Homeಕರ್ನಾಟಕಬೆಂಗಳೂರಿನ ಅರಮನೆ ಮೈದಾನದಲ್ಲಿ ಸಾಲುಗಟ್ಟಿ ನಿಂತ ವಲಸೆ ಕಾರ್ಮಿಕರು

ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಾಲುಗಟ್ಟಿ ನಿಂತ ವಲಸೆ ಕಾರ್ಮಿಕರು

- Advertisement -
- Advertisement -

ಬೆಂಗಳೂರಿನ ಅರಮನೆ ಮೈದಾನದಲ್ಲಿ ತಮ್ಮ ರಾಜ್ಯಗಳಿಗೆ ಹೋಗಲು ವಲಸೆ ಕಾರ್ಮಿಕರು ಸಾಲುಗಟ್ಟಿ ನಿಂತಿರುವುದನ್ನು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಒಡಿಶಾದ ತಮ್ಮ ಊರುಗಳಿಗೆ ಪ್ರಯಾಣಿಸಲು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಬೆಂಗಳೂರಿನ ಅರಮನೆ ಮೈಧಾನದಲ್ಲಿ ವಲಸೆ ಕಾರ್ಮಿಕರು ಸರತಿ ಸಾಲುಗಳಲ್ಲಿ ನಿಂತಿರುವುದು ಕಂಡು ಬಂದಿದೆ.

ಮೇ 18 ರಂದು ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯದಲ್ಲಿ ರೈಲು ಸಂಚಾರಕ್ಕೆ ಅವಕಾಶ ನೀಡುತ್ತೇವೆ ಎಂದು ತಿಳಿಸಿದ್ದರು. ಅಲ್ಲದೆ ಕೇಂದ್ರ ಸರ್ಕಾರ ವಲಸೆ ಕಾರ್ಮಿಕರಿಗೆ “ಶ್ರಮಿಕ್” ವಿಶೇಷ ರೈಲುಗಳ ಸಂಚಾರಕ್ಕೆ ಅನುಮತಿ ನೀಡಿದೆ.

ಅಲ್ಲದೆ ಮೇ 21 ರಿಂದ ರೈಲು ಬುಕಿಂಗ್ ಪ್ರಾಂಭವಾಗಿದ್ದು, ಜೂನ್‌ 1 ರಿಂದ ಸಂಚರಿಸುವ ರೈಲುಗಳ ಪಟ್ಟಿಯನ್ನು ರೈಲ್ವೆ ಇಲಾಖೆಯು ಬಿಡುಗಡೆ ಮಾಡಿದೆ. ಆನ್‌ಲೈನ್‌ ಮೂಲಕ ಟಿಕೆಟ್‌ ಬುಕಿಂಗ್‌ ಮಾಡಬಹುದಾಗಿದ್ದು. ಐಆರ್‌ಸಿಟಿಸಿ ವೆಬ್‌ಸೈಟ್ ಮೂಲಕ ಅಥವಾ ಮೊಬೈಲ್ ಆ್ಯಪ್ ಮೂಲಕ ರೈಲು ಇ-ಟಿಕೆಟ್‌ ಬುಕಿಂಗ್ ಮಾಡಿಕೊಳ್ಳಬಹುದಾಗಿದೆ.

ಗರಿಷ್ಠ 30 ದಿನಗಳ ವರೆಗೆ ಟಿಕೆಟ್‌ ಕಾಯ್ದಿರಿಸಬಹುದಾಗಿದ್ದು, ನೋಂದಣಿ ಮಾಡಿಕೊಂಡ ಟಿಕೆಟ್‌ ರದ್ದುಪಡಿಸುವುದಕ್ಕೆ ಸಂಬಂಧಿಸಿದಂತೆ ನಿಯಮ ರೂಪಿಸಲಾಗುವುದು. ಅಲ್ಲದೆ ವೆಯ್ಟಿಂಗ್‌ ಲಿಸ್ಟ್‌ ಟಿಕೆಟ್‌ ಇರುವವರು ಪ್ರಯಾಣಿಸಲು ಅವಕಾಶ ಇರುವುದಿಲ್ಲ ಎಂದು ಇಲಾಖೆ ಹೇಳಿತ್ತು.


ಓದಿ: ಬಾಲಕಿ 1200 ಕಿ.ಮಿ. ಕ್ರಮಿಸಿದ್ದು ಸುಂದರವಾದ ಸಾಧನೆಯೆಂದ ಇವಾಂಕ ಟ್ರಂಪ್: ಹಲವರ ಆಕ್ರೋಶ


 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಪೆನ್‌ಡ್ರೈವ್ ಪ್ರಕರಣ: ಎಸ್‌ಐಟಿ ರಚಿಸಲು ಕೋರಿ ಮಹಿಳಾ ಆಯೋಗದಿಂದ ಸಿಎಂಗೆ ಪತ್ರ

0
ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ವಿಶೇಷ ತಂಡ ರಚನೆ ಮಾಡುವಂತೆ ಕೋರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಅವರು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ...