Homeಕರ್ನಾಟಕವಲಸೆ ಕಾರ್ಮಿಕರಿದ್ದ ಮನೆಯ ಮೇಲ್ಛಾವಣಿ ಕುಸಿತ : ಗಂಟೆಗಟ್ಟಲೇ ಮಳೆಯಲ್ಲಿ ನೆನೆದ ಕಾರ್ಮಿಕರು..

ವಲಸೆ ಕಾರ್ಮಿಕರಿದ್ದ ಮನೆಯ ಮೇಲ್ಛಾವಣಿ ಕುಸಿತ : ಗಂಟೆಗಟ್ಟಲೇ ಮಳೆಯಲ್ಲಿ ನೆನೆದ ಕಾರ್ಮಿಕರು..

ಘಟನೆಯಿಂದ ಭಯಭೀತರಾಗಿರುವ ವಲಸೆ ಕಾರ್ಮಿಕರು ಆದಷ್ಟು ಬೇಗ ತಮ್ಮ ಸ್ವಂತ ರಾಜ್ಯಗಳಿಗೆ ತೆರಳಲು ಅವಕಾಶಮಾಡಿಕೊಡಿ ಎಂದು ಮನವಿ ಮಾಡುತ್ತಿದ್ದಾರೆ. ನಿಮ್ಮ ಕೈಮುಗಿದು ಕೇಳಿಕೊಳ್ಳುತ್ತೇವೆ, ಇಲ್ಲಿಂದ ಹೊರಡಲು ವ್ಯವಸ್ಥೆ ಮಾಡಿ ಎಂದು ಅವರ ಅವಲತ್ತುಕೊಂಡಿದ್ದಾರೆ.

- Advertisement -
- Advertisement -

ಶುಕ್ರವಾರ ಸಂಜೆ ಸುರಿದ ಭಾರೀ ಮಳೆಯಿಂದಾಗಿ ಬೆಂಗಳೂರಿನ ಅರಮನೆ ಮೈದಾನದಲ್ಲಿರುವ ಟೆನಿಸ್ ಪೆವಿಲಿಯನ್‌ ನಿರಾಶ್ರಿತ ಕೇಂದ್ರದ ಮೇಲ್ಛಾವಣಿ ಕುಸಿದು ವಲಸೆ ಕಾರ್ಮಿಕರ ಮೇಲೆ ಅಪ್ಪಳಿಸಿದೆ. ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ್ (ಎಐಸಿಸಿಟಿಯು) ಹೇಳಿಕೆಯ ಪ್ರಕಾರ, ಸುಮಾರು 100 ಪುರುಷರು, 40 ಮಹಿಳೆಯರು, 45 ಮಕ್ಕಳು ಮತ್ತು ಒಂದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಆರು ಮಕ್ಕಳು ಸ್ಥಳದಲ್ಲಿದ್ದರು ಎನ್ನಲಾಗಿದೆ.

ಇದರಿಂದಾಗಿ ಅಷ್ಟು ವಲಸೆ ಕಾರ್ಮಿಕರು ಮಳೆಯಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ನೆನೆದಿರುವ ಅಮಾನವೀಯ ಘಟನೆ ವರದಿಯಾಗಿದೆ. ಘಟನೆ ನಡೆದ ಒಂದು ಗಂಟೆಯ ನಂತರ ಬಿಎಂಟಿಸಿ ಬಸ್ಸೊಂದು ಬಂದರೂ ಸಹ ಕಾರ್ಮಿಕರನ್ನು ಸ್ಥಳಾಂತರಿಸಲು ಸಾಧ್ಯವಾಗಿಲ್ಲ. ಕಾರ್ಮಿಕರನ್ನು ತಮ್ಮ ಸಾಮಾನು ಸರಂಜಾಮುಗಳನ್ನು ತೆಗೆದುಕೊಂಡು ಬೇರೆ ಸ್ಥಳಕ್ಕೆ ಹೋಗಲು ಸಿದ್ದರಾಗಿದ್ದರು. ಅವರನ್ನು ತ್ರಿಪುರ ವಾಸಿನಿಗೆ ಸ್ಥಳಾಂತರಿಸಲು ಚಿಂತನೆ ನಡೆಸಿದ್ದರು ಸಹ ಅದೂ ಮುಚ್ಚಲ್ಪಟ್ಟಿದ್ದ ಕಾರಣ ಅವರು ಕಾಯಬೇಕಾಗಿದೆ.

ಮಳೆಯಿಂದಾಗಿ ಸಂಪೂರ್ಣವಾಗಿ ತೇವಗೊಂಡಿದ್ದ ಕಾರ್ಮಿಕರು ಹಲವು ಗಂಟೆಗಳ ಕಾಲ ಬಸ್‌ನಲ್ಲಿಯೇ ಆಶ್ರಯ ಪಡೆದಿದ್ದಾರೆ. ಅಷ್ಟೂ ಜನರು ಒಂದೇ ಬಸ್‌ನಲ್ಲಿದ್ದರಿಂದ ಯಾವುದೇ ದೈಹಿಕ ಅಂತರವನ್ನು ಕಾಯ್ದುಕೊಳ್ಳಲಾಗಿಲ್ಲ ಎನ್ನಲಾಗಿದೆ. ಆನಂತರ ಅವರನ್ನು ಸ್ಥಳಾಂತರಿಸಲಾಗಿದೆ.

ಘಟನೆಯನ್ನು ವಿವರಿಸುತ್ತಾ, ಕಾರ್ಮಿಕರೊಬ್ಬರು, “ಭಾರೀ ಮಳೆಗೆ ಮೇಲ್ಛಾವಣಿಯು ಕೆಳಗೆ ಬಿದ್ದಿತು. ಸಣ್ಣ ಮಕ್ಕಳು, ಮಹಿಳೆಯರು – ಬಹಳಷ್ಟು ಜನರು, ಅವರು ಇಲ್ಲಿ ಸಿಲುಕಿಕೊಂಡಿದ್ದಾರೆ ಎಂದು ನಾವು ಅಧಿಕಾರಿಗಳಿಗೆ ತಿಳಿಸಿದೆವು. ಉತ್ತರ ಪ್ರದೇಶ, ಚತ್ತೀಸ್‌ಘಡ, ಅಸ್ಸಾಂ, ಜಾರ್ಖಂಡ್ ಮತ್ತು ಒಡಿಶಾದ ಜನರು ಇಲ್ಲಿದ್ದಾರೆ. ಇಂದು ಈ ಜನರನ್ನು ತುರ್ತಾಗಿ ಸ್ಥಳಾಂತರಿಸುವಂತೆ ನಾವು ಸರ್ಕಾರವನ್ನು ವಿನಂತಿಸುತ್ತೇವೆ. ಇಲ್ಲಿದಿದ್ದರೆ ಇಲ್ಲಿಂದ ಕಾಲ್ನಡಿಗೆಯಲ್ಲಿ ಹೋಗಬೇಕಾಗುತ್ತದೆ ” ಎಂದು ಅವರು ಹೇಳಿದ್ದಾರೆ.

ಕೊನೆಗೂ ಸಿಕ್ಕ ಸಹಾಯ

ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಬೆಂಗಳೂರು ನಗರ ಪೊಲೀಸ್‌ ರವಿ ಕುಮಾರ್ ಆಗಮಿಸಿ, ಮೇಲ್ಛಾವಣಿ ಕುಸಿತಕ್ಕೊಳಗಾದವರು ಸುರಕ್ಷಿತವಾಗಿ ಹೊರಬರಲು ಸಹಾಯ ಮಾಡಿದ್ದಾರೆ.

“ನಾವು ಹೇಗೋ ಬದುಕುಳಿದಿದ್ದೇವೆ. ನಮಗೆ ಪೊಲೀಸ್ ಅಧಿಕಾರಿಯೊಬ್ಬರು ಸಹಾಯ ಮಾಡಿದರು. ಆನಂತರ ಮೇಲ್ಛಾವಣಿ ತೆರವುಗೊಳಿಸಲು ಬಹಳಷ್ಟು ಜನರು ಮುಂದೆ ಬಂದರು. ಎಲ್ಲರ ನಗದು ಸೇರಿದಂತೆ ಸಾಮಾನು, ಮೊಬೈಲ್ ಮತ್ತಿತರ ವಸ್ತುಗಳ ಅಡಿಯಲ್ಲಿ ಉಳಿದುಕೊಂಡಿವೆ ಎಂದು ಕಾರ್ಮಿಕರೊಬ್ಬರು ತಿಳಿಸಿದ್ದಾರೆ.

ನಮ್ಮೂರಿಗೆ ಕಳಿಸಿಕೊಡಿ

ಘಟನೆಯಿಂದ ಭಯಭೀತರಾಗಿರುವ ವಲಸೆ ಕಾರ್ಮಿಕರು ಆದಷ್ಟು ಬೇಗ ತಮ್ಮ ಸ್ವಂತ ರಾಜ್ಯಗಳಿಗೆ ತೆರಳಲು ಅವಕಾಶಮಾಡಿಕೊಡಿ ಎಂದು ಮನವಿ ಮಾಡುತ್ತಿದ್ದಾರೆ. ನಿಮ್ಮ ಕೈಮುಗಿದು ಕೇಳಿಕೊಳ್ಳುತ್ತೇವೆ, ಇಲ್ಲಿಂದ ಹೊರಡಲು ವ್ಯವಸ್ಥೆ ಮಾಡಿ ಎಂದು ಅವರ ಅವಲತ್ತುಕೊಂಡಿದ್ದಾರೆ.

ಮತ್ತೊಬ್ಬ ಕಾರ್ಮಿಕನು, ಛಾವಣಿ ಕುಸಿದಾಗ ನನ್ನ ಹೆಗಲ ಮೇಲೆ ಮಗುವನ್ನಿಟ್ಟುಕೊಂಡಿದ್ದೆ. ಇದರಿಂದ ನನಗೆ ತೀವ್ರ ಭಯವಾಗಿದೆ. ಇಲ್ಲಿಯೇ ಇದ್ದರೆ ನನ್ನ ಮಗುವನ್ನು ಕಳೆದುಕೊಳ್ಳಬಹುದೆಂಬ ಭಯ ನನ್ನನ್ನು ಕಾಡುತ್ತಿದೆ. ಆ ಮಗು ಕೇವಲ ಹಾಲು ಕುಡಿಯುತ್ತಿದ್ದು, ಅದಕ್ಕೂ ನಮ್ಮ ಬಳಿ ಹಣವಿಲ್ಲದಂತಾಗಿದೆ. ಹಾಗಾಗಿ ಇಲ್ಲಿಂದ ನಮ್ಮ ರಾಜ್ಯಕ್ಕೆ ಹೊರಡಲು ದಯವಿಟ್ಟು ಅವಕಾಶಮಾಡಿಕೊಡಿ ಎಂದು ಬೇಡಿಕೊಂಡಿದ್ದಾರೆ.

ಮತ್ತೊಬ್ಬ ಕಾರ್ಮಿಕನು, ಇಲ್ಲಿಂದ ಹೊರಡಲು ನಮಗೆ ಸರ್ಕಾರ ಸಹಾಯ ಮಾಡದಿದ್ದರೆ ನಡೆದುಕೊಂಡು ಹೋಗುತ್ತೇನೆ ಎಂದಿದ್ದಾರೆ. ಏನಾದರೂ ಆಗಲಿ ನಾವು ಬೆಳಿಗ್ಗೆಯೇ ಹೊರಡುವಂತೆ ವ್ಯವಸ್ಥೆ ಮಾಡಿ. ಇಲ್ಲದಿದ್ದರೆ ನಾವು ಕಾಲ್ನಡಿಗೆಯಲ್ಲಿ ಹೊರಡುತ್ತೇವೆ. ಇಲ್ಲಿ ಏನಾದರೂ ಆದರೆ ಯಾರು ಹೊಣೆ? ನಮ್ಮನ್ನು ನಂಬಿ ನಮ್ಮೀಡಿ ಕುಟುಂಬ ಬದುಕುತ್ತಿದೆ ಎಂದು ತನ್ನ ಆತಂಕ ವ್ಯಕ್ತಪಡಿಸಿದ್ದಾರೆ.

ಒಟ್ಟಿನಲ್ಲಿ ಲಾಕ್‌ಡೌನ್‌ ಆದಾಗಿನಿಂದ ಆರಂಭವಾದ ವಲಸೆ ಕಾರ್ಮಿಕರ ಸಂಕಷ್ಟುಗಳು ಇನ್ನು ಪರಿಹಾರಗೊಂಡಿಲ್ಲ. ಅತ್ತ ಸುಪ್ರೀಂ ಕೋರ್ಟ್‌ ಕಡೆಗೂ ವಲಸೆ ಕಾರ್ಮಿಕರಿಗೆ ಊಟ, ವಸತಿ ನೀಡಬೇಕು, ಸರ್ಕಾರದ ವೆಚ್ಚದಲ್ಲಿ ಅವರು ತಮ್ಮ ಮನೆ ತಲುಪಲು ವ್ಯವಸ್ಥೆ ಮಾಡಬೇಕೆಂದು ಆದೇಶ ನೀಡಿದೆ. ಆದರೆ ವಲಸೆ ಕಾರ್ಮಿಕರ ಬವಣೆ ಮಾತ್ರ ತಪ್ಪಿಲ್ಲ. ಈಗಲಾದರೂ ಸರ್ಕಾರಗಳು ಈ ವಿಚಾರದಲ್ಲಿ ಅತಿ ವೇಗವಾಗಿ ಕೆಲಸ ಮಾಡಬೇಕಿದೆ.


ಇದನ್ನೂ ಓದಿ: ಮೋದಿ 2.1: ದೇಶವನ್ನು ಉಳಿಸಿ, ಬೆಳೆಸುವ ಪ್ಯಾಕೇಜ್ ಹೇಗಿರಬೇಕು? – ಅಮಿತ್‌ ಬಾಸೋಲೆ 


Also read: SC directs States: No Travel Fare for Migrants, Provide Food For Stranded Migrants

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...