Homeಕರ್ನಾಟಕಸದನದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನಿಂದನೆ: ಸಿಟಿ ರವಿ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಸದನದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನಿಂದನೆ: ಸಿಟಿ ರವಿ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

- Advertisement -
- Advertisement -

ಬೆಳಗಾವಿ ಸುವರ್ಣಸೌಧದಲ್ಲಿ ನಡೆದಿದ್ದ ಅಧಿವೇಶನದ ವೇಳೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಗೇವಾಡಿ ಠಾಣೆಯಲ್ಲಿ ದಾಖಲಾಗಿರುವ ಲೈಂಗಿಕ ಕಿರುಕುಳ ಮತ್ತು ಮಹಿಳೆಯ ಘನತೆಗೆ ಹಾನಿ ಪ್ರಕರಣ ರದ್ದತಿ ಕೋರಿ ಬಿಜೆಪಿಯ ವಿಧಾನ ಪರಿಷತ್‌ ಸದಸ್ಯ ಸಿಟಿ ರವಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ಶುಕ್ರವಾರ (ಮೇ.3) ವಜಾಗೊಳಿಸಿದೆ ಎಂದು ವರದಿಯಾಗಿದೆ.

ಸದನದಲ್ಲಿ ಸಿಟಿ ರವಿ ಬಳಕೆ ಮಾಡಿರುವ ಪದಕ್ಕೆ ಕ್ರಿಮಿನಲ್‌ ಪ್ರಾಸಿಕ್ಯೂಷನ್‌ನಿಂದ ಶಾಸಕರಿಗೆ ಇರುವ ವಿನಾಯಿತಿ ರಕ್ಷಣೆ ದೊರೆಯುವುದಿಲ್ಲ ಎಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಆದೇಶಿಸಿದೆ ಎಂದು barandbench.com ವರದಿ ಮಾಡಿದೆ.

ಶಾಸನಸಭೆಯ ವ್ಯವಹಾರಕ್ಕೆ ಸಂಬಂಧಿಸಿದಂತೆ ಬಳಕೆ ಮಾಡಿದ ಪದಗಳಿಗೆ ಶಾಸಕರಿಗೆ ಇರುವ ರಕ್ಷಣೆ ವಿನಾಯಿತಿ ಅನ್ವಯಿಸುತ್ತದೆ. ರವಿ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿರುವ ಪದ ಮತ್ತು ಅವರ ನಡತೆಯು ಪ್ರಾಸಿಕ್ಯೂಷನ್‌ನಿಂದ ರಕ್ಷಣೆ ನೀಡುವುದಕ್ಕೆ ಅನ್ವಯಿಸುವುದಿಲ್ಲ ಎಂಬುವುದಾಗಿ ನ್ಯಾಯಾಲಯ ಹೇಳಿದೆ ಎಂದು ವರದಿ ತಿಳಿಸಿದೆ.

ಸಿಟಿ ರವಿ ಮಹಿಳೆಯ ಘನತೆಗೆ ಹಾನಿ ಮಾಡಿರುವ ಆರೋಪವಿದೆ. ಇದು ಯಾವುದೇ ರೀತಿಯಲ್ಲೂ ಸದನದ ಕಾರ್ಯನಿರ್ವಹಣೆಗೆ ಸಂಬಂಧಿಸಿದ್ದಲ್ಲ. ಹಾಗಾಗಿ, ಅದಕ್ಕೆ ವಿನಾಯಿತಿ ಇರುವುದಿಲ್ಲ ಎಂದಿರುವ ನ್ಯಾಯಾಧೀಶರು ಅರ್ಜಿ ವಜಾ ಮಾಡಿದ್ದಾರೆ.

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ನೀಡಿದ ದೂರಿನ ಅನ್ವಯ ಸಿಟಿ ರವಿ ವಿರುದ್ಧ ಬಾಗೇವಾಡಿ ಪೊಲೀಸರು 19 ಡಿಸೆಂಬರ್ 2024ರಂದು ಬಿಎನ್‌ಎಸ್‌ ಸೆಕ್ಷನ್‌ 75 (ಲೈಂಗಿಕ ಕಿರುಕುಳ) ಮತ್ತು 79 (ಮಹಿಳೆಯ ಘನತೆಗೆ ಹಾನಿ) ಅಡಿ ಪ್ರಕರಣ ದಾಖಲಿಸಿ, ಬಂಧಿಸಿದ್ದರು. ನಂತರ ಹೈಕೋರ್ಟ್‌ ಸಿಟಿ ರವಿಯ ಬಿಡುಗಡೆಗೆ ಆದೇಶಿಸಿತ್ತು.

ಬಂಟ್ವಾಳ | ಮುಸ್ಲಿಮರು ಪ್ರಯಾಣಿಸುತ್ತಿದ್ದ ರಿಕ್ಷಾದ ಮೇಲೆ ಮುಗಿಬಿದ್ದ ಸಂಘಪರಿವಾರದ ಕಾರ್ಯಕರ್ತರು!: ವೀಡಿಯೊ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು ಯಾವುದೇ...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...

ಶಬರಿಮಲೆ ತುಪ್ಪ ಮಾರಾಟ ಹಗರಣ: ತನಿಖೆ ಪೂರ್ಣಗೊಳಿಸಲು ವಿಎಸಿಬಿಗೆ 30 ದಿನ ಕಾಲಾವಕಾಶ ನೀಡಿದ ಕೇರಳ ಹೈಕೋರ್ಟ್ 

ಕೊಚ್ಚಿ: ಶಬರಿಮಲೆಯ ಅಯ್ಯಪ್ಪ ದೇಗುಲದಲ್ಲಿ ಭಕ್ತರಿಗೆ ಮಾರಾಟವಾಗುವ ಪವಿತ್ರ ನೈವೇದ್ಯ 'ಆದಿಯ ಸಿಷ್ಟಂ ತುಪ್ಪ' ಮಾರಾಟಕ್ಕೆ ಸಂಬಂಧಿಸಿದಂತೆ ಟಿಡಿಬಿ ನೌಕರರು ಹಣ ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಆರೋಪದ ತನಿಖೆಯನ್ನು ಪೂರ್ಣಗೊಳಿಸಲು ಕೇರಳ ಹೈಕೋರ್ಟ್ ಜಾಗೃತ...

ಧಾರ್ಮಿಕ ಆಚರಣೆ ಹೆಸರಿನಲ್ಲಿ ನರ್ಮದಾ ನದಿಗೆ 11,000 ಲೀಟರ್ ಹಾಲು ಸುರಿದ ಭಕ್ತರು

ಮಧ್ಯಪ್ರದೇಶದ ಅನುಪ್ಪುರ್ ಜಿಲ್ಲೆಯ ನರ್ಮದಾ ನದಿ ದಂಡೆಯಲ್ಲಿ ಬುಧವಾರ ನಡೆದ ಧಾರ್ಮಿಕ ಆಚರಣೆಯ ಸಂದರ್ಭದಲ್ಲಿ 11,000 ಲೀಟರ್ ಹಾಲು ನರ್ಮದಾ ನದಿಗೆ ಸುರಿಯಲಾಗಿದ್ದು, ಇದು ನಂಬಿಕೆ ಮತ್ತು ಪರಿಸರ ಹಾನಿಯ ಕುರಿತು ಚರ್ಚೆಗೆ...

ಪಶ್ಚಿಮ ಬಂಗಾಳ: ಹುಮಾಯೂನ್ ಕಬೀರ್ ಪಕ್ಷದೊಂದಿಗಿನ ಮೈತ್ರಿ ಹಿಂತೆಗೆದುಕೊಂಡ ಎಐಎಂಐಎಂ; ಸ್ವತಂತ್ರ ಸ್ಪರ್ಧೆ ಘೋಷಣೆ

ಮುಂಬರುವ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಹುಮಾಯೂನ್ ಕಬೀರ್ ನೇತೃತ್ವದ ಪಕ್ಷದೊಂದಿಗಿನ ಮೈತ್ರಿಯಿಂದ ಹಿಂದೆ ಸರಿಯುತ್ತಿರುವುದಾಗಿ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಘೋಷಿಸಿದೆ. ಕಬೀರ್ ಅವರ ಹೇಳಿಕೆಗಳು ಮತ್ತು ಬಹಿರಂಗಪಡಿಸುವಿಕೆಗಳು "ಮುಸ್ಲಿಮರ ಸಮಗ್ರತೆ"ಯ ಬಗ್ಗೆ...

ಏಕನಾಥ್ ಶಿಂಧೆ ಕುರಿತ ಹೇಳಿಕೆ ವಿವಾದ; ‘ಕ್ಷಮೆಯಾಚಿಸುವುದಿಲ್ಲ’ ಎಂದ ಕುನಾಲ್ ಕಮ್ರಾ

ಕೋಮುವಾದಿ ರಾಜಕಾರಣವನ್ನು ವಿರೋಧಿಸುತ್ತಾ ಬಲಪಂಥೀಯ ರಾಜಕೀಯವನ್ನು ವಿಡಂಬನೆ ಮಾಡುವ ಭಾರತದ ಖ್ಯಾತ 'ಸ್ಟಾಂಡಪ್‌ ಕಾಮಿಡಿಯನ್' ಕುನಾಲ್ ಕಮ್ರಾ ಗುರುವಾರ ಮಹಾರಾಷ್ಟ್ರ ಶಾಸಕಾಂಗ ಸಮಿತಿಯ ಮುಂದೆ ಹಾಜರಾದರು. "ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆಯನ್ನು ಗುರಿಯಾಗಿಸಿಕೊಂಡು...

ಪಶ್ಚಿಮ ಏಷ್ಯಾ ಬಿಕ್ಕಟ್ಟು| ’10 ಅಂಶಗಳ ಪ್ರಸ್ತಾವನೆಯ ಮೂರು ಷರತ್ತುಗಳನ್ನು ಉಲ್ಲಂಘಿಸಲಾಗಿದೆ’: ‘ಕದನ ವಿರಾಮ’ದ ಮರುದಿನ ಇರಾನ್ ಹೇಳಿಕೆ

ಮಂಗಳವಾರ ಒಪ್ಪಿಕೊಂಡ ಕದನ ವಿರಾಮದ ನಿಯಮಗಳನ್ನು ಅಮೆರಿಕ ಉಲ್ಲಂಘಿಸಿದೆ ಎಂದು ಇರಾನ್ ಸಂಸತ್ತಿನ ಸ್ಪೀಕರ್ ಎಂ.ಬಿ ಗಾಲಿಬಾಫ್ ಬುಧವಾರ ಆರೋಪಿಸಿದ್ದಾರೆ. ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ  X ನಲ್ಲಿ ಈಬರೆದಿರುವ ಗಾಲಿಬಾಫ್, ಅಮೆರಿಕದ ಬಗ್ಗೆ...