನೂನು ಜಾರಿಗೆ - ಸಿದ್ದರಾಮಯ್ಯ ಘೊಷಣೆ

ಮೈಕ್ರೋ ಫೈನಾನ್ಸ್‌ ಕಿರುಕುಳ ವಿರೋಧಿ ಕಾನೂನು ಜಾರಿಗೆ – ಸಿದ್ದರಾಮಯ್ಯ ಘೊಷಣೆ

- Advertisement -
- Advertisement -

ಮೈಕ್ರೋ ಫೈನಾನ್ಸ್‌ ಕಂಪೆನಿಗಳು‌ ಸಾಲ ವಸೂಲಿಯ ನೆಪದಲ್ಲಿ ಸಾಲ ಪಡೆದವರಿಗೆ ನೀಡುತ್ತಿರುವ ಕಿರುಕುಳವನ್ನು ತಡೆಯಲು ರೂಪಿಸಲಾದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ ಬಿದ್ದಿದ್ದು, ಈ ಆಧ್ಯಾದೇಶವನ್ನು ಈ ಕ್ಷಣದಿಂದ ಕಾನೂನಾಗಿ ಜಾರಿಗೆ ಬಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಘೋಷಿಸಿದ್ದಾರೆ. ಮೈಕ್ರೋ ಫೈನಾನ್ಸ್‌ ಕಿರುಕುಳ

ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ ಬಿದ್ದಿರುವ ಬಗ್ಗೆ ಟ್ವಿಟರ್‌ನಲ್ಲಿ ಮಾಹಿತಿ ನೀಡಿದ್ದ ಅವರು, “ಮೈಕ್ರೋ ಫೈನಾನ್ಸ್‌ ಕಂಪೆನಿಗಳು‌ ಸಾಲ ವಸೂಲಿಯ ನೆಪದಲ್ಲಿ ಸಾಲ ಪಡೆದವರಿಗೆ ನೀಡುತ್ತಿರುವ ಕಿರುಕುಳವನ್ನು ತಡೆಯಲು ರೂಪಿಸಲಾದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ ದೊರೆತಿದೆ” ಎಂದು ಹೇಳಿದ್ದಾರೆ. ಮೈಕ್ರೋ ಫೈನಾನ್ಸ್‌ ಕಿರುಕುಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ರಸ್ತುತ ಕಾನೂನು ಶೀಘ್ರದಲ್ಲಿ ಜಾರಿಗೆ ಬಂದು ಮೈಕ್ರೋ ಫೈನಾನ್ಸ್‌ಗಳ ನಿಯಮ ಬಾಹಿರ ಸಾಲ ವಸೂಲಿ, ಕಿರುಕುಳಗಳ ವಿರುದ್ಧ ಜನರಿಗೆ ರಕ್ಷಣೆ ನೀಡಲಿದೆ ಎಂದು ಅವರು ತಿಳಿಸಿದ್ದಾರೆ. ಮೈಕ್ರೋ ಫೈನಾನ್ಸ್‌ಗಳ ಕಿರುಕುಳಕ್ಕೆ ಹೆದರಿ ಯಾರೊಬ್ಬರೂ ದುಡುಕಿನ ನಿರ್ಧಾರ ಕೈಗೊಳ್ಳದಿರಿ. ನಿಮ್ಮ ಜೊತೆ ನಮ್ಮ ಸರ್ಕಾರ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಮೈಕ್ರೋ ಫೈನಾನ್ಸ್‌ ಆಧ್ಯಾದೇಶವನ್ನು ತಕ್ಷಣವೆ ಜಾರಿಗೆ ತಂದಿರುವುದಾಗಿ ಅವರು ಹೇಳಿದ್ದಾರೆ.

“ಮೈಕ್ರೋ ಫೈನಾನ್ಸ್‌ ಕಂಪೆನಿಗಳು‌ ಅಥವಾ ಇತರೆ ಖಾಸಗಿ ಹಣಕಾಸು ಸಂಸ್ಥೆಗಳು / ವ್ಯಕ್ತಿಗಳು ಸಾಲ ವಸೂಲಿಯ ನೆಪದಲ್ಲಿ ನೀಡುತ್ತಿದ್ದ ಕಿರುಕುಳ, ಮಾನಸಿಕ ಹಿಂಸೆ ಮತ್ತು ದೌರ್ಜನ್ಯದಂತಹ ಅಮಾನವೀಯ, ಕಾನೂನು ಬಾಹಿರ ಕ್ರಮಗಳ ಮೇಲೆ ನಿಯಂತ್ರಣ ಹಾಗೂ ನಿರ್ಬಂಧ ಹೇರುವ ಉದ್ದೇಶದಿಂದ ನಾವು ರೂಪಿಸಿದ ‘ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ ( ಬಲವಂತದ ಕ್ರಮಗಳ ಪ್ರತಿಬಂಧಕ ) ಅಧ್ಯಾದೇಶ – 2025’ ಈ ಕ್ಷಣದಿಂದ ಕಾನೂನಾಗಿ ಜಾರಿಗೆ ಬಂದಿದೆ” ಎಂದು ಅವರು ಹೇಳಿದ್ದಾರೆ.

ಮೈಕ್ರೋ ಫೈನಾನ್ಸ್‌ನಲ್ಲಿ‌ ಸಾಲ ಪಡೆದು ಕಿರುಕುಳಕ್ಕೆ ಒಳಗಾದವರು ಪೊಲೀಸರ ಬಳಿ ದೂರು ದಾಖಲಿಸಬಹುದು, ಅಂಥವರಿಗೆ ಹೊಸ ಕಾನೂನಿನಡಿ ಹೆಚ್ಚಿನ ರಕ್ಷಣೆ ದೊರೆಯಲಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ನಮ್ಮ ಈ ಪ್ರಯತ್ನದಿಂದ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್, ಫೈನಾನ್ಸ್ ಹಾಗೂ ಲೇವಾದೇವಿದಾರರ ಕಿರುಕುಳ, ದೌರ್ಜನ್ಯಗಳು ಕೊನೆಯಾಗಲಿದೆ ಎಂಬ ಭರವಸೆ ನನಗಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂಓದಿ:  ಉಚಿತ ಕೊಡುಗೆ ಯೋಜನೆಯಿಂದ ಜನರು ಕೆಲಸ ಮಾಡಲು ಸಿದ್ಧರಿಲ್ಲ – ಸುಪ್ರೀಂಕೋರ್ಟ್ ಟೀಕೆ

ಉಚಿತ ಕೊಡುಗೆ ಯೋಜನೆಯಿಂದ ಜನರು ಕೆಲಸ ಮಾಡಲು ಸಿದ್ಧರಿಲ್ಲ – ಸುಪ್ರೀಂಕೋರ್ಟ್ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...