Homeಮುಖಪುಟಕಾಂಗ್ರೆಸ್ ತೊರೆದು ಶಿಂಧೆ ‘ಸೇನೆ’ ಸೇರಿದ ಮಿಲಿಂದ್ ದಿಯೋರಾ

ಕಾಂಗ್ರೆಸ್ ತೊರೆದು ಶಿಂಧೆ ‘ಸೇನೆ’ ಸೇರಿದ ಮಿಲಿಂದ್ ದಿಯೋರಾ

- Advertisement -
- Advertisement -

ಮಾಜಿ ಕೇಂದ್ರ ಸಚಿವ ಮಿಲಿಂದ್ ದಿಯೋರಾ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ ಸೇರ್ಪಡೆಯಾಗಿದ್ದಾರೆ. ‘ನಾನು ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ, ಪಕ್ಷದೊಂದಿಗೆ ನನ್ನ ಕುಟುಂಬದ 55 ವರ್ಷಗಳ ಸಂಬಂಧವನ್ನು ಕೊನೆಗೊಳಿಸಿದ್ದೇನೆ” ಎಂದು ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. “ಎಲ್ಲಾ ನಾಯಕರು, ಸಹೋದ್ಯೋಗಿಗಳು ಮತ್ತು ಕಾರ್ಯಕರ್ತರಿಗೆ ವರ್ಷಗಳಲ್ಲಿ ಅವರ ಅಚಲ ಬೆಂಬಲಕ್ಕಾಗಿ ನಾನು ಕೃತಜ್ಞನಾಗಿದ್ದೇನೆ” ಎಂದು ಅವರು ಹೇಳಿದರು.

‘ಇಂದು ನನ್ನ ರಾಜಕೀಯ ಪಯಣದಲ್ಲಿ ಮಹತ್ವದ ಅಧ್ಯಾಯವೊಂದು ಮುಕ್ತಾಯವಾಗಿದೆ. ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ನಾನು ರಾಜೀನಾಮೆ ನೀಡಿದ್ದೇನೆ, ಪಕ್ಷದೊಂದಿಗೆ ನನ್ನ ಕುಟುಂಬದ 55 ವರ್ಷಗಳ ಸಂಬಂಧವನ್ನು ಕೊನೆಗೊಳಿಸಿದ್ದೇನೆ’ ಎಂದು ಹೇಳಿರುವ ಅವರು, “ನಾನು ಅಭಿವೃದ್ಧಿಯ ಪಥದಲ್ಲಿ ನಡೆಯುತ್ತಿದ್ದೇನೆ” ಎಂದು ತಮ್ಮ ಪತ್ನಿ ಪೂಜಾ ಅವರೊಂದಿಗೆ ಪ್ರಾರ್ಥನೆ ಸಲ್ಲಿಸಲು ಪ್ರಭಾದೇವಿಯಲ್ಲಿರುವ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಲು ತಮ್ಮ ಮನೆಯಿಂದ ಹೊರಬಂದಾಗ ಹೇಳಿದರು.

2004 ಮತ್ತು 2009 ರಲ್ಲಿ ಮುಂಬೈ ದಕ್ಷಿಣ ಕ್ಷೇತ್ರವನ್ನು ಕಾಂಗ್ರೆಸ್ ಹಿರಿಯ ಮುರಳಿ ದಿಯೋರಾ ಅವರ ಪುತ್ರ ಮಿಲಿಂದ್ ದಿಯೋರಾ ಅವರು ಗೆದ್ದಿದ್ದರು. ಅವರು 2014 ಮತ್ತು 2019 ರ ನಂತರದ ಚುನಾವಣೆಯಲ್ಲಿ ಶಿವಸೇನಾ (ಅವಿಭಜಿತ) ನಾಯಕ ಅರವಿಂದ್ ಸಾವಂತ್ ವಿರುದ್ಧ ಸೋತಿದ್ದರು.

ಮುಂಬೈ ದಕ್ಷಿಣ ಕ್ಷೇತ್ರವನ್ನು, ಇಂಡಿಯಾ ಮೈತ್ರಿ ಕೂಟದಲ್ಲಿರುವ ಉದ್ಧವ್ ಠಾಕ್ರೆ ಬಣ ಖಚಿತಪಡಿಸಿಕೊಂಡಿರುವ ಬಗ್ಗೆ ಅವರು ಇತ್ತೀಚೆಗೆ ಅಸಮಾಧಾನ ವ್ಯಕ್ತಪಡಿಸಿದ್ದರು. “ಇಂದು ನನಗೆ ತುಂಬಾ ರೋಮಾಂಚನಕಾರಿ ದಿನ. ನಾನು ಕಾಂಗ್ರೆಸ್ ತೊರೆಯುತ್ತೇನೆ ಎಂದು ನಾನು ಎಂದಿಗೂ ಯೋಚಿಸಿರಲಿಲ್ಲ. ಆದರೆ ಇಂದು ನನ್ನ ಕುಟುಂಬದ ಕಾಂಗ್ರೆಸ್ ಜೊತೆಗಿನ 55 ವರ್ಷಗಳ ಸುದೀರ್ಘ ಸಂಬಂಧ ಮುರಿದುಬಿದ್ದಿದೆ” ಎಂದು ಇಂದು ಶಿವಸೇನೆಗೆ ಸೇರ್ಪಡೆಗೊಂಡ ನಂತರ ದಿಯೋರಾ ಸುದ್ದಿಗಾರರಿಗೆ ತಿಳಿಸಿದರು.

“ನನ್ನ ರಾಜಕೀಯ ಪ್ರಗತಿಪರ ಮತ್ತು ಜಾತ್ಯತೀತ ಎಂದು ನಿಮಗೆಲ್ಲರಿಗೂ ತಿಳಿದಿದೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಸಾರ್ವಜನಿಕರ ನಡುವೆ ಕೆಲಸ ಮಾಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿದೆ. ನಾನು ಅವರ ಕೈಯನ್ನು ಬಲಪಡಿಸಬೇಕು” ಎಂದು ಹೇಳಿದರು.

ತಮ್ಮ ಬೆಂಬಲಿಗರೊಂದಿಗೆ ಚರ್ಚಿಸಿದ ಬಳಿಕ ಅವರು ಕಾಂಗ್ರೆಸ್ಗೆ ರಾಜೀನಾಮೆ ನೀಡುವ ನಿರ್ಧಾರ ಕೈಗೊಂಡಿದ್ದಾರೆ. ಪಕ್ಷದಿಂದ ಮಿಲಿಂದ್ ದಿಯೋರಾ ನಿರ್ಗಮನದ ಬಗ್ಗೆ ವ್ಯಂಗ್ಯವಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ‘ಅವರ ತಂದೆ ಮುರಳಿ ದಿಯೋರಾ ಅವರು ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಸ್ನೇಹಿತರನ್ನು ಹೊಂದಿದ್ದರು. ಆದರೆ ಯಾವಾಗಲೂ ಪಕ್ಷದ ಪರವಾಗಿ ಹೇಗೆ ನಿಲ್ಲುತ್ತಿದ್ದರು’ ಎಂಬುದನ್ನು ನೆನಪಿಸಿಕೊಂಡರು.

ಇದನ್ನೂ ಓದಿ; ಪಕ್ಷ ತೊರೆದ ಕಾಂಗ್ರೆಸ್ ಹಿರಿಯ ನಾಯಕ ಮಿಲಿಂದ್ ದಿಯೋರಾ: ಶಿಂಧೆ ನೇತೃತ್ವದ ಶಿವಸೇನೆ ಸೇರುವ ಸಾಧ್ಯತೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...