Homeಅಂತರಾಷ್ಟ್ರೀಯಬಾಂಗ್ಲಾ ಮಾಜಿ ಪ್ರಧಾನಿ ಖಾಲಿದಾ ಝಿಯಾ ಅಂತ್ಯಕ್ರಿಯೆ : ಭಾರತದಿಂದ ಸಚಿವ ಜೈಶಂಕರ್ ಭಾಗಿ

ಬಾಂಗ್ಲಾ ಮಾಜಿ ಪ್ರಧಾನಿ ಖಾಲಿದಾ ಝಿಯಾ ಅಂತ್ಯಕ್ರಿಯೆ : ಭಾರತದಿಂದ ಸಚಿವ ಜೈಶಂಕರ್ ಭಾಗಿ

- Advertisement -
- Advertisement -

ಮಂಗಳವಾರ (ಡಿ.30) ನಿಧನರಾದ ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಖಾಲಿದಾ ಝಿಯಾ ಅವರ ಅಂತ್ಯಕ್ರಿಯೆ ಬುಧವಾರ (ಡಿ.31) ಢಾಕಾದಲ್ಲಿ ನಡೆಯಿತು. ಭಾರತದಿಂದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌. ಜೈಶಂಕರ್ ಪಾಲ್ಗೊಂಡು ಪ್ರಧಾನಿ ಮೋದಿ ನೀಡಿದ ಪತ್ರವನ್ನು ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ನಾಯಕ ತಾರೀಖ್ ರಹ್ಮಾನ್ ಅವರಿಗೆ ಹಸ್ತಾಂತರಿಸಿದರು.

ಢಾಕಾದ ಪ್ರಸಿದ್ದ ಮಾನಿಕ್ ಮಿಯಾ ಅವೆನ್ಯೂದಲ್ಲಿ ಮಧ್ಯಾಹ್ನದ ನಂತರ ಅಂತಿಮ ಪ್ರಾರ್ಥನೆ (ಜನಾಝಾ ನಮಾಝ್‌) ನಡೆಯಿತು. ಬೈತುಲ್ ಮುಕರ್ರಮ್ ನ್ಯಾಷನಲ್ ಮಸೀದಿಯ ಖತೀಬ್ (ಧರ್ಮಗುರು) ಮುಫ್ತಿ ಮುಹಮ್ಮದ್ ಅಬ್ದುಲ್ ಮಲಿಕ್ ಪ್ರಾರ್ಥನೆಗೆ ನೇತೃತ್ವ ನೀಡಿದರು. ಬಿಎನ್‌ಪಿ ಸ್ಥಾಯಿ ಸಮಿತಿ ಸದಸ್ಯ ನಝ್ರುಲ್ ಇಸ್ಲಾಂ ಖಾನ್ ಖಾಲಿದಾ ಝಿಯಾ ಅವರ ಸಂಕ್ಷಿಪ್ತ ಜೀವನ ಚರಿತ್ರೆಯನ್ನು ಓದಿದರು.

ಢಾಕಾದಲ್ಲಿ ಬಂದಿಳಿದ ಸ್ವಲ್ಪ ಸಮಯದ ನಂತರ, ಜೈಶಂಕರ್ ಅವರು ಬಿಎನ್‌ಪಿಯ ಹಂಗಾಮಿ ಅಧ್ಯಕ್ಷ ಮತ್ತು ಖಾಲಿದಾ ಅವರ ಹಿರಿಯ ಮಗ ತಾರೀಖ್ ರಹ್ಮಾನ್ ಅವರನ್ನು ಭೇಟಿಯಾದರು ಮತ್ತು ಮೂರು ದಶಕಗಳಿಗೂ ಹೆಚ್ಚು ಕಾಲ ದೇಶದ ರಾಜಕೀಯದಲ್ಲಿ ಪ್ರಾಬಲ್ಯ ಹೊಂದಿದ್ದ ಅಪ್ರತಿಮ ನಾಯಕಿಯ ನಿಧನಕ್ಕೆ ಭಾರತದ ಆಳವಾದ ಸಂತಾಪವನ್ನು ವ್ಯಕ್ತಪಡಿಸಿದರು.

“ಪ್ರಧಾನಿ ನರೇಂದ್ರ ಮೋದಿ ಅವರಿಂದ ಬಂದ ವೈಯಕ್ತಿಕ ಪತ್ರವನ್ನು ರಹ್ಮಾನ್ ಅವರಿಗೆ ಹಸ್ತಾಂತರಿಸಲಾಗಿದೆ. ಭಾರತ ಸರ್ಕಾರ ಮತ್ತು ಜನರ ಪರವಾಗಿ ನಾನು ತೀವ್ರ ಸಂತಾಪ ಸೂಚಿಸುತ್ತೇನೆ” ಎಂದು ಜೈಶಂಕರ್ ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ.

“ಬೇಗಂ ಖಲೀದಾ ಝಿಯಾ ಅವರ ದೃಷ್ಟಿಕೋನ ಮತ್ತು ಮೌಲ್ಯಗಳು ನಮ್ಮ ಪಾಲುದಾರಿಕೆಯ ಅಭಿವೃದ್ಧಿಗೆ ಮಾರ್ಗದರ್ಶನ ನೀಡುತ್ತವೆ ಎಂಬ ವಿಶ್ವಾಸವಿದೆ” ಎಂದು ಜೈಶಂಕರ್ ಬರೆದುಕೊಂಡಿದ್ದಾರೆ.

ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಖಾಲಿದಾ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದು, 2015ರಲ್ಲಿ ಢಾಕಾಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರೊಂದಿಗಿನ ಭೇಟಿಯನ್ನು ನೆನಪಿಸಿಕೊಂಡಿದ್ದಾರೆ.

ಇತ್ತೀಚೆಗೆ ದೊಡ್ಡ ಮಟ್ಟದ ಹಿಂಸಾಚಾರ ನಡೆದು ಬಾಂಗ್ಲಾದೇಶದ ಪರಿಸ್ಥಿತಿ ಬೂದಿಮುಚ್ಚಿದ ಕೆಂಡದಂತಿದೆ. ಇತ್ತೀಚಿನ ಹಿಂಸಾಚಾರದ ವೇಳೆ ಭಾರತದ ವಿರುದ್ದವೇ ಪ್ರಮುಖವಾಗಿ ಪ್ರತಿಭಟನೆಗಳು ವ್ಯಕ್ತಿವಾಗಿತ್ತು. ಭಾರತ ವಿರೋಧಿ ಗುಂಪಿನ ನಾಯಕ ಉಸ್ಮಾನ್ ಹಾದಿಯ ಹತ್ಯೆ, ಯುವಕರು ಭಾರತದ ವಿರುದ್ದ ಇನ್ನಷ್ಟು ಆಕ್ರೋಶಿತರಾಗುವಂತೆ ಮಾಡಿತ್ತು. ಈ ನಡುವೆ ಜೈಶಂಕರ್ ಅವರು ಬಾಂಗ್ಲಾದೇಶಕ್ಕೆ ಭೇಟಿ ನೀಡಿರುವುದು ಮಹತ್ವವೆನಿಸಿದೆ.

ವರದಿಗಳ ಪ್ರಕಾರ, ಜೈಶಂಕರ್ ಅವರ ಭೇಟಿಯ ವೇಳೆ ಭಾರೀ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...