Homeಕರ್ನಾಟಕಮೈಕ್ರೋ ಫೈನಾನ್ಸ್, ಗ್ರೇಟರ್ ಬೆಂಗಳೂರು ಮಸೂದೆಗಳು ವಿಧಾನಸಭೆಯಲ್ಲಿ ಅಂಗೀಕಾರ

ಮೈಕ್ರೋ ಫೈನಾನ್ಸ್, ಗ್ರೇಟರ್ ಬೆಂಗಳೂರು ಮಸೂದೆಗಳು ವಿಧಾನಸಭೆಯಲ್ಲಿ ಅಂಗೀಕಾರ

- Advertisement -
- Advertisement -

ಕರ್ನಾಟಕ ಕಿರುಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಮಸೂದೆ-2025 ಮತ್ತು ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ-2025 ಸೋಮವಾರ (ಮಾ.11) ವಿಧಾನಸಭೆಯಲ್ಲಿ ಅಂಗೀಕಾರಗೊಂಡಿವೆ.

ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಸಾಲಗಾರರಿಗೆ ಆಗುತ್ತಿರುವ ಕಿರುಕುಳ ತಪ್ಪಿಸುವ ಉದ್ದೇಶದಿಂದ ಹೊರಡಿಸಿದ್ದ ಸುಗ್ರಿವಾಜ್ಞೆಗೆ ಬಲ ನೀಡುವ ಸಲುವಾಗಿ ಕರ್ನಾಟಕ ಕಿರುಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಮಸೂದೆ-2025 ಅಥವಾ ಮೈಕ್ರೋ ಫೈನಾನ್ಸ್ ಮಸೂದೆಯನ್ನು ಮಂಡಿಸಿ ಸರ್ಕಾರ ಅನುಮೋದನೆ ಪಡೆದುಕೊಂಡಿದೆ.

ಸಮಗ್ರ ಬೆಂಗಳೂರು ಆಡಳಿತ ನಿರ್ವಹಣೆಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚಿಸಲು ಹಾಗೂ ಬಿಬಿಎಂಪಿಯ ವ್ಯಾಪ್ತಿಯನ್ನು ವಿಸ್ತರಿಸಿ ಏಳು ನಗರ ಪಾಲಿಕೆಗಳನ್ನು ಸೃಜಿಸಲು ಅವಕಾಶ ಕಲ್ಪಿಸುವ ಸಲುವಾಗಿ ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ-2025ಕ್ಕೆ ಅನುಮೋದನೆ ಪಡೆಯಲಾಗಿದೆ.

ಮೈಕ್ರೋ ಫೈನಾನ್ಸ್ ಮಸೂದೆಯನ್ನು ರಾಜ್ಯ ಹಣಕಾಸು ಮಂತ್ರಿಯೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಕಾನೂನು ಸಚಿವ ಹೆಚ್‌.ಕೆ ಪಾಟೀಲ್ ಮಂಡಿಸಿದರು. ಗ್ರೇಟರ್ ಬೆಂಗಳೂರು ಮಸೂದೆಯನ್ನು ಬೆಂಗಳೂರು ನಗರಾಭಿವೃದ್ದಿ ಇಲಾಖೆ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಂಡಿಸಿದರು.

ಮೈಕ್ರೋ ಫೈನಾನ್ಸ್ ಮಸೂದೆ ಕುರಿತು ವಿವರಿಸಿದ ಸಚಿವ ಹೆಚ್‌.ಕೆ ಪಾಟೀಲ್, ಕೆಲ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾಲ ವಸೂಲಿಗೆ ಕಠಿಣ ಕ್ರಮಗಳನ್ನು ಅನುಸರಿಸಿದ್ದರಿಂದ ಜನರು ಆತ್ಮವಿಶ್ವಾಸ ಕಳೆದುಕೊಂಡಿದ್ದರು. ಇದರ ಪರಿಣಾಮ 19 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾಲ ವಸೂಲಾತಿ ಸಂಸ್ಥೆಗಳ ಕಿರುಕುಳದಿಂದ ಚಾಮರಾಜನರ ಜಿಲ್ಲೆಯ ಗ್ರಾಮವೊಂದರ ಗ್ರಾಮಸ್ಥರು ಮನೆಗಳನ್ನು ಬಿಟ್ಟು ಹೋಗಿದ್ದರು. ಜನರಲ್ಲಿ ಆತ್ಮವಿಶ್ವಾಸ ತುಂಬುವ ಸಲುವಾಗಿ ಕಠಿಣ ಕಾನೂನಿನ ಅಗತ್ಯವಿತ್ತು ಎಂದು ಪ್ರತಿಪಾದಿಸಿದರು.

ರಾಜ್ಯದಲ್ಲಿ ನೋಂದಾಯಿತವಲ್ಲದ ಹಣಕಾಸು ಸಂಸ್ಥೆಗಳು, ಲೇವಾದೇವಿದಾರರು ಸುಮಾರು 40 ಸಾವಿರ ಕೋಟಿ ರೂಪಾಯಿ ಸಾಲ ನೀಡಿದ್ದಾರೆ. ಕೆಲವು ಸಂಸ್ಥೆಗಳು ತಿಂಗಳಿಗೆ ಶೇಖಡ 10ರಷ್ಟು ಬಡ್ಡಿ ವಿಧಿಸುತ್ತಿವೆ. ಬಹುತೇಕ ಕಪ್ಪು ಹಣವೇ ಬಳಕೆ ಆಗುತ್ತಿತ್ತು. ಸಣ್ಣ ವ್ಯಾಪಾರಿಗಳಿಗೆ ದಿನಕ್ಕೆ 5,000 ರೂಪಾಯಿ ಸಾಲ ನೀಡುವಾಗಲೇ 500 ರೂಪಾಯಿ ಹಿಡಿದುಕೊಳ್ಳುತ್ತಾರೆ. ಸಂಜೆ 5,000 ರೂಪಾಯಿ ವಾಪಸ್‌ ಮಾಡಬೇಕಾಗುತ್ತದೆ. ಕಿರುಕುಳ ನೀಡುವುದಕ್ಕೆ, ಬಡವರ ರಕ್ತ ಹೀರುವುದಕ್ಕೆ ಹೊಸ ಕಾಯ್ದೆಯಿಂದ ಕಡಿವಾಣ ಬೀಳಲಿದೆ ಎಂದು ತಿಳಿಸಿದರು.

ಈ ವೇಳೆ ಮಾತನಾಡಿದ ಪ್ರತಿಪಕ್ಷ ನಾಯಕ ಆರ್‌.ಅಶೋಕ್, ಸರ್ಕಾರ ಮಸೂದೆ ಮಂಡಿಸಿರುವುದು ರೈಲು ಹೋದ ಮೇಲೆ ಟಿಕೆಟ್‌ ಪಡೆದ ಹಾಗೆ ಆಗಿದೆ. ಸರ್ಕಾರ ಮೊದಲೇ ಎಚ್ಚೆತ್ತುಕೊಳ್ಳಬೇಕಿತ್ತು. ಇದ್ದ ಕಾನೂನು ಬಳಸಿ ಕಿರುಕುಳ ನೀಡುತ್ತಿದ್ದವರನ್ನು ಶಿಕ್ಷೆಗೆ ಗುರಿಪಡಿಸಿದ್ದರೆ 30 ಜನರ ಪ್ರಾಣ ಉಳಿಸಬಹುದಿತ್ತು ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಹೆಚ್‌.ಕೆ ಪಾಟೀಲ್, ಹೊಸ ಮಸೂದೆಯಲ್ಲಿ ದಂಡ ಮತ್ತು ಶಿಕ್ಷೆ ಪ್ರಮಾಣ ಹೆಚ್ಚಿಸಲಾಗಿದೆ. ದಂಡ ಮೊತ್ತ 1,000 ರೂಪಾಯಿಯಿಂದ 10 ಸಾವಿರ ರೂಪಾಯಿ ಮತ್ತು 6 ತಿಂಗಳವರೆಗೆ ಶಿಕ್ಷೆ ಇತ್ತು. ಈಗ ದಂಡವನ್ನು 5 ಲಕ್ಷ ರೂಪಾಯಿ ಮತ್ತು ಜೈಲು ಶಿಕ್ಷೆಯನ್ನು 10 ವರ್ಷದವರೆಗೆ ಹೆಚ್ಚಿಸಲಾಗಿದೆ ಎಂದು ತಿಳಿಸಿದರು.

ಚರ್ಚೆಯಲ್ಲಿ ಜೆಡಿಎಸ್‌ನ ಹೆಚ್‌.ಟಿ.ಕೃಷ್ಣಪ್ಪ, ಕಾಂಗ್ರೆಸ್‌ನ ಲಕ್ಷ್ಮಣ ಸವದಿ ಭಾಗವಹಿಸಿದ್ದರು.

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಮಂಡಿಸಿದ ಗ್ರೇಟರ್ ಬೆಂಗಳೂರು ಮಸೂದೆ ಕುರಿತು ಸದನದಲ್ಲಿ ಸುದೀರ್ಘ ಚರ್ಚೆ ನಡೆಯಿತು.

ಬಿಜೆಪಿ ಹಲವು ಸದಸ್ಯರು ಮಸೂದೆಯನ್ನು ವಿರೋಧಿಸಿದರು. ಬಿಬಿಎಂಪಿಯನ್ನು ವಿಭಜಿಸುವುದಾದರೆ ಸಂಪನ್ಮೂಲದ ಸಮಾನ ಹಂಚಿಕೆ ಮತ್ತು ಅಧಿಕಾರ ವಿಕೇಂದ್ರೀಕರಣಕ್ಕೆ ಆದ್ಯತೆ ನೀಡುವಂತೆ ಸಲಹೆ ನೀಡಿದರು. ಬಿಜೆಪಿಯ ಎಸ್‌.ಟಿ ಸೋಮಶೇಖರ್ ಮಸೂದೆಯನ್ನು ಬೆಂಬಲಿಸಿದರು.

ವಿರೋಧ ಪಕ್ಷಗಳ ಸದಸ್ಯರ ಪ್ರಶ್ನೆಗಳಿಗೆ ಉತ್ತರಿಸಿದ ಡಿ.ಕೆ ಶಿವಕುಮಾರ್, “ಬೆಂಗಳೂರಿನ ಬೆಳವಣಿಗೆಯನ್ನು ತಡೆಯಲು ಸಾಧ್ಯವಿಲ್ಲ. ಬಿಬಿಎಂಪಿ ಈಗ ಇರುವ ಸ್ಥಿತಿಯಲ್ಲಿ ಆಡಳಿತ ನಡೆಸಲೂ ಸಾಧ್ಯವಿಲ್ಲ. ನಾವು ಬಿಬಿಎಂಪಿಯನ್ನು ಛಿದ್ರಗೊಳಿಸುತ್ತಿಲ್ಲ, ಗಟ್ಟಿಗೊಳಿಸುತ್ತಿದ್ದೇವೆ” ಎಂದು ಸಮರ್ಥಿಸಿಕೊಂಡರು.

ಪರ-ವಿರೋಧ ಚರ್ಚೆಯ ಬಳಿಕ ಸಭಾಧ್ಯಕ್ಷ ಯು.ಟಿ ಖಾದರ್ ಅವರು ಮಸೂದೆಯ ಅಂಗೀಕಾರದ ಪ್ರಸ್ತಾವವನ್ನು ಧ್ವನಿಮತಕ್ಕೆ ಹಾಕಲು ಮುಂದಾದರು. ಈ ವೇಳೆ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಸಭಾತ್ಯಾಗ ಮಾಡಿದರು. ಗದ್ದಲದ ನಡುವೆಯೇ ಮಸೂದೆ ಅಂಗೀಕಾರಗೊಂಡಿತು.

ಮೈಕ್ರೋ ಫೈನಾನ್ಸ್ ಮಸೂದೆ :

ಕೆಳ ತಿಂಗಳ ಹಿಂದೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಜನರು ಮನೆ ಬಿಟ್ಟು ಹೋಗುವುದು, ಆತ್ಮಹತ್ಯೆಗೆ ಶರಣಾಗುತ್ತಿರುವ ಬಗ್ಗೆ ವರದಿಯಾಗಿತ್ತು. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲ ಹಂತದಲ್ಲಿ ಕೆಲ ಮೈಕ್ರೋ ಫೈನಾನ್ಸ್ ಕಂಪನಿಗಳ ಮುಖ್ಯಸ್ಥರ ಜೊತೆ ಸಭೆ ನಡೆಸಿ ಸಾಲ ಪಡೆದವರಿಗೆ ಕಿರುಕುಳ ಕೊಡದಂತೆ ತಾಕೀತು ಮಾಡಿದ್ದರು.

ನಂತರ, ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಲಗಾಮು ಹಾಕಲು ಸರ್ಕಾರ ಸುಗ್ರಿವಾಜ್ಞೆ ತಂದಿತು. ಅದನ್ನು ಅನುಮೋದನೆಗಾಗಿ ರಾಜ್ಯಪಾಲರಿಗೆ ಕಳಿಸಿದಾಗ, ರಾಜ್ಯಪಾಲರು ಕೆಲ ಕಾರಣಗಳನ್ನು ನೀಡಿ ವಾಪಸ್ ಮಾಡಿದ್ದರು. ಸರ್ಕಾರ ರಾಜ್ಯಪಾಲರು ಕೋರಿದ ವಿವರಣೆಯೊಂದಿಗೆ ಸುಗ್ರಿವಾಜ್ಞೆಯನ್ನು ಮತ್ತೆ ರಾಜಭವನಕ್ಕೆ ಕಳುಹಿಸಿತ್ತು. ಅದಕ್ಕೆ ರಾಜ್ಯಪಾಲರು ಸಹಿ ಹಾಕಿದ್ದರು. ರಾಜ್ಯಪಾಲರ ಅಂಕಿತ ಬಿದ್ದ ದಿನವೇ, ಅಂದರೆ ಫೆಬ್ರವರಿ 12, 2025ರಂದು ಸರ್ಕಾರ ಗೆಜೆಟ್ ನೋಟಿಫಿಕೇಶನ್ ಮೂಲಕ ಕಾನೂನು ಜಾರಿ ಮಾಡಿತು.

ಗ್ರೇಟರ್ ಬೆಂಗಳೂರು ಮಸೂದೆ :

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ವಿಭಜಿಸುವ ಗ್ರೇಟರ್ ಬೆಂಗಳೂರು ಮಸೂದೆ ಮಂಡನೆಗೂ ಮುನ್ನ, ಅದರ ಪರಿಶೀಲನೆಗಾಗಿ ಶಿವಾಜಿನಗರ ಶಾಸಕ ರಿಝ್ವಾನ್ ಅರ್ಷದ್ ಅವರ ನೇತೃತ್ವದಲ್ಲಿ ವಿಧಾನಮಂಡಲದ ಜಂಟಿ ಪರಿಶೀಲನಾ ಸಮಿತಿಯನ್ನು ರಚಿಸಲಾಗಿತ್ತು.

ಈ ಸಮಿತಿ ಮಸೂದೆ ಸಂಬಂಧ ಸಾರ್ವಜನಿಕರು, ಜನಪ್ರತಿನಿಧಿಗಳ ಅಭಿಪ್ರಾಯಗಳನ್ನು ಪಡೆದು, ಕೆಲ ತಿದ್ದುಪಡಿಗಳೊಂದಿಗೆ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಆ ತಿದ್ದುಪಡಿಗಳನ್ನು ಪರಿಗಣಿಸಿ ಸರ್ಕಾರ ಮಸೂದೆ ಮಂಡಿಸಿ ಅಂಗೀಕಾರ ಪಡೆದುಕೊಂಡಿದೆ.

ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಅಮಿತ್ ಶಾ ಜೊತೆ ಸಭೆ ನಡೆಸಲಿರುವ ಬಿಜೆಪಿ ಭಿನ್ನಮತೀಯ ಬಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...