Homeಕರ್ನಾಟಕಸಮ್ಮೇಳನದ ಕವಿಗೋಷ್ಠಿ ಅಧ್ಯಕ್ಷತೆ ವಹಿಸಲು ಮನಸ್ಸು ಒಪ್ಪುತ್ತಿಲ್ಲ: ಕಸಾಪ ಎಡವಟ್ಟಿಗೆ ಕವಯತ್ರಿ ಸುಜಾತ ಪ್ರತಿರೋಧ

ಸಮ್ಮೇಳನದ ಕವಿಗೋಷ್ಠಿ ಅಧ್ಯಕ್ಷತೆ ವಹಿಸಲು ಮನಸ್ಸು ಒಪ್ಪುತ್ತಿಲ್ಲ: ಕಸಾಪ ಎಡವಟ್ಟಿಗೆ ಕವಯತ್ರಿ ಸುಜಾತ ಪ್ರತಿರೋಧ

- Advertisement -
- Advertisement -

ಮುಸ್ಲಿಂ ಲೇಖಕರನ್ನು ಕನ್ನಡ ಸಾಹಿತ್ಯ ಸಮ್ಮೇಳನದಿಂದ ಹೊರಗಿಟ್ಟು, ಕನ್ನಡತನವನ್ನು ಮರೆತಿರುವ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷರ ಎಡವಟ್ಟಿಗೆ ಸಾಹಿತಿಗಳು ಸಾಂಸ್ಕೃತಿಕ ಪ್ರತಿರೋಧ ತೋರುತ್ತಿದ್ದು, ಕವಯತ್ರಿ ಎಚ್.ಆರ್‌.ಸುಜಾತ ಅವರು ಕವಿಗೋಷ್ಠಿಯೊಂದರ ಅಧ್ಯಕ್ಷತೆಯಿಂದ ಹಿಂದೆ ಸರಿದ್ದಾರೆ.

ಕಸಾಪ ಅಧ್ಯಕ್ಷ ಮಹೇಶ ಜೋಶಿಯವರಿಗೆ ಪತ್ರ ಬರೆದಿರುವ ಸುಜಾತ ಅವರು, “ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಿ ಕವಿ ಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡುವುದಕ್ಕೆ ನನ್ನ ಮನಸ್ಸು ಒಪ್ಪುತ್ತಿಲ್ಲ. ಈ ಹಿನ್ನೆಲೆಯಲ್ಲಿ ನಾನು ಹಾವೇರಿಯಲ್ಲಿ ನಡೆಯುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುತ್ತಿಲ್ಲ ಎನ್ನುವ ವಿಷಯವನ್ನು ವಿನಮ್ರತೆಯಿಂದ ನಿಮ್ಮಲ್ಲಿ ನಿವೇದಿಸಿ ಕೊಳ್ಳುತ್ತಿದ್ದೇನೆ” ಎಂದು ಕೋರಿದ್ದಾರೆ.

ಕಸಾಪ ಅಧ್ಯಕ್ಷರಿಗೆ ಬರೆದಿರುವ ಪತ್ರದಲ್ಲೇನಿದೆ?

ಮಾನ್ಯರೆ,

ಹಾವೇರಿಯಲ್ಲಿ ಆಯೋಜಿಸಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ದಿನಾಂಕ 7.12. 2022ರಂದು ನಡೆಯಲಿರುವ ಕವಿಗೋಷ್ಠಿಗೆ ತಾವು ನನ್ನನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುತ್ತೀರಿ. ಅದಕ್ಕಾಗಿ ನಾನು ತಮಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ.

ಈ ಸಂಬಂಧ ನನಗೆ ಡಿಜಿಟಲ್ ಮಾಧ್ಯಮದ ಮೂಲಕ ಆಹ್ವಾನ ಪತ್ರಿಕೆಯೂ ತಲುಪಿದೆ. ಆಹ್ವಾನ ಪತ್ರಿಕೆಯನ್ನು ಗಮನಿಸಿದಾಗ ಅದರಲ್ಲಿನ ವಿವಿಧ ಗೋಷ್ಠಿಗಳಲ್ಲಿ, ವೇದಿಕೆಗಳಲ್ಲಿ ಕನ್ನಡದ ಸಮಕಾಲೀನ ಮಹತ್ವದ ಲೇಖಕ ಲೇಖಕಿಯರ ಹೆಸರುಗಳೇ ಕಂಡು ಬರುತ್ತಿಲ್ಲ. ಅಲ್ಲದೇ ಕನ್ನಡಿಗರೇ ಆಗಿರುವ ಮುಸ್ಲಿಂ ಸಮುದಾಯದ ಲೇಖಕರ ಪ್ರಾತಿನಿಧ್ಯವೇ ಇರುವುದಿಲ್ಲ. ನೂರಾರು ಸಂಖ್ಯೆಯಲ್ಲಿರುವ ಬ್ಯಾರಿ ಸಮುದಾಯದ ಮಹತ್ವದ ಲೇಖಕರನ್ನು ಸಮ್ಮೇಳನದಲ್ಲಿ ಸಂಯೋಜಿಸಿ ಕೊಂಡಿರುವುದಿಲ್ಲ. ಈ ಬಗ್ಗೆ ಕನ್ನಡದ ಹಲವಾರು ಲೇಖಕರು ಮಾಧ್ಯಮದಲ್ಲಿ ತಮ್ಮ ಪ್ರತಿಕ್ರಿಯೆಯನ್ನೂ ವ್ಯಕ್ತಪಡಿಸಿರುತ್ತಾರೆ. ಇದಕ್ಕೆ ಪರಿಷತ್ತಿನ ವತಿಯಿಂದ ಯಾವುದೇ ರೀತಿಯ ಸಮಜಾಯಿಷಿ ಹೇಳಿಕೆಗಳೂ ಕೂಡಾ ಬಂದಿರುವುದಿಲ್ಲ. ಈ ಎಲ್ಲ ಘಟನೆಗಳನ್ನು ನೋಡಿದರೆ ಬ್ಯಾರಿ ಸಮುದಾಯದ ಲೇಖಕರನ್ನು ಸಮ್ಮೇಳನದಿಂದ ಬೇಕೆಂದೇ ದೂರವಿಟ್ಟಿರುವಂತೆ ಮೇಲು ನೋಟಕ್ಕೆ ಕಂಡು ಬರುತ್ತಿದೆ.

ಸಮಸ್ತ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಈ ರೀತಿಯ ತಾರತಮ್ಯ ಇರಬಾರದು ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯವಾಗಿರುತ್ತದೆ. ಇಂಥ ತಾರತಮ್ಯದಿಂದ ಕೂಡಿರುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಿ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡುವುದಕ್ಕೆ ನನ್ನ ಮನಸ್ಸು ಒಪ್ಪುತ್ತಿಲ್ಲ. ಈ ಹಿನ್ನೆಲೆಯಲ್ಲಿ ನಾನು ಹಾವೇರಿಯಲ್ಲಿ ನಡೆಯುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುತ್ತಿಲ್ಲ ಎನ್ನುವ ವಿಷಯವನ್ನು ವಿನಮ್ರತೆಯಿಂದ ನಿಮ್ಮಲ್ಲಿ ನಿವೇದಿಸಿ ಕೊಳ್ಳುತ್ತಿದ್ದೇನೆ.

ಹಾವೇರಿಯ ಕನ್ನಡ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಯಲ್ಲಿ ಭಾಗವಹಿಸಿ ಅಧ್ಯಕ್ಷತೆ ವಹಿಸಲು ಕನ್ನಡ ಸಾಹಿತ್ಯ ಪರಿಷತ್‌ಗೆ ನನ್ನ ಸಮ್ಮತಿಯನ್ನು ನೀಡಿದ್ದಾಗ ಮುಂದೆ ಈ ರೀತಿಯ ಪರಿಸ್ಥಿತಿ ಉದ್ಭವಿಸಬಹುದು ಎನ್ನುವ ಕಲ್ಪನೆ ನನಗೆ ಇರಲಿಲ್ಲ. ಆದರೆ ದುರದೃಷ್ಟವಶಾತ್ ಈ ರೀತಿಯ ಬೆಳವಣಿಗೆಗಳು ಘಟಿಸಿ ನನ್ನ ಮನಸ್ಸಿಗೆ ಕಸಿವಿಸಿ ಉಂಟಾಗಿದೆ. ಕವಿಗೋಷ್ಠಿಯ ಅಧ್ಯಕ್ಷತೆಗೆ ಒಪ್ಪಿಗೆ ನೀಡಿ ಈಗ ಅಸಮ್ಮತಿ ಸೂಚಿಸುತ್ತಿರುವುದರಿಂದ ನಿಮಗೆ ಆಗಬಹುದಾದ ಮುಜುಗುರಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ. ಇನ್ನು ಮುಂದೆ ಇಂಥ ಘಟನೆಗಳು ಪುನರಾವರ್ತನೆ ಆಗದಂತೆ ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷರಾದ ತಾವು ಗಮನ ಹರಿಸಬೇಕೆಂದು ವಿನಂತಿಸಿಕೊಳ್ಳುತ್ತೇನೆ.

ಇನ್ನು ಮುಂದೆ ಇಂಥ ಮುಜುಗುರದ ಸನ್ನಿವೇಶಗಳು ಸಮ್ಮೇಳನದಲ್ಲಿ ಉಂಟಾಗದಿರಲಿ ಎನ್ನುವ ಆಶಯದೊಂದಿಗೆ ಹಾವೇರಿಯಲ್ಲಿ ನಡೆಯುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಯಶ ಕೋರುತ್ತೇನೆ.

  • ಎಚ್ ಆರ್ ಸುಜಾತ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದಯವಿಟ್ಟು ಭಾಗವಹಿಸಿ ನಿಮ್ಮ ಪ್ರತಿರೋಧವನ್ನು ವೇದಿಕೆಯಲ್ಲಿ ಬಹಿರಂಗಪಡಿಸಿ. ಇಲ್ಲದಿದ್ದಲ್ಲಿ ಬಾಯಿಬಡುಕರಿಗೆ ಪುಕ್ಕಟೆ ಅವಕಾಶ ಸಿಗುತ್ತದೆ.

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...