Homeಕರ್ನಾಟಕಕೆಲಸ ಮಾಡದೇ ಹೆಂಡ್ತಿಗೆ ಸೀರೆ ತರೋಕೆ ಹೋಗಿದ್ದ?: ಮತ್ತೆ ನಾಲಿಗೆ ಹರಿಯಬಿಟ್ಟ ಸಚಿವ ಮಾಧುಸ್ವಾಮಿ

ಕೆಲಸ ಮಾಡದೇ ಹೆಂಡ್ತಿಗೆ ಸೀರೆ ತರೋಕೆ ಹೋಗಿದ್ದ?: ಮತ್ತೆ ನಾಲಿಗೆ ಹರಿಯಬಿಟ್ಟ ಸಚಿವ ಮಾಧುಸ್ವಾಮಿ

ಜಾಡಿಸಿ ಒದ್ದರೆ ಎಲ್ಲಿಗೆ ಹೋಗಿ ಬೀಳ್ತಿಯಾ ಗೊತ್ತಾ? ಯಾವ ಸೋಪು ಹಾಕಿ ನಿನ್ನ ಹೆಂಡ್ತಿ ಸೀರೆ ತೋಳಿತ್ತೀಯಾ? ರ್ಯಾಸ್ಕಲ್ ಏನು ತಿಳ್ಕಂಡಿದ್ದೀರಾ ನೀವು? ರೆಸ್ಯುಲೂಷನ್ ಮಾಡ್ಸಿ ಸಸ್ಪೆಂಡ್ ಮಾಡ್ಸಿ ಈ ನನ್ಮಕ್ಕಳನ್ನ.. ಎಂದು ಮಾಧುಸ್ವಾಮಿಯವರು ನಾಲಿಗೆ ಹರಿಬಿಟ್ಟಿದ್ದಾರೆ.

- Advertisement -
- Advertisement -

ಹಲವು ಬಾರಿ ನಾಲಿಗೆ ಹರಿಯಬಿಟ್ಟು ಮನಬಂದಂತೆ ಮಾತನಾಡಿ ತೀವ್ರ ಟೀಕೆಗೆ ಗುರಿಯಾಗಿದ್ದ ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ ಇಂದು ಮತ್ತೆ ತಮ್ಮ ತಪ್ಪನ್ನು ಪುನಾರಾವರ್ತನೆ ಮಾಡಿದ್ದಾರೆ. ಅಧಿಕಾರಿಯೊಬ್ಬರ ಮನೆಯ ವೈಯಕ್ತಿಕ ವಿಷಯಗಳನ್ನೆಲ್ಲ ಸಾರ್ವಜನಿಕ ಸಭೆಯಲ್ಲಿ ಪ್ರಸ್ತಾಪಿಸುವ ಮೂಲಕ ತರಾಟೆಗೆ ತೆಗೆದುಕೊಂಡಿದ್ದಾರೆ. ಮಾಧುಸ್ವಾಮಿಯವರ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ತುಮಕೂರಿನಲ್ಲಿ ನಡೆದ 2020-21 ನೇ ಸಾಲಿನ ಮೂರನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಪಿಆರ್‌ಐಡಿ ಎಇಇ ಅಧಿಕಾರಿಯ ವಿರುದ್ದ ಏಕವಚನದಲ್ಲಿ ಹರಿಹಾಯ್ದಿದ್ದಾರೆ.

ಕೆಲಸ ಮಾಡದೇ ಹೆಂಡ್ತಿಗೆ ಸೀರೆ ತರೋಕೆ ಹೋಗಿದ್ದ? ಕೆಲಸ ಮಾಡದಿದ್ದರೂ ನಿನ್ನ ರಕ್ಷಣೆಗೆ ಬರುವ ಆ ಸೀರೆ ಸುತ್ತುವ ಕೃಷ್ಣ ಯಾರು? ಜಾಡಿಸಿ ಒದ್ದರೆ ಎಲ್ಲಿಗೆ ಹೋಗಿ ಬೀಳ್ತಿಯಾ ಗೊತ್ತಾ? ಯಾವ ಸೋಪು ಹಾಕಿ ನಿನ್ನ ಹೆಂಡ್ತಿ ಸೀರೆ ತೋಳಿತ್ತೀಯಾ? ರ್ಯಾಸ್ಕಲ್ ಏನು ತಿಳ್ಕಂಡಿದ್ದೀರಾ ನೀವು? ರೆಸ್ಯುಲೂಷನ್ ಮಾಡ್ಸಿ ಸಸ್ಪೆಂಡ್ ಮಾಡ್ಸಿ ಈ ನನ್ಮಕ್ಕಳನ್ನ.. ಎಂದು ಮಾಧುಸ್ವಾಮಿಯವರು ನಾಲಿಗೆ ಹರಿಬಿಟ್ಟಿದ್ದಾರೆ.

ಕೆಲಸ ಮಾಡದೇ ಅಧಿಕಾರಿಗಳು ಜಿಲ್ಲೆಯನ್ನೇ ಸಾಯಿಸುತ್ತಿದ್ದಾರೆ. ಕೊರೊನಾ, ನೀತಿ ಸಂಹಿತೆಯ ಹೆಸರಿನಲ್ಲಿ ಜಡಗಟ್ಟಿದ್ದಾರೆ. ಒಂದೇ ಒಂದು ಕಾಮಗಾರಿಯನ್ನು ಸಮರ್ಪಕವಾಗಿ ಮಾಡಿಲ್ಲ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಸಚಿವ ಮಾಧುಸ್ವಾಮಿ ವರ್ತನೆ ತಪ್ಪು, ಸಹಿಸಲು ಸಾಧ್ಯವಿಲ್ಲ: ಸಿಎಂ ಯಡಿಯೂರಪ್ಪ

ಇದೇ ಮಾಧುಸ್ವಾಮಿಯವರು ಈ ಹಿಂದೆ ಕೋಲಾರದಲ್ಲಿ ಮನವಿ ನೀಡಲು ಬಂದ ರೈತ ಮಹಿಳೆಯನ್ನು ರ್ಯಾಸ್ಕಲ್ ಎಂದು ಕರೆಯುವ ಮೂಲಕ ತೀವ್ರ ಟೀಕೆಗೆ ಒಳಗಾಗಿದ್ದರು. ತುಮಕೂರಿನಲ್ಲಿ ಹಿರಿಯ ರೈತ ಮುಖಂಡರೊಂದಿಗೆ ಅನುಚಿತವಾಗಿ ವರ್ತಿಸಿ ಟೀಕೆ ಎದುರಿಸಿದ್ದರು. ಇಂದು ಸಹ ಅದನ್ನು ಪುನಾರಾವರ್ತನೆ ಮಾಡಿದ್ದಾರೆ.

ಮಾಧುಸ್ವಾಮಿಯವರ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ಮಾಜಿ ಸಚಿವರಾದ ಡಾ.ಎಚ್.ಸಿ ಮಹದೇವಪ್ಪನವರು ಪ್ರತಿಕ್ರಿಯಿಸಿ “ಶಾಸನಬದ್ಧವಾಗಿ ಆಯ್ಕೆಯಾದ ಜನಪ್ರತಿನಿಧಿಗಳು ವಿಶ್ವಾಸನೀಯವಾದ ಭಾಷೆಯನ್ನು ಬಳಸದೇ ಇದ್ದರೆ ಅದು ಸಂವಿಧಾನಕ್ಕೆ ಅಗೌರವ ತೋರಿದಂತೆ. ಕಾನೂನು ಸಚಿವರಾದ ಮಾಧುಸ್ವಾಮಿಯವರು ಹೀಗೆ ದರ್ಪದಿಂದ ಮಾತನಾಡುತ್ತಿರುವುದು ಮೊದಲ ಬಾರಿ ಏನಲ್ಲ. ಆದರೂ ಇವರು ಹೇಗೆ ಮಾತನಾಡಿದರೂ ನಡೆಯುತ್ತದೆ. ಆದರೆ ಅಹಿಂದ ವರ್ಗಗಳು ಮತ್ತು ತಳ ವರ್ಗದವರು ಮಾತನಾಡಿದಾಗ ಮಾತ್ರ ಅದು ಅಹಂಕಾರ, ದರ್ಪ ಇತ್ಯಾದಿ ಎನಿಸಿಕೊಳ್ಳುತ್ತದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಧರ್ಮ ಪ್ರಕಾಶ್ ಎಂಬುವವರು “ಅವರ ಹೆಂಡತಿಯ ಸೀರೆಯನ್ನು ಯಾವ ಸೋಪಲ್ಲಿ ಆದ್ರೂ ತೊಳಿತಾರೆ ಅದನ್ ಕಟ್ಕೊಂಡು ನಿನಗೇನಾಗಬೇಕು’ ಡಿಟರ್ಜೆಂಟ್ ಮಾಧುಸ್ವಾಮಿ. ಅವರ ಮನೆಗೆ ಹೋಗಿ ಅವರ ಬಟ್ಟೆಗಳನ್ನು ನೀನು ತೊಳೆದು ಕೊಡುತ್ತೀಯಾ. ಇಂತಹ ದರ್ಪದ ಮಾತುಗಳನ್ನು ಮೊದಲು ಬಿಡು ಇಲ್ಲಾಂದ್ರೆ ನಿಮ್ಮ ಪಕ್ಷವನ್ನು ಕರ್ನಾಟಕ ಜನ ತೊಳೆದು ಹಾಕುತ್ತಾರೆ” ಎಂದು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಗಣಿ ಲೂಟಿಯಾದಾಗ ಮೌನವಿದ್ದ ಮಾಧುಸ್ವಾಮಿ, ಸಾಮಾನ್ಯರ ವಿರುದ್ಧ ತಿರುಗಿಬೀಳುವುದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮಾದೇವಸ್ವಾಮಿ ಒಬ್ಬ ಮಂತ್ರಿಯಾಗಿರಿ ಅಷ್ಟೇ ..ಸಂಸತ್ತಿನಲ್ಲಿ ಎರಡು ಮಾತಾಡ್ ತಕ್ಷಣ ಅವರು ತನ್ನನ್ನು ತಾನು ರಾಜ ಅಂತ ತಿಳ್ಕೊಂಡಿದ್ದಾರೆ. ಸಸ್ಪೆಂಡ್ ಮಾಡೊಕೆ ನೀವ್ಯಾರು ?ಆಡಳಿತ ನಡೆಸಿ . ದಬ್ಬಾಳಿಕೆ ಬೇಡ.

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...