Homeಮುಖಪುಟಪರಿಷ್ಕರಣೆಯಾಗದ ಕಾರ್ಮಿಕರ ಕನಿಷ್ಠ ವೇತನ : ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್

ಪರಿಷ್ಕರಣೆಯಾಗದ ಕಾರ್ಮಿಕರ ಕನಿಷ್ಠ ವೇತನ : ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್

- Advertisement -
- Advertisement -

ಕೃಷಿ ಸೇರಿದಂತೆ ವಿವಿಧ ಏಳು ವಲಯಗಳ ಕಾರ್ಮಿಕರ ಕನಿಷ್ಠ ವೇತನವನ್ನು ಕಳೆದ ಏಳು ವರ್ಷಗಳಿಂದ ಪರಿಷ್ಕರಣೆ ಮಾಡಲಾಗಿಲ್ಲ ಎಂದು ಆಕ್ಷೇಪಿಸಿ ಸಲ್ಲಿಸಲಾದ ಅರ್ಜಿ ಸಂಬಂಧ ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಬುಧವಾರ (ಫೆ.19) ನೋಟಿಸ್ ಜಾರಿ ಮಾಡಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ಆಲ್ ಇಂಡಿಯಾ ಸೆಂಟ್ರಲ್ ಯೂನಿಯನ್ ಆಫ್ ಟ್ರೇಡ್ ಕೌನ್ಸಿಲ್ (ಎಐಸಿಸಿಟಿಯು) ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಅನಂತ್ ರಮಾನಾಥ ಹೆಗ್ಡೆ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿದೆ.

ವರದಿಯ ಪ್ರಕಾರ, ಕೆಲ ಕಾಲ ಅರ್ಜಿ ಆಲಿಸಿದ ಪೀಠ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ, ಮುಖ್ಯ ಕಾರ್ಮಿಕ ಆಯುಕ್ತರಿಗೆ ನೋಟಿಸ್ ಮಾಡಿದ್ದು, ವಿಚಾರಣೆಯನ್ನು ಮಾರ್ಚ್ 10ಕ್ಕೆ ಮುಂದೂಡಿದೆ. ಅರ್ಜಿದಾರರ ಪರ ವಕೀಲೆ ಮೈತ್ರೇಯಿ ಕೃಷ್ಣನ್ ವಾದ ಮಂಡಿಸಿದ್ದಾರೆ.

ಎಐಸಿಸಿಟಿಯು ಅರ್ಜಿಯಲ್ಲಿ, ಅಧಿಸೂಚಿತ ಉದ್ಯೋಗಗಳ (ಶೆಡ್ಯೂಲ್ಡ್‌ ಎಂಪ್ಲಾಯ್‌ಮೆಂಟ್) ಕನಿಷ್ಠ ವೇತನವನ್ನು ಪ್ರತಿ 5 ವರ್ಷಕ್ಕೊಮ್ಮೆ ಪರಿಷ್ಕರಣೆ ಮಾಡಬೇಕು. ಆದರೆ, ಕೃಷಿ ಕಾರ್ಮಿಕರು, ಜಿಪ್ಸಂ ಹಾಗೂ ಇತರೆ ಗಣಿಗಾರಿಕೆ, ಕಟ್ಟಡ, ರಸ್ತೆಗಳ ನಿರ್ಮಾಣ ಹಾಗೂ ನಿರ್ವಹಣೆ, ಕಲ್ಲು ಗಣಿಗಾರಿಕೆ, ಸ್ವೀಪಿಂಗ್ ಮತ್ತು ಕ್ಲೀನಿಂಗ್, ವಾಚ್ ಆ್ಯಂಡ್ ವಾರ್ಡ್, ಲೋಡಿಂಗ್, ಅನ್‌ಲೋಡಿಂಗ್ ವಲಯದ ಉದ್ಯೋಗಳಲ್ಲಿ ತೊಡಗಿಸಿಕೊಂಡಿರುವ ಕಾರ್ಮಿಕರ ಕನಿಷ್ಠ ವೇತನ ಕಳೆದ ಏಳು ವರ್ಷಗಳಿಂದ ಪರಿಷ್ಕರಣೆ ಮಾಡಿಲ್ಲ ಎಂದು ಹೇಳಲಾಗಿದೆ.

ಈ ಉದ್ಯೋಗಗಳಿಗೆ ಕೊನೆ ಬಾರಿ 2017ರಲ್ಲಿ ಕನಿಷ್ಠ ವೇತನ ಪರಿಷ್ಕರಣೆ ಮಾಡಲಾಗಿತ್ತು. ಆದ್ದರಿಂದ, ಸುಪ್ರೀಂಕೋರ್ಟ್‌ನ ಮಾನದಂಡಗಳಿಗೆ ಅನಸಾರವಾಗಿ ಈ ಉದ್ಯೋಗಗಳಲ್ಲಿ ತೊಡಗಿಸಿಕೊಂಡಿರುವ ಕಾರ್ಮಿಕರ ಕನಿಷ್ಠ ವೇತನ ಪರಿಷ್ಕರಣೆ ಮಾಡಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ ಎಂದು ಬಾರ್ & ಬೆಂಚ್ ತಿಳಿಸಿದೆ.

ಮಾಜಿ ಸಿಎಂ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದ ವ್ಯಕ್ತಿಯ ಕೊಲೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...