Homeಕರ್ನಾಟಕ‘ಸಚಿವ ಬಿಸಿ ನಾಗೇಶ್‌ ತಪ್ಪು ಮಾಹಿತಿ ನೀಡಿದ್ದಾರೆ’: ಪಠ್ಯಪುಸ್ತಕದ ಬಗ್ಗೆ ಬರಗೂರು ರಾಮಚಂದ್ರಪ್ಪ ಸ್ಪಷ್ಟನೆ

‘ಸಚಿವ ಬಿಸಿ ನಾಗೇಶ್‌ ತಪ್ಪು ಮಾಹಿತಿ ನೀಡಿದ್ದಾರೆ’: ಪಠ್ಯಪುಸ್ತಕದ ಬಗ್ಗೆ ಬರಗೂರು ರಾಮಚಂದ್ರಪ್ಪ ಸ್ಪಷ್ಟನೆ

- Advertisement -
- Advertisement -

ಬರಗೂರು ರಾಮಚಂದ್ರಪ್ಪ ಅಧ್ಯಕ್ಷತೆಯ ಸಮಿತಿಯು ಮಹಾತ್ಮ ಗಾಂಧಿ, ಬಾಬಾ ಸಾಹೇಬ್ ಅಂಬೇಡ್ಕರ್, ಮೈಸೂರು ಮಹಾರಾಜರು, ಸಂಗೊಳ್ಳಿ ರಾಯಣ್ಣ, ರಾಣಿ ಅಬ್ಬಕ್ಕ, ಮದಕರಿ ನಾಯಕ, ಕುವೆಂಪು ಮುಂತಾದ ಮಹನೀಯರ ಪಾಠಗಳನ್ನು ಕೈ ಬಿಟ್ಟಿತ್ತು ಎಂಬ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ಆರೋಪಕ್ಕೆ ಹಿರಿಯ ಸಾಹಿತಿ, ಶಿಕ್ಷಣ ತಜ್ಞ ಬರಗೂರು ರಾಮಚಂದ್ರಪ್ಪ ಅವರು ಪ್ರತಿಕ್ರಿಯೆ ನೀಡಿದ್ದು, “ಸಚಿವರು ತಪ್ಪು ಮಾಹಿತಿ ನೀಡಿದ್ದಾರೆ. ಸಚಿವರು ವಾದಕ್ಕೆ ಇಳಿಯುವ ಬದಲು ವಿವಾದವನ್ನು ಬಗೆಹರಿಸಿ ಶೈಕ್ಷಣಿಕ ಕ್ಷೇತ್ರದ ಘನತೆಯನ್ನು ಕಾಪಾಡಲಿ” ಎಂದು ಮಂಗಳವಾರ ಹೇಳಿದ್ದಾರೆ.

ಈ ಬಗ್ಗೆ ಪತ್ರ ಬರೆದಿರುವ ಬರಗೂರು, “ನನ್ನ ಸವಾಧ್ಯಕ್ಷತೆಯಲ್ಲಿ ಪಠ್ಯಪುಸ್ತಕಗಳ ಪರಿಷ್ಕರಣೆ ನಡೆದಾಗ ಕುವೆಂಪು, ಗಾಂಧಿ, ಅಂಬೇಡ್ಕರ್‌, ಕಿತ್ತೂರು ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ, ರಾಣಿ ಅಬ್ಬಕ್ಕ ಮದಕರಿ ನಾಯಕ, ಕೆಂಪೇಗೌಡರ ಪಠ್ಯವಿಷಯಗಳನ್ನು ಕೈಬಿಟ್ಟಿರುವುದಾಗಿ ಮಾನ್ಯ ಶಿಕ್ಷಣ ಸಚಿವರಾದ ಶ್ರೀ ಬಿ.ಸಿ.ನಾಗೇಶ್‌ ಅವರು ಹೇಳಿದ್ದಾರೆ. ಸಚಿವರು ಹೇಳಿರುವುದು ಅಪ್ಪಟ ತಪ್ಪು ಮಾಹಿತಿ” ಎಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಕುವೆಂಪು ಅವರ ರಚನೆಗಳು 10 ಮತ್ತು 7ನೇ ತರಗತಿಯ ಕನ್ನಡ ಪಠ್ಯಪುಸ್ತಕಗಳಲ್ಲಿ ಇವೆ. ಖಂಡಿತ ಕೈ ಬಿಟ್ಟಿಲ್ಲ. ಪ್ರೌಢಶಾಲೆ ಹಂತದಲ್ಲಿ ಇದ್ದ ಕುವೆಂಪು ಅವರ “ಭರತ ಭೂಮಿ ನಮ್ಮ ತಾಯಿ” ಎಂಬ ಪದ್ಯವನ್ನು ಚಿಕ್ಕಂದಿನಲ್ಲೇ ದೇಶಪ್ರೇಮದ ಭಾವನೆ ಬೆಳೆಯಲಿ ಎಂಬ ದೃಷ್ಟಿಯಿಂದ 7ನೇ ತರಗತಿಗೆ ಅಳವಡಿಸಲು ನಾವು ಸೂಚಿಸಿದ್ದೆವು ಅಷ್ಟೇ” ಎಂದು ಬರಗೂರು ಪತ್ರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: RSS, ಬಿಜೆಪಿಯ ಪಠ್ಯ ಪರಿಷ್ಕರಣೆಗೆ ವಿರೋಧ: ತನ್ನ ಪಠ್ಯ ಕೈಬಿಡಲು ದೇವನೂರ ಮಹಾದೇವ ಪತ್ರ

“ಇನ್ನು, 7ನೇ ತರಗತಿಯ 2ನೇ ಭಾಗ ಮತ್ತು 10ನೇ ತರಗತಿಯ 2ನೇ ಭಾಗದ ಸಮಾಜ ವಿಜ್ಞಾನ ಪಠ್ಯಪುಸ್ತಕಗಳಲ್ಲಿ ಗಾಂಧಿ ಕುರಿತು ಸಾಕಷ್ಟು ವಿವರಗಳಿವೆ. ಸಮಾಜ ವಿಜ್ಞಾನದ 8ನೇ ತರಗತಿಯ ಭಾಗ-1 ಮತ್ತು 10ನೇ ತರಗತಿಯ ಭಾಗ-2ರಲ್ಲಿ ಡಾ.ಅಂಬೇಡ್ಕರ್‌ ಪಾಠಗಳಿವೆ. 9ನೇ ತರಗತಿಯ ಪಠ್ಯದಲ್ಲಿ ‘ನಮ್ಮ ಸಂವಿಧಾನ’ ಎ೦ಬ ಪಾಠವಿದ್ದು ಅಲ್ಲಿಯೂ ಡಾ.ಅಂಬೇಡ್ಕರ್‌ ಅವರನ್ನು ಕುರಿತ ವಿವರಗಳಿವೆ” ಎಂದು ಅವರು ಸೂಚಿಸಿದ್ದಾರೆ.

“ಕಿತ್ತೂರು ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಅವರ ಬಗ್ಗೆ ಸಮಾಜ ವಿಜ್ಞಾನದ 6ನೇ ತರಗತಿಯ ಭಾಗ-2 ಮತ್ತು 10ನೇ ತರಗತಿಯ ಭಾಗ-1ರಲ್ಲಿ ಪಾಠಗಳಿವೆ. ಜೊತೆಗೆ ಸಂಗೊಳ್ಳಿ ರಾಯಣ್ಣ ಅವರ ಬಗ್ಗೆ 5ನೇ ತರಗತಿಯ ಕನ್ನಡ ಪಠ್ಯಪುಸ್ತಕದಲ್ಲಿ ಹೊಸದಾಗಿ ಒಂದು ಪಾಠವನ್ನು ಸೇರಿಸಲಾಗಿದೆ” ಎಂದು ಬರಗೂರು ಅವರು ತಿಳಿಸಿದ್ದಾರೆ.

“ಮದಕರಿನಾಯಕರ ಬಗ್ಗೆ ಪಾಠವನ್ನು ಕೈಬಿಟ್ಟಲ್ಲ. ಮದಕರಿ ನಾಯಕರ ಜೊತೆಗೆ ಸುರಪುರ ಸಂಸ್ಥಾನದ
ಬಗ್ಗೆಯೂ ಬರೆಸಿ ಸೇರಿಸಲಾಗಿದೆ. ಬೆಂಗಳೂರು ನಿರ್ಮಾಪಕ ಕೆಂಪೇಗೌಡರ ಬಗ್ಗೆ ವಿವರಗಳಿಲ್ಲ ಎನ್ನುವುದು ಕೂಡ ತಪ್ಪು ಮಾಹಿತಿ. ಯಲಹಂಕ ನಾಡಪ್ರಭುಗಳ ಬಗ್ಗೆ ಪ್ರತ್ಯೇಕ ವಿವರಗಳಿದ್ದು ಬೆಂಗಳೂರು ನಿರ್ಮಾತೃ ಇಮ್ಮಡಿ ಕೆಂಪೇಗೌಡರ ಬಗ್ಗೆ ಪ್ರತ್ಯೇಕ ಮಾಹಿತಿ ನೀಡಲಾಗಿದೆ. ಇದಿಷ್ಟು ಪಾಠಗಳು ಸಮಾಜ ವಿಜ್ಞಾನದ 7ನೇ ತರಗತಿಯ ಭಾಗ-1ನೇ ಪಠ್ಯಪಸ್ತಕದಲ್ಲಿವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: 1% ಕಮಿಷನ್‌‌‌ ಲಂಚ ಆರೋಪ: ಆರೋಗ್ಯ ಸಚಿವನನ್ನು ವಜಾಗೊಳಿಸಿದ ಪಂಜಾಬ್ ಸಿಎಂ!

“7ನೇ ತರಗತಿಯ ಭಾಗ-2ರ ಸಮಾಜ ವಿಜ್ಞಾನ ಪಠ್ಯದಲ್ಲಿ ರಾಣಿ ಅಬ್ಬಕ್ಕ ಕುರಿತ ವಿವರಗಳಿವೆ. 7ನೇ ತರಗತಿಯ ಭಾಗ-1ರ ಸಮಾಜ ವಿಜ್ಞಾನ ಪಠ್ಯದಲ್ಲಿ ‘ಮೈಸೂರು ಒಡೆಯರು’ ಎಂಬ ಪ್ರತ್ಯೇಕ ಅಧ್ಯಾಯವೇ ಇದೆ. ಸಚಿವರು ಹೇಳಿದಂತೆ ಇಲ್ಲಿನ ವಿವರಗಳು ಕಡಿಮೆ ಎನ್ನಿಸಿದರೆ ‘ಮರುಪರಿಷ್ಕರಣೆ’ಯಲ್ಲಿ ವಿಸ್ತರಿಸಬಹುದಿತ್ತಲ್ಲ” ಎಂದು ಬರಗೂರು ಪ್ರಶ್ನಿಸಿದ್ದಾರೆ.

“ಟಿಪ್ಪುವನ್ನೂ ಒಳಗೊಂಡಂತೆ ಯಾರ ಬಗ್ಗೆಯೂ ನಮ್ಮ ಸಮಾಜ ವಿಜ್ಞಾನ ಪಠ್ಯಪುಸ್ತಕ ಸಮಿತಿಯವರು ಆಧಾರವಿಲ್ಲದೆ ಏನನ್ನೂ ಸೇರಿಸಿಲ್ಲ, ಟಿಪ್ಪು, ಸಾವರ್ಕರ್‌ ಒಳಗೊಂಡಂತೆ ಯಾರ ಬಗ್ಗೆಯೂ ನಕಾರಾತ್ಮಕ ವಿಷಯಗಳನ್ನು ಹೇಳದೆ ನಡೆದ ಘಟನೆಗಳ ವಾಸ್ತವದ ಮಾಹಿತಿಯನ್ನಷ್ಟೇ ಕೊಡಲಾಗಿದೆ. ಪ್ರಾಥಮಿಕ ಮತ್ತು ಪ್ರೌಢಶಾಲೆ ಹಂತದ ಮಕ್ಕಳಿಗೆ ಪರ ಮತ್ತು ವಿರೋಧದ ಚರ್ಚೆಗಳ ಬದಲು ಮಾಹಿತಿ ಒದಗಿಸುವ ಉದ್ದೇಶವೇ ಮುಖ್ಯವೆಂದು ಭಾವಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಇಷ್ಟಕ್ಕೂ ಎಲ್ಲ ಪಠ್ಯಪುಸ್ತಕಗಳನ್ನು ನಾನೊಬ್ಬನೇ ಬರೆದಂತೆ ಬಿಂಬಿಸಿ ವೈಯಕ್ತಿಕ ಟೀಕೆ ಮಾಡಲಾಗುತ್ತಿದೆ. ವಾಸ್ತವವಾಗಿ ಆಗ 27 ಸಮಿತಿಗಳಿದ್ದವು. 172 ಜನ ತಜ್ಞರು, ಅಧ್ಯಾಪಕರು ಈ ಸಮಿತಿಗಳಲ್ಲಿದ್ದರು. 27 ಸಮಿತಿಗಳಿಗೂ ಒಬ್ಬೊಬ್ಬರು ಅಧ್ಯಕ್ಷರಿದ್ದರು. ಈ ಸಮಿತಿಗಳಾಚೆಗೂ ನಾವು ಅಧ್ಯಾಪಕರ ಸಂಘಗಳ ಜೊತೆ, ಡಯಟ್‌ ಪ್ರಾಂಶುಪಾಲರು, ವಿಷಯ ಪರೀಕ್ಷಕರು ಮತ್ತು ಎಲ್ಲ ಪಠ್ಯವಿಷಯ ಪರಿಣಿತರ ಜೊತೆ ಮೂವತ್ತಕ್ಕೂ ಹೆಚ್ಚು ಸಮಾಲೋಚನೆ ಸಭೆ ನಡೆಸಿ ಸಲಹೆ ಪಡೆದಿದ್ದೇನೆ. ಆನಂತರವೇ ಪರಿಷ್ಕರಣೆ ಮಾಡಲಾಗಿದೆ. ಇಷ್ಟಾಗಿಯೂ ಅರಿವಿಲ್ಲದೇ ಮಾಹಿತಿ ಕೊರತೆ ಮತ್ತು ದೋಷಗಳು ಉಳಿದಿದ್ದರೆ, ಮುಂದೆ ಪರಿಷ್ಕರಿಸಬಹುದೆಂದು ಮೊದಲಿನಿಂದಲೂ ನಾನು ಹೇಳುತ್ತಾ ಬಂದಿದ್ದೇನೆ” ಎಂದು ಅವರು ಪುನರುಚ್ಚರಿಸಿದ್ದಾರೆ.

ಇದನ್ನೂ ಓದಿ: ರೋಹಿತ್‌ ಚಕ್ರತೀರ್ಥ ‘ಐಐಟಿ-ಸಿಇಟಿ’ ಪ್ರೊಫೆಸರ್‌ ಹೌದೆ? ‘ಐಐಟಿ-ಸಿಇಟಿ’ ಎಂದರೇನು?

“ನಮಗಿಂತ ಹಿಂದೆ ಪಠ್ಯಪುಸ್ತಕ ರಚನೆ ಮಾಡಿದವರ ಬಗ್ಗೆ ಒಂದೇ ಒಂದು ಟೀಕೆಯನ್ನೂ ಮಾಡಿಲ್ಲ. ವೈಯಕ್ತಿಕ ನಿಂದನೆಯನ್ನು ಕನ್ನಡ ಸಂವೇದನೆ ನನಗೆ ಕಲಿಸಿಲ್ಲ. ಮಾನ್ಯ ಸಚಿವರು ವಾದಕ್ಕೆ ಇಳಿಯುವ ಬದಲು ವಿವಾದವನ್ನು ಬಗೆಹರಿಸಿ ಶೈಕ್ಷಣಿಕ ಕ್ಷೇತ್ರದ ಘನತೆಯನ್ನು ಕಾಪಾಡಲಿ” ಎಂದು ಅವರು ಸಚಿವ ಬಿಸಿ ನಾಗೇಶ್ ಅವರಿಗೆ ಕಿವಿಮಾತು ಹೇಳಿದ್ದಾರೆ.

ಪತ್ರವನ್ನು ಕೆಳಗೆ ನೋಡಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬರಗೂರು ಸರ್. ಈ ವ್ಯೆಕ್ತಿಗೆ ತಾವು ಉತ್ತರ ಕೊಟ್ಟು ತಮ್ಮ ಘನತೆಗೆ ಕುಂದು ತಂದುಕೊಳ್ಳಬೇಡಿ… ಅರ್ಧ ಜ್ನಾನಿಗಳಿಗೆ ಉತ್ತರ ಕೊಡದೇ ಇರೂದೇ ಲೇಸು…

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...