Homeಮುಖಪುಟಮಣಿಪುರದ ಜಿರಿಬಾಮ್‌ನಲ್ಲಿ ಹಲವು ಮನೆಗಳಿಗೆ ಬೆಂಕಿ ಹಚ್ಚಿದ ಸಶಸ್ತ್ರದಾರಿಗಳು

ಮಣಿಪುರದ ಜಿರಿಬಾಮ್‌ನಲ್ಲಿ ಹಲವು ಮನೆಗಳಿಗೆ ಬೆಂಕಿ ಹಚ್ಚಿದ ಸಶಸ್ತ್ರದಾರಿಗಳು

- Advertisement -
- Advertisement -

ಹಿಂಸಾಚಾರ ಪೀಡಿತ ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಸಶಸ್ತ್ರದಾರಿಗಳ ಗುಂಪೊಂದು ಪೊಲೀಸ್ ಔಟ್‌ಪೋಸ್ಟ್‌ಗೆ ಮತ್ತು ಹಲವು ಮನೆಗಳಿಗೆ ಬೆಂಕಿ ಹಚ್ಚಿದೆ.

ಬರಾಕ್ ನದಿಯ ದಡದಲ್ಲಿರುವ ಚೋಟೊಬೆಕ್ರಾ ಪ್ರದೇಶದಲ್ಲಿರುವ ಜಿರಿ ಪೊಲೀಸ್ ಔಟ್‌ಪೋಸ್ಟನ್ನು ಸಶಸ್ತ್ರದಾರಿಗಳು ಮಧ್ಯರಾತ್ರಿ 12.30ರ ಸುಮಾರಿಗೆ ಸುಟ್ಟು ಹಾಕಿದ್ದಾರೆ. ಬೆಟ್ಟದ ಮೂಲದ ಬಂದೂಕುಧಾರಿಗಳು ರಾಜ್ಯದ ರಾಜಧಾನಿ ಇಂಫಾಲ್‌ನಿಂದ ಸುಮಾರು 220 ಕಿಮೀ ದೂರದಲ್ಲಿರುವ ಜಿಲ್ಲೆಯ ಮೊಧುಪುರ್ ಪ್ರದೇಶದ ಲಾಮ್ಟಾಯ್ ಖುನೌನಲ್ಲಿ ಕಗ್ಗತ್ತಲಿನಲ್ಲಿ ದಾಳಿಗಳನ್ನು ನಡೆಸಿದ್ದಾರೆ. ಈ ವೇಳೆ ಹಲವಾರು ಮನೆಗಳು ಸುಟ್ಟುಹೋಗಿವೆ. ಹೆಚ್ಚಾಗಿ ಜಿರಿಬಾಮ್ ಜಿಲ್ಲೆಯ ಹೊರವಲಯಗಳಲ್ಲಿ ಮನೆಗಳು ಸುಟ್ಟು ಹೋಗಿದೆ. ಈ ಬಗ್ಗೆ ನಿಖರವಾದ ಸಂಖ್ಯೆಯನ್ನು ಖಚಿತಪಡಿಸಲು ಸಾಧ್ಯವಿಲ್ಲ ಎಂದು ಜಿರಿಬಾನ್‌ನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಂಡುಕೋರರ ವಿರುದ್ಧದ ಭದ್ರತಾ ಕಾರ್ಯಾಚರಣೆಯಲ್ಲಿ ನೆರವಾಗಲು ಮಣಿಪುರ ಪೊಲೀಸರ ಕಮಾಂಡೋ ತುಕಡಿಯನ್ನು ಶನಿವಾರ ಬೆಳಗ್ಗೆ ಇಂಫಾಲ್‌ನಿಂದ ಜಿರಿಬಾಮ್‌ಗೆ ವಿಮಾನದಲ್ಲಿ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಮಧ್ಯೆ ಇನ್ನರ್ ಮಣಿಪುರ ಲೋಕಸಭಾ ಕ್ಷೇತ್ರದಿಂದ ಹೊಸದಾಗಿ ಆಯ್ಕೆಯಾದ ಕಾಂಗ್ರೆಸ್ ಸಂಸದ ಅಂಗೋಮ್ಚಾ ಬಿಮೋಲ್ ಅಕೋಯ್ಜಮ್, ಜಿರಿಬಾಮ್ ಜಿಲ್ಲೆಯ ಜನರ ಜೀವ ಮತ್ತು ಆಸ್ತಿಯನ್ನು ರಕ್ಷಿಸಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಕೋಯ್ಜಮ್, ನಾನು ಜಿರಿಬಾಮ್‌ನ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಅವರು ಹೆಚ್ಚಿನ ಪಡೆಗಳನ್ನು ಸ್ಥಳಕ್ಕೆ ಕಳುಹಿಸಿರುವುದಾಗಿ ಮಾಹಿತಿ ನೀಡಿದ್ದಾರೆ ಎಂದು ಹೇಳಿದ್ದಾರೆ.

ಕುಕಿ ಸಮುದಾಯದ ಬಂಡುಕೋರರು 59 ವರ್ಷದ ವ್ಯಕ್ತಿಯೊಬ್ಬರನ್ನು ಹತ್ಯೆಗೈದ ನಂತರ, ಮಣಿಪುರದಲ್ಲಿ ಮತ್ತೆ ಜನಾಂಗೀಯ ಸಂಘರ್ಷ ಸ್ಫೋಟಗೊಂಡಿದೆ. ಇದರ ಬೆನ್ನಲ್ಲಿ ಸುಮಾರು 239 ಜನರನ್ನು ಅದರಲ್ಲಿ ಹೆಚ್ಚಾಗಿ ಮಹಿಳೆಯರು ಮತ್ತು ಮಕ್ಕಳನ್ನು ಜಿರಿಬಾಮ್ ಜಿಲ್ಲೆಯ ಗ್ರಾಮಗಳಿಂದ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

59 ವರ್ಷದ ವ್ಯಕ್ತಿಯನ್ನು ಕುಕಿ ಸಮುದಾಯಕ್ಕೆ ಸೇರಿದ ಗುಂಪು ಜೂನ್ 6ರಂದು ಹತ್ಯೆ ಮಾಡಿದ ಬಳಿಕ ಜಿಲ್ಲಾಡಳಿತವು ಜಿಲ್ಲೆಯಲ್ಲಿ ಅನಿರ್ದಿಷ್ಟಾವಧಿ ಕರ್ಫ್ಯೂ ವಿಧಿಸಿತ್ತು. ಮೈತೈ ಸಮುದಾಯಕ್ಕೆ ಪರಿಶಿಷ್ಟ ಪಂಗಡ (ಎಸ್‌ಟಿ) ಸ್ಥಾನಮಾನ ನೀಡುವುದನ್ನು ವಿರೋಧಿಸಿ ಮಣಿಪುರದ ಗುಡ್ಡಗಾಡು ಜಿಲ್ಲೆಗಳಲ್ಲಿ ಮೇ 3, 2023ರಂದು ‘ಬುಡಕಟ್ಟು ಐಕಮತ್ಯ ಮೆರವಣಿಗೆ’ ಆಯೋಜಿಸಲಾಗಿತ್ತು. ಇದು ಬಳಿಕ ಜನಾಂಗೀಯ ಹಿಂಸಾಚಾರಕ್ಕೆ ತಿರುಗಿತ್ತು. ಮೇ.3ರಿಂದ ಮಣಿಪುರದಲ್ಲಿ ಕುಕಿಗಳು ಮತ್ತು ಮೈತೈ ಸಮುದಾಯಗಳ ನಡುವಿನ ಜನಾಂಗೀಯ ಹಿಂಸಾಚಾರದಿಂದ 200ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ರಾಜ್ಯದಲ್ಲಿ ಕನಿಷ್ಠ 60,000 ಜನರು ನಿರಾಶ್ರಿತರಾಗಿದ್ದಾರೆ.

ಇದನ್ನು ಓದಿ: ರಾಹುಲ್ ಗಾಂಧಿಗೆ ಲೋಕಸಭೆಯ ವಿಪಕ್ಷ ನಾಯಕನ ಪಟ್ಟ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...