Homeಕರ್ನಾಟಕಕುಣಿಗಲ್‌ ಶಾಸಕರನ್ನು ’ಫ್ರಾಡ್’ ಎಂದು ಕರೆದ ಸಚಿವ ಜೆ. ಸಿ. ಮಾಧುಸ್ವಾಮಿ

ಕುಣಿಗಲ್‌ ಶಾಸಕರನ್ನು ’ಫ್ರಾಡ್’ ಎಂದು ಕರೆದ ಸಚಿವ ಜೆ. ಸಿ. ಮಾಧುಸ್ವಾಮಿ

ಸಚಿವರ ಮಾತಿಗೆ ಜೆಡಿಎಸ್ ಜಿಲ್ಲಾ ಪಂಚಾಯತ್ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದು, ಸಚಿವರು ಕ್ಷಮೆ ಯಾಚಿಸಬೇಕು ಎಂದು ಘೋಷಣೆ ಕೂಗಿದ್ದಾರೆ.

- Advertisement -
- Advertisement -

ಮನೆಗಳ ಹಂಚಿಕೆಯ ವಿಷಯದ ಕುರಿತು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಮತ್ತು ಕುಣಿಗಲ್ ಕ್ಷೇತ್ರದ ಶಾಸಕ ಡಾ.ರಂಗನಾಥ್ ನಡುವೆ ಮಾತಿನ ಜಟಾಪಟಿಗೆ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ಕೆಡಿಪಿ ಸಭೆ ವೇದಿಕೆಯಾಯಿತು.

ಇಂದು ನಡೆದ ಕೆಡಿಪಿ ಸಭೆಯಲ್ಲಿ ಕುಣಿಗಲ್ ಕ್ಷೇತ್ರದ ಶಾಸಕ ಡಾ. ರಂಗನಾಥ್ ರೈತರಿಗೆ ಮನೆಗಳು ಹಂಚಿಕೆಯಾಗಿವೆ. ನಮಗೆ ಹಣ ಬಿಡುಗಡೆ ಮಾಡುತ್ತಿಲ್ಲ. ಕುಣಿಗಲ್ ಕ್ಷೇತ್ರಕ್ಕೆ ಆರು ತಿಂಗಲಿಂದಲೂ ಹಣ ಬಿಡುಗಡೆಯಾಗಿಲ್ಲ. ವಿಳಂಬ ಮಾಡುತ್ತಿದ್ದೀರಿ ಎಂದು ಸಚಿವರಿಗೆ ಕೇಳಿದರು.

ಇದರಿಂದ ಕೆರಳಿದ ಸಚಿವ ಮಾಧುಸ್ವಾಮಿ ಅವರು ಕುಣಿಗಲ್ ಕ್ಷೇತ್ರದಲ್ಲಿ ಫ್ರಾಡ್ ನಡೆದಿದೆ. 38 ಮನೆಗಳಿಗೆ ಎರಡು ಬಾರಿ ಬಿಲ್ ಮಾಡಲಾಗಿದೆ. ಹಾಗಾಗಿ ನೀವು ಫ್ರಾಢ್ ಎಂದು ಮಾತಿನ ಭರದಲ್ಲಿ ಕೂಗಾಡಿದರು ಎನ್ನಲಾಗಿದೆ.

ಸಚಿವರ ಮಾತಿಗೆ ಜೆಡಿಎಸ್ ಜಿಲ್ಲಾ ಪಂಚಾಯತ್ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು. ಸಚಿವರು ಕ್ಷಮೆ ಯಾಚಿಸಬೇಕು ಎಂದು ಘೋಷಣೆ ಕೂಗಿದರು. ಇದರಿಂದ ಸಭೆಯಲ್ಲಿ ಕೋಲಾಹಲ ಉಂಟಾಯಿತು.

 

ಈ ಸಂದರ್ಭದಲ್ಲಿ ಸಮಾಧಾನದಿಂದಲೇ ಮಾತನಾಡಿದ ಶಾಸಕ ಡಾ.ರಂಗನಾಥ್, ನನ್ನ ಕ್ಷೇತ್ರದಲ್ಲಿ 38 ಮನೆಗಳಿಗೆ ಎರಡು ಬಿಲ್ ಆಗಿದ್ದರೆ ಅದಕ್ಕೆ ಪಿಡಿಓ, ಇಒ ಹೊಣೆಗಾರರು. ಅಲ್ಲಿ ಮೋಸವಾಗಿದ್ದರೆ ಕ್ರಮ ತೆಗೆದುಕೊಳ್ಳಿ. ಅದನ್ನೇ ನೆಪ ಮಾಡಿಕೊಂಡು ನನ್ನನ್ನೇ ಫ್ರಾಡ್ ಎನ್ನುವುದು ಸರಿಯಲ್ಲ ಎಂದು ಸಚಿವರ ಮಾತಿಗೆ ಆಕ್ಷೇಪ ವ್ಯಕ್ತಪಡಿಸಿದರು.


ಓದಿ: ಹಿರಿಯ ರೈತ ಹೋರಾಟಗಾರರನ್ನು ಅವಮಾನಿಸಿದ ಸಚಿವ ಮಾಧುಸ್ವಾಮಿ ನಡೆಗೆ ತೀವ್ರ ಆಕ್ರೋಶ


ಕೇವಲ 38 ಮನೆಗಳಲ್ಲಿ ಅಕ್ರಮವಾಗಿದೆ ಎಂದು ಹಣ ಹಂಚಿಕೆ ಮಾಡದೇ ಇರುವುದು ಸರಿಯಲ್ಲ. ಬಡವರಿಗೆ ಮನೆಗಳು ಮಂಜೂರಾಗಿವೆ. ಹಣ ಬಿಡುಗಡೆ ಮಾಡಿ ಬಡ ರೈತರು ನೆಮ್ಮದಿಯಿಂದ ಜೀವನ ನಡೆಸಲು ಅನುವು ಮಾಡಿಕೊಡಿ. ದುಡ್ಡಿದೆ ಅಂದ್ರೆ ಬಿಡುಗಡೆ ಮಾಡಿ. ಇಲ್ಲಾಂದ್ರೆ ಇಲ್ಲವೆಂದು ಹೇಳಿ ಎಂದು ಸಚಿವರಿಗೆ ತಿಳಿಸಿದರು.

ಸಚಿವ ಮಾಧುಸ್ವಾಮಿ ಮಾತುಗಳಿಗೆ ವ್ಯಾಪಕ ಖಂಡನೆ ವ್ಯಕ್ತವಾಗಿದ್ದು, ಸಾರ್ವಜನಿಕ ಸಭೆಯಲ್ಲಿ ಮಾತನಾಡುವಾಗ ರಾಜಕೀಯ ಭಾಷಣದಂತೆ ಮಾತನಾಡಿರುವುದು ಅವರ ಬೇಜವಾಬ್ದಾರಿತನವನ್ನು ತೋರಿಸುತ್ತದೆ ಎಂದು ಜೆಡಿಎಸ್ ಜಿಲ್ಲಾ ಪಂಚಾಯಿತಿ ಸದಸ್ಯರು ಕಿಡಿಕಾರಿದ್ದಾರೆ.

ಈ ಸಂಬಂಧ ಶಾಸಕ ಡಾ.ರಂಗನಾಥ್ ನಾನುಗೌರಿ.ಕಾಂ ಮಾತನಾಡಿ “ಸಚಿವರು ಯಾಕೆ ಹೀಗೆ ಮಾತನಾಡುತ್ತಿದ್ದಾರೆ ಎಂದು ತಿಳಿಯದು. ಹಣ ಬಿಡುಗಡೆ ಮಾಡುವ ಬಗ್ಗೆ ಸಚಿವರಿಂದ ಸೂಕ್ತ  ಉತ್ತರ ಬರುತ್ತಿಲ್ಲ. ಇದು ಮೂರನೇ ಬಾರಿ ಹೀಗೆ ಮಾಡುತ್ತಿರುವುದು. ಸರ್ಕಾರದ ಬಳಿ ಹಣ ಇಲ್ಲವೆಂದರೆ ಸ್ಪಷ್ಟನೆ ನೀಡಲಿ ಅದು ಬಿಟ್ಟು ಹೀಗೆಲ್ಲಾ ಮಾಡುವುದರಿ ಸರಿಯಾದ ಕ್ರಮವಲ್ಲ. ದೇವರು ಅವರಿಗೆ ಯಾವಾಗ ಬುದ್ದಿ ಕೊಡುತ್ತಾನೋ ಗೊತ್ತಿಲ್ಲ. ಆದರೂ ನನಗೆ ಫೋನ್ ಮಾಡಿ ಕ್ಷಮೆಯಾಚಿಸಿದ್ದಾರೆ” ಎಂದು ಹೇಳಿದ್ದಾರೆ.


ಓದಿ: ಮಾಧುಸ್ವಾಮಿಗೆ ಕಾನೂನಿನ ಪಾಠ ಹೇಳಿಕೊಡಬೇಕಿದೆ ; ಹೋರಾಟಗಾರ್ತಿಯರ ಆಕ್ರೋಶ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...