Homeಚಳವಳಿರೈತರ ಮೇಲೆ ಹರಿದ ಕಾರನ್ನು ಅಜಯ್ ಮಿಶ್ರಾ ಪುತ್ರ ಆಶೀಶ್ ಚಲಾಯಿಸುತ್ತಿದ್ದರು: ಗಾಯಾಳು ರೈತ ಮುಖಂಡ

ರೈತರ ಮೇಲೆ ಹರಿದ ಕಾರನ್ನು ಅಜಯ್ ಮಿಶ್ರಾ ಪುತ್ರ ಆಶೀಶ್ ಚಲಾಯಿಸುತ್ತಿದ್ದರು: ಗಾಯಾಳು ರೈತ ಮುಖಂಡ

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ಹಿಂಸಾಚಾರದಲ್ಲಿ ನಾಲ್ಕು ರೈತರು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ ಎರಡು ದಿನಗಳ ನಂತರ ಗಾಯಾಳು ರೈತ ಮುಖಂಡ ಹೇಳಿಕೆ ನೀಡಿದ್ದು, ಪ್ರತಿಭಟನಾಕಾರರ ಮೇಲೆ ಹರಿದ ಕಾರನ್ನು ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಚಾಲನೆ ಮಾಡುತ್ತಿದ್ದರು ಎಂದು ಆರೋಪಿಸಿದ್ದಾರೆ.

ದೆಹಲಿಯ ಮೇದಂತದಲ್ಲಿ ಆಸ್ಪತ್ರೆಗೆ ದಾಖಲಾಗಿರುವ ರೈತ ಮುಖಂಡ ತೇಜಿಂದರ್ ಸಿಂಗ್ ವಿರ್ಕ್, 72 ಗಂಟೆಗಳ ನಂತರವೂ ಆರೋಪಿಗಳನ್ನು ಬಂಧಿಸದಿರುವುದು ದುರದೃಷ್ಟಕರ ಎಂದು ಹೇಳಿದ್ದಾರೆ.

ಭಾನುವಾರ ಕೇಂದ್ರ ಸಚಿವ ಅಜಯ್ ಮಿಶ್ರಾ ಭೇಟಿ ಮತ್ತು ಉಪಮುಖ್ಯಮಂತ್ರಿ ಕೇಶವ್ ಶರ್ಮಾ ವಿರುದ್ಧ ನಡೆದ ಪ್ರತಿಭಟನೆಯನ್ನು ರೈತ ಮುಖಂಡ ಮತ್ತು ಎಸ್‌ಕೆಎಂ ಸದಸ್ಯ ತೇಜಿಂದರ್ ಸಿಂಗ್ ವಿರ್ಕ್ ಆಯೋಜಿಸಿದ್ದರು.

ಇದನ್ನೂ ಓದಿ: ಇತ್ತ ಹತ್ಯೆಗೀಡಾದ ರೈತರಿಗಾಗಿ ಶೋಕಿಸುತ್ತಿರುವ ದೇಶ : ಅತ್ತ ಯುಪಿಯ ಕಾರ್ಯಕ್ರಮಗಳಲ್ಲಿ ಪ್ರಧಾನಿ ಭಾಗಿ

NDTV ಜೊತೆಗೆ ಮಾತನಾಡಿರುವ ತೇಜಿಂದರ್ ವಿರ್ಕ್, “ಇದು ನಮ್ಮನ್ನು ಕೊಲ್ಲುವ ಪಿತೂರಿಯಾಗಿತ್ತು. ಅಜಯ್ ಮಿಶ್ರಾ ಅವರು ಲಖಿಂಪುರವನ್ನು ಬಿಟ್ಟು ಉತ್ತರ ಪ್ರದೇಶದಲ್ಲಿ ರೈತರಿಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಯ ವಿರುದ್ಧ ನಾವು ಪ್ರತಿಭಟನೆ ನಡೆಸುತ್ತಿದ್ದೆವು. ನಾವು ಪೊಲೀಸರು ಮತ್ತು ಆಡಳಿತದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇವು ಅವರ ಮೇಲೆ ಕಪ್ಪು ಬಾವುಟ ಬೀಸಲು ಮಾರ್ಗದುದ್ದಕ್ಕೂ ನಿಂತಿದ್ದೆವು” ಎಂದಿದ್ದಾರೆ.

“ಅವರ ಮಾರ್ಗ ಬದಲಾಗಿದೆ ಎಂದು ನಮಗೆ ಮಧ್ಯಾಹ್ನ 3 ಗಂಟೆಗೆ ತಿಳಿಯಿತು. ನಾವು ಶಾಂತಿಯುತವಾಗಿ ಹಿಂತಿರುಗಲಾರಂಭಿಸಿದೆವು. ಇದ್ದಕ್ಕಿದ್ದಂತೆ, ವೇಗವಾಗಿ ಬಂದ ಕಾರುಗಳು ನಮಗೆ ಹಿಂದಿನಿಂದ ಡಿಕ್ಕಿ ಹೊಡೆದವು. ಕಾರು ಗಂಟೆಗೆ 100 ಕಿಮೀ ವೇಗದಲ್ಲಿತ್ತು. ಅವರು ಉದ್ದೇಶಪೂರ್ವಕವಾಗಿ ನಮ್ಮ ಮೇಲೆ ಕಾರು ಹರಿಸಿದರು. ಅಜಯ್ ಮಿಶ್ರಾ ಅವರ ಮಗ ಮತ್ತು ಅವನ ಸಹಚರರು ಕಾರಿನಲ್ಲಿದ್ದರು. ಆಗ ನನಗೆ ಪ್ರಜ್ಞೆ ತಪ್ಪಿತು” ಎಂದು ಮಾಹಿತಿ ನೀಡಿದ್ದಾರೆ.

ಕೇಂದ್ರ ಸಚಿವರನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿರುವ ರೈತ ಮುಖಂಡ, “ನಾನು ಸಾಕ್ಷಿ ಹೇಳಲು ಸಿದ್ಧನಿದ್ದೇನೆ. ಯೋಗಿ ಆದಿತ್ಯನಾಥ್ ಸರ್ಕಾರ ದಾಳಿಕೋರರಿಗೆ ಸಹಾಯ ಮಾಡುತ್ತಿದೆ” ಎಂದು ಆರೋಪಿಸಿದ್ದಾರೆ.

ಭಾನುವಾರದ ಹಿಂಸಾಚಾರದಲ್ಲಿ ತೀವ್ರವಾಗಿ ಗಾಯಗೊಂಡಿರುವ ಸಂಯುಕ್ತ ಕಿಸಾನ್ ಮೋರ್ಚಾದ ಸದಸ್ಯ ತೇಜಿಂದರ್ ಸಿಂಗ್ ವಿರ್ಕ್ ಸದ್ಯ ದೆಹಲಿಯ ಮೇದಂತದಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಇದನ್ನೂ ಓದಿ: #भाजपा_के_आतंकवादी | ‘ಬಿಜೆಪಿ ಭಯೋತ್ಪಾದಕರು’ – ಟ್ವಿಟರ್‌‌‌ ಟ್ರೆಂಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...