Homeಕರ್ನಾಟಕವಿಜಯಪುರದಲ್ಲಿ ಲಘು ಭೂಕಂಪನ: ರಿಕ್ಟರ್ ಮಾಪಕದಲ್ಲಿ 2.9 ತೀವ್ರತೆ ದಾಖಲು

ವಿಜಯಪುರದಲ್ಲಿ ಲಘು ಭೂಕಂಪನ: ರಿಕ್ಟರ್ ಮಾಪಕದಲ್ಲಿ 2.9 ತೀವ್ರತೆ ದಾಖಲು

- Advertisement -
- Advertisement -

ವಿಜಯಪುರದಲ್ಲಿ ಮಂಗಳವಾರ ಬೆಳಿಗ್ಗೆ 7.49ಕ್ಕೆ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 2.9 ತೀವ್ರತೆ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ತಿಳಿಸಿದೆ.

ವಿಜಯಪುರ ತಾಲ್ಲೂಕಿನ ಭೂತ್ನಾಳ್ ತಾಂಡಾದಿಂದ ವಾಯುವ್ಯಕ್ಕೆ ಸುಮಾರು 3.6 ಕಿಲೋಮೀಟರ್ ದೂರದಲ್ಲಿ ಭೂಕಂಪದ ಕೇಂದ್ರಬಿಂದು ಪತ್ತೆಯಾಗಿದೆ. ಭೂಕಂಪವು ಅಲ್ಪಪ್ರಮಾಣದಲ್ಲಿದ್ದು, ಯಾವುದೇ ಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭೂಕಂಪನದ ತೀವ್ರತೆ ಕಡಿಮೆಯಾಗಿದ್ದು, ಭೂಕಂಪದ ಕೇಂದ್ರಬಿಂದುವಿನಿಂದ 50-60 ಕಿ.ಮೀ ವ್ಯಾಪ್ತಿಯಲ್ಲಿ ಭೂಮಿ ಕಂಪಿಸಿದ ಅನುಭವವಾಗಬಹುದು ಎಂದು ಕೆಎಸ್‌ಎನ್‌ಡಿಎಂಸಿ ತಿಳಿಸಿದೆ.

ಅಂತಹ ಭೂಕಂಪವು ಸ್ಥಳೀಯ ಸಮುದಾಯಕ್ಕೆ ಯಾವುದೇ ಹಾನಿಯನ್ನುಂಟು ಮಾಡುವುದಿಲ್ಲ. ಏಕೆಂದರೆ, ತೀವ್ರತೆ ಕಡಿಮೆಯಾಗಿದೆ. ಆದರೂ, ಸ್ಥಳೀಯವಾಗಿ ಕಂಪನದ ಅನುಭವವಾಗಬಹುದು. ಹೀಗಾಗಿ ಜನರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಅದು ಹೇಳಿದೆ.

ವಿಜಯಪುರ ಜಿಲ್ಲೆ ಮತ್ತು ಸುತ್ತಮುತ್ತಲಿನ ಸ್ಥಳಗಳಲ್ಲಿ ಕೆಲವು ದಿನಗಳಿಂದ ಭೂಕಂಪಗಳು ಸಂಭವಿಸುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...