Homeಚಳವಳಿರೈತ ಹೋರಾಟ: ಯುವಕರನ್ನು ಸೆಳೆಯುತ್ತಿರುವ ಮಿನಿ ಕಿಸಾನ್ ಸಂಸತ್‌ಗಳು

ರೈತ ಹೋರಾಟ: ಯುವಕರನ್ನು ಸೆಳೆಯುತ್ತಿರುವ ಮಿನಿ ಕಿಸಾನ್ ಸಂಸತ್‌ಗಳು

ಸಿಂಘು ಗಡಿಯಲ್ಲಿ ರೈತರ ಟ್ರಾಲಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದು ಅಕ್ಕ ಪಕ್ಕದ ಟೆಂಟ್‌ಗಳಿಗೂ ತಾಗಿ ಅಪಾರ ಪ್ರಮಾಣದ ಹಾನಿಯುಂಟಾಗಿದೆ.

- Advertisement -
- Advertisement -

ರೈತ ಸಂಘಟನೆ ಸಂಯುಕ್ತ ಕಿಸಾನ್ ಮೋರ್ಚಾ, ದೆಹಲಿಯ ಜಂತರ್‌ ಮಂತರ್‌ನಲ್ಲಿ ಆಯೋಜಿಸಿರುವ ಕಿಸಾನ್ ಸಂಸತ್ ಕೂಡ ಮಾನ್ಸೂನ್ ಅಧಿವೇಶನದಂತೆ ಸೋಮವಾರ (ಜುಲೈ 26) ಮುಂದುವರೆಯಲಿದೆ. ಇದರ ಜೊತೆಗೆ ದೆಹಲಿಯ ಹೊರ ಭಾಗಗಳಲ್ಲಿಯೂ ಮಿನಿ ಕಿಸಾನ್ ಸಂಸತ್‌ಗಳು ನಡೆಯುತ್ತಿದ್ದು ಯುವಜನತೆಯನ್ನು ಸೆಳೆಯುತ್ತಿವೆ ಎಂದು ಎಸ್‌ಕೆಎಂ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಈಗಾಗಲೇ ಜಂತರ್ ಮಂತರ್‌ನಲ್ಲಿರುವ ಕಿಸಾನ್ ಸಂಸತ್‌ನಲ್ಲಿ ಜುಲೈ 22 ಮತ್ತು 23 ರಂದು ರೈತ ವಿರೋಧಿ ಎಪಿಎಂಸಿ ಬೈಪಾಸ್ ಕಾಯ್ದೆ ಕುರಿತು ಚರ್ಚಿಸಿ ಅದನ್ನು ತಕ್ಷಣ ರದ್ದುಗೊಳಿಸುವ ನಿರ್ಣಯವನ್ನು ಅಂಗೀಕರಿಸಲಾಗಿದೆ. ಕಿಸಾನ್ ಸಂಸತ್‌ನ ಚರ್ಚೆಗಳನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರರವು ಅಸ್ತಿತ್ವದಲ್ಲಿರುವ ಎಪಿಎಂಸಿ ಮಂಡಿ ವ್ಯವಸ್ಥೆಯನ್ನು ಸುಧಾರಿಸಬೇಕಾಗಿದೆ. ಇದಕ್ಕೆ ಒಕ್ಕೂಟ ಸರ್ಕಾರದ ಬಜೆಟ್ ಬೆಂಬಲ ಪಡೆಯಬೇಕು ಎಂದು ಎಸ್‌ಕೆಎಂ ಹೇಳಿದೆ.

ಮಿನಿ ಕಿಸಾನ್ ಸಂಸತ್‌ಗಳು ಇತರ ಸ್ಥಳಗಳಲ್ಲಿಯೂ ಆಯೋಜಿಸಲಾಗುತ್ತಿರುವುದು ಗಮನಾರ್ಹ ಬೆಳವಣಿಗೆಯಾಗಿದೆ. ಪಂಜಾಬ್‌ನ ಲೂಧಿಯಾನ ಜಿಲ್ಲೆಯ ಕಿಲಾ ರಾಯ್ಪುರದ ಪ್ರತಿಭಟನಾ ಸ್ಥಳದಲ್ಲಿ ನಡೆಸಲಾಗಿದೆ. ಮಕ್ಕಳು ಕೂಡ ಕಿಸಾನ್ ಸಂಸತ್‌ಗಳನ್ನು ನಡೆಸಿದ್ದಾರೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಮಾನ್ಸೂನ್ ಅಧಿವೇಶನ: ಇಂದಿನಿಂದ ಜಂತರ್ ಮಂತರ್‌ನಲ್ಲಿ ಕಿಸಾನ್ ಸಂಸತ್‌ ಆರಂಭ

ಶನಿವಾರ ಮತ್ತೆ ಸಿಂಘು ಬಾರ್ಡರ್ ಪ್ರತಿಭಟನಾ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈ ಘಟನೆಯಲ್ಲಿ ಅನೇಕ ಟೆಂಟ್‌ಗಳು ನಾಶವಾಗಿವೆ. ಆದರೂ, ರೈತರ ಮನೋಭಾವದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಪ್ರತಿಭಟನೆ ಮುಂದುವರೆಯುತ್ತದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಹೇಳಿದೆ.

ಶನಿವಾರ ಸಂಜೆ ಹೊತ್ತಿಗೆ ಸಿಂಘು ಗಡಿಯಲ್ಲಿನ ರೈತರ ಟ್ರಾಲಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದು ಅಕ್ಕ ಪಕ್ಕದ ಟೆಂಟ್‌ಗಳಿಗೂ ತಾಗಿದೆ. ಅಪಾರ ಪ್ರಮಾಣದ ಹಾನಿಯುಂಟಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ವರದಿಯಾಗಿದೆ.

’ಇಂತಹ ಪರಿಸ್ಥಿತಿಯ ಹೊರತಾಗಿಯೂ, ನಮ್ಮ ಹಕ್ಕುಗಳಿಗಾಗಿ ನಾವು ನಿಲ್ಲುತ್ತೇವೆ. ಸರ್ಕಾರ ಇಂತಹ ಕೃತ್ಯಗಳನ್ನು ಮಾಡಿ ನಮ್ಮನ್ನು ಹೆದರಿಸಲು ಸಾಧ್ಯವಿಲ್ಲ’ ಎಂದು ರೈತರು ಹೇಳಿದ್ದಾರೆ.


ಇದನ್ನೂ ಓದಿ: ಸಂಸತ್ತನ್ನು ಹೇಗೆ ನಡೆಸಬೇಕೆಂದು ನಾವು ಒಕ್ಕೂಟ ಸರ್ಕಾರಕ್ಕೆ ತೋರಿಸುತ್ತೇವೆ – ಯೋಗೇಂದ್ರ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...