Homeಕರ್ನಾಟಕಹಾಲಿನ ದರ ₹5 ಏರಿಕೆ ಸಾಧ್ಯತೆ | ಸುಳಿವು ನೀಡಿದ ಸಿಎಂ ಸಿದ್ದರಾಮಯ್ಯ

ಹಾಲಿನ ದರ ₹5 ಏರಿಕೆ ಸಾಧ್ಯತೆ | ಸುಳಿವು ನೀಡಿದ ಸಿಎಂ ಸಿದ್ದರಾಮಯ್ಯ

- Advertisement -
- Advertisement -

ನಂದಿನಿ ಹಾಲಿನ ದರ ಮತ್ತೊಮ್ಮೆ ಹೆಚ್ಚಿಸುವ  ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಸುಳಿವು ನೀಡಿದ್ದು, ಈ ಕುರಿತು ಕೆಎಂಎಫ್ ನಿರ್ದೇಶಕರ ಸಭೆ ಕರೆದು ತೀರ್ಮಾನ ಕೈಗೊಳ್ಳುವಂತೆ ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಅವರಿಗೆ ಸೂಚಿಸಿದ್ದಾರೆ. ಈ ವರ್ಷದ ಜೂನ್‌ನಲ್ಲಿ ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) 500 ಮಿಲಿ ಸ್ಯಾಚೆಟ್‌ಗೆ ಹೆಚ್ಚುವರಿ 50 ಮಿಲಿ ಹಾಲು ನೀಡಿ ಹಾಲಿನ ದರವನ್ನು 2 ರೂ.ಗಳಷ್ಟು ಹೆಚ್ಚಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬೆಂಗಳೂರು ಹಾಲು ಒಕ್ಕೂಟದ ನೂತನ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಸಿಎಂ, ಹೈನುಗಾರಿಕೆ ಅವಲಂಬಿಸಿರುವ ರೈತರಿಗೆ ಯಾವುದೇ ಪ್ರಯೋಜನವಾಗುತ್ತಿಲ್ಲ. ಹಾಲಿನ ದರವನ್ನು 5 ರೂಪಾಯಿ ಹೆಚ್ಚಿಸುವಂತೆ ಸಹಕಾರಿ ಇಲಾಖೆ ಮನವಿ ಮಾಡಿದೆ ಎಂದು ಹೇಳಿದ್ದಾರೆ. ರೈತರ ಹಿತದೃಷ್ಟಿಯಿಂದ ಎಲ್ಲ ಭಾಗೀದಾರರ ಜತೆ ಸಭೆ ನಡೆಸಿ, ಬೆಲೆ ಹೆಚ್ಚಿಸಲಾಗುವುದು. ಈ ಏರಿಕೆಯಿಂದ ರೈತರಿಗೆ ನೇರವಾಗಿ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.

ಆದರೆ ಈ ಏರಿಕೆಯ ಹೊರೆಯನ್ನು ಗ್ರಾಹಕರು ಭರಿಸಬೇಕೇ ಎಂಬುದನ್ನು ಸಿದ್ದರಾಮಯ್ಯ ಹೇಳಿಲ್ಲವಾದರೂ, ಹಾಲು ಸಂಗ್ರಹಣೆ ದರವನ್ನು ಹೆಚ್ಚಿಸಲಾಗುವುದು ಎಂದು ಅವರು ಹೇಳಿದ್ದಾರೆ. ಅಲ್ಲದೆ, ಹಿಂದಿನಿಂದಲೂ ಪ್ರತಿ ಲೀಟರ್ ಹಾಲಿಗೆ 20 ಪೈಸೆಯನ್ನು ರೈತರು ಸಹಕಾರಿ ಸಂಘಗಳಿಗೆ ಪಾವತಿಸುವ ಪದ್ಧತಿ ಇದೆ. ಅದನ್ನೂ ಶೀಘ್ರದಲ್ಲೇ ನಿರ್ಧರಿಸುತ್ತೇವೆ. ನಾವು ಯಾವಾಗಲೂ ರೈತರ ಪರವಾಗಿದ್ದೇವೆ, ಇದರಲ್ಲಿ ಯಾವುದೇ ರಾಜಿ ಇಲ್ಲ ಎಂದು ಹೇಳಿದ್ದಾರೆ.

ಇದನ್ನೂಓದಿ: ಜೀವ ಬೆದರಿಕೆ, ಜಾತಿ ನಿಂದನೆ ಆರೋಪ : ಬಿಜೆಪಿ ಶಾಸಕ ಮುನಿರತ್ನ ವಿರುದ್ದ ಎಫ್‌ಐಆರ್ ದಾಖಲು

“ಇತ್ತೀಚೆಗಷ್ಟೇ ಸರ್ಕಾರ ಹಾಲಿನ ದರವನ್ನು ಹೆಚ್ಚಿಸಿದಾಗ ಜನರಿಗೆ ಹೊರೆಯಾಗುತ್ತದೆ ಎಂದು ಬಿಜೆಪಿಯವರು ಗದ್ದಲ ಎಬ್ಬಿಸಿದರು. ಆಗ ಬೆಲೆ ಏರಿಕೆಯ ಫಲಾನುಭವಿಗಳಾದ ನೀವು (ಹಾಲು ಉತ್ಪಾದಕರು) ಮೌನವಾಗಿದ್ದಿರಿ. ಆದರೆ ರೈತರಿಗೆ ಅನುಕೂಲವಾಗುವ ದರ ಏರಿಕೆಯನ್ನು ವಿರೋಧಿಸಿದ ಬಿಜೆಪಿ ನಾಯಕರ ಬಾಯಿ ಮುಚ್ಚಿಸಬೇಕಿತ್ತಲ್ಲವೇ” ಎಂದು ಮುಖ್ಯಮಂತ್ರಿ ಸಭಿಕರನ್ನು ಪ್ರಶ್ನಿಸಿದ್ದಾರೆ.

ಹಾಲಿನ ಉತ್ಪಾದನೆ ಹೆಚ್ಚಾದಾಗ ರೈತರಿಗೆ ಪ್ರೋತ್ಸಾಹಧನವನ್ನು ತಮ್ಮ ಸರ್ಕಾರ ಹೆಚ್ಚಿಸಿದೆ ಎಂದು ಹೇಳಿದ ಸಿಎಂ, ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಹೆಚ್ಚುವರಿ ಹಾಲು ವಿತರಿಸಲು ಕ್ಷೀರ ಭಾಗ್ಯ ಯೋಜನೆ ಜಾರಿಗೆ ತಂದೆವು ಎಂದು ಹೇಳಿದ್ದಾರೆ. ಈ ನಡುವೆ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ ಅವರು, ರೈತರಿಗೆ ಏನನ್ನೂ ಮಾಡದವರು ಮಣ್ಣಿನ ಮಗ ಎಂದು ಹೇಳಿಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿಡಿಯೊನೋಡಿ: ಒಕ್ಕೂಟ ವ್ಯವಸ್ಥೆ ಮಣ್ಣು ಮುಕ್ಕಿದೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ಮೀನಾಕ್ಷಿ ಬಾಳಿ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Increase in milk price is unprecedented and condemnable. They have increased two rupees three months back. Government should be ashamed to think about price increase

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...