Homeಅಂತರಾಷ್ಟ್ರೀಯಮಧ್ಯಪ್ರಾಚ್ಯ ಉದ್ವಿಗ್ನ : ಯುಎಇ, ಬಹ್ರೇನ್‌, ಕತಾರ್, ಕುವೈತ್‌ನ ಅಮೆರಿಕ ಸೇನಾ ನೆಲೆಗಳ ಮೇಲೆ ಇರಾನ್...

ಮಧ್ಯಪ್ರಾಚ್ಯ ಉದ್ವಿಗ್ನ : ಯುಎಇ, ಬಹ್ರೇನ್‌, ಕತಾರ್, ಕುವೈತ್‌ನ ಅಮೆರಿಕ ಸೇನಾ ನೆಲೆಗಳ ಮೇಲೆ ಇರಾನ್ ಪ್ರತಿ ದಾಳಿ!

- Advertisement -
- Advertisement -

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ನಡೆಸಿದ ಜಂಟಿ ದಾಳಿಗೆ ಪ್ರತಿಯಾಗಿ, ಇರಾನ್ ಅಮೆರಿಕದ ಮಿಲಿಟರಿ ನೆಲೆಗಳಿರುವ ಹಲವು ಅರಬ್ ರಾಷ್ಟ್ರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ ಎಂದು ವರದಿಯಾಗಿದೆ.

ಇರಾನ್ ಉಡಾಯಿಸಿದ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಯುಎಇ ತಡೆಹಿಡಿದಿದೆ. ಅಬುದಾಬಿಯ ವಸತಿ ಪ್ರದೇಶದಲ್ಲಿ ಕ್ಷಿಪಣಿಯ ಅವಶೇಷಗಳು ಬಿದ್ದಿದ್ದರಿಂದ ಏಷ್ಯಾದ ಓರ್ವ ನಾಗರಿಕ ಸಾವನ್ನಪ್ಪಿದ್ದಾರೆ ಎಂದು ವರದಿಗಳು ಹೇಳಿವೆ.

ಬಹ್ರೇನ್‌ನಲ್ಲಿರುವ ಅಮೆರಿಕ ನೌಕಾಪಡೆಯ 5ನೇ ಫ್ಲೀಟ್ ಪ್ರಧಾನ ಕಚೇರಿಯನ್ನು ಗುರಿಯಾಗಿಸಿ ಇರಾನ್ ದಾಳಿ ಮಾಡಿದೆ. ಬಹ್ರೇನ್‌ನಲ್ಲಿ ವಾಯುದಾಳಿ ಸೈರನ್‌ಗಳು ಮೊಳಗಿವೆ.

ಅಮೆರಿಕದ ಸೈನ್ಯವಿರುವ ಕುವೈತ್‌ನ ಅಲ್-ಸಲೇಂ ವಾಯುನೆಲೆ ಮತ್ತು ಕ್ಯಾಂಪ್ ಆರಿಫ್ಜನ್ ಮೇಲೆ ದಾಳಿ ನಡೆದಿದೆ ಎಂದು ವರದಿಯಾಗಿದೆ. ಅಮೆರಿಕದ ಅತಿದೊಡ್ಡ ವಾಯುನೆಲೆಯಾದ ಕತಾರ್‌ನ ಅಲ್-ಉದೈದ್ ಮೇಲೆ ಕ್ಷಿಪಣಿ ದಾಳಿ ನಡೆದಿದ್ದು, ಕತಾರ್ ರಕ್ಷಣಾ ಸೇನೆ ಅವುಗಳನ್ನು ತಡೆಹಿಡಿದಿದೆ.

ಸೌದಿ ಅರೇಬಿಯಾ ಈ ದಾಳಿಗಳನ್ನು ತೀವ್ರವಾಗಿ ಖಂಡಿಸಿದ್ದು, ಇವು ಪ್ರಾದೇಶಿಕ ಭದ್ರತೆಯ ಉಲ್ಲಂಘನೆ ಎಂದು ಕರೆದಿದೆ.

ಹೆಚ್ಚಿನ ಅರಬ್ ರಾಷ್ಟ್ರಗಳು ಈ ದಾಳಿಯನ್ನು ತಮ್ಮ ಸಾರ್ವಭೌಮತ್ವದ ಮೇಲಿನ ದಾಳಿ ಎಂದು ಹೇಳಿವೆ. ಮುನ್ನೆಚ್ಚರಿಕಾ ಕ್ರಮವಾಗಿ ಯುಎಇ, ಕತಾರ್, ಇರಾಕ್, ಜೋರ್ಡಾನ್ ಮತ್ತು ಬಹ್ರೇನ್ ದೇಶಗಳು ತಮ್ಮ ವಾಯುಪ್ರದೇಶವನ್ನು ತಾತ್ಕಾಲಿಕವಾಗಿ ಮುಚ್ಚಿವೆ.

ಇಸ್ರೇಲ್ ಮೇಲೆ ದಾಳಿ

ಇರಾನ್ ಇಸ್ರೇಲ್ ಮೇಲೂ ಭಾರೀ ಕ್ಷಿಪಣಿ ಮತ್ತು ಡ್ರೋನ್ ದಾಳಿಯನ್ನು ಆರಂಭಿಸಿದೆ ಎಂದು ವರದಿಯಾಗಿದೆ.

ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ನಡೆಸಿದ “ಆಪರೇಷನ್ ಎಪಿಕ್ ಫ್ಯೂರಿ” ಗೆ ಪ್ರತಿಯಾಗಿ, ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಇಸ್ರೇಲ್ ಮೇಲೆ ಮೊದಲ ಹಂತದ ಕ್ಷಿಪಣಿ ಮತ್ತು ಡ್ರೋನ್ ದಾಳಿ ನಡೆಸುತ್ತಿರುವುದಾಗಿ ಅಧಿಕೃತವಾಗಿ ಘೋಷಿಸಿದೆ.

ಇರಾನ್‌ನಿಂದ ಕ್ಷಿಪಣಿಗಳು ಬರುತ್ತಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ ಇಸ್ರೇಲ್‌ನಾದ್ಯಂತ ವಾಯುದಾಳಿ ಸೈರನ್‌ಗಳು ಮೊಳಗುತ್ತಿವೆ. ಎನ್‌ಡಿಟಿವಿ ವರದಿಯ ಪ್ರಕಾರ, ಟೆಲ್ ಅವೀವ್ ಸೇರಿದಂತೆ ಹಲವು ನಗರಗಳಲ್ಲಿ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ.

ಸಂಭವನೀಯ ಭಾರಿ ದಾಳಿಯನ್ನು ಎದುರಿಸಲು ಇಸ್ರೇಲ್ ಸರ್ಕಾರವು ದೇಶದಾದ್ಯಂತ ‘ಸ್ಟೇಟ್ ಆಫ್ ಎಮರ್ಜೆನ್ಸಿ’ (ತುರ್ತು ಪರಿಸ್ಥಿತಿ) ಘೋಷಿಸಿದೆ. ಅಲ್ಲದೆ, ಯುದ್ಧದ ಭೀತಿಯಿಂದ ತನ್ನ ವಾಯುಪ್ರದೇಶವನ್ನು ಎಲ್ಲಾ ನಾಗರಿಕ ವಿಮಾನ ಸಂಚಾರಕ್ಕೆ ಸ್ಥಗಿತಗೊಳಿಸಿದೆ.

ಇರಾನ್ ಉಡಾಯಿಸಿರುವ ಕ್ಷಿಪಣಿಗಳನ್ನು ಆಕಾಶದಲ್ಲೇ ಹೊಡೆದುರುಳಿಸಲು ಇಸ್ರೇಲ್‌ನ ‘ಐರನ್ ಡೋಮ್’ ಮತ್ತು ಅಮೆರಿಕದ ರಕ್ಷಣಾ ವ್ಯವಸ್ಥೆಗಳು ಕಾರ್ಯಪ್ರವೃತ್ತವಾಗಿವೆ.

ಪರಿಸ್ಥಿತಿಯು ಕ್ಷಣಕ್ಷಣಕ್ಕೂ ಬದಲಾಗುತ್ತಿದ್ದು, ಮಧ್ಯಪ್ರಾಚ್ಯದಲ್ಲಿ ಪೂರ್ಣ ಪ್ರಮಾಣದ ಯುದ್ಧದ ಭೀತಿ ಎದುರಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....