Homeಚಳವಳಿ#MigrantLivesStillMatter: ವಲಸೆ ಕಾರ್ಮಿಕರ ಗೋಳು ಕೇಳಿ - ಟ್ವಿಟ್ಟರ್ ಅಭಿಯಾನ

#MigrantLivesStillMatter: ವಲಸೆ ಕಾರ್ಮಿಕರ ಗೋಳು ಕೇಳಿ – ಟ್ವಿಟ್ಟರ್ ಅಭಿಯಾನ

ಯಾವುದೇ ಯೋಜನೆ ಕೈಗೊಳ್ಳದೆ ಏಕಾಏಕಿ ಲಾಕ್‌ಡೌನ್ ಘೋಷಣೆ ಮಾಡಿ ಸಾವಿರಾರು ವಲಸೆ ಕಾರ್ಮಿಕರ ಸಾವಿಗೆ ಕೇಂದ್ರ ಕಾರಣವಾಗಿದೆ. ಆದರೆ ಈ ಕುರಿತು ಮಾಹಿತಿಯಿಲ್ಲದ ಕಾರಣ ಪರಿಹಾರ ಸಹ ಇಲ್ಲ ಎಂದು ಕೇಂದ್ರ ಕೈಚೆಲ್ಲಿ ಕುಳಿತಿದೆ ಎಂದು ಸಾಮಾಜಿಕ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಕೊರೊನಾ ಸಾಂಕ್ರಮಿಕ ದೇಶಕ್ಕೆ ಅಪ್ಪಳಿಸಿದ ಮೇಲೆ ಕೇಂದ್ರ ಸರ್ಕಾರ ಏಕಾಏಕಿ ಘೋಷಣೆ ಮಾಡಿದ ಲಾಕ್‌ಡೌನ್‌ನಿಂದ ಆದ ದುಷ್ಪರಿಣಾಮಗಳು, ಪಿಎಂ ನಿಧಿಯ ವಿವರಗಳು, ವಲಸೆ ಕಾರ್ಮಿಕರ ಬಗ್ಗೆ ಗಮನ ಹರಿಸದ ಸರ್ಕಾರದ ವಿರುದ್ಧ ಟ್ವಿಟ್ಟರ್ ಅಭಿಯಾನ ಶುರುವಾಗಿದೆ. ಇಂದು ಸಂಜೆ 7 ಗಂಟೆಯಿಂದ #MigrantLivesStillMatter ಹ್ಯಾಶ್‌ಟ್ಯಾಗ್ ಅಡಿಯಲ್ಲಿ ಅಭಿಯಾನ ನಡೆಯಲಿದೆ ಎಂದು Migrant Workers Solidarity Network ತಿಳಿಸಿದೆ.

ಕೊರೊನಾ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಲಾಕ್‌ಡೌನ್ ಘೋಷಣೆ ಮಾಡಿ ಆರು ತಿಂಗಳು ಕಳೆದಿದೆ. ಯಾವುದೇ ಮುನ್ನೆಚ್ಚರಿಕಾ ಕ್ರಮಗಳಿಲ್ಲದೇ, ಯಾವುದೇ ಯೋಜನೆ ಕೈಗೊಳ್ಳದೆ ಏಕಾಏಕಿ ಲಾಕ್‌ಡೌನ್ ಘೋಷಣೆ ಮಾಡಿ ಸಾವಿರಾರು ವಲಸೆ ಕಾರ್ಮಿಕರ ಸಾವಿಗೆ ಕೇಂದ್ರ ಕಾರಣವಾಗಿದೆ. ಆದರೆ ಈ ಕುರಿತು ಮಾಹಿತಿಯಿಲ್ಲದ ಕಾರಣ ಪರಿಹಾರ ಸಹ ಇಲ್ಲ ಎಂದು ಕೇಂದ್ರ ಕೈಚೆಲ್ಲಿ ಕುಳಿತಿದೆ ಎಂದು ಸಾಮಾಜಿಕ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: NEP ಜಾರಿ ಕರ್ನಾಟಕದಲ್ಲಿಯೇ ಮೊದಲು ಎಂದ ಡಿಸಿಎಂ: ಟ್ವಿಟ್ಟರ್‌ನಲ್ಲಿ ‘#RejectNEP2020’ ಟ್ರೆಂಡ್‌

ಆರು ತಿಂಗಳು ಕಳೆದರು ಈ ದುರ್ಘಟನೆಗಳಿಗೆ ಯಾವುದೇ ಪರಿಹಾರ ಸಿಕ್ಕಿಲ್ಲ. ವಲಸೆ ಕಾರ್ಮಿಕರ ಜೀವನೋಪಾಯಕ್ಕೆ ಸರ್ಕಾರ ಯಾವುದೇ ಹೆಜ್ಜೆ ಮುಂದಿಡುತ್ತಿಲ್ಲ. ಅವರಿಗೆ ಸೂಕ್ತ ಮೂಲಸೌಕರ್ಯಗಳನ್ನು ಸಹ ಸರ್ಕಾರ ನೀಡಿಲ್ಲ. ಪಿಎಂ ನಿಧಿ ಬಗ್ಗೆ ಈವರೆಗೆ ಯಾರಿಗೂ ಮಾಹಿತಿ ನೀಡುತ್ತಿಲ್ಲ. ಕೊರೊನಾ ಕಾರಣದಿಂದ ಕಷ್ಟದಲ್ಲಿರುವವರ ಸಹಾಯಕ್ಕೆ ಎಂದು ಕೋಟ್ಯಾಂತರ ಜನ ಕೋಟ್ಯಾಂತರ ರೂಪಾಯಿಗಳನ್ನು ದಾನ ನೀಡಿದ್ದಾರೆ ಆದರೆ ಅದರ ಬಗ್ಗೆ ಕೇಂದ್ರ ಸರ್ಕಾರ ತುಟಿಕ್ ಪಿಟಿಕ್ ಎನ್ನುತ್ತಿಲ್ಲ ಎಂದು ಸಾಮಾಜಿಕ ಕಾರ್ಯಕರ್ತರು ದೂರಿದ್ದಾರೆ.

ಇತ್ತ ಮಾಧ್ಯಮಗಳು ಜನರ ಜೀವನೋಪಾಯಕ್ಕೆ ಸಂಬಂಧಿಸಿದ ಸಮಸ್ಯೆಗಳಿಂದ ಜನಸಾಮಾನ್ಯರನ್ನು ಬೇರೆಡೆಗೆ ತಿರುಗಿಸುವ ಕೆಲಸ ಮಾಡುತ್ತಿದ್ದು, ವಾಸ್ತವದ ಸಮಸ್ಯೆಗಳನ್ನು ಮರೆಮಾಚುತ್ತಿವೆ. ಈ ಎಲ್ಲಾ ವಿಚಾರಗಳ ವಿರುದ್ಧ ಪ್ರತಿಭಟಿಸಲು ಟ್ವಿಟ್ಟರ್ ಅಭಿಯಾನ ಕೈಗೊಂಡಿದೆ. 7 ಗಂಟೆಯಿಂದ #MigrantLivesStillMatter ಹ್ಯಾಶ್‌ಟ್ಯಾಗ್ ಬಳಸಿ ಟ್ವೀಟ್ ಮಾಡಲು Migrant Workers Solidarity Network ಮನವಿ ಮಾಡಿದೆ.


ಇದನ್ನೂ ಓದಿ: ಟ್ವಿಟ್ಟರ್‌ನಲ್ಲಿ ಟ್ರೆಂಡ್ ಆಯ್ತು #NoMoreBJP, #unemploymentday

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...