Homeಮುಖಪುಟಬಾಂಗ್ಲಾ ಬಿಕ್ಕಟ್ಟು | ಸರ್ವಪಕ್ಷ ಸಭೆ ನಡೆಸಿದ ಕೇಂದ್ರ ಸರ್ಕಾರ : ವಿಪಕ್ಷಗಳ ಬೆಂಬಲ

ಬಾಂಗ್ಲಾ ಬಿಕ್ಕಟ್ಟು | ಸರ್ವಪಕ್ಷ ಸಭೆ ನಡೆಸಿದ ಕೇಂದ್ರ ಸರ್ಕಾರ : ವಿಪಕ್ಷಗಳ ಬೆಂಬಲ

- Advertisement -
- Advertisement -

ಬಾಂಗ್ಲಾದೇಶದಲ್ಲಿ ಉಂಟಾಗಿರುವ ಅರಾಜಕತೆ, ಪ್ರಕ್ಷುಬ್ದ ವಾತಾವರಣದ ಬಗ್ಗೆ ವಿವರಿಸಲು ಭಾರತೀಯ ವಿದೇಶಾಂಗ ಸಚಿವ ಎಸ್‌. ಜೈಶಂಕರ್ ಇಂದು (ಆ.6) ಸರ್ವಪಕ್ಷಗಳ ಸಭೆ ನಡೆಸಿದ್ದಾರೆ. ಈ ವೇಳೆ ಸಭೆಗೆ ಒಮ್ಮತದ ಬೆಂಬಲ ವ್ಯಕ್ತಪಡಿಸಿದ ಎಲ್ಲಾ ಪಕ್ಷಗಳ ಮುಖಂಡರನ್ನು ಅವರು ಶ್ಲಾಘಿಸಿದ್ದಾರೆ.

ಸಭೆಯ ಬಳಿಕ ಎಕ್ಸ್‌ನಲ್ಲಿ ಮಾಹಿತಿ ನೀಡಿರುವ ಜೈಶಂಕರ್ “ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಇಂದು ಸಂಸತ್ತಿನಲ್ಲಿ ಸರ್ವಪಕ್ಷ ಸಭೆ ಕರೆದು ಸಂಕ್ಷಿಪ್ತವಾಗಿ ವಿವರಿಸಲಾಯಿತು. ಸಭೆಗೆ ಒಮ್ಮತದ ಬೆಂಬಲ ವ್ಯಕ್ತಪಡಿಸಿದನ್ನು ಶ್ಲಾಘಿಸುತ್ತೇನೆ” ಎಂದಿದ್ದಾರೆ.

“ಕೇಂದ್ರ ಸರ್ಕಾರ ಬಾಂಗ್ಲಾದೇಶದ ಸೇನೆಯೊಂದಿಗೂ ಸಂಪರ್ಕದಲ್ಲಿದೆ. ಸರ್ಕಾರ ಸರಿಯಾದ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ” ಎಂದು ಸಭೆಯಲ್ಲಿ ಸಚಿವ ಜೈಶಂಕರ್ ಸರ್ವ ಪಕ್ಷಗಳ ನಾಯಕರಿಗೆ ತಿಳಿಸಿರುವುದಾಗಿ ಎಎನ್‌ಐ ವರದಿ ಮಾಡಿದೆ.

ಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಆರೋಗ್ಯ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮತ್ತು ಕೇಂದ್ರ ಸರ್ಕಾರದ ಪ್ರತಿನಿಧಿಗಳು ಉಪಸ್ಥಿತರಿದ್ದರು.

“ಬಾಂಗ್ಲಾದೇಶದ ಪರಿಸ್ಥಿತಿಗೆ ಸಂಬಂಧಿಸಿದಂತೆ ಭಾರತದ ದೀರ್ಘಾವಧಿ ಮತ್ತು ಅಲ್ಪಾವಧಿಯ ಕಾರ್ಯತಂತ್ರಗಳ ಬಗ್ಗೆ ರಾಹುಲ್ ಗಾಂಧಿ ಸಭೆಯಲ್ಲಿ ಪ್ರಶ್ನಿಸಿದ್ದಾರೆ. ಇದಕ್ಕೆ ಉತ್ತರಿಸಿದ ಸರ್ಕಾರ, “ಪರಿಸ್ಥಿತಿ ಉಲ್ಬಣಗೊಳ್ಳುತ್ತಿದೆ. ಈ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ” ಎಂದು ಪ್ರತಿಕ್ರಿಯಿಸಿದೆ. ಬಾಂಗ್ಲಾ ಬಿಕ್ಕಟ್ಟಿನ ಹಿಂದೆ ವಿದೇಶಿ ಕೈಗಳ ಸಂಭಾವ್ಯ ಒಳಗೊಳ್ಳುವಿಕೆ ಇರುವ ಬಗ್ಗೆ ರಾಹುಲ್ ಗಾಂಧಿ ಸರ್ಕಾರವನ್ನು ಪ್ರಶ್ನಿಸಿದ್ದು, “ಇದಕ್ಕೆ ಉತ್ತರಿಸಿದ ಸರ್ಕಾರ, ಎಲ್ಲಾ ಆಯಾಮಗಳಲ್ಲಿ ತನಿಖೆ ಮಾಡಲಾಗುತ್ತಿದೆ” ಎಂದು ಹೇಳಿರುವುದಾಗಿ ವರದಿಯಾಗಿದೆ.

ಸಭೆಯಲ್ಲಿ, ಬಾಂಗ್ಲಾದೇಶದಲ್ಲಿ ಸುಮಾರು 20,000 ಭಾರತೀಯ ಪ್ರಜೆಗಳಿದ್ದಾರೆ ಎಂದು ಸರ್ಕಾರ ಸರ್ವಪಕ್ಷಗಳ ನಾಯಕರಿಗೆ ತಿಳಿಸಿದೆ. ಎಎನ್‌ಐ ವರದಿ ಪ್ರಕಾರ, ಇದುವರೆಗೆ 8,000 ಭಾರತೀಯ ಪ್ರಜೆಗಳು ದೇಶಕ್ಕೆ ಮರಳಿದ್ದಾರೆ. ಸರ್ಕಾರ ಭಾರತೀಯ ಪ್ರಜೆಗಳೊಂದಿಗೆ ನಿರಂತರ ಸಂವಹನ ನಡೆಸುತ್ತಿದೆ ಮತ್ತು ಬಾಂಗ್ಲಾದೇಶದ ಹೈಕಮಿಷನ್ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಸಚಿವ ಜೈಶಂಕರ್ ತಿಳಿಸಿದ್ದಾರೆ.

ಅಲ್ಪಸಂಖ್ಯಾತರ ಸುರಕ್ಷತೆಗೆ ಆದ್ಯತೆ ನೀಡಲಾಗಿದ್ದು, ಅವರ ರಕ್ಷಣೆಗೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸರ್ವಪಕ್ಷ ನಾಯಕರಿಗೆ ಸಭೆಯಲ್ಲಿ ತಿಳಿಸಲಾಗಿದೆ ಎಂದು ವರದಿಗಳು ಹೇಳಿವೆ.

ಇದನ್ನೂ ಓದಿ : ಬಾಂಗ್ಲಾ ರಾಜಕೀಯ ಬಿಕ್ಕಟ್ಟು: ನೊಬೆಲ್ ಪ್ರಶಸ್ತಿ ವಿಜೇತ ಮುಹಮ್ಮದ್ ಯೂನಸ್ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...