Homeಮುಖಪುಟಹಾಲು ವಿತರಣೆಯಲ್ಲಿ ಅನ್ಯಾಯ, ಅರ್ಹ ಕುಟುಂಬಗಳಿಗೆ ಇಲ್ಲ ಹಾಲು: ಆರೋಪ

ಹಾಲು ವಿತರಣೆಯಲ್ಲಿ ಅನ್ಯಾಯ, ಅರ್ಹ ಕುಟುಂಬಗಳಿಗೆ ಇಲ್ಲ ಹಾಲು: ಆರೋಪ

- Advertisement -
- Advertisement -

ಲಾಕ್ ಡೌನ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸ್ಲಂನಿವಾಸಿ ಕುಟುಂಬಗಳಿಗೆ ಹಾಲು ವಿತರಿಸಲು ಮುಂದಾಗಿರುವುದು ಶ್ಲಾಘನೀಯ ಸಂಗತಿ. ಹಾಗೆ ಹಾಲು ವಿತರಿಸುವ ವೇಳೆಯಲ್ಲಿ ಎಲ್ಲ ಕುಟುಂಬಗಳಿಗೆ ಹಾಲು ದೊರೆಯುತ್ತಿದೆಯೇ ಎಂಬುದನ್ನು ಪರಿಶೀಲಿಸಬೇಕಾದುದು ಸರ್ಕಾರದ ಕರ್ತವ್ಯ ಮತ್ತು ಜವಾಬ್ದಾರಿ ಕೂಡ ಆಗಿದೆ. ಆತುರದಲ್ಲಿ ಹಾಲು ನೀಡುವುದಕ್ಕೆ ಚಾಲನೆ ಕೊಟ್ಟಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೇವಲ ಘೋಷಿತ ಸ್ಲಂಗಳಿಗೆ ಮಾತ್ರ ಹಾಲು ನೀಡುತ್ತಿದ್ದು ಅಘೋಷಿತ ಸ್ಲಂ ಕುಟುಂಬಗಳಿಗೆ ಹಾಲು ದೊರೆಯುತ್ತಿಲ್ಲ. ಕೆಲವು ಸ್ಲಂಗಳು ಪರಿವರ್ತನೆ ಆಗಿ ಬಡಾವಣೆಗಳಾಗಿವೆ. ಸ್ಲಂಗಳ ನಡುವೆ ಬಲಾಢ್ಯ ಕುಟುಂಬಗಳು ಸೇರಿ ಹೋಗಿವೆ. ಹೀಗಾಗಿ ಅರ್ಹ ಕುಟುಂಬಗಳಿಗೆ ಸಿಗಬೇಕಾದ ಹಾಲು ಬೇರೆಯವರ ಪಾಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ರಾಜ್ಯದ ಎಲ್ಲಾ 30 ಜಿಲ್ಲೆಗಳಲ್ಲಿ  ಸರ್ಕಾರವೇ ಘೋಷಿಸಿರುವಂತೆ 2804 ಸ್ಲಂಗಳಿವೆ. ಈ ಸ್ಲಂಗಳಲ್ಲಿ 45 ಲಕ್ಷ ಮಂದಿ ಜನ ವಾಸಿಸುತ್ತಿದ್ದಾರೆ. ಇವರ ಪೈಕಿ 12 ಲಕ್ಷ ಮಂದಿ ಮಕ್ಕಳೇ ಇದ್ದಾರೆಂಬುದು ಗಮನಾರ್ಹ ಸಂಗತಿ. ಘೋಷಿತ ಸ್ಲಂ ನಿವಾಸಿಗಳಿಗೆ ಒಟ್ಟು 7 ಲಕ್ಷ ಲೀಟರ್ ಹಾಲು ವಿತರಿಸುವ ಒಳ್ಳೆಯ ಕೆಲಸಕ್ಕೆ ಸರ್ಕಾರ ಕೈಹಾಕಿದ್ದರೂ ನಿಜವಾಗಿಯೂ ತಲುಪಬೇಕಾದವರಿಗೆ ಹಾಲು ತಲುಪುತ್ತಿಲ್ಲ. ರಾಜ್ಯ ಸರ್ಕಾರ 2011 ಗಣತಿಯನ್ನಾಧರಿಸಿ ಸ್ಲಂ ಕುಟುಂಬಗಳಿಗೆ ಹಾಲು ವಿತರಿಸುತ್ತಿದೆ. ಕಳೆದ 8 ವರ್ಷಗಳಲ್ಲಿ ಸ್ಲಂಗಳ ಸಂಖ್ಯೆ ಹೆಚ್ಚಾಗಿದೆ. ಸಾವಿರಾರು ಬಡ ಕುಟುಂಬಗಳು ಹೊಸದಾಗಿ ಸೇರ್ಪಡೆಯಾಗಿದೆ. ಈ ಕುಟುಂಬಗಳಿಗೆ ಹಾಲು ಸಿಗುತ್ತಿಲ್ಲ. ಅರ್ಹ ಫಲನುಭವಿ ಕುಟುಂಬಗಳು ಸರ್ಕಾರದ ಆಪತ್ಕಾಲದ ಯೋಜನೆಯಿಂದ ವಂಚಿತವಾಗಲಿದ್ದು ಸರ್ಕಾರ ಈ ಬಗ್ಗೆ ಯೋಚಿಸಬೇಕಾಗಿದೆ.

ಬೆಂಗಳೂರು ನಗರದಲ್ಲಿ 800 ಘೋಷಿತ ಅಂದರೆ ಅಧಿಕೃತ ಸ್ಲಂಗಳಿವೆ. ಅಘೋಷಿತ ಸ್ಲಂಗಳು 200 ಇವೆ. ಅಂದರೆ ಸರ್ಕಾರ ಘೋಷಿಸಿರುವ ಅರ್ಧದಷ್ಟು ಸ್ಲಂಗಳು ಬೆಂಗಳೂರಿನಲ್ಲಿಯೇ ಇವೆ. ಬೆಂಗಳೂರು ಒಂದಕ್ಕೆ 25 ಸಾವಿರ ಲೀಟರ್ ಹಾಲು ವಿತರಿಸಲಾಗುತ್ತಿದೆ. ಇದು ಅರೆಕಾಸಿನ ಮಜ್ಜಿಗೆಯಂತಾಗಿದೆ. 2011 ನಂತರ ಹೊಸ ಕುಟುಂಬಗಳು ವಲಸೆ ಬಂದು ಸೇರ್ಪಡೆಯಾಗಿವೆ. ಚಿಕ್ಕಚಿಕ್ಕ ಕುಟೀರಗಳಲ್ಲಿ, ಡೇರೆಗಳಲ್ಲಿ ವಾಸಿಸುವ ಈ ಕುಟುಂಬಗಳು ಮೂಲಭೂತ ಸೌಕರ್ಯಗಳಿಲ್ಲದೆ ಸಮಸ್ಯೆಗಳನ್ನು ಎದುರಿಸುತ್ತಿವೆ. ಒಂದೊಂದು ಕುಟುಂಬದಲ್ಲಿ 6-7 ಮಂದಿ ಇದ್ದು ಮಕ್ಕಳ ಸಂಖ್ಯೆ ಅಧಿಕವಾಗಿದೆ. ಬೆಂಗಳೂರಿನಂಥ ನಗರದಲ್ಲಿ ಸ್ಲಂಗಳಲ್ಲಿ ಬಂದು ಸೇರಿಕೊಂಡಿರುವ ಬಲಾಢ್ಯರಿಂದಾಗಿ ಅವು ಬಡಾವಣೆಗಳಾಗಿ ಪರಿವರ್ತನೆಯಾಗಿವೆ. ಅಲ್ಲಿ ವಾಸಿಸುತ್ತಿದ್ದ ಸ್ಲಂ ನಿವಾಸಿ ಕುಟುಂಬಗಳು ಬೇರೆ ಕಡೆಗೆ ಹೋಗಿದ್ದು ಅರ್ಹ ಕುಟುಂಬಗಳಿಗೆ ಸಿಗಬೇಕಾದ ಸೌಲಭ್ಯಗಳ ಲಾಭ ಬಲಾಢ್ಯರು ಪಡೆಯುವಂತಹ ಸ್ಥಿತಿ ನಿರ್ಮಾಣವಾಗಿದೆ.

ಸ್ಲಂ ಜನರು, ಅಲೆಮಾರಿಗಳು ಹಂದಿಜೋಗಿ ಕುಟುಂಬಗಳ ನಡುವೆ ಹಲವು ವರ್ಷಗಳಿಂದ ಕೆಲಸ ಮಾಡುತ್ತಿರುವ ಸ್ಲಂ ಜನಾಂದೋಲನ ಸಂಚಾಲಕ ಎ. ನರಸಿಂಹಮೂರ್ತಿ ಹೇಳುವಂತೆ ರಾಜ್ಯದಲ್ಲಿ 1500 ಸ್ಲಂಗಳನ್ನು ಸರ್ಕಾರ ಘೋಷಣೆ ಮಾಡುವುದು ಬಾಕಿ ಇದೆ. ಈ ಸ್ಲಂಗಳಲ್ಲಿ ಸುಮಾರು 55 ಲಕ್ಷ ಜನ ವಾಸ ಮಾಡುತ್ತಿದ್ದಾರೆ. ಅವರಲ್ಲಿ 20 ರಿಂದ 22 ಲಕ್ಷ ಮಂದಿ ಮಕ್ಕಳಿದ್ದಾರೆ. 18 ಲಕ್ಷ ಮಂದಿ ಯುವಜನರು ಇದ್ದಾರೆ. ಈಗ ಸರ್ಕಾರದ ಆಪತ್ಕಾಲದ ಹಾಲು ವಿತರಣೆ ಯೋಜನೆಯ ಲಾಭ ಈ ಅಘೋಷಿತ ಸ್ಲಂ ಜನರಿಗೆ ಸಿಗುತ್ತಿಲ್ಲ. ಸರ್ಕಾರ ಒಂದು ಕುಟುಂಬಕ್ಕೆ ಒಂದು ಲೀಟರ್ ವಿತರಿಸುವುದಾಗಿ ಹೇಳಿತ್ತು. ತಲುಪಬೇಕಾದವರಿಗೆ ತಲುಪದ ಹಿನ್ನೆಲೆಯಲ್ಲಿ ಎಲ್ಲರಿಗೂ ದೊರೆಯಲಿ ಎಂಬ ಉದ್ದೇಶದಿಂದ ಪ್ರತಿ ಕುಟುಂಬಕ್ಕೆ ಅರ್ಧ ಲೀಟರ್ ಹಾಲು ವಿತರಿಸುವಂತೆ ಮನವಿ ಮಾಡಿದ್ದೇವೆ. ಸರ್ಕಾರ ಹಾಲು ವಿತರಣೆ ಮಾಡುವುದರಲ್ಲಿ ಅನ್ಯಾಯವಾಗುತ್ತಿದೆ. ಅರ್ಹ ಕುಟುಂಬಗಳು ಈ ತಾತ್ಕಾಲಿಕ ಯೋಜನೆಯಿಂದ ವಂಚಿತವಾಗಿವೆ ಎಂದು ನಾನುಗೌರಿ.ಕಾಂಗೆ ತಿಳಿಸಿದರು.

ಪ್ರತಿಯೊಂದು ಜಿಲ್ಲೆಯಲ್ಲಿಯೂ ಸ್ಲಂಗಳು ನಿರ್ಮಾಣವಾಗಿವೆ. ವಲಸೆ ಬರುವವರ ಸಂಖ್ಯೆ ಹೆಚ್ಚಾಗಿದೆ. ಕೆಲಸ ಅರಸಿಕೊಂಡು ಬಂದಿರುವ ಕುಟುಂಬಗಳು ಸ್ಲಂ ಪ್ರದೇಶದಲ್ಲಿ ಹಂಚಿಕೊಂಡು ಸೌರ್ಹಾತೆಯಿಂದ ಬದುಕುತ್ತಿವೆ. ಒಗ್ಗೂಡಿ ಸಹಬಾಳ್ವೆ ನಡೆಸುವ ಸ್ಲಂ ನಿವಾಸಿಗಳಿಗೆ ಕನಿಷ್ಠ ಸೌಲಭ್ಯಗಳು ದೊರೆಯುತ್ತಿಲ್ಲ. ಕುಡಿಯುವ ನೀರು ಸಿಗುತ್ತಿಲ್ಲ. ಇಂತಹ ಸಂದರ್ಭದಲ್ಲಿ ಅಘೋಷಿತ ಸ್ಲಂಗಳಲ್ಲಿರುವ ಕುಟುಂಬಗಳು ಹಾಲು ಪಡೆಯಲು ಸಾಧ್ಯವಾಗಿಲ್ಲ. ಹಾಲು, ದಿನಸಿ ಎಲ್ಲರಿಗೂ ಸಿಗುವಂತೆ ಸರ್ಕಾರ ನೋಡಿಕೊಳ್ಳಬೇಕು. ಅಪೌಷ್ಠಿಕತೆಯಲ್ಲಿ ಬಳಲುತ್ತಿರುವ ಮಕ್ಕಳು ಪೌಷ್ಟಿಕತೆಯಿಂದ ಬೆಳೆಯಲು ಅನುವಾಗುವಂತೆ ಸರ್ಕಾರ ನಿಗಾ ವಹಿಸಿದರೆ ಹೆಚ್ಚು ಅನುಕೂಲವಾಗುತ್ತದೆ. ಸರ್ಕಾರ ಇತ್ತ ಗಮನಹರಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...