Homeಮುಖಪುಟಕ್ಷಮೆ ಕೇಳುತ್ತಲೇ ರೈತ ಮಹಿಳೆಯ ಮೇಲೆ ಆರೋಪಗಳ ಸುರಿಮಳೆಗೈದ ಮಾಧುಸ್ವಾಮಿ!

ಕ್ಷಮೆ ಕೇಳುತ್ತಲೇ ರೈತ ಮಹಿಳೆಯ ಮೇಲೆ ಆರೋಪಗಳ ಸುರಿಮಳೆಗೈದ ಮಾಧುಸ್ವಾಮಿ!

ಈ ನಡುಗೆ ಕಾಂಗ್ರೆಸ್‌ ಪಕ್ಷವು ಮಾಧುಸ್ವಾಮಿ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಪೊಲೀಸ್‌ ಮಹಾನಿರ್ದೇಶಕರಾದ ಪ್ರವೀಣ್‌ ಸೂದ್‌ ಬಳಿ ದೂರು ಸಲ್ಲಿಸಿದ್ದಾರೆ.

- Advertisement -
- Advertisement -

ರೈತ ಹೋರಾಟಗಾರ್ತಿಯೊಂದಿಗೆ ಅನುಚಿತವಾಗಿ ವರ್ತಿಸಿ ತೀವ್ರ ಟೀಕೆಗೆ ಗುರಿಯಾಗಿದ್ದ ಸಣ್ಣ ನೀರಾವರಿ ಮತ್ತು ಕಾನೂನು ಸಚಿವ ಮಾಧುಸ್ವಾಮಿಯವರು ಇಂದು ಕ್ಷಮೆ ಕೇಳುತ್ತಲೇ ಆ ಹೋರಾಟಗಾರ್ತಿಯ ಮೇಲೆ ಮತ್ತಷ್ಟು ಆರೋಪಗಳ ಸುರಿಮಳೆಗೈಯ್ಯುವ ಮೂಲಕ ಮತ್ತೆ ವಿವಾದಕ್ಕೊಳಗಾಗಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯನವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, “ನಾನು ರಾಜೀನಾಮೆ ಕೊಡುವ ಪ್ರಶ್ನೆ ಉದ್ಬವಿಸಲ್ಲ, ನನ್ನನ್ನು ಮಂತ್ರಿ ಮಾಡಿರುವುದು ಸಿದ್ದರಾಮಯ್ಯನಲ್ಲ, ನಮ್ಮ ನಾಯಕರು ಹೇಳಿದರೆ ಮಾತ್ರ ರಾಜೀನಾಮೆ ನೀಡತ್ತೇನೆ, ಆದರೆ ರಾಜೀನಾಮೆ ಕೊಡುವ ತಪ್ಪು ನಾನು ಮಾಡಿಲ್ಲ” ಎಂದು ತಮ್ಮ ಕೃತ್ಯವನ್ನು ಸಮರ್ಥಿಸಿಕೊಂಡಿದ್ದಾರೆ.

ನಾನು ಅಂದಿದ್ದು ನಿಜ. ಆಯಮ್ಮ ನನ್ನನ್ನ ಟೆಂಪ್ಟ್ ಮಾಡಿದ್ದಾರೆ, ಒಬ್ಬ ಮಂತ್ರಿ ಅವರ ಊರಿಗೆ ಹೋಗಿ ಸುಮ್ಮನೆ ಬೈಸಿಕೊಂಡು ಬರುವುದಕ್ಕಾಗುತ್ತದೆಯೇ? ನಾನು ಒಬ್ಬ ಮನುಷ್ಯ, ಸ್ವಾಭಿಮಾನಿ ಇದೆ. ಎಲ್ಲರಿಗೂ ಶರಣಾಗಲು ಸಾಧ್ಯವಿಲ್ಲ.

ನನಗೆ ಮುಖ ಪರಚುವಂತೆ ಮಾತನಾಡಿದರೆ ನಾನು ಸುಮ್ಮನಿರಲು ಸಾಧ್ಯವಿಲ್ಲ. ರಿಕ್ವೆಸ್ಟ್‌ ಮಾಡಿಕೊಳ್ಳಬೇಕು ಹೊರತು ನನಗೆ ಆದೇಶ ಕೊಡಬಾರದು. ನನಗೆ ಮುಖಪರಚಲು ಬಂದಾಗ ಅವರನ್ನು ಹಿಡಿದುಕೊಳ್ಳದೇ ಏನು ಮಾಡಬೇಕು ಮಾಧುಸ್ವಾಮಿ ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಈ ಘಟನೆಯಿಂದ ಬಹಳ ಬೇಸರವಾಗಿದೆ. ನಾನು ಮಾತನಾಡಿದ್ದು ತಪ್ಪು.. ಆಯಮ್ಮನಿಗೆ ಅದೇನಾಗಿತ್ತೊ ಗೊತ್ತಿಲ್ಲ. ಆಯಮ್ಮ ಬಹುಶಃ ಅದೇ ರೀತಿ ಬೆಳೆದುಕೊಂಡಬಂದಿರಬಹುದು. ಆದರೆ ನಾನು ಅದನ್ನು ಸಹಿಸಿಕೊಳ್ಳುವುದಿಲ್ಲ.

ಇದರಿಂದಾಗಿ ಯಾರಾದರೂ ಹೆಣ್ಣು ಮಕ್ಕಳ ಭಾವನೆಗೆ ನೋವಾಗಿದ್ದರೆ ನಾನು ಕ್ಷಮೆ ಕೇಳುತ್ತೇನೆ. ಆ ಪದ ಕೆಟ್ಟದಾಗಿದ್ದರೆ ನಾನು ಕ್ಷಮೆ ಕೇಳುತ್ತೇನೆ. ನಂದು ತಪ್ಪು ಎಂದು ಒಪ್ಪಿಕೊಳ್ಳುತ್ತೇನೆ. ಹಾಗಾಂತ ಇನ್ನು ಮುಂದೆ ಎಲ್ಲಾ ಮಂತ್ರಿಗಳಿಗೆ, ಅಧಿಕಾರಿಗಳಿಗೆ ಏನು ಬೇಕಾದರೂ ಮಾತಾಡಬಹುದು ಎಂದು ಭಾವಿಸಿಕೊಂಡರೆ ಆಡಳಿತ ಮಾಡುವುದು ಕಷ್ಟ ಎಂದಿದ್ದಾರೆ.

ಈಯಮ್ಮನ ನೇಚರ್‌ ಅಂತದ್ದು ಎಂದು ಸ್ಥಳೀಯವಾಗಿ ಹೇಳಿದ್ದಾರೆ. ಯಾರು ಹೋದರು ಈಯಮ್ಮ ಹೀಗೆ ಮಾಡುತ್ತೆ ಅಂತ ಹೇಳಿದ್ದಾರೆ. ಆಕೆಯ ನಡೆವಳಿಕೆ ತೀರಾ ಕೆಟ್ಟದಾಗಿತ್ತು. ಸಿಟ್ಟು ಬಂದಾಗ ಒಬ್ಬ ಮನುಷ್ಯ ಏನು ಮಾತಾಡುತ್ತಾನೆ ಅದನ್ನೆ ನಾನು ಮಾತನಾಡಿದ್ದೇನೆ. ಮುಚ್ಚು ಬಾಯಿ ರಾಸ್ಕಲ್ ಎನ್ನುವುದರಲ್ಲಿ ತಪ್ಪೇನಿದೆ ಎಂದು ಸಚಿವರು ಪ್ರಶ್ನಿಸಿದ್ದಾರೆ.

ನಾನು ಹೇಳಿರುವುದು ತಪ್ಪು ಎಂದರೆ ನೀನು ಹೇಳಿದ್ದು ಸರಿನಾ ನೋಡಿಕೊಳ್ಳಮ್ಮ. ನಿನ್ನ ತಂದೆಗಾದ ವಯಸ್ಸು ನನಗಾಗಿದೆ. ಹೆಣ್ಣು ಮಕ್ಕಳು ನೋಡಿಕೊಂಡು ಮಾತಾಡಬೇಕು. ನಾನು ಒಂದು ಹೆಣ್ಣು ಮಗಳಿಗೆ ಹೇಳಿದ್ದನ್ನು ಇಡಿ ಮಹಿಳೆಯರಿಗೆ ಅನ್ವಯಿಸುವುದು, ಯಾರಿಗಾದರೂ ಬೈದರೆ ಇಡೀ ಜಾತಿಗೆ ಅನ್ವಯಿಸುವುದು, ಯಾರೋ ಅಧಿಕಾರಿಗೆ ಬೈದರೆ ಇಡೀ ಸಮುದಾಯಕ್ಕೆ ಅನ್ವಯಿಸಿದರೆ ಆಡಳಿತ ನಡೆಸುವುದು ಕಷ್ಟ ಎಂದು ಸಚಿವರು ಹೇಳಿದ್ದಾರೆ.

ಒಟ್ಟಿನಲ್ಲಿ ಶಾಸಕರ ಮಾತಿನಲ್ಲಿ ಆ ಹುಡುಗಿಯ ಮೇಲೆ ಆರೋಪಗಳ ಸುರಿಮಳೆ ಇತ್ತೆ ಹೊರತು ಕ್ಷಮೆ ಕೇಳುವ ಉದ್ದೇಶವಿದ್ದಂತೆ ಕಾಣುತ್ತಿರಲಿಲ್ಲ ಎಂಬ ಆರೋಪ ಕೇಳಿಬಂದಿದೆ. ಆ ಮಹಿಳೆಯು ನಿನ್ನೆ ಸಾವಧಾನವಾಗಿಯೇ ನಡೆದುಕೊಂಡಿರುವುದು, ಅವರದೇ ಊರಿನ ಸಮಸ್ಯೆಯ ಬಗ್ಗೆ ಮಾತನಾಡಿರುವುದು ವಿಡಿಯೋದಲ್ಲಿ ಕಂಡುಬಂದಿದ್ದರೂ ಸಚಿವರು ಮಾತ್ರ ನನ್ನ ಮುಖ ಪರಚಲು ಬಂದರು, ಎತ್ತರಿಸಿದ ದನಿಯಲ್ಲಿ ಮಾತನಾಡಿದರು ಎಂದು ಆರೋಪಿಸಿದ್ದಾರೆ.

ಈ ನಡುಗೆ ಕಾಂಗ್ರೆಸ್‌ ಪಕ್ಷವು ಮಾಧುಸ್ವಾಮಿ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಪೊಲೀಸ್‌ ಮಹಾನಿರ್ದೇಶಕರಾದ ಪ್ರವೀಣ್‌ ಸೂದ್‌ ಬಳಿ ದೂರು ಸಲ್ಲಿಸಿದ್ದಾರೆ.

ಅಲ್ಲಿಗೆ ಒಂದು ಕ್ಷಮೆಯಿಂದ ಮುಗಿದುಹೋಗಬಹುದಾಗಿದ್ದ ಪ್ರಕರಣವನ್ನು ಮಾಧುಸ್ವಾಮಿಯವರು ಮತ್ತೆ ಮೈಮೇಲೆ ಎಳೆದುಕೊಳ್ಳುತ್ತಿದ್ದಾರೆ. ಎಲ್ಲಿಗೆ ಹೋಗಿ ನಿಲ್ಲುತ್ತದೆ ಕಾದು ನೋಡಬೇಕಿದೆ.


ಇದನ್ನೂ ಓದಿ: ಗಣಿ ಲೂಟಿಯಾದಾಗ ಮೌನವಿದ್ದ ಮಾಧುಸ್ವಾಮಿ, ಸಾಮಾನ್ಯರ ವಿರುದ್ಧ ತಿರುಗಿಬೀಳುವುದೇಕೆ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...