Homeಮುಖಪುಟಮಣಿಪುರದಲ್ಲಿ ಮುಂದುವರಿದ ಹಿಂಸಾಚಾರ : ಇಂಫಾಲ್‌ ಪಶ್ಚಿಮದಲ್ಲಿ ಬಂಡುಕೋರರಿಂದ ದಾಳಿ

ಮಣಿಪುರದಲ್ಲಿ ಮುಂದುವರಿದ ಹಿಂಸಾಚಾರ : ಇಂಫಾಲ್‌ ಪಶ್ಚಿಮದಲ್ಲಿ ಬಂಡುಕೋರರಿಂದ ದಾಳಿ

- Advertisement -
- Advertisement -

ಮುಖ್ಯಮಂತ್ರಿ ಎನ್‌.ಬೀರೇನ್ ಸಿಂಗ್ ಸುದ್ದಿಗೋಷ್ಠಿ ನಡೆಸಿ ವಿಷಾದ ವ್ಯಕ್ತಪಡಿಸಿದ ಮರುದಿನವೇ ಇಂದು (ಜ.1) ಮಣಿಪುರದಲ್ಲಿ ಹಿಂಸಾಚಾರ ನಡೆದಿದೆ. ಈ ಮೂಲಕ ಹೊಸ ವರ್ಷವೂ ಸಂಘರ್ಷ ಮುಂದುವರೆದಂತಾಗಿದೆ.

ಇಂದು ಮುಂಜಾನೆ ಇಂಫಾಲ್ ಪಶ್ಚಿಮ ಜಿಲ್ಲೆಯ ಕಡಂಗ್‌ಬಂಡ್ ಪ್ರದೇಶದಲ್ಲಿ ಶಂಕಿತ ಬಂಡುಕೋರರು ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಂಗ್‌ಪೋಕ್ಪಿ ಜಿಲ್ಲೆಯ ಗುಡ್ಡಗಾಡು ಪ್ರದೇಶಗಳಿಂದ ಬಂಡುಕೋರರು ಅತ್ಯಾಧುನಿಕ ಶಸ್ತ್ರಾಸ್ತ್ರಗಳಿಂದ ಹಲವಾರು ಸುತ್ತು ಗುಂಡು ಹಾರಿಸಿದ್ದಾರೆ ಮತ್ತು ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಇಂಫಾಲ್ ಪಶ್ಚಿಮ ಜಿಲ್ಲೆಯ ಕಡಂಗ್‌ಬಂಡ್‌ನ ತಗ್ಗು ಪ್ರದೇಶಗಳ ಮೇಲೆ ಬಾಂಬ್‌ಗಳನ್ನು ಎಸೆದಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಪರಿಸ್ಥಿತಿಯನ್ನು ನಿಯಂತ್ರಿಸಲು ಹೆಚ್ಚುವರಿ ಭದ್ರತಾ ಪಡೆಗಳು ಧಾವಿಸಿದ್ದರೂ, ಆ ಪ್ರದೇಶದಲ್ಲಿ ನಿಯೋಜಿಸಲಾದ ಗ್ರಾಮ ಸ್ವಯಂಸೇವಕರು ಗುಂಡು ಸಿಡಿಸಿ, ಬೆದರಿಸಿ ಭದ್ರತಾ ಪಡೆಗಳನ್ನು ವಾಪಸ್ ಕಳುಹಿಸಿದ್ದಾರೆ. ಗುಂಡಿನ ದಾಳಿಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ದಾಳಿಯಿಂದಾಗಿ ಕಚ್ಚಾ ಮನೆಗಳಲ್ಲಿ ವಾಸಿಸುತ್ತಿದ್ದ ಹಲವಾರು ಗ್ರಾಮಸ್ಥರು ಸುರಕ್ಷಿತ ಸ್ಥಳಗಳಿಗೆ ಪಲಾಯನ ಮಾಡಬೇಕಾಯಿತು ಎಂದು ವರದಿಗಳು ಹೇಳಿವೆ.

ಮೇ 2023ರಲ್ಲಿ ರಾಜ್ಯದಲ್ಲಿ ಹಿಂಸಾಚಾರ ಪ್ರಾರಂಭವಾದಾಗಿನಿಂದ ಕಡಂಗ್‌ಬಂಡ್‌ ಪ್ರದೇಶದಲ್ಲಿ ಶಂಕಿತ ಬಂಡುಕೋರರು ಹಲವಾರು ಬಾರಿ ದಾಳಿ ನಡೆಸಿದ್ದಾರೆ.

2023ರಲ್ಲಿ ಪ್ರಾರಂಭಗೊಂಡ ಮಣಿಪುರದ ಜನಾಂಗೀಯ ಹಿಂಸಾಚಾರ ಎರಡು ವರ್ಷಗಳು ಪೂರ್ಣಗೊಳ್ಳುತ್ತಾ ಬಂದರೂ ಕೊನೆಗೊಳ್ಳುವ ಲಕ್ಷಣ ಕಾಣುತ್ತಿಲ್ಲ. 2024ರ ಕೊನೆಯ ದಿನವಾದ ನಿನ್ನೆ (ಡಿ.31) ಮುಖ್ಯಮಂತ್ರಿ ಎನ್‌. ಬೀರೇನ್ ಸಿಂಗ್ ಅವರು ಸುದ್ದಿಗೋಷ್ಠಿ ನಡೆಸಿ “ಹಿಂದಿನದನ್ನು ಮರೆತುಬಿಡಿ, ನನ್ನನ್ನು ಕ್ಷಮಿಸಿ” ಎಂದು ಮನವಿ ಮಾಡಿದ್ದರು. ಆದರೆ, ಇಂದು ಹೊಸ ವರ್ಷದಂದೂ ದಾಳಿ ಮುಂದುವರೆದಿದೆ.

ಇದನ್ನೂ ಓದಿ : ‘ನನ್ನನ್ನು ಕ್ಷಮಿಸಿ, ಹಿಂದಿನದನ್ನು ಮರೆತುಬಿಡಿ..’; ಮಣಿಪುರ ಹಿಂಸಾಚಾರಕ್ಕೆ ಕ್ಷಮೆಯಾಚಿಸಿದ ಮುಖ್ಯಮಂತ್ರಿ ಬಿರೇನ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...