Homeಕರ್ನಾಟಕವಾಲ್ಮೀಕಿ ನಿಗಮದ ಖಾತೆಯಿಂದ ₹87 ಕೋಟಿ ಹಣ ವರ್ಗಾವಣೆ: ಸಚಿವ ಬಿ. ನಾಗೇಂದ್ರ ಸ್ಪಷ್ಟನೆ

ವಾಲ್ಮೀಕಿ ನಿಗಮದ ಖಾತೆಯಿಂದ ₹87 ಕೋಟಿ ಹಣ ವರ್ಗಾವಣೆ: ಸಚಿವ ಬಿ. ನಾಗೇಂದ್ರ ಸ್ಪಷ್ಟನೆ

- Advertisement -
- Advertisement -

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದಲ್ಲಿ ಅವ್ಯವಹಾರ ನಡೆದಿರುವುದನ್ನು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಅವರು ಒಪ್ಪಿಕೊಂಡಿದ್ದಾರೆ. ಆದರೆ, ಈ ಹಗರಣದಲ್ಲಿ ನನ್ನ ಪಾತ್ರ ಇಲ್ಲ. ಆದ್ದರಿಂದ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ನಿಗಮದ ಬೆಂಗಳೂರು ಕಚೇರಿಯಲ್ಲಿ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಚಂದ್ರಶೇಖರನ್ (48) ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ವಿರೋಧ ಪಕ್ಷಗಳ ನಾಯಕರು ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿದ್ದರು. ಈ ಹಿನ್ನೆಲೆ ಸಚಿವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.

ನಿಗಮದ ಮುಖ್ಯ ಖಾತೆಯಿಂದ ಯೂನಿಯನ್ ಬ್ಯಾಂಕ್‌ನ ಎಂ.ಜಿ ರಸ್ತೆ ಶಾಖೆಯ ಅನಧಿಕೃತ ಖಾತೆಗೆ ಮೂರು ಬಾರಿ ಹಣವನ್ನು ವರ್ಗಾವಣೆ ಮಾಡಲಾಗಿದೆ. ನಿಗಮದ ಖಾತೆಯಲ್ಲಿ 2023-24 ಹಾಗೂ 2024-25ನೇ ಸಾಲಿನ ಯೋಜನೆಗಳಿಗೆ ಮೀಸಲಿಟ್ಟ 187 ಕೋಟಿ ರೂಪಾಯಿ ಹಣದಲ್ಲಿ 87 ಕೋಟಿ ರೂ. ವರ್ಗಾವಣೆಯಾಗಿದೆ. ಈ ವಿಷಯ ನನ್ನ ಮತ್ತು ನಿಗಮದ ಅಧ್ಯಕ್ಷರ ಗಮನಕ್ಕೂ ಬಂದಿಲ್ಲ ಎಂದು ಸಚಿವರು ತಿಳಿಸಿದ್ದಾರೆ.

ದೊಡ್ಡ ಮೊತ್ತದ ಹಣವನ್ನು ನಿಗಮದ ಮುಖ್ಯ ಖಾತೆಯಿಂದ ವರ್ಗಾವಣೆ ಮಾಡಲು ಆಡಳಿತ ಮಂಡಳಿಯ ಅನುಮೋದನೆ ಪಡೆಯಬೇಕು. ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಸರ್ಕಾರವೂ ಆದೇಶ ಮಾಡಲು ಸಾಧ್ಯವಿಲ್ಲ. ಸಹಿ ನಕಲು ಮಾಡಲಾಗಿದೆ ಎಂದು ವ್ಯವಸ್ಥಾಪಕ ನಿರ್ದೇಶಕರೇ ದೂರು ನೀಡಿದ್ದಾರೆ. ಕೆಳ ಹಂತದ ಅಧಿಕಾರಿಗೆ ದೊಡ್ಡ ಮೊತ್ತದ ಹಣ ವರ್ಗಾವಣೆ ಮಾಡುವ ಅಧಿಕಾರ ಹೇಗೆ ನೀಡಲಾಯಿತು? ಯಾರದ್ದಾದರೂ ಒತ್ತಡವಿತ್ತಾ? ಎನ್ನುವುದರ ಬಗ್ಗೆಯೂ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಬ್ಯಾಂಕ್ ಅಧಿಕಾರಿಗಳು ಕೂಡ ಇದರಲ್ಲಿ ಪಾಲ್ಗೊಂಡಿರುವ ಶಂಕೆಯಿಂದೆ. ಹಣ ವರ್ಗಾವಣೆಯಾದಾಗ ಸಂದೇಶ ಕೂಡ ಬರದಂತೆ ಮಾಡಲಾಗಿದೆ. ಬ್ಯಾಂಕ್‌ನ ಉನ್ನತಾಧಿಕಾರಿಗಳನ್ನು ಸಂಪರ್ಕಿಸಿ ಹಣವನ್ನು ನಿಗಮದ ಖಾತೆಗೆ ಮರಳಿಸುವಂತೆ ಸೂಚಿಸಿದ್ದೇವೆ ಎಂದು ಸಚಿವರು ಹೇಳಿದ್ದಾರೆ.

ಈ ವಿಷಯ ಸರ್ಕಾರದ ಗಮನಕ್ಕೆ ಬಂದ ಬೆನ್ನಲೇ ಗಂಭೀರವಾಗಿ ಪರಿಗಣಿಸಿ ಸಿಐಡಿ ತನಿಖೆಗೆ ವಹಿಸಲಾಗಿದೆ. ನಿಗಮದ ಅಧೀಕ್ಷಕ ಚಂದ್ರಶೇಖರನ್ ಆತ್ಮಹತ್ಯೆ ಅತ್ಯಂತದ ದುಖಃದ ವಿಷಯ. ಈ ಸಂಬಂಧ ನಿಗಮದ ವ್ಯವಸ್ಥಾಪಕ ನಿರ್ದೇಶಕ ಜೆ.ಜೆ ಪದ್ಮನಾಭ, ಲೆಕ್ಕಾಧಿಕಾರಿ ಪರಶುರಾಮ್ ಮತ್ತು ಬ್ಯಾಂಕ್ ವ್ಯವಸ್ಥಾಪಕಿ ಸುಚಿಸ್ಮಿತಾ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಒಟ್ಟು ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಮತ್ತು ಅವರು ಎಷ್ಟೇ ಪ್ರಭಾವಶಾಲಿಯಾಗಿದ್ದರೂ ನಾವು ಬಿಡುವುದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಹಣ ಮರಳಿಸಲು ಅಂತಿಮ ಗಡುವು

ನಿಗಮದ ಮುಖ್ಯ ಖಾತೆಯಿಂದ 87 ಕೋಟಿ ರೂ. ವರ್ಗಾವಣೆಯಾಗಿದೆ. ಈ ಪೈಕಿ 28 ಕೋಟಿ ರೂ. ಮರಳಿ ಬಂದಿದೆ. ಉಳಿದ ಹಣವನ್ನು ಮರಳಿಸುವ ಸಂಬಂಧ ಬ್ಯಾಂಕ್‌ನ ಉನ್ನತಾಧಿಕಾರಿಗಳ ಜೊತೆ ಮಾತನಾಡಿದ್ದೇವೆ. ಹಣ ಮರಳಿಸಲು ಅಂತಿಮ ಗಡುವು ಕೊಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಸಾಫ್ಟ್‌ವೇರ್ ಕಂಪನಿ ಖಾತೆಗೆ ಹಣ ವರ್ಗಾವಣೆ

ಮಾರ್ಚ್ 1ರಿಂದ 31ರ ನಡುವೆ ನಿಗಮದ ಮೂಲ ಖಾತೆಯಿಂದ 87 ಕೋಟಿ ರೂಪಾಯಿ ಹಣವನ್ನು ಎಂ.ಜಿ ರಸ್ತೆಯ ಯೂನಿಯನ್‌ ಬ್ಯಾಂಕ್‌ ಶಾಖೆಯ ಅನಧಿಕೃತ ಖಾತೆಯೊಂದಕ್ಕೆ ವರ್ಗಾಯಿಸಲಾಗಿದೆ. ಅಲ್ಲಿಂದ ಸಾಫ್ಟ್‌ವೇರ್ ಕಂಪನಿಯೊಂದರ ಖಾತೆಗೆ ಹಣ ವರ್ಗಾವಣೆಯಾಗಿದೆ ಎಂಬ ಮಾಹಿತಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಎನ್‌ ಮಂಜುನಾಥ್ ಅವರಿಗೆ ನಿಗಮದ ಅಧಿಕಾರಿಗಳು ಸಲ್ಲಿಸಿರುವ ಪ್ರಾಥಮಿಕ ವರದಿಯಲ್ಲಿ ಇದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಆತ್ಮಹತ್ಯೆ ಪ್ರಕರಣ: ಮೂವರು ಉನ್ನತಾಧಿಕಾರಿಗಳ ವಿರುದ್ದ ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...