Homeಕರ್ನಾಟಕಮುಖ್ಯಮಂತ್ರಿ ವಿರುದ್ದವೇ ರಾಜ್ಯಪಾಲರಿಗೆ ದೂರು ನೀಡಿದ ಸಚಿವ ಈಶ್ವರಪ್ಪ!

ಮುಖ್ಯಮಂತ್ರಿ ವಿರುದ್ದವೇ ರಾಜ್ಯಪಾಲರಿಗೆ ದೂರು ನೀಡಿದ ಸಚಿವ ಈಶ್ವರಪ್ಪ!

ಬಿಜೆಪಿ ಹೈಕಮಾಂಡ್, ಪ್ರಧಾನಿ ನರೇಂದ್ರ ಮೋದಿ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಗೃಹ ಸಚಿವ ಅಮಿತ್ ಶಾ ಅವರಿಗೂ ದೂರು ನೀಡಿದ್ದಾರೆ.

- Advertisement -
- Advertisement -

ತಮ್ಮ ಇಲಾಖೆಯಲ್ಲಿ ಮುಖ್ಯಮಂತ್ರಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಬುಧವಾರ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಸಚಿವರು ರಾಜ್ಯಪಾಲರಿಗೆ ಮಾತ್ರವಲ್ಲದೆ ಬಿಜೆಪಿ ಹೈಕಮಾಂಡ್, ಪ್ರಧಾನಿ ನರೇಂದ್ರ ಮೋದಿ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಗೃಹ ಸಚಿವ ಅಮಿತ್ ಶಾ ಅವರಿಗೂ ದೂರು ನೀಡಿದ್ದಾರೆ ಎನ್ನಲಾಗಿದೆ.

ಪತ್ರದಲ್ಲಿ, “ಸಿಎಂ ಯಡಿಯೂರಪ್ಪ ಅವರು ತನ್ನ ಅಧಿಕಾರ ಮೊಟಕುಗೊಳಿಸಿ ಹಸ್ತಕ್ಷೇಪ ‌ಮಾಡುತ್ತಿದ್ದಾರೆ. ಕೂಡಲೇ ಮಧ್ಯಪ್ರವೇಶ ಮಾಡಿ ಇದಕ್ಕೆ ತಡೆ ಹಾಕಬೇಕು. ಆರ್ಥಿಕ ಇಲಾಖೆ ಮುಖ್ಯಮಂತ್ರಿಗಳ ಬಳಿಯೇ ಇದೆ. ಆದರೆ ಗ್ರಾಮೀಣಾಭಿವೃದ್ಧಿ ಇಲಾಖೆಯ ಮಹತ್ವದ ಯೋಜನೆಗಳಿಗೆ ಒಪ್ಪಿಗೆ ಕೊಡುತ್ತಿಲ್ಲ. ನನ್ನ ಇಲಾಖೆಯಲ್ಲಿ ಮಿತಿ ಮೀರಿದ ಹಸ್ತಕ್ಷೇಪ ಆಗುತ್ತಿದೆ. ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಬಿಡುಗಡೆಯಾಗಿರುವ 1200 ಕೋಟಿಗೆ ಸಂಬಂಧಿಸಿದಂತೆ ಕಾನೂನು ಮೀರಿ ಹಸ್ತಕ್ಷೇಪ ಮಾಡುತ್ತಿದ್ದಾರೆ” ಎಂದು ಈಶ್ವರಪ್ಪ ದೂರು ನೀಡಿದ್ದಾರೆ.

ಇದನ್ನೂ ಓದಿ: ಮೈತ್ರಿ ಸರ್ಕಾರದ ಶಾಸಕರಿಗೆ ಯಡಿಯೂರಪ್ಪ ಹಣದ ಆಮಿಷ: ತನಿಖೆಗೆ ಆದೇಶಿಸಿದ ಕೋರ್ಟ್

ಇಷ್ಟೇ ಅಲ್ಲದೆ ಪತ್ರದಲ್ಲಿ ಈಶ್ವರಪ್ಪ ಹಲವಾರು ಆರೋಪಗಳು ಮಾಡಿದ್ದು, “ಗ್ರಾಮೀಣ ಸುಮಾರ್ಗ ಯೋಜನೆಗೆ ಪದೇ ಪದೇ ಮನವಿ ಮಾಡ್ತಿದ್ದೇನೆ‌. ಆದರೆ ಇನ್ನೂ ಆಡಳಿತಾತ್ಮಕ ಅನುಮೋದನೆ ಕೊಟ್ಟಿಲ್ಲ. ಯಡಿಯೂರಪ್ಪನವರು 32 ಬಿಜೆಪಿ ಶಾಸಕರಿಗೆ ತಲಾ 20 ರಿಂದ 23 ಕೋಟಿ ರೂಪಾಯಿಗಳನ್ನು,‌ 42 ಬಿಜೆಪಿ ಶಾಸಕರಿಗೆ ತಲಾ 10 ಕೋಟಿ ರೂಪಾಯಿಗಳನ್ನು, ಕಾಂಗ್ರೆಸ್‌ನ 30 ಮಂದಿ ಶಾಸಕರಿಗೆ 5 ಕೋಟಿ ರೂಪಾಯಿಗಳನ್ನು ಹಾಗೂ ಜೆಡಿಎಸ್‌‌ನ 18 ಮಂದಿ ಶಾಸಕರಿಗೆ ಸರ್ಕಾರದಿಂದ ತಲಾ 5 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡವಂತೆ ಆದೇಶ ಹೊರಡಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಹೀಗೆ ತಮ್ಮ ಇಲಾಖೆಗೆ ನೀಡಿದ ಅನುದಾನದಲ್ಲಿ, ತಮ್ಮ ಗಮನಕ್ಕೆ ಬಾರದೇ ಅನುದಾನ ಹಂಚಿಕೆ ಮಾಡಿದ್ದಾರೆ ಎಂದು ಈಶ್ವರಪ್ಪ ದೂರಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿಯೂ ಚುನಾವಣೆ; ಈ ಉಪಚುನಾವಣೆಗಳಲ್ಲಿಯೂ ಬಿಜೆಪಿಯದ್ದೇ ಮೇಲುಗೈ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಅಧಿಕಾರಕ್ಕೆ ಬಂದರೆ ‘ಪಿತ್ರಾರ್ಜಿತ ಆಸ್ತಿ ತೆರಿಗೆ’ ಜಾರಿಗೊಳಿಸುವುದಾಗಿ ಕಾಂಗ್ರೆಸ್ ಹೇಳಿಲ್ಲ

0
ಕಳೆದ ಎರಡು ದಿನಗಳಿಂದ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' (Inheritance Tax) ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' ಜಾರಿಗೆ ತರಲಿದೆ. ಈ...