Homeಮುಖಪುಟನಾಲ್ವರು ಮಕ್ಕಳ ಜೊತೆಗೆ ರೈಲಿನ ಹಳಿಗಳ ಮೇಲೆ ಸಾವಿಗೀಡಾದ ವಲಸೆ ಕಾರ್ಮಿಕ

ನಾಲ್ವರು ಮಕ್ಕಳ ಜೊತೆಗೆ ರೈಲಿನ ಹಳಿಗಳ ಮೇಲೆ ಸಾವಿಗೀಡಾದ ವಲಸೆ ಕಾರ್ಮಿಕ

ಎಕ್ಸ್‌ಪ್ರೆಸ್ ವೇಗವಾಗಿ ಬರುತ್ತಿರುವುದನ್ನು ನೋಡಿ ತಮ್ಮನ್ನು ಬಿಡುವಂತೆ ಕೇಳಿಕೊಂಡರೂ ಬಿಡಲು ನಿರಾಕರಿಸಿದ ತಂದೆ!

- Advertisement -
- Advertisement -

36 ವರ್ಷದ ವ್ಯಕ್ತಿಯೊಬ್ಬ ತನ್ನ ನಾಲ್ವರು ಗಂಡು ಮಕ್ಕಳನ್ನು ರೈಲ್ವೆ ಹಳಿಗಳಿಗೆ ಕರೆದೊಯ್ದು ಒಟ್ಟಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಮಧ್ಯಾಹ್ನ ಹರಿಯಾಣದ ಫರಿದಾಬಾದ್‌ನ ಬಲ್ಲಭಗಢದಲ್ಲಿ ನಡೆದಿದೆ. ಸಾವಿಗೀಡಾದ ಮಕ್ಕಳಲ್ಲಿ ಅತ್ಯಂತ ಕಿರಿಯ ಮಗುವಿಗೆ ಮೂರು ವರ್ಷವಾಗಿದ್ದರೆ, ಹಿರಿಯ ಮಗನಿಗೆ ಒಂಬತ್ತು ವರ್ಷವಾಗಿತ್ತು. ವ್ಯಕ್ತಿಯು ಎಕ್ಸ್‌ಪ್ರೆಸ್ ರೈಲು ಹಾದು ಹೋಗುವವರೆಗೂ ಮಕ್ಕಳ ತೋಳುಗಳನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದರು ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ. ನಾಲ್ವರು ಮಕ್ಕಳ ಜೊತೆಗೆ

ವ್ಯಕ್ತಿಯನ್ನು ಬಿಹಾರ ಮೂಲದ ಮನೋಜ್ ಮೆಹ್ತೋ ಎಂದು ಗುರುತಿಸಲಾಗಿದೆ. ಗೋಲ್ಡನ್ ಟೆಂಪಲ್ ಎಕ್ಸ್‌ಪ್ರೆಸ್ ಹಳಿಗಳ ಮೇಲೆ ವೇಗವಾಗಿ ಬರುತ್ತಿರುವುದನ್ನು ಕಂಡು, ತಮ್ಮನ್ನು ಬಿಡುವಂತೆ ಮಕ್ಕಳು ಕೇಳಿಕೊಂಡರೂ ಮನೋಜ್ ಅವರನ್ನು ಬಿಡಲು ನಿರಾಕರಿಸಿದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ ಎಂದು ವರದಿ ಹೇಳಿದೆ. ದಿನಗೂಲಿ ಕಾರ್ಮಿಕನಾಗಿದ್ದ ಮನೋಜ್‌ ತನ್ನ ಮತ್ತು ತನ್ನ ಮಕ್ಕಳ ಜೀವನವನ್ನು ಕೊನೆಗೊಳಿಸಲು ಏಕೆ ನಿರ್ಧರಿಸಿದನೆಂದು ಸ್ಪಷ್ಟವಾಗಿಲ್ಲ ಎಂದು ವರದಿ ಉಲ್ಲೇಖಿಸಿದೆ.

“ಮುಂಬೈನಿಂದ ಬರುತ್ತಿದ್ದ ರೈಲು ಮಧ್ಯಾಹ್ನ 1.10 ರ ಸುಮಾರಿಗೆ ಐವರನ್ನು ಬಲಿ ಪಡೆದಿದೆ” ಎಂದು ಸರ್ಕಾರಿ ರೈಲ್ವೆ ಪೊಲೀಸ್ ಘಟಕದ ಎಸ್‌ಎಚ್‌ಒ ರಾಜ್‌ಪಾಲ್ ಹೇಳಿದ್ದಾರೆ. ಸುಭಾಷ್ ಕಾಲೋನಿ ಬಳಿ ವಾಸಿಸುತ್ತಿದ್ದ ಮನೋಜ್‌ ಮಧ್ಯಾಹ್ನ 12.15 ರ ಸುಮಾರಿಗೆ ಮನೆಯಿಂದ ಹೊರಡುವಾಗ ತನ್ನ ಪತ್ನಿ ಪ್ರಿಯಾಗೆ ಮಕ್ಕಳನ್ನು ಆಟವಾಡಲು ಹತ್ತಿರದ ಉದ್ಯಾನವನಕ್ಕೆ ಕರೆದೊಯ್ಯುತ್ತಿದ್ದೇನೆ ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ.

ಮಕ್ಕಳನ್ನು ಫ್ಲೈಓವರ್ ಕೆಳಗೆ ನಿಲ್ಲಿಸಿ ಅವರಿಗೆ ಚಿಪ್ಸ್, ಕೋಲಾ ಕೂಡಾ ಖರೀದಿಸಿದ್ದರು. ಅದಾಗ್ಯೂ, ತನ್ನ ನಾಲ್ವರು ಮಕ್ಕಳನ್ನು ಆಟವಾಡಲು ಉದ್ಯಾನವನಕ್ಕೆ ಕರೆದೊಯ್ಯುವ ಬದಲು ಮನೋಜ್ ಅವರನ್ನು ರೈಲ್ವೆ ಹಳಿಗಳ ಬಳಿಗೆ ಕರೆದೊಯ್ದಿದ್ದನು. ಅಷ್ಟೆ ಅಲ್ಲದೆ, ಎಲ್ಸನ್ ಚೌಕ್ ಫ್ಲೈಓವರ್ ಕೆಳಗೆ ಸುಮಾರು ಒಂದು ಗಂಟೆ ಕುಳಿತು ರೈಲು ಬರುವವರೆಗೆ ಅವರಿಗೆ ಕಾಯುತ್ತಿದ್ದರು ಎಂದು ವರದಿಗಳು ಹೇಳಿವೆ.

ಘಟನೆಯ ನಂತರ, ಲೋಕೋ ಪೈಲಟ್ ಬಲ್ಲಭಗಢ ನಿಲ್ದಾಣದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಮನೋಜ್ ಅವರ ಆಧಾರ್ ಕಾರ್ಡ್ ಮೂಲಕ ಗುರುತಿಸಿದ್ದರು. ಅವರ ಜೇಬಿನಲ್ಲಿರುವ ಚಿಟ್‌ನಲ್ಲಿ ಅವರ ಪತ್ನಿಯ ಫೋನ್ ಸಂಖ್ಯೆಯನ್ನು ಬರೆದಿರುವುದು ಕಂಡುಬಂದಿತ್ತು. ಈ ಎಲ್ಲಾ ಮಾಹಿತಿಗಳು ಅವರ ಕೃತ್ಯಗಳು ಪೂರ್ವಯೋಜಿತವೆಂದು ಸೂಚಿಸುತ್ತದೆ ಎಂದು ವರದಿ ಹೇಳಿದೆ.

“ಒಬ್ಬ ಮಹಿಳೆ ಮತ್ತು ಆಕೆಯ ಮಕ್ಕಳು ರೈಲಿನ ಮುಂದೆ ಹಾರಿದ್ದಾರೆ ಎಂದು ನಮಗೆ ಆರಂಭದಲ್ಲಿ ಮಾಹಿತಿ ಬಂದಿತು. ಆದರೆ ನಾವು ಸ್ಥಳಕ್ಕೆ ತಲುಪಿದಾಗ, ತಂದೆ ಮತ್ತು ಅವರ ಪುತ್ರರು ಹಳಿಗಳ ಮೇಲೆ ಸಿಲುಕಿದ್ದಾರೆ ಎಂದು ನಮಗೆ ತಿಳಿದುಬಂದಿದೆ” ಎಂದು ಜಿಆರ್‌ಪಿ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಮನೋಜ್ ಪತ್ನಿ ಪ್ರಿಯಾ ಅವರಿಗೆ ಕರೆ ಮಾಡಿದಾಗ, ತನ್ನ ಪತಿ ಮಕ್ಕಳನ್ನು ಉದ್ಯಾನವನಕ್ಕೆ ಕರೆದೊಯ್ದಿದ್ದು, ಶೀಘ್ರದಲ್ಲೇ ಮನೆಗೆ ಹಿಂತಿರುಗುತ್ತಾರೆ ಎಂದು ಜಿಆರ್‌ಪಿ ಸಿಬ್ಬಂದಿಗೆ ತಿಳಿಸಿದ್ದಾರೆ. ನಂತರ ಅವರನ್ನು ಸ್ಥಳಕ್ಕೆ ಬರುವಂತೆ ಕೇಳಿಕೊಂಡಿದ್ದು, ಅಲ್ಲಿ ಅವರು ಗಂಡ ಮತ್ತು ಮಕ್ಕಳ ಶವಗಳನ್ನು ನೋಡಿ ಮೂರ್ಛೆ ಹೋದರು ಎಂದು ವರದಿ ತಿಳಿಸಿದೆ.

ಶವಪರೀಕ್ಷೆಗಾಗಿ ಬಾದ್‌ಶಾ ಖಾನ್ ಸಿವಿಲ್ ಆಸ್ಪತ್ರೆಯ ಶವಾಗಾರಕ್ಕೆ ಮೃತದೇಹಗಳನ್ನು ಕೊಂಡೊಯ್ಯಲಾಗಿದೆ.

ಮನೋಜ್ ಏಕೆ ಇಂತಹ ನಿರ್ಧಾರ ಕೈಗೊಂಡರು ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರ ವಿವಾಹದ ವೇಳೆ ತೊಂದರೆಯಾಗಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿದ್ದು, ಆದರೆ ಅದಕ್ಕೂ ಇದಕ್ಕೂ ಸಂಬಂಧವಿದೆಯೇ ಎಂಬುದು ಸ್ಪಷ್ಟವಾಗಿಲ್ಲ.

“ಮನೋಜ್ ಅವರ ಮನಸ್ಥಿತಿ ಮತ್ತು ಅಂತಹ ನಿರ್ಧಾರ ಕೈಗೊಳ್ಳಲು ಏನು ಕಾರಣ ಎಂಬುವುದು ಕಂಡುಕೊಳ್ಳುವುದು ಈಗ ಆದ್ಯತೆಯಾಗಿದೆ. ಜೊತೆಗೆ ದುಃಖಿತ ಕುಟುಂಬದ ಜೊತೆಗೆ ನಿಲ್ಲುವುದು ಕೂಡಾ ಸಹ ಮುಖ್ಯವಾಗಿದೆ.” ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ನಾಲ್ವರು ಮಕ್ಕಳ ಜೊತೆಗೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗುಜರಾತ್‌ | ಇ-ಕೆವೈಸಿ ಲೋಪ; ಪಡಿತರವಿಲ್ಲದೆ ಬಳಲುತ್ತಿರುವ 10 ಲಕ್ಷ ಜನರು

ಗುಜರಾತ್‌ | ಇ-ಕೆವೈಸಿ ಲೋಪ; ಪಡಿತರವಿಲ್ಲದೆ ಬಳಲುತ್ತಿರುವ 10 ಲಕ್ಷ ಜನರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...