Homeಮುಖಪುಟರಾಜ್ಯಸಭೆಯಲ್ಲಿ ವಕ್ಫ್‌ ತಿದ್ದುಪಡಿ ಮಸೂದೆ ಮಂಡನೆ

ರಾಜ್ಯಸಭೆಯಲ್ಲಿ ವಕ್ಫ್‌ ತಿದ್ದುಪಡಿ ಮಸೂದೆ ಮಂಡನೆ

- Advertisement -
- Advertisement -

ಲೋಕಸಭೆಯಲ್ಲಿ ಅಂಗೀಕಾರ ಪಡೆದ ಬಳಿಕ ವಿವಾದಿತ ವಕ್ಫ್‌ ತಿದ್ದುಪಡಿ ಮಸೂದೆಯನ್ನು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಗುರುವಾರ (ಏ.3) ರಾಜ್ಯಸಭೆಯಲ್ಲಿ ಮಂಡಿಸಿದರು.

ಬುಧವಾರ ಲೋಕಸಭೆಯಲ್ಲಿ ಮಸೂದೆ ಮಂಡನೆ ಮಾಡಲಾಗಿತ್ತು. ಸಂಸತ್ತಿನ ಕೆಳಮನೆಯಲ್ಲಿ ಸುದೀರ್ಘ 12 ಗಂಟೆಗೂ ಹೆಚ್ಚು ಸಮಯ, ಅಂದರೆ ತಡರಾತ್ರಿ 2 ಗಂಟೆಯವರೆಗೂ ಮಸೂದೆ ಮೇಲೆ ಚರ್ಚೆ ನಡೆದು, ಬಳಿಕ ಅಂಗೀಕಾರ ಪಡೆಯಲಾಗಿದೆ. ಲೋಕಸಭೆಯಲ್ಲಿ ಮಸೂದೆ ಪರ 288 ಮತಗಳು ಮತ್ತು ವಿರುದ್ಧ 232 ಮತಗಳು ಚಲಾವಣೆಯಾಗಿವೆ.

ರಾಜ್ಯಸಭೆಯಲ್ಲಿ ಮಸೂದೆ ಮಂಡಿಸಿದ ಕಿರಣ್ ರಿಜಿಜು ಅವರು, “ಈ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸುವ ಮೊದಲು ನಾವು ರಾಜ್ಯ ಸರ್ಕಾರಗಳು, ಅಲ್ಪಸಂಖ್ಯಾತ ಆಯೋಗಗಳು ಮತ್ತು ವಕ್ಫ್ ಮಂಡಳಿಗಳೊಂದಿಗೆ ಸಮಾಲೋಚಿಸಿದ್ದೇವೆ. ರಾಜ್ಯಸಭೆ ಮತ್ತು ಲೋಕಸಭೆಯ ಪ್ರತಿನಿಧಿಗಳನ್ನು ಒಳಗೊಂಡ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ರಚಿಸಲಾಗಿತ್ತು. ಜೆಪಿಸಿಯ ಸಮಾಲೋಚನೆಗಳ ಬಗ್ಗೆ ಸಂದೇಹಗಳು ಎದ್ದಿದ್ದರೂ, ವ್ಯಾಪಕ ಚರ್ಚೆಗಳ ನಂತರ ಮಸೂದೆಯನ್ನು ನಿನ್ನೆ ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ ಎಂದು ಹೇಳಿದರು.

ವಕ್ಫ್‌ ಆಸ್ತಿಗಳ ಸರಿಯಾದ ಬಳಕೆ ಭಾರತವನ್ನು ಅಭಿವೃದ್ದಿಯತ್ತ ಕೊಂಡಯ್ಯಲಿದೆ ಎಂದ ರಿಜಿಜು, ಕಾಂಗ್ರೆಸ್‌ ಸೇರಿದಂತೆ ಇತರ ಪ್ರತಿಪಕ್ಷಗಳಿಗೆ ಮಸೂದೆಯನ್ನು ಬೆಂಬಲಿಸುವಂತೆ ಮನವಿ ಮಾಡಿದರು.

ವಿಶ್ವದಲ್ಲಿಯೇ ಅತಿ ಹೆಚ್ಚು ವಕ್ಫ್‌ ಆಸ್ತಿಗಳು ಭಾರತದಲ್ಲಿದೆ. ಭಾರತೀಯ ಸೇನೆ ಮತ್ತು ರೈಲ್ವೆ ಬಳಿಕ ಅತೀ ಹೆಚ್ಚು ಆಸ್ತಿ ವಕ್ಫ್‌ ಮಂಡಳಿಗಳ ಬಳಿ ಇದೆ. ಇಷ್ಟು ಆಸ್ತಿ ಇದ್ದರೂ ಬಡ ಮುಸ್ಲಿಮರಿಗೆ ಇದರಿಂದ ಏನೂ ಪ್ರಯೋಜನ ಆಗುತ್ತಿಲ್ಲ. ಹಾಗಾಗಿ, ನಾವು ವಕ್ಫ್‌ ಆಸ್ತಿಗಳು ಮುಸ್ಲಿಂ ಸಮುದಾಯಕ್ಕೆ ಉಪಯೋಗವಾಗುವಂತೆ ಮಾಡುತ್ತಿದ್ದೇವೆ ಎಂದರು.

ಸೇನೆ ಮತ್ತು ರೈಲ್ವೆ ಆಸ್ತಿಗಳು ಸರ್ಕಾರಿ ಆಸ್ತಿಯಾಗಿದ್ದು, ಅದು ರಾಷ್ಟ್ರದ ಆಸ್ತಿ. ಆದರೆ, ವಕ್ಫ್‌ ಖಾಸಗಿ ಆಸ್ತಿ, ಇಷ್ಟು ದೊಡ್ಡ ಮಟ್ಟದಲ್ಲಿ ಖಾಸಗಿ ಆಸ್ತಿಗಳು ಇರುವಾಗ ಅದರ ಲೆಕ್ಕಾಚಾರಗಳು ಬೇಕಿದೆ. ಹಾಗಾಗಿ, ಈ ಮಸೂದೆಯನ್ನು ತರುತ್ತಿದ್ದೇವೆ ಎಂದು ಹೇಳಿದರು.

ವಕ್ಫ್‌ ತಿದ್ದುಪಡಿ ಮಸೂದೆಯು ಕೇವಲ ಬಳಕೆಯ ಕಾರಣಕ್ಕೆ ದಾಖಲೆಗಳಿಲ್ಲದೆ ಯಾವುದೇ ಆಸ್ತಿಯನ್ನು ವಕ್ಫ್‌ ಆಸ್ತಿ ಎಂದು ಘೋಷಣೆ ಮಾಡುವುದನ್ನು ತಡೆಯಲಿದೆ. ಆದಿವಾಸಿಗಳ ಆಸ್ತಿಗಳನ್ನು ವಕ್ಫ್‌ ಆಸ್ತಿ ಎನ್ನಲು ಅವಕಾಶ ನೀಡುವುದಿಲ್ಲ ಎಂದು ತಿಳಿಸಿದರು.

ವಕ್ಫ್‌ ಕಾಯ್ದೆಯ ಸೆಕ್ಷನ್ 40 ಅನ್ನು ದುರ್ಬಳಕೆ ಮಾಡಲಾಗುತ್ತಿದೆ. ಕೇರಳದಲ್ಲಿ ಕ್ರೈಸ್ತ ಸಮುದಾಯದವರು ವಾಸಿಸುತ್ತಿರುವ ಒಂದು ಇಡೀ ಗ್ರಾಮವನ್ನೇ ವಕ್ಫ್‌ ಆಸ್ತಿ ಎನ್ನಲಾಗಿದೆ. ಇದರು ವಿರುದ್ದ ಕ್ರೈಸ್ತ ಸಮುದಾಯ ನಮಗೆ ದೂರು ನೀಡಿದೆ. ಇಂತಹ ಉದಾಹರಣೆಗಳು ಕರ್ನಾಟಕ, ಹರಿಯಾಣದಲ್ಲಿ ನಡೆದಿವೆ. ಇಂತಹ ದುರ್ಬಳಕೆಯನ್ನು ತಿದ್ದುಪಡಿ ಮಸೂದೆಯ ತಡೆಯಲಿದೆ ಎಂದು ಹೇಳಿದರು.

ಪ್ರಸ್ತುತ, ದೇಶದಲ್ಲಿ 8.72 ಲಕ್ಷ ವಕ್ಫ್ ಆಸ್ತಿಗಳಿವೆ. 2006ರಲ್ಲಿ ಸಾಚಾರ್ ಸಮಿತಿಯು 4.9 ಲಕ್ಷ ವಕ್ಫ್ ಆಸ್ತಿಗಳಿಂದ 12,000 ಕೋಟಿ ರೂ.ಗಳ ಆದಾಯವನ್ನು ಅಂದಾಜಿಸಿದ್ದರೆ, ಈ ಆಸ್ತಿಗಳ ಈಗಿನ ಆದಾಯ ಎಷ್ಟಿರಬಹುದು ಊಹಿಸಿ ಎಂದು ಹೇಳಿದರು.

ಈ ಮಸೂದೆಗೆ ಸಂಬಂಧಿಸಿದಂತೆ ಪ್ರತಿಪಕ್ಷ ಸದಸ್ಯರು ಯಾವುದೇ ಗೊಂದಲಗಳಿದ್ದರೂ ಚರ್ಚೆ ನಡೆಸಬಹುದು. ನಿಮ್ಮ ಎಲ್ಲಾ ಪ್ರಶ್ನೆಗಳನ್ನು ಆಲಿಸಲು ನಾನು ಸಿದ್ದ ಎಂದು ಸಚಿವ ರಿಜಿಜು ಹೇಳಿದರು.

ವಕ್ಫ್ ತಿದ್ದುಪಡಿ ಮಸೂದೆ ಸಂವಿಧಾನದ ಮೇಲಿನ ‘ಲಜ್ಜೆಗೆಟ್ಟ ದಾಳಿ’: ಸೋನಿಯಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...