ರಾಜ್ಯದಲ್ಲಿ ಮಿತಿಮೀರಿದ ಮೈಕ್ರೋ ಫೈನಾನ್ಸ್‌ಗಳ ಆಟಾಟೋಪಗಳಿಗೆ ಕಡಿವಾಣ ಹಾಕಲು ಹೊಸ ಕಾನೂನು ರೂಪಿಸುವ ನಿಟ್ಟಿನಲ್ಲಿ ಶನಿವಾರ ರಾಜ್ಯ ಕಂದಾಯ ಸಚಿವ ಕೃಷ್ಣೇಬೈರೆಗೌಡ ಅವರು ಮಹತ್ವದ ಸಭೆ ನಡೆಸಿದ್ದಾರೆ.
ಈ ಸಭೆಯಲ್ಲಿ ಸಾಮರ್ಥ್ಯಕ್ಕಿಂತ ಅಧಿಕ ಸಾಲ ನೀಡುವ ಮೂಲಕ ಬಡವರನ್ನ ಸಾಲದ ಸುಳಿಗೆ ಸಿಲುಕಿಸುತ್ತಿರುವ ಹುನ್ನಾರವನ್ನು ತಡೆಯಲು ಆನ್ಲೈನ್ ಪೋರ್ಟಲ್ ಮಾಡಿ ಯಾರಿಗೆ ಎಷ್ಟು ಸಾಲ ನೀಡಲಾಗಿದೆ ಎಂದು ಅಪ್ಡೇಟ್ ಮಾಡಬೇಕು ಎಂದು ತೀರ್ಮಾನಿಸಿದ್ದಾರೆ. ಮೈಕ್ರೋ ಫೈನಾನ್ಸ್‌ಗಳ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಸಾಲಕ್ಕಾಗಿ ಅರ್ಜಿ ಸಲ್ಲಿಕೆ ಹಾಗೂ ಸಾಲ ನೀಡುವ ಸಂಪೂರ್ಣ ಪ್ರಕ್ರಿಯೆಯನ್ನು ಆನ್ಲೈನ್ ಮೂಲಕವೇ ನಿಭಾಯಿಸಬೇಕು ಎಂದು ತೀರ್ಮಾನಿಸಲಾಗಿದ್ದು, ಸಾಲಕ್ಕೆ ವಿಧಿಸುವ ಬಡ್ಡಿ ದರದ ಪ್ರಮಾಣ ಪಾರದರ್ಶಕ ಹಾಗೂ RBI ನೀತಿಗೆ ಅನುಗುಣವಾಗಿರಬೇಕು ಎಂದು ಹೇಳಿದ್ದಾರೆ.
“ಮೈಕ್ರೋ ಫೈನಾನ್ಸ್ ಕಂಪೆನಿಗಳು ಕಡ್ಡಾಯವಾಗಿ ರಾಜ್ಯದಲ್ಲಿ ನೋಂದಣಿಯಾಗಿರಬೇಕು. ಯಾವುದೇ ಸಂದರ್ಭದಲ್ಲಿ ಈ ನೋಂದಣಿಯನ್ನ ಸರ್ಕಾರ ತಿರಸ್ಕರಿಸಲಿದ್ದು, ಮೈಕ್ರೋ ಫೈನಾನ್ಸ್ ಕಂಪೆನಿಗಳ ವ್ಯವಹಾರವನ್ನ ವಿಚಾರಣೆಗೆ ಪ್ರತಿ ಜಿಲ್ಲೆಯಲ್ಲಿ ADC-AC ಒಳಗೊಂಡ ಒಂಬುಡ್ಸ್ಮನ್ ನೇಮಕ ಮಾಡಬೇಕು” ಎಂಬ ನಿಯಮಗಳನ್ನು ತರುವ ಬಗ್ಗೆ ಚರ್ಚಿಸಲಾಗಿದೆ.
ಮೈಕ್ರೋ ಫೈನಾನ್ಸ್ ಕಂಪೆನಿಗಳು ಸಾಲದ ಹೆಸರಲ್ಲಿ ಬಡ ಜನರಿಂದ ಯಾವ ವಸ್ತುಗಳು-ಆಸ್ತಿಗಳನ್ನ ಅಡಮಾನ ಇಡಿಸಿಕೊಳ್ಳುವಂತಿಲ್ಲ ಎಂದು ಸಚಿವರು ಹೇಳಿದ್ದು, ಸಾಲ ಮರುಪಾವತಿ ಮಾಡದವರ ವಿರುದ್ಧ ಮಧ್ಯವರ್ತಿಗಳ ಮೂಲಕ ದಬ್ಬಾಳಿಕೆ ಮಾಡುವಂತಿಲ್ಲ ಎಂಬುದೂ ಸೇರಿದಂತೆ ಹಲವು ಪ್ರಮುಖ ವಿಚಾರಗಳನ್ನು ಕಾನೂನಿನ ಚೌಕಟ್ಟಿನೊಳಗೆ ತರುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.


